ಅಗ್ಗದ ರೆಡ್ಮಿ A2 ಮೊಬೈಲ್ ಬೆಲೆಯಲ್ಲಿ ಈಗ ಸಖತ್ ಇಳಿಕೆ; ಉಳಿತಾಯ ಪಕ್ಕಾ!
ಫ್ಲಿಪ್‌ಕಾರ್ಟ್ ಇ ಕಾಮರ್ಸ್ ಶಾಪಿಂಗ್ ತಾಣವು ಮೊಬೈಲ್‌ಗಳಿಗೆ ಒಂದಿಲ್ಲೊಂದು ಕೊಡುಗೆ ನೀಡುತ್ತಾ ಮುನ್ನಡೆದಿದೆ. ಆ ಪೈಕಿ ಕೆಲವು ಕಡಿಮೆ ಪ್ರೈಸ್‌ಟ್ಯಾಗ್‌ನ ಫೋನ್‌ಗಳು ಸಹ ಆಕರ್ಷಕ ರಿಯಾಯಿತಿ ಪಡೆದಿರುತ್ತವೆ. ಸದ್ಯ ರೆಡ್ಮಿ ಮೊಬೈಲ್ ಕಂಪನಿಯ ರೆಡ್ಮಿ A2 ಸ್ಮಾರ್ಟ್‌ಫೋನ್ ಭಾರೀ ರಿಯಾಯಿತಿ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರನ್ನು ತನ್ನತ್ತ ಸೆಳೆದಿದೆ.
ಹೌದು, ಫ್ಲಿಪ್‌ಕಾರ್ಟ್ ತಾಣದಲ್ಲಿ ರೆಡ್ಮಿ A2 ಫೋನ್ ಸ್ಮಾರ್ಟ್‌ಫೋನ್ ಶೇ. 32% ರಷ್ಟು ನೇರ ಡಿಸ್ಕೌಂಟ್ ಪಡೆದಿದೆ. ಈ ಫೋನಿನ 2 GB RAM + 64 GB ಸ್ಟೋರೇಜ್ ವೇರಿಯಂಟ್ ಅನ್ನು ಖರೀದಿದಾರರು 6,799ರೂ. ಗಳ ಆಫರ್ ಬೆಲೆಯಲ್ಲಿ ಖರೀದಿ ಮಾಡಬಹುದು. ಇದಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಮತ್ತಷ್ಟು ಡಿಸ್ಕೌಂಟ್ ಸಹ ಪಡೆದುಕೊಳ್ಳಲು ಅವಕಾಶ ಇದೆ.

ಈ ಅಗ್ಗದ ಬೆಲೆಯ ಫೋನ್ ಆಕ್ಟಾ-ಕೋರ್ Unisoc T603 ಚಿಪ್‌ಸೆಟ್ ಪ್ರೊಸೆಸರ್ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಸಹ ಒಳಗೊಂಡಿದೆ. ಇನ್ನು ಇದು ಅಜೂರ್ ಬ್ಲೂ, ಬ್ರಿಲಿಯಂಟ್ ಗೋಲ್ಡ್, ಫೀಲ್ಡ್ ಗ್ರೀನ್ ಮತ್ತು ಸ್ಟೈಲಿಶ್ ಬ್ಲ್ಯಾಕ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ. ಹಾಗಾದರೇ ರೆಡ್ಮಿ A2 ಮೊಬೈಲ್‌ನ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.
ರೆಡ್ಮಿ A2 ಫೋನ್ ಫೀಚರ್ಸ್
ರೆಡ್ಮಿ A2 ಫೋನ್ 6.52 ಇಂಚಿನ IPS LCD ಡಿಸ್‌ಪ್ಲೇ ಅನ್ನು ಪಡೆದಿದ್ದು, ಹಾಗೆಯೇ ಈ ಡಿಸ್‌ಪ್ಲೇ 1600 x 720 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಈ ಡಿಸ್‌ಪ್ಲೇ 60Hz ರಿಫ್ರೆಶ್ ರೇಟ್ ಮತ್ತು 120Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಪಡೆದುಕೊಂಡಿದೆ. ಇದರೊಂದಿಗೆ 400 ನಿಟ್ಸ್ ಬ್ರೈಟ್‌ನೆಸ್ ಅನ್ನು ನೀಡುತ್ತದೆ.
ರೆಡ್ಮಿ A2 ಫೋನ್ ಮೀಡಿಯಾ ಟೆಕ್ ಹಿಲಿಯೋ G36 SoC ಪ್ರೊಸೆಸರ್‌ನಲ್ಲಿ ಕೆಲಸ ಮಾಡಲಿದ್ದು, ಇದರೊಂದಿಗೆ 4GB RAM ಮತ್ತು 64 GB ಆಂತರೀಕ ಸ್ಟೋರೇಜ್ ಅನ್ನು ಪಡೆದುಕೊಂಡಿದೆ. ಇದಲ್ಲದೆ ಎಸ್‌ಡಿ ಕಾರ್ಡ್ ಮೂಲಕ ಸಂಗ್ರಹ ಸಾಮರ್ಥ್ಯ ಹೆಚ್ಚಿಸುವುದಕ್ಕೆ ಅವಕಾಶವನ್ನು ಕೂಡ ಹೊಂದಿದೆ.
ರೆಡ್ಮಿ A2 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಹಾಗೆಯೇ 5 ಮೆಗಾ ಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ನೀಡಲಾಗಿದೆ.
ರೆಡ್ಮಿ A2 ಮೊಬೈಲ್ 10W ಚಾರ್ಜಿಂಗ್ ಸಪೋರ್ಟ್ ಹೊಂದಿದ್ದು, ಇದರ ಜೊತೆಗೆ 5,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಒಳಗೊಂಡಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ ವೈ-ಫೈ, ಬ್ಲೂಟೂತ್, ಎಫ್‌ಎಂ ರೇಡಿಯೋ ಮತ್ತು 3.5 ಎಂಎಂ ಹೆಡ್‌ಫೋನ್ ಜ್ಯಾಕ್ ಕೂಡಾ ಪಡೆದಿದೆ. ಇದರೊಂದಿಗೆ ರೆಡ್ಮಿ A2 ಪ್ಲಸ್ ಮೊಬೈಲ್ ಹೆಚ್ಚುವರಿಯಾಗಿ ರಿಯರ್ ಫಿಂಗರ್‌ಪ್ರಿಂಟ್ ಸೆನ್ಸಾರ್ ಆಯ್ಕೆ ಪಡೆದಿದೆ.
ರೆಡ್ಮಿ A2 ಮೊಬೈಲ್ ಮೂರು ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಪಡೆದಿದ್ದು, ಅವುಗಳು ಕ್ರಮವಾಗಿ 2GB + 32GB, 2GB + 64GB ಹಾಗೂ 4GB RAM + 64GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಇವೆ. ಇನ್ನು ಈ ಮೊಬೈಲ್ ಬ್ಲ್ಯಾಕ್, ಬ್ಲೂ, ಗ್ರೀನ್ ಕಲರ್ ಆಯ್ಕೆಯಲ್ಲಿ ಖರೀದಿಗೆ ಲಭ್ಯ ಇದೆ.


Click it and Unblock the Notifications








