ಇನ್ಫಿನಿಕ್ಸ್ ನೋಟ್ 40X 5G ಸ್ಮಾರ್ಟ್‌ಫೋನ್ ಈಗ ಸಸ್ತಾ ಬೆಲೆಯಲ್ಲಿ ಲಭ್ಯ!
ಇನ್ಫಿನಿಕ್ಸ್ ಮೊಬೈಲ್ ಸಂಸ್ಥೆಯ ಕೆಲವು ಆಕರ್ಷಕ ಫೋನ್‌ಗಳನ್ನು ಪರಿಚಯಿಸಿದೆ. ಆ ಪೈಕಿ ಇತ್ತೀಚಿನ ಇನ್ಫಿನಿಕ್ಸ್ ನೋಟ್ 40X 5G ಮೊಬೈಲ್ ಈಗಾಗಲೇ ಮಾರುಕಟ್ಟೆಯಲ್ಲಿ ಖರೀದಿದಾರರ ಗಮನ ಸೆಳದಿದ್ದು, ಈ ಮೊಬೈಲ್ ಬಜೆಟ್ ರೇಂಜ್‌ನಲ್ಲಿ ಕಾಣಿಸಿಕೊಂಡಿದೆ. ಸದ್ಯ ಇನ್ಫಿನಿಕ್ಸ್ ನೋಟ್ 40X 5G (Infinix Note 40X 5G) ಮೊಬೈಲ್ ಫ್ಲಿಪ್‌ಕಾರ್ಟ್ ವೆಬ್‌ಸೈಟ್‌ನಲ್ಲಿ ಜಬರ್ದಸ್ತ್ ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಗೆ ಲಭ್ಯ ಇದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ (Flipkart) ಪ್ಲಾಟ್‌ಫಾರ್ಮ್ ನಲ್ಲಿ ಸದ್ಯ ಇನ್ಫಿನಿಕ್ಸ್ ನೋಟ್ 40X 5G (Infinix Note 40X 5G) ಫೋನ್ ಶೇ. 35% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಪಡೆದುಕೊಂಡಿದೆ. ಈ ಫೋನಿನ 8 GB RAM + 256 GB ವೇರಿಯಂಟ್ 12,999ರೂ. ಗಳ ಸಖತ್ ಡಿಸ್ಕೌಂಟ್ ದರದಲ್ಲಿ ಕಾಣಿಸಿಕೊಂಡಿದೆ. ಇದಲ್ಲದೇ ಎಕ್ಸ್‌ಚೇಂಜ್ ಆಫರ್ ಸಹ ಪಡೆದುಕೊಂಡರೆ, ಈ ಫೋನ್ ಅನ್ನು ಇನ್ನಷ್ಟು ಡಿಸ್ಕೌಂಟ್ ಬೆಲೆಯಲ್ಲಿ ಖರೀದಿಸಬಹುದು.

ಹಾಗೆಯೇ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 6nm ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಜೊತೆಗೆ ಟ್ರಿಪಲ್ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಹಾಗೆಯೇ ಇದು 5,000 mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಹೊಂದಿದ್ದು, ಇದರ ಜೊತೆಗೆ 108 ಮೆಗಾ ಪಿಕ್ಸಲ್ ಮೊದಲ ಕ್ಯಾಮೆರಾ ಪಡೆದಿದೆ. ಹಾಗಾದರೇ ಇನ್ಫಿನಿಕ್ಸ್ ನೋಟ್ 40X 5G ಫೋನಿನ ಇತರೆ ಫೀಚರ್ಸ್ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.
ಇನ್ಫಿನಿಕ್ಸ್ ನೋಟ್ 40X 5G - ಫೀಚರ್ಸ್ ಮಾಹಿತಿ
ಇನ್ಫಿನಿಕ್ಸ್ ನೋಟ್ 40X 5G ಫೋನ್ 6.78 ಇಂಚಿನ ಫುಲ್ ಹೆಚ್‌ಡಿ ಪ್ಲಸ್ AMOLED ಡಿಸ್‌ಪ್ಲೇ ಅನ್ನು ಹೊಂದಿದ್ದು, ಈ ಡಿಸ್‌ಪ್ಲೇ 2436×1080 ಪಿಕ್ಸಲ್ ರೆಸಲ್ಯೂಶನ್ ಸೌಲಭ್ಯ ಒಳಗೊಂಡಿದೆ ಜೊತೆಗೆ 120Hz ರಿಫ್ರೆಶ್ ರೇಟ್ ಅನ್ನು ಒಳಗೊಂಡಿದ್ದು, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಹೊಂದಿದೆ. ಹಾಗೆಯೇ ಇದು 1300nits ಗರಿಷ್ಠ ಬ್ರೈಟ್‌ನೆಸ್ ಸೌಲಭ್ಯ ಸಹ ಪಡೆದಿದೆ.
ಇನ್ಫಿನಿಕ್ಸ್ ನೋಟ್ 40X 5G ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 6300 6nm ಪ್ರೊಸೆಸರ್ ಬಲದಲ್ಲಿ ಕಾರ್ಯ ಮಾಡಲಿದ್ದು, ಇದು ಆಂಡ್ರಾಯ್ಡ್ 14 ಆಧಾರಿತ XOS 14 ಸಪೋರ್ಟ್ ಕೂಡಾ ಪಡೆದುಕೊಂಡಿದೆ. ಹಾಗೆಯೇ 8 GB/12 GB RAM + 256 GB ಆಂತರೀಕ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ.
ಇನ್ಫಿನಿಕ್ಸ್ ನೋಟ್ 40X 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಅನ್ನು ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 108 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ಇನ್ನುಳಿದ ಎರಡು ಕ್ಯಾಮೆರಾಗಳು ಕ್ರಮವಾಗಿ 2 ಮೆಗಾ ಪಿಕ್ಸಲ್ ಮೈಕ್ರೋ ಹಾಗೂ 2 ಮೆಗಾ ಪಿಕ್ಸಲ್ ಡೆಪ್ತ್ ಕ್ಯಾಮೆರಾ ಸೆನ್ಸಾರ್ ಹೊಂದಿವೆ. ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.
ಇನ್ಫಿನಿಕ್ಸ್ ನೋಟ್ 40X 5G ಫೋನ್ 5,000mAh ಬ್ಯಾಟರಿ ಬ್ಯಾಕ್‌ಅಪ್ ಸೌಲಭ್ಯ ಸಹ ಪಡೆದಿದ್ದು, ಇದಕ್ಕೆ ಪೂರಕವಾಗಿ 18 W ಫಾಸ್ಟ್ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಇನ್ ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸ್ಕ್ಯಾನರ್, ಫೇಸ್ ಅನ್‌ಲಾಕ್, ಜೆಬಿಎಲ್ ಸ್ಟಿರಿಯೊ ಸ್ಪೀಕರ್ ಸೆಟ್‌ಅಪ್ ಸೌಲಭ್ಯಗಳನ್ನು ಕಾಣಬಹುದಾಗಿದೆ. ಅಲ್ಲದೇ ಇದು 5G, 4G, Wi-Fi, ಬ್ಲೂಟೂತ್, GPS, NFC, 3.5mm ಆಡಿಯೋ ಜ್ಯಾಕ್ ಮತ್ತು USB ಟೈಪ್ C ಪೋರ್ಟ್ ಇವೆ. ಈ ಫೋನ್ IP53 ಧೂಳು ಹಾಗೂ ನೀರು ನಿರೋಧಕವಾಗಿದೆ.


Click it and Unblock the Notifications








