Home
ಸುದ್ದಿಜಾಲ

ಗೃಹಲಕ್ಷ್ಮೀಗಾಗಿ ಕಾದವರಿಗೆ ನಿರಾಸೆ! ನಾಳೆ ಶುರುವಾಗಲ್ಲ ಗೃಹಲಕ್ಷ್ಮೀ ಅರ್ಜಿ ಸಲ್ಲಿಕೆ ಪ್ರಕ್ರಿಯೆ!

ಕರ್ನಾಟಕ ರಾಜ್ಯ ಸರ್ಕಾರದ ಬಹು ನಿರೀಕ್ಷಿತ 'ಗೃಹಲಕ್ಷ್ಮೀ' ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ ಇನ್ನಷ್ಟು ವಿಳಂಬವಾಗಲಿದೆ. ಅರ್ಜಿ ಸಲ್ಲಿಕೆಗೆ ಆನ್‌ಲೈನ್‌ ಮತ್ತು ಆಫ್‌ಲೈನ್‌ ಎರಡರಲ್ಲೂ ಕೂಡ ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಕೊನೆಯ ದಿನಾಂಕ ಇರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಹೌದು, ಗೃಹಲಕ್ಷ್ಮೀ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿತ್ತು. ಆದರೆ ಇದೀಗ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ಬೇಕಾದ ತಯಾರಿ ಸ್ವಲ್ಪ ತೊಂದರೆ ಇರುವುದರಿಂದ ನಾಳೆಯಿಂದ ಅರ್ಜಿ ಸಲ್ಲಿಕೆ ನಡೆಯುವುದಿಲ್ಲ ಎಂದು ಹೇಳಲಾಗಿದೆ. ಪ್ರತಿ ಮನೆಯ ಯಜಮಾನಿಯು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್, ಅಂತ್ಯೋದಯ ಕಾರ್ಡ್ ನವರಿಗೆ ಈ ಯೋಜನೆ ಲಾಭ ಸಿಗುತ್ತದೆ ಎಂದು ಹೇಳಲಾಗಿದೆ. ಹಾಗಾದ್ರೆ ನಾಳೆಯಿಂದ ಶುರುವಾಗುವ ಅರ್ಜಿ ಸಲ್ಲಿಕೆಗೂ ಮುನ್ನ ನೀವು ತಿಳಿದುಕೊಳ್ಳಲೇಬೇಕಾದ ವಿಚಾರಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗೃಹಲಕ್ಷ್ಮೀಗಾಗಿ ಕಾದವರಿಗೆ ನಿರಾಸೆ!ನಾಳೆ ಶುರುವಾಗಲ್ಲ ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಅರ್ಜಿ ಸಲ್ಲಿಕೆ ಪ್ರಾರಂಭ ಯಾವಾಗ?
ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಇನ್ನಷ್ಟು ಮುಂದಕ್ಕೆ ಹೋಗಿದೆ. ನಾಳೆ ಮಧ್ಯಾಹ್ನ 1.30ಕ್ಕೆ ಸಿಎಂ ಸಿದ್ದರಾಮಯ್ಯ ಸಾಂಕೇತಿಕವಾಗಿ ಚಾಲನೆ ನೀಡಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ತಾಂತ್ರಿಕ ದೋಷದ ನೆಪವೊಡ್ಡಿ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಮುಂದೂಡಲಾಗಿದೆ. ಇನ್ನು ಅರ್ಜಿ ಸಲ್ಲಿಕೆಗೆ ಯಾವುದೇ ನಿರ್ಧಿಷ್ಟ ದಿನಾಂಕ ಮಿತಿಯನ್ನು ನೀಡಲಾಗಿಲ್ಲ. ಆದರಿಂದ ಯಾವಾಗ ಬೇಕಾದರೂ ಅರ್ಜಿ ಸಲ್ಲಿಸಬಹುದಾಗಿದ್ದು, ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಪಾವತಿಸಬೇಕಾದ ಅಗತ್ಯವಿಲ್ಲ ಎಂದು ಸರ್ಕಾರ ಹೇಳಿದೆ. ಇನ್ನು ಅರ್ಜಿ ಸಲ್ಲಿಕೆಗೆ ಅರ್ಜಿದಾರರು ಹಾಗೂ ಪತಿಯ ಆಧಾರ್ ಕಾರ್ಡ್ ಸಂಖ್ಯೆ, ಬ್ಯಾಂಕ್ ಖಾತೆ ವಿವರ ಹಾಗೂ ಮೊಬೈಲ್ ಸಂಖ್ಯೆ ಅತ್ಯಗತ್ಯವಾಗಿರಬೇಕಾಗುತ್ತದೆ.

ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?
ರಾಜ್ಯ ಸರ್ಕಾರ ಈಗಾಗಲೇ ತಿಳಿಸಿರುವಂತೆ ಗೃಹಲಕ್ಷ್ಮೀ ಯೋಜನೆಯ ಲಾಭ ಪಡೆಯಲು ಬಯಸುವವರು ಆನ್‌ಲೈನ್‌ ಮತ್ತು ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸುವವರು ಕರ್ನಾಟಕ ಒನ್‌, ಬೆಂಗಳೂರು ಒನ್‌, ಗ್ರಾಮ್‌ಒನ್‌, ಸೇವಾಸಿಂಧು ಫೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಇನ್ನು ಆಫ್ ಲೈನ್ ನಲ್ಲಿ ಅರ್ಜಿ ಸಲ್ಲಿಸುವವರು ಕೂಡ ತಮ್ಮ ಅಧಿಕೃತ ದಾಖಲೆಗಳ ಜೊತೆಗೆ ಅಪ್ಲಿಕೇಶನ್‌ ಅನ್ನು ಭರ್ತಿ ಮಾಡಿ ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ನೀಡಬಹುದು.

ಅರ್ಜಿ ಸಲ್ಲಿಕೆಗೆ ಬೇಕಾದ ದಾಖಲೆಗಳೇನು?
ಅಂತ್ಯೋದಯ, ಬಿಪಿಎಲ್ ಮತ್ತು ಎಪಿಎಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಯಾಗಲು ಅರ್ಹರಾಗಿರುತ್ತಾರೆ. ಒಂದು ವೇಳೆ ಕುಟುಂಬದ ಯಜಮಾನಿ ಅರ್ಜಿ ಸಲ್ಲಿಸದೆ ಮನೆಯ ಇತರೆ ಯಾರಾದರೂ ಒಬ್ಬ ಮಹಿಳೆ ಕೂಡ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ನೀಡಲಾಗಿದೆ. ಇನ್ನು ಈ ಅರ್ಜಿ ಸಲ್ಲಿಸುವ ಮಹಿಳೆಯ ಪತಿ ತೆರಿಗೆ ಪಾವತಿದಾರನಾಗಿದ್ದರೆ ಈ ಯೋಜನೆಯ ಲಾಭ ದೊರೆಯುವುದಿಲ್ಲ ಎಂದು ಹೇಳಲಾಗಿದೆ.

ಗೃಹಲಕ್ಷ್ಮೀಗಾಗಿ ಕಾದವರಿಗೆ ನಿರಾಸೆ!ನಾಳೆ ಶುರುವಾಗಲ್ಲ ಅರ್ಜಿ ಸಲ್ಲಿಕೆ ಪ್ರಕ್ರಿಯೆ

ಯಾರೆಲ್ಲಾ ಅರ್ಜಿ ಸಲ್ಲಿಸಬಹುದು?
ಇನ್ನು ಈ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆ ಕುಟುಂಬದ ಎಲ್ಲಾ ಮಹಿಳೆಯರಿಗೂ ಅವಕಾಶವಿಲ್ಲ. ಆದರೆ ಮನೆಯಲ್ಲಿ ಯಾರಾದರೂ ಒಬ್ಬ ಮಹಿಳೆಗೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಅರ್ಜಿ ಸಲ್ಲಿಸುವ ಮಹಿಳೆಯ ಹೆಸರು ಪಡಿತರ ಚೀಟಿಯಲ್ಲಿ ಇರುವುದು ಕಡ್ಡಾಯವಾಗಿದೆ. ಪ್ರಸ್ತುತ ನೀವು ರೇಷನ್‌ ಕಾರ್ಡ್‌ಗೆ ಅರ್ಜಿ ಸಲ್ಲಿಸಿ ಇನ್ನು ಕೂಡ ಕಾರ್ಡ್‌ ಪಡೆದುಕೊಂಡಿಲ್ಲವೆಂದರೆ ಈ ಯೋಜನೆಯ ಲಾಭ ಸದ್ಯಕ್ಕೆ ದೊರೆಯುವುದಿಲ್ಲ. ಆದರೆ ನೀವು ರೇಷನ್‌ ಕಾರ್ಡ್‌ ಪಡೆದುಕೊಂಡ ನಂತರ ಈ ಯೋಜನೆಯ ಲಾಭ ಸಿಗುವುದರ ಬಗ್ಗೆ ಇನ್ನು ಯಾವುದೇ ಅಧೀಕೃತ ಮಾಹಿತಿಯಿಲ್ಲ.

ಯೋಜನೆಯ ಹಣ ಹೇಗೆ ಲಭ್ಯವಾಗಲಿದೆ?
ಇನ್ನು ನೀವು ಗೃಹಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಸಿ ಫಲಾನುಭವಿಯಾಗಿ ಆಯ್ಕೆಯಾದರೆ ನಿಮ್ಮ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ವರ್ಗಾವಣೆಯಾಗಲಿದೆ. ಈ ಯೋಜನೆಯಲ್ಲಿ ಪ್ರತಿ ತಿಂಗಳು ಎರಡು ಸಾವಿರ ರೂ. ಡಿಬಿಟಿ ಮೂಲಕ ನಿಮ್ಮ ಬ್ಯಾಂಕ್‌ ಖಾತೆಗೆ ಬಂದು ಸೇರಲಿದೆ. ಒಂದು ವೇಳೆ ನೀವು ಸುಳ್ಳು ದಾಖಲೆಗಳನ್ನು ನೀಡಿ ಯೋಜನೆಯ ಲಾಭ ಪಡೆಯುವುದು ಕಂಡು ಬಂದರೆ ಅಂತಹವರ ವಿರುದ್ದ ಕ್ರಮಕೈಗೊಳ್ಳುವುದಾಗಿ ಸರ್ಕಾರ ಈಗಾಗಲೇ ತಿಳಿಸಿದೆ.

Best Mobiles in India

English summary
Gruha lakshmi yojana: submission of applications will start from tomorrow. How to submit application?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+