Home
ಸುದ್ದಿಜಾಲ

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಇ ಕಾಮರ್ಸ್‌ ದೈತ್ಯ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಒಂದಿಲ್ಲೊಂದು ಮಾರಾಟ ಮೇಳ ಲಭ್ಯ ಇರುತ್ತದೆ. ಯಾವುದೇ ಸೇಲ್‌ ಇಲ್ಲದಿದ್ದರೂ ಸಹ ಆಯ್ದ ಉತ್ಪನ್ನಗಳಿಗೆ ಆಕರ್ಷಕ ರಿಯಾಯಿತಿ ಲಭ್ಯ ಮಾಡಿರುತ್ತದೆ. ಇನ್ನು ಮುಖ್ಯವಾಗಿ ಸ್ಮಾರ್ಟ್‌ಫೋನ್‌ಗಳಿಗೂ ಕೂಡಾ ಬೊಂಬಾಟ್‌ ಡಿಸ್ಕೌಂಟ್‌ ಕೊಡುಗೆಗಳನ್ನು ನೀಡುವ ಮೂಲಕ ಗ್ರಾಹಕರನ್ನು ಆಕರ್ಷಿಸುತ್ತದೆ. ಇದೀಗ ರೆಡ್ಮಿ ಮೊಬೈಲ್‌ ಸಂಸ್ಥೆಯ ರೆಡ್ಮಿ A3 ಮೊಬೈಲ್‌ ಫ್ಲಿಪ್‌ಕಾರ್ಟ್‌ ತಾಣದಲ್ಲಿ ಸಖತ್ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದ್ದು, ಗ್ರಾಹಕರು ವಾವ್‌ ಎನ್ನುವಂತೆ ಮಾಡಿದೆ.

ಹೌದು, ಫ್ಲಿಪ್‌ಕಾರ್ಟ್‌ ಆನ್‌ಲೈನ್‌ ತಾಣದಲ್ಲಿ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಶೇ. 40% ರಷ್ಟು ನೇರ ಡಿಸ್ಕೌಂಟ್‌ ದರದಲ್ಲಿ ಕಾಣಿಸಿಕೊಂಡಿದೆ. ಈ ಫೋನಿನ 6 GB RAM + 128 GB ಸ್ಟೋರೇಜ್ ವೇರಿಯಂಟ್ ಅನ್ನು 11,331 ರೂ. ಗಳ ಆಫರ್‌ ಬೆಲೆಯಲ್ಲಿ ಖರೀದಿ ಮಾಡಬಹುದಾಗಿದೆ. ಇದರ ಜೊತೆಗೆ ಬ್ಯಾಂಕ್‌ ಕೊಡುಗೆ ಹಾಗೂ ನೋ ಕಾಸ್ಟ್‌ ಇಎಮ್‌ಐ ಸಹ ದೊರೆಯುತ್ತದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಬೆಲೆಯಲ್ಲಿ ಭರ್ಜರಿ ಇಳಿಕೆ!

ಇನ್ನು ಈ ಫೋನ್‌ 6000 mAh ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಹೊಂದಿದ್ದು, ಪ್ರಾಥಮಿಕ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಬಲದಲ್ಲಿ ಇದೆ. ಗ್ರಾಹಕರು ಈ ಮೊಬೈಲ್‌ ಅನ್ನು ಬ್ಲೂ, ಡಾರ್ಕ್ ಬ್ಲೂ ಮತ್ತು ಸಿಲ್ವರ್ ಬಣ್ಣಗಳ ಆಯ್ಕೆಯಲ್ಲಿ ಖರೀದಿ ಮಾಡಬಹುದಾಗಿದೆ. ಇನ್ನುಳಿದಂತೆ ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನಿನ ಇತರೆ ಫೀಚರ್ಸ್‌ ಬಗ್ಗೆ ಮುಂದೆ ತಿಳಿಯೋಣ ಬನ್ನಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೀಚರ್ಸ್‌

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 2408 x 1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಇದು 90Hz ರಿಫ್ರೆಶ್ ರೇಟ್‌ ಅನ್ನು ಬೆಂಬಲಿಸಲಿದ್ದು, ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಲೇಯರ್ ಪ್ರೊಟೆಕ್ಷನ್‌ ಅನ್ನು ಪಡೆದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಎಕ್ಸಿನೋಸ್‌ 1330 ಆಕ್ಟಾ ಕೋರ್ SoC ಪ್ರೊಸೆಸರ್‌ ಸ್ಪೀಡ್‌ ಅನ್ನು ಹೊಂದಿದ್ದು, ಇದು ಆಂಡ್ರಾಯ್ಡ್‌ 13 ಸಪೋರ್ಟ್‌ ನಲ್ಲಿ ಕೆಲಸ ಮಾಡಲಿದೆ. ಇದಕ್ಕೆ ಪೂರಕವಾಗಿ ಮಾಲಿ G68 GPU ಸಪೊರ್ಟ್‌ ಅನ್ನು ಒಳಗೊಂಡಿದ್ದು, ಹಾಗೆಯೇ 6 GB RAM ಮತ್ತು 128 GB ಆಂತರೀಕ ಸ್ಟೋರೇಜ್‌ ಆಯ್ಕೆ ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದಿದ್ದು, ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ದ್ವಿತೀಯ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಡೆಪ್ತ್‌ ಸೆನ್ಸಾರ್‌ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್‌ ಅನ್ನು ಪಡೆದಿದೆ. ಇದಲ್ಲದೆ 13 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಪಡೆದುಕೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M14 5G ಫೋನ್‌ 6000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಹೊಂದಿದ್ದು, ಇದಕ್ಕೆ ಪೂರಕವಾಗಿ ಇದು 25W ಫಾಸ್ಟ್‌ ಚಾರ್ಜಿಂಗ್ ಅನ್ನು ಸಪೋರ್ಟ್ ಮಾಡಲಿದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ 5G, 4G, ವೈಫೈ, ಬ್ಲೂಟೂತ್‌ 5.2, NFC ಮತ್ತು GPS ಹಾಗೂ USB ಟೈಪ್ - C ಪೋರ್ಟ್‌ ಅನ್ನು ಒಳಗೊಂಡಿದೆ.

Best Mobiles in India

English summary
Greatest price drop on Samsung Galaxy M14 5G on Flipkart e commerce. Check offer, Specifications and more.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+