Home
ಸುದ್ದಿಜಾಲ

ದೀಪಾವಳಿಗೆ Vivo ಮೊಬೈಲ್‌ ಖರೀದಿಸುವ ಪ್ಲ್ಯಾನ್‌ ಇದೆಯಾ?..ಹಾಗಿದ್ರೆ, ಈ ಆಫರ್‌ ಬೆಸ್ಟ್‌!

ಫ್ಲಿಪ್‌ಕಾರ್ಟ್‌ ಇ ಕಾಮರ್ಸ್‌ ತಾಣವು ದೀಪಾವಳಿ ಹಬ್ಬದ ಅಂಗವಾಗಿ ಡಿಜಿಟಲ್‌ ಉತ್ಪನ್ನ್ಗಳಿಗೆ ಭರ್ಜರಿ ರಿಯಾಯತಿ ಘೋಷಿಸಿದೆ. ಮುಖ್ಯವಾಗಿ ಆಯ್ದ ಕೆಲವು ಮೊಬೈಲ್‌ಗಳು ಭರ್ಜರಿ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇವೆ. ಆ ಪೈಕಿ ವಿವೋ ಸಂಸ್ಥೆಯು ವಿವೋ T3 ಪ್ರೊ 5G (Vivo T3 Pro 5G) ಮೊಬೈಲ್‌ ಸಖತ್‌ ಡಿಸ್ಕೌಂಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಕಾಣಿಸಿಕೊಂಡಿದೆ. ಇನ್ನು ಈ ಮೊಬೈಲ್‌ ಮೊದಲ ಕ್ಯಾಮೆರಾವು 50 ಮೆಗಾ ಪಿಕ್ಸೆಲ್ ಸೆನ್ಸಾರ್‌ ಅಗಿದ್ದು, 8GB RAM + 128 GB ಸ್ಟೋರೇಜ್‌ನ ವೇರಿಯಂಟ್‌ ಆಯ್ಕೆಯಲ್ಲಿಯೂ ಲಭ್ಯ ಇದೆ.

ಹೌದು, ಫ್ಲಿಪ್‌ಕಾರ್ಟ್‌ ಪ್ಲಾಟ್‌ಫಾರ್ಮ್ ದೀಪಾವಳಿ ಹಬ್ಬದ ಸೇಲ್‌ನಲ್ಲಿ ವಿವೋ T3 ಪ್ರೊ 5G (Vivo T3 Pro 5G) ಮೊಬೈಲ್‌ ಶೇ. 16% ರಷ್ಟು ನೇರ ಡಿಸ್ಕೌಂಟ್‌ ಬೆಲೆಯಲ್ಲಿ ಕಾಣಿಸಿಕೊಂಡಿದೆ. ಈ ಮೊಬೈಲ್‌ನ 8 GB RAM + 128 GB ಸ್ಟೋರೇಜ್‌ ವೇರಿಯಂಟ್‌ ಆಫರ್‌ನಲ್ಲಿ 24,999ರೂ. ಗಳ ಆಕರ್ಷಕ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಗೆ ಲಭ್ಯ ಇದೆ. ಅಲ್ಲದೇ ಹೆಚ್ಚುವರಿಯಾಗಿ ಕೆಲವು ಆಯ್ದ ಬ್ಯಾಂಕ್‌ಗಳಿಂದ ಡಿಸ್ಕೌಂಟ್‌ ಸಹ ಪಡೆಯಬಹುದಾಗಿದೆ.

ದೀಪಾವಳಿಗೆ Vivo ಮೊಬೈಲ್‌ ಖರೀದಿಸುವ ಪ್ಲ್ಯಾನ್‌ ಇದೆಯಾ?..ಈ ಆಫರ್‌ ಬೆಸ್ಟ್‌!

ಇನ್ನು ವಿವೋದ ಈ ಮೊಬೈಲ್‌ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದರ ಜೊತೆಗೆ 80W ಫಾಸ್ಟ್ ಚಾರ್ಜಿಂಗ್ ಸೌಲಭ್ಯವನ್ನು ಪಡೆದಿದೆ. ಹಾಗೆಯೇ ಈ ಸ್ಮಾರ್ಟ್‌ಫೋನ್‌ 8GB + 128GB ಹಾಗೂ 8GB + 256GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಪಡೆದುಕೊಂಡಿದೆ. ಇನ್ನುಳಿದಂತೆ ಈ ವಿವೋ ಫೋನ್‌ ಇತರೆ ಯಾವೆಲ್ಲಾ ಫೀಚರ್ಸ್‌ಗಳನ್ನು ಒಳಗೊಂಡಿದೆ ಎಂಬುದನ್ನು ಮುಂದೆ ನೋಡೋಣ ಬನ್ನಿರಿ ಓದಿರಿ.

ವಿವೋ T3 ಪ್ರೊ 5G - ಫೀಚರ್ಸ್‌ ಮಾಹಿತಿ

ವಿವೋ T3 ಪ್ರೊ 5G ಮೊಬೈಲ್‌ 6.67 ಇಂಚಿನ 3D ಕರ್ವ್ಡ್‌ ಅಮೋಲೆಡ್‌ ಡಿಸ್‌ಪ್ಲೇ ಅನ್ನು ಪಡೆದುಕೊಂಡಿದ್ದು, ಇದು 2400 × 1080 ಪಿಕ್ಸೆಲ್‌ ಸ್ಕ್ರೀನ್ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಅಲ್ಲದೇ 120Hz ರಿಫ್ರೆಶ್ ರೇಟ್, 4500 ನಿಟ್ಸ್‌ ಗರಿಷ್ಠ ಬ್ರೈಟ್‌ನೆಸ್‌ ಸೌಲಭ್ಯ ಕೂಡಾ ಪಡೆದಿದೆ.

ವಿವೋ T3 ಪ್ರೊ 5G ಮೊಬೈಲ್‌ ಸ್ನಾಪ್‌ಡ್ರಾಗನ್ 7 ಜೆನ್‌ 3 SoC ಪ್ರೊಸೆಸರ್‌ ಬಲದಲ್ಲಿ ಕೆಲಸ ನಿರ್ವಹಿಸಲಿದ್ದು. ಇತ್ತೀಚಿನ ಆಂಡ್ರಾಯ್ಡ್‌ 14 ಓಎಸ್‌ ಬೆಂಬಲ ಕೂಡಾ ಪಡೆದಿದೆ. ಇದರ ಜೊತೆಗೆ 8 GB RAM + 128 GB ಹಾಗೂ 8 GB + 256 GB ಆಂತರೀಕ ಸ್ಟೋರೇಜ್‌ ವೇರಿಯಂಟ್‌ ಆಯ್ಕೆ ಇವೆ.

ವಿವೋ T3 ಪ್ರೊ 5G ಮೊಬೈಲ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಒಳಗೊಂಡಿದೆ. ಇನ್ನು ಇದರ ಪ್ರಾಥಮಿಕ ಕ್ಯಾಮೆರಾವು 50 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿ ಇದೆ. ಹಾಗೆಯೇ ಈ ಫೋನಿನ ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸೆಲ್‌ ಡೆಪ್ತ್ ಸೆನ್ಸರ್ ಸೌಲಭ್ಯ ಪಡೆದಿದೆ. ಜೊತೆಗೆ ಮುಂಭಾಗದಲ್ಲಿ ಇದರ ಸೆಲ್ಫಿ ಕ್ಯಾಮೆರಾವು 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸೌಲಭ್ಯದಲ್ಲಿ ಇದೆ.

ವಿವೋ T3 ಪ್ರೊ 5G ಮೊಬೈಲ್‌ 5500mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಸಹ ಪಡೆದುಕೊಂಡಿದ್ದು, ಇದಕ್ಕೆ ಅನುಗುಣವಾಗಿ 80W ಫಾಸ್ಟ್ ಚಾರ್ಜಿಂಗ್ ಸಪೋರ್ಟ್‌ ಸಹ ಇದೆ. ಇನ್ನು ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಈ ಫೋನ್‌ ಡ್ಯುಯಲ್ 4G VoLTE, ವೈ-ಫೈ 6 802.11 ax (2.4GHz + 5GHz), ಬ್ಲೂಟೂತ್ ಆವೃತ್ತಿ 5.3, ಜಿಪಿಎಸ್‌, ಯುಎಸ್‌ಬಿ ಟೈಪ್-ಸಿ, ಇನ್-ಡಿಸ್ಪ್ಲೇ ಫಿಂಗರ್‌ಫ್ರಿಂಟ್ ಸೆನ್ಸಾರ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

Best Mobiles in India

English summary
Greatest Price Slashed on Vivo T3 Pro 5G in Flipkart Website India. check out offer price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+