Home
ಸುದ್ದಿಜಾಲ

Gruha Lakshmi Scheme: ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಇಂದು ಸಿಗಲಿದೆ 2000ರೂ. ಹಣ!

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಗೃಹಲಕ್ಷ್ಮಿ ಕೂಡ ಒಂದಾಗಿದೆ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಗೃಹ ಲಕ್ಷ್ಮಿ ಯೋಜನೆಗೆ ಇಂದು ಮೈಸೂರಿನಲ್ಲಿ ಚಾಲನೆ ನೀಡುತ್ತಿದ್ದಾರೆ. ಕಾರ್ಯಕ್ರಮದಲ್ಲಿ ಬಟನ್‌ ಒತ್ತುವುದರ ಮೂಲಕ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಖಾತೆಗೆ ಹಣ ಜಮಾವಣೆ ಆಗಲಿದೆ.

ಹೌದು, ಗೃಹಲಕ್ಷ್ಮಿ ಯೋಜನೆಗೆ ಅರಮನೆ ನಗರಿ ಮೈಸೂರಿನಲ್ಲಿ ಚಾಲನೆ ಸಿಗುತ್ತಿದೆ. ಮೈಸೂರಿನ ಮಹಾರಾಜ ಕಾಲೇಜು ಹಾಗೂ ಮೈದಾನದಲ್ಲಿ ಬೃಹತ್ ವೇದಿಕೆಯಲ್ಲಿ ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆಯವರು ಬಟನ್ ಒತ್ತುವ ಮೂಲಕ ಯೋಜನೆಗೆ ಚಾಲನೆ ನೀಡಲಿದ್ದಾರೆ. ಹಾಗಾದ್ರೆ ಇಂದು ಯಾರಿಗೆಲ್ಲಾ ಗೃಹಲಕ್ಷ್ಮಿ ಯೋಜನೆಯ ಹಣ ಜಮಾವಣೆ ಆಗಲಿದೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

GruhaLakshmi Scheme: ಈ ದಿನಾಂಕದ ಒಳಗೆ ಅರ್ಜಿ ಸಲ್ಲಿಸಿದವರಿಗೆ ಸಿಗಲಿದೆ 2000ರೂ

ಈ ದಿನ ಯಾರಿಗೆಲ್ಲಾ ಗೃಹಲಕ್ಷ್ಮಿ ಹಣ ಸಿಗಲಿದೆ
ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಮಾಸಿಕ ಹಣ ಜಮಾವಣೆ ಯಾವಾಗ ಅಂತಾ ಕಾಯುತ್ತಿದ್ದವರಿಗೆ ಕೊನೆಗೂ ಗುಡ್‌ನ್ಯೂಸ್‌ ಸಿಕ್ಕಿದೆ. ಆದರೆ ಜುಲೈ 19ರಿಂದ ಆಗಸ್ಟ್‌ 15 ರ ಒಳಗೆ ಅರ್ಜಿ ಸಲ್ಲಿಸಿದವರಿಗೆ ಮಾತ್ರ ಮೊದಲ ಹಂತದಲ್ಲಿ 2000ರೂ. ಹಣ ಜಮಾವಣೆ ಆಗಲಿದೆ. ನಂತರ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಮುಂದಿನ ತಿಂಗಳಿನಿಂದ ಹಣ ಜಮಾವಣೆ ಆಗಲಿದೆ.

ಜುಲೈ 19ರಿಂದ ಆಗಸ್ಟ್‌ 15ರ ಒಳಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳನ್ನು ಮಾತ್ರ ಮೊದಲ ಹಂತದಲ್ಲಿ ಪರಿಗಣಿಸಲಾಗಿದೆ. ನಂತರ ಸಲ್ಲಿಸಿರುವ ಅರ್ಜಿಗಳನ್ನು ಮುಂದಿನ ತಿಂಗಳಿನಿಂದ ಪರಿಗಣಿಸಲಾಗುತ್ತದೆ ಎನ್ನಲಾಗಿದೆ. ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆ ಅಡಿಯಲ್ಲಿ ಒಟ್ಟು ಒಂದು ಕೋಟಿ 11 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಇದರಲ್ಲಿ 18 ಲಕ್ಷದಷ್ಟೂ ಫಲಾನುಭವಿಗಳ ಅರ್ಜಿಗಳಲ್ಲಿ ತಾಮತ್ರಿಕ ಸಮಸ್ಯೆ ಕಂಡುಬಂದಿದೆ. ಇನ್ನು ಈ ಒಂದು ಯೋಜನಗೆ ಒಂದು ವರ್ಷಕ್ಕೆ 35 ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ರಾಜ್ಯ ಸರ್ಕಾರ ಹೇಳಿದೆ.

ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ಕಾರ್ಯಕ್ರಮದಲ್ಲಿ ಬಟನ್‌ ಒತ್ತಿದ ತಕ್ಷಣ ಸುಮಾರು 1.1 ಕೋಟಿ ಮಹಿಳೆಯರ ಖಾತೆಗೆ ತಲಾ 2,000ರೂ ಹಣ ಜಮಾವಣೆ ಆಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಇನ್ನು ಕರ್ನಾಟಕ ಸರ್ಕಾರ ಪ್ರಸಕ್ತ ಹಣಕಾಸು ವರ್ಷದಲ್ಲಿ 'ಗೃಹ ಲಕ್ಷ್ಮಿ' ಕಾರ್ಯಕ್ರಮಕ್ಕೆ 17,500ರೂ. ಕೋಟಿ ಮೀಸಲಿಟ್ಟಿರುವುದು ಕೂಡ ಗಮನಿಸಬೇಕಾದ ವಿಚಾರವಾಗಿದೆ.

ಇನ್ನು ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿ ಬಹಿರಂಗವಾಗಿದೆ. ಇದರಲ್ಲಿ ನಿಮ್ಮ ಹೆಸರು ಇದ್ದರೆ ನಿಮಗೆ ಈ ದಿನವೇ ಗೃಹಲಕ್ಷ್ಮಿ ಯೋಜನೆಯ ಹಣ ಬ್ಯಾಂಕ್‌ ಖಾತೆಗೆ ಜಮಾವಣೆ ಆಗಲಿದೆ. ಇದಕ್ಕಾಗಿ ನೀವು https://ahara.kar.nic.in/WebForms/Show_Village_List.aspx ವೆಬ್‌ಸೈಟ್‌ ಅನ್ನು ಕ್ಲಿಕ್‌ ಮಾಡುವ ಮೂಲಕ ಪರಿಶೀಲಿಸಬಹುದು. ನೀವು ಈ ಲಿಂಕ್‌ ಕ್ಲಿಕ್‌ ಮಾಡಿದ ನಂತರ ಇದರಲ್ಲಿ ನಿಮ್ಮ ಜಿಲ್ಲೆ, ನಿಮ್ಮ ತಾಲೂಕು, ನಿಮ್ಮ ಗ್ರಾಮ ಪಂಚಾಯಿತಿ ಹಾಗೂ ಊರಿನ ಹೆಸರನ್ನು ನಮೂದಿಸಬೇಕಾಗುತ್ತದೆ. ಇದರಲ್ಲಿ ಫಲಾನುಭವಿಗಳ ಪಟ್ಟಿ ಕಾಣಿಸಲಿದ್ದು, ನಿಮ್ಮ ಹೆಸರನ್ನು ಪರಿಶೀಲಿಸಬಹುದು.

ಒಂದು ವೇಳೆ ಗೃಹಲಕ್ಷ್ಮಿ ಯೋಜನೆಗ ಫಲಾನುಭವಿಗಳ ಪಟ್ಟಿಯಲ್ಲಿ ನಿಮ್ಮ ಹೆಸರು ಕಾಣಿಸದಿದ್ದರೆ ಆತಂಕ ಪಡಬೇಕಾದ ಅನಿವಾರ್ಯತೆಯಿಲ್ಲ. ನೀವು ಆಗಸ್ಟ್‌ 15ರ ನಂತರ ಅರ್ಜಿ ಸಲ್ಲಿಸಿದ್ದರೆ ನಿಮಗೆ ಮುಂದಿನ ತಿಂಗಳಿನಿಂದ ಹಣ ಜಮಾವಣೆ ಆಗಲಿದೆ. ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಯಾವುದೇ ಅಂತಿಮ ದಿನಾಂಕವಿಲ್ಲದೆ ಇರುವುದರಿಂದ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದಾಗಿದೆ.

Best Mobiles in India

English summary
GruhaLakshmi Scheme: Beneficiaries who applied Before August 15 will be credited 2000rs amount today
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+