Gruha Lakshmi scheme: ಗೃಹಲಕ್ಷ್ಮಿಗಾಗಿ ಕಾದಿದವರಿಗೆ ಗುಡ್‌ನ್ಯೂಸ್!..2000ರೂ. ಪಡೆಯಲು ಹೀಗೆ ಮಾಡೋದು ಕಡ್ಡಾಯ!
ರಾಜ್ಯ ಕಾಂಗ್ರೆಸ್ ಸರ್ಕಾರ ನೀಡಿರುವ ಐದು ಗ್ಯಾರಂಟಿಗಳಲ್ಲಿ ಗಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈಗಾಗಲೇ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಿ ಮಹಿಳಾಮಣಿಗಳಿಂದ ಸೈ ಎನಿಸಿಕೊಂಡಿರುವ ಸರ್ಕಾರ ಇದೀಗ ಗೃಹಲಕ್ಷ್ಮೀ ಯೋಜನೆಗೆ (Gruha Lakshmi scheme) ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ ನಿಗದಿಗೆ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ
ಹೌದು, ರಾಜ್ಯ ಸರ್ಕಾರ ತನ್ನ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸ್ವೀಕಾರಕ್ಕೆ ದಿನಾಂಕ ನಿಗದಿ ಪಡಿಸಲು ತಿರ್ಮಾನಿಸಿದೆ. ಅದರಂತೆ ಈ ಯೋಜನೆಗೆ ಜುಲೈ 16, 17 ಅಥವಾ 18 ರಂದು ಅರ್ಜಿ ಸ್ವೀಕರಿಸಲು ಚಾಲನೆ ನೀಡುವ ಸಾದ್ಯತೆಯಿದೆ. ಇದರೊಂದಿಗೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಇರುವ ಮಾನದಂಡಗಳಲ್ಲಿ ಕೆಲವು ಮಾರ್ಪಡುಗಳನ್ನು ಮಾಡುವುದಾಗಿ ಕೂಡ ಹೇಳಿದೆ. ಹಾಗಾದ್ರೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ? ಇದಕ್ಕೆ ಬೇಕಾಗಿರುವ ದಾಖಲೆಗಳೇನು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗೃಹಲಕ್ಷ್ಮಿ ಯೋಜನೆ ಜಾರಿಗೆ ದಿನಗಣನೆ ಶುರುವಾಗಿದೆ. ಈಗಾಗಲೇ ರಾಜ್ಯದೆಲ್ಲಡೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ ಎಂಬೆಲ್ಲಾ ಚರ್ಚೆಗಳು ಜೋರಾಗಿವೆ. ಇದರ ನಡುವೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆ ಪ್ರಾರಂಭಿಸಲು ದಿನಾಂಕ ನಿಗಧಿಪಡಿಸುವ ತಿರ್ಮಾನವಾಗಿದೆ. ಅದರಂತೆ ರಾಜ್ಯದಲ್ಲಿ ಜುಲೈ 16, 17 ಅಥವಾ 18 ರಂದು ಅರ್ಜಿ ಸಲ್ಲಿಕೆ ಪ್ರಾರಂಭವಾಗಲಿದೆ ಎನ್ನಲಾಗಿದೆ. ಇನ್ನು ಈ ಯೋಜನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂದಿ ಹಾಗೂ ಪ್ರಿಯಾಂಕ ಗಾಂದಿ ವಾದ್ರ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
* ನಿಮಗೆಲ್ಲಾ ತಿಳಿದಿರುವಂತೆ ಮೊದಲಿಗೆ ಸೇವಾ ಸಿಂಧು ಪೋರ್ಟಲ್ ಗೆ ಲಾಗಿನ್ ಆಗಬೇಕು
* ಇದರಲ್ಲಿ ಗೃಹಲಕ್ಷ್ಮೀ ಎಂದು ನಮೂದಿಸಲಾಗಿರುವುದರ ಮೇಲೆ ಕ್ಲಿಕ್ ಮಾಡಿ
* ನಂತರ ಗೃಹ ಲಕ್ಷ್ಮೀ ಯೋಜನೆಗೆ ಆನ್‌ಲೈನ್ ಅರ್ಜಿ ಲಭ್ಯವಾಗುತ್ತದೆ.
* ಅರ್ಜಿಯನ್ನು ಭರ್ತಿ ಮಾಡಲು ಅಗತ್ಯ ವಿವರಗಳನ್ನು ನಮೂದಿಸಿ.
* ನಂತರ I agree ಎಂಬುವುದನ್ನು ಕ್ಲಿಕ್ ಮಾಡಿ
* ಇದೀಗ ಕಂಡುಬರುವ word verification ಎನ್ನುವ ಜಾಗದಲ್ಲಿ ಕಾಣುವ ಸಂಖ್ಯೆಗಳನ್ನು ನಮೂದಿಸಿ ಸಬ್ಮಿಟ್ ಕ್ಲಿಕ್ ಮಾಡಿ.
ಈಗ ನಿಮ್ಮ ಗೃಹಲಕ್ಷ್ಮಿ ಯೋಜನೆಯ ಅರ್ಜಿ ಸಲ್ಲಿಕೆಯಾಗಿರುವ ಪ್ರಮಾಣ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಇದಲ್ಲದೆ ಗೃಹಲಕ್ಷ್ಮಿ ಯೋಜನೆಗೆ ಆಫ್‌ಲೈನ್‌ನಲ್ಲಿಯು ಕೂಡ ಅರ್ಜಿ ಸಲ್ಲಿಸುವುದಕ್ಕೆ ಅವಕಾಶವಿದೆ. ಇದಕ್ಕಾಗಿ ನೀವು ಸೇವಾ ಸಿಂಧು ಕೇಂದ್ರ ಸಂಪರ್ಕಿಸಿ ಅರ್ಜಿ ಪಡೆದು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕಾಗುತ್ತದೆ.
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು?
* ರೇಷನ್ ಕಾರ್ಡ್
* ಬ್ಯಾಂಕ್ ಪಾಸ್‌ಬುಕ್
* ಆಧಾರ್ ಕಾರ್ಡ್

ಗೃಹಲಕ್ಷ್ಮೀ ಯೋಜನೆಯಿಂದ ಏನೆಲ್ಲಾ ಲಾಭ?
ಗೃಹಲಕ್ಷ್ಮಿ ಯೋಜನೆ ಮಹಿಳೆಯರಿಗೆ ಆರ್ಥಿಕವಾಗಿ ಶಕ್ತಿ ತುಂಬುವ ರಾಜ್ಯ ಸರ್ಕಾರದ ಹೊಸ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ಪ್ರತಿ ಕುಟುಂಬದ ಮನೆಯ ಯಜಮಾನಿಯ ಖಾತೆಗೆ ಪ್ರತಿ ತಿಂಗಳು ಎರಡು ಸಾವಿರ ರೂ. ಹಾಕಲಾಗುತ್ತದೆ. ಅಂದರೆ ಮನೆಯಲ್ಲಿಯ ಎಷ್ಟೇ ಜನ ಮಹಿಳೆಯರಿದ್ದರೂ ಕೂಡ ಕುಟುಂಬದ ಯಜಮಾನಿ ಮಹಿಳೆಗೆ ಅಥವಾ ಒಬ್ಬ ಮಹಿಳೆಗೆ ಪ್ರತಿ ತಿಂಗಳು ಗೃಹಲಕ್ಷ್ಮೀ ಯೋಜನೆ ಅಡಿಯಲ್ಲಿ ಎರಡು ಸಾವಿರ ರೂಪಾಯಿಯನ್ನು ನೀಡಲಾಗುತ್ತದೆ.
ಇನ್ನು ಈ ಯೋಜನೆಗೆ ಹಲವು ಮಾರ್ಗಸೂಚಿಗಳನ್ನು ಈಗಾಗಲೇ ಹೊರಡಿಸಲಾಗಿದೆ. ಅದರಂತೆ ಮೊದಲಿಗೆ ಈ ಯೋಜನೆಯ ಫಲಾನುಭವಿ ಆಗಬೇಕಾದರೆ ನೀವು ಅರ್ಜಿ ಸಲ್ಲಿಸುವುದು ಕಡ್ಡಾಯ. ಅರ್ಜಿ ಸಲ್ಲಿಸಿ ಆಯ್ಕೆಗೊಂಡ ಫಲಾನುಭವಿಗಳಿಗೆ ಆಗಸ್ಟ್‌ನಲ್ಲಿ ಬ್ಯಾಂಕ್ ಖಾತೆಗೆ ಹಣವನ್ನು ವರ್ಗಾವಣೆ ಮಾಡಲಾಗುತ್ತದೆ. ಇನ್ನು ಈ ಯೋಜನೆಯ ಲಾಭ ಪಡೆಯಬೇಕಾದರೆ ಬಹುಮುಖ್ಯವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿ ಲಿಂಕ್ ಆಗಿರಬೇಕು ಎಂದು ಹೇಳಲಾಗಿದೆ.


Click it and Unblock the Notifications








