256GB ಸ್ಟೋರೇಜ್ ಜೊತೆಗೆ 3D ಕರ್ವ್ ಡಿಸ್‌ಪ್ಲೇ ಇರುವ ಈ ಫೋನ್ ಬೆಲೆಯಲ್ಲಿ ಇಳಿಕೆ!
ಫ್ಲಿಪ್‌ಕಾರ್ಟ್‌ನಲ್ಲಿ ( Flipkart ) ಇ ಕಾಮರ್ಸ್ ತಾಣದಲ್ಲಿ ಮೊಬೈಲ್‌ಗಳಿಗೆ ಒಂದಿಲ್ಲೊಂದು ಆಫರ್ ಇರುತ್ತದೆ. ಇನ್ನು ಫ್ಲಿಪ್‌ಕಾರ್ಟ್ ಎಲ್ಲ ವಿಭಾಗದ ಸ್ಮಾರ್ಟ್‌ಫೋನ್‌ಗಳಿಗೂ ಸಹ ಆಕರ್ಷಕ ರಿಯಾಯಿತಿ ನೀಡುತ್ತಾ ಸಾಗಿದೆ. ಆ ಪೈಕಿ ಸದ್ಯ ಮೊಟೊರೊಲಾ ಎಡ್ಜ್ 50 (Motorola Edge 50) ಫೋನ್ ಭಾರೀ ಆಕರ್ಷಕ ರಿಯಾಯಿತಿ ದರದಲ್ಲಿ ಕಾಣಿಸಿಕೊಂಡಿದೆ.
ಹೌದು, ಫ್ಲಿಪ್‌ಕಾರ್ಟ್ ಇ ಕಾಮರ್ಸ್ ತಾಣದಲ್ಲಿ ಮೊಟೊರೊಲಾ ಎಡ್ಜ್ 50 (Motorola Edge 50) ಮೊಬೈಲ್ ಶೇ. 15% ರಷ್ಟು ನೇರ ರಿಯಾಯಿತಿ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್‌ನ 8 GB RAM + 256 GB ಸ್ಟೋರೇಜ್ ವೇರಿಯಂಟ್ ಆಫರ್‌ನಲ್ಲಿ 27,999ರೂ. ಗಳ ಬೆಲೆಯಲ್ಲಿ ಖರೀದಿಗೆ ಸಿಗಲಿದೆ. ಹಾಗೆಯೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ರಿಯಾಯಿತಿ ಸಹ ಪಡೆಯಬಹುದಾಗಿದೆ.

ಹಾಗೆಯೇ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒಳಗೊಂಡಿರುವ ಈ ಫೋನ್ ಹಿಂಭಾಗದಲ್ಲಿ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಪ್ರಾಥಮಿಕ ಕ್ಯಾಮೆರಾ ಪಡೆದಿದೆ. ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಪಡೆದುಕೊಂಡಿದೆ. ಹಾಗಾದರೇ ಮೊಟೊರೊಲಾ ಎಡ್ಜ್ 50 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಪಡೆದಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ.
3D ಕರ್ವ್ ಡಿಸ್‌ಪ್ಲೇ
ಮೊಟೊರೊಲಾ ಎಡ್ಜ್ 50 ಫೋನ್ 6.7 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇಯು 1200 x 2780 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಪೋರ್ಟ್ ಮಾಡಲಿದೆ. ಇದಲ್ಲದೆ ಡಿಸ್‌ಪ್ಲೇ 144 ಟ್ರೂ ಕಲರ್ ಡಿಸ್‌ಪ್ಲೇ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ ಡಿಸ್‌ಪ್ಲೇ 2500 ನಿಟ್ಸ್ ಬ್ರೈಟ್‌ನೆಸ್ ಸಪೋರ್ಟ್ ಮಾಡಲಿದೆ. ಇದಲ್ಲದೇ 3D ಕರ್ವ್ ಡಿಸ್‌ಪ್ಲೇ ರಚನೆ ಅನ್ನು ಪಡೆದಿದೆ. ಇದು 1,900 ನಿಟ್ಸ್ ಪೀಕ್ ಬ್ರೈಟ್‌ನೆಸ್ ಮತ್ತು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ರಕ್ಷಣೆಯನ್ನು ಪಡೆದಿದೆ.
ಪ್ರೊಸೆಸರ್ ಸಾಮರ್ಥ್ಯ
ಮೊಟೊರೊಲಾ ಎಡ್ಜ್ 50 ಫೋನ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 7 ಜೆನ್ 1 ಚಿಪ್‌ಸೆಟ್ ಪ್ರೊಸೆಸರ್ ಸಾಮರ್ಥ್ಯದಲ್ಲಿ ಕೆಲಸ ಮಾಡಲಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 14 ಓಎಸ್ ಸಪೋರ್ಟ್ ಸಹ ಇದೆ. ಇದರ ಜೊತೆಗೆ 8 GB RAM + 256 GB ಸ್ಟೋರೇಜ್‌ನ ವೇರಿಯಂಟ್ ಆಯ್ಕೆ ಸಹ ಪಡೆದುಕೊಂಡಿದೆ.
ಟ್ರಿಪಲ್ ರಿಯರ್ ಕ್ಯಾಮೆರಾ
ಮೊಟೊರೊಲಾ ಎಡ್ಜ್ 50 ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಪಡೆದಿದ್ದು, ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇದೆ. ದ್ವಿತೀಯ ಹಾಗೂ ತೃತೀಯ ಕ್ಯಾಮೆರಾಗಳು ಕ್ರಮವಾಗಿ 13 ಮೆಗಾ ಪಿಕ್ಸೆಲ್ ಸೆನ್ಸಾರ್ ಮತ್ತು 10 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದಲ್ಲಿ ಇವೆ. ಮುಂಭಾಗದಲ್ಲಿ 32 ಮೆಗಾ ಪಿಕ್ಸೆಲ್ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಒದಗಿಸಲಾಗಿದೆ.
ಬ್ಯಾಟರಿ ಬ್ಯಾಕ್‌ಅಪ್
ಮೊಟೊರೊಲಾ ಎಡ್ಜ್ 50 ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಹೊಂದಿದ್ದು, ಇದಕ್ಕೆ ಪೂರಕವಾಗಿ 68 W ಫಾಸ್ಟ್ ಟರ್ಬೋ ಚಾರ್ಜಿಂಗ್ ಸೌಲಭ್ಯ ಪಡೆದಿದೆ. ಹಾಗೆಯೇ 15W ವೈರ್‌ಲೆಸ್ ಮತ್ತು 5W ರಿವರ್ಸ್ ವೈರ್‌ಲೆಸ್ ಚಾರ್ಜಿಂಗ್ ಆಯ್ಕೆಗಳು ಇವೆ. ಇನ್ನು ಫೋನ್ ಜಂಗಲ್ ಗ್ರೀನ್ ಮತ್ತು ಪ್ಯಾಂಟೋನ್ ಪೀಚ್ ಫಜ್ ಬಣ್ಣಗಳು ವೆಗನ್ ಲೆದರ್ ಬ್ಯಾಕ್‌ನೊಂದಿಗೆ ಬರುತ್ತವೆ ಹಾಗೂ ಕೋಲಾ ಗ್ರೇ ಕಲರ್ ಆಯ್ಕೆಗಳಲ್ಲಿ ಲಭ್ಯವಾಗಲಿದೆ.


Click it and Unblock the Notifications








