5800mAh ಬ್ಯಾಟರಿ ಸೌಲಭ್ಯದ ಈ ಫೋನ್ ಈಗ ಭರ್ಜರಿ ಡಿಸ್ಕೌಂಟ್‌ನಲ್ಲಿ ಲಭ್ಯ!
ಜನಪ್ರಿಯ ಇ ಕಾಮರ್ಸ್ ಪ್ಲಾಟ್‌ಫಾರ್ಮ್ ಆಗಿ ಗುರುತಿಸಿಕೊಂಡಿರುವ ಅಮೆಜಾನ್ ಆನ್‌ಲೈನ್ ಶಾಪಿಂಗ್ ಪ್ರಿಯರ ಅಡ್ಡಾ ಆಗಿದೆ. ಇನ್ನು ಈ ಸಂಸ್ಥೆಯು ಕೆಲವು ಆಯ್ದ ಮೊಬೈಲ್‌ಗಳಿಗೆ ಆಕರ್ಷಕ ಡಿಸ್ಕೌಂಟ್ ಘೋಷಿಸುತ್ತ ಖರೀದಿದಾರರನ್ನು ತನ್ನತ್ತ ಸೆಳೆಯುತ್ತ ಸಾಗಿದೆ. ಸದ್ಯ ಅಮೆಜಾನ್‌ನಲ್ಲಿ ಹಾನರ್ ಕಂಪನಿಯ ಹಾನರ್ X9b 5G (HONOR X9b 5G) ಸ್ಮಾರ್ಟ್‌ಫೋನ್ ಬೊಂಬಾಟ್ ರಿಯಾಯಿತಿ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರು ಹುಬ್ಬೇರಿಸುವಂತೆ ಮಾಡಿದೆ. ಇನ್ನು ಹಾನರ್ ಸಂಸ್ಥೆಯ ಈ ಮೊಬೈಲ್ ಸ್ನಾಪ್‌ಡ್ರಾಗನ್ 6 ಜೆನ್ 1 SoC ಪ್ರೊಸೆಸರ್ ಪವರ್ ಸಾಮರ್ಥ್ಯದಲ್ಲಿ ಕೆಲಸ ಮಾಡುತ್ತದೆ.
ಹೌದು, ಅಮೆಜಾನ್ ಪ್ಲಾಟ್‌ಫಾರ್ಮ್ ನಲ್ಲಿ ಹಾನರ್ X9b 5G ಮೊಬೈಲ್ ಶೇ. 16% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಮೊಬೈಲ್ 8GB + 256GB ವೇರಿಯಂಟ್ 25,998ರೂ. ಗಳ ಆಫರ್ ದರದಲ್ಲಿ ಕಾಣಿಸಿಕೊಂಡಿದೆ. ಅಲ್ಲದೇ ಖರೀದಿದಾರರಿಗೆ ನೋ ಕಾಸ್ಟ್ ಇಎಮ್‌ಐ ಸೌಲಭ್ಯದ ಆಯ್ಕೆ ಮತ್ತು ಕೆಲವು ಆಯ್ದ ಬ್ಯಾಂಕ್‌ಗಳಿಂದ ಬೊಂಬಾಟ್ ರಿಯಾಯಿತಿ ಕೂಡಾ ಸಿಗಲಿವೆ.

ಇನ್ನು ಈ ಫೋನ್ ಸ್ನಾಪ್‌ಡ್ರಾಗನ್ 6 ಜೆನ್ 1 SoC ಪ್ರೊಸೆಸರ್ ಪವರ್ ಸೌಲಭ್ಯ ಪಡೆದಿದೆ. ಇದರೊಂದಿಗೆ 5,800mAh ಸಾಮರ್ಥ್ಯದ ಬ್ಯಾಟರಿ ಬಲ ಪಡೆದಿದ್ದು, 108 ಮೆಗಾ ಪಿಕ್ಸೆಲ್ ಸೆನ್ಸಾರ್ ಕ್ಯಾಮೆರಾ ಸೌಲಭ್ಯ ಸಹ ಪಡೆದುಕೊಂಡಿದೆ. ಇನ್ನುಳಿದಂತೆ ಹಾನರ್ X9b 5G ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
ಹಾನರ್ X9b 5G ಮೊಬೈಲ್ - ಫೀಚರ್ಸ್
ಹಾನರ್ X9b 5G ಮೊಬೈಲ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2652 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಡಿಸ್‌ಪ್ಲೇಯು 19.9:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಅನ್ನು ಸಪೋರ್ಟ್ ಮಾಡಲಿದೆ.
ಹಾನರ್ X9b 5G ಸ್ಮಾರ್ಟ್‌ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 6 ಜೆನ್ 1 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡುತ್ತದೆ. ಹಾಗೆಯೇ ಈ ಫೋನ್ ಆಂಡ್ರಾಯ್ಡ್ 13 ಆಧಾರಿತ MagicOS 7.2 ಆಪರೇಟಿಂಗ್ ಸಿಸ್ಟಮ್‌ನಲ್ಲಿ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದಿದೆ.
ಹಾನರ್ X9b 5G ಫೋನ್ ತ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಪಡೆದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸೌಲಭ್ಯದಲ್ಲಿ ಇದೆ. ದ್ವಿತೀಯ ಕ್ಯಾಮೆರಾ 5 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಮತ್ತು ಡೆಪ್ತ್ ಸೆನ್ಸಾರ್ ಹಾಗೂ ತೃತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಪಡೆದುಕೊಂಡಿದೆ. ಇದರೊಂದಿಗೆ ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒದಗಿಸಲಾಗಿದೆ.
ಹಾನರ್ X9b 5G ಫೋನ್ 5,800mAh ಸಾಮರ್ಥ್ಯದ ಬ್ಯಾಟರಿ ಸೌಲಭ್ಯವನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 35W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಕೂಡಾ ಪಡೆದಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಬ್ಲೂಟೂತ್, ವೈಫೈ, ಹಾಟ್‌ಸ್ಪಾಟ್, ಯುಎಸ್‌ಬಿ ಟೈಪ್ ಸಿ ಪೋರ್ಟ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಗ್ರಾವಿಟಿ ಸೆನ್ಸರ್, ಫಿಂಗರ್‌ಪ್ರಿಂಟ್ ಸೆನ್ಸರ್, ಗೈರೊಸ್ಕೋಪ್, ಕಂಪಾಸ್, ಆಂಬಿಯೆಂಟ್ ಲೈಟ್ ಸೆನ್ಸರ್ ಆಯ್ಕೆಗಳನ್ನು ಕಾಣಬಹುದಾಗಿದೆ. ಈ ಮೊಬೈಲ್ ಮಿಡ್‌ನೈಟ್ ಬ್ಲಾಕ್ ಮತ್ತು ಸನ್‌ರೈಸ್ ಆರೆಂಜ್ ಬಣ್ಣದ ಕಲರ್ ಆಯ್ಕೆಗಳಲ್ಲಿ ಲಭ್ಯ.


Click it and Unblock the Notifications








