Home
ಸುದ್ದಿಜಾಲ

Gruhalakshmi Scheme: ಇನ್ನು ಕೂಡ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ? ಇಲ್ಲಿದೆ ಅಸಲಿ ಸತ್ಯ!

ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಕೂಡ ಒಂದಾಗಿದೆ. ಈ ಯೋಜನೆಯಡಿಯಲ್ಲಿ ಮನೆಯ ಒಡತಿಗೆ ಪ್ರತಿ ತಿಂಗಳು 2,000ರೂ.ಗಳ ಆರ್ಥಿಕ ನೆರವನ್ನು ನೀಡಲಾಗ್ತಿದೆ. ಆದರೆ ಯೋಜನೆ ಪ್ರಾರಂಭವಾಗಿ ಎರಡು ತಿಂಗಳು ಕಳೆದರೂ ಕೂಡ ಇನ್ನು ಲಕ್ಷಾಂತರ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ತಲುಪಿಲ್ಲ.

ಹೌದು, ಗೃಹಲಕ್ಷ್ಮಿ (Gruhalakshmi)ಯೋಜನೆ ಪ್ರಾರಂಭವಾದ ದಿನದಿಂದಲೂ ಒಂದಿಲ್ಲೊಂದು ಗೊಂದಲ ಮುಂದುವರೆಯುತ್ತಲೆ ಇದೆ. ಸರ್ಕಾರ ಗೃಹಲಕ್ಷ್ಮಿ ಫಲಾನುಭವಿಗಳಿಗೆ ಡಿಬಿಟಿ ವ್ಯವಸ್ಥೆಯ ಮೂಲಕ ಗೃಹಲಕ್ಷ್ಮಿ ಹಣವನ್ನು ಪಾವತಿಸಿದೆ. ಆದರೆ ಅರ್ಜಿ ಸಲ್ಲಿಸುವಾಗ ಫಲಾನುಭವಿಗಳು ನೀಡಿರುವ ಬ್ಯಾಂಕ್‌ ಖಾತೆಗಳು, ಆಧಾರ್‌ ಕೆವೈಸಿ ದಾಖಲೆಗಳ ಸಮಸ್ಯೆಯಿಂದ ನಿಗಧಿತ ಸಮಯಕ್ಕೆ ಫಲಾನುಭವಿಗಳ ಖಾತೆಗೆ ಹಣ ತಲುಪಿಲ್ಲ ಎನ್ನಲಾಗಿದೆ. ಹಾಗಾದ್ರೆ ಗೃಹಲಕ್ಷ್ಮಿ ಹಣ ತಲುಪದಿರುವುದಕ್ಕೆ ತಾಂತ್ರಿಕ ಕಾರಣಗಳೇನು? ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

Gruhalakshmi Scheme: ಇನ್ನು ಕೂಡ ನಿಮ್ಮ ಖಾತೆಗೆ ಗೃಹಲಕ್ಷ್ಮಿ ಹಣ ಯಾಕೆ ಬಂದಿಲ್ಲ

ಇನ್ನು ತಲುಪಿಲ್ಲ ಗೃಹಲಕ್ಷ್ಮಿ ಹಣ!
ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗಾಗಿ ಈಗಾಗಲೇ ಹಣ ಬಿಡುಗಡೆ ಮಾಡಿದೆ. ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಪಾವತಿಸುವುದಕ್ಕಾಗಿ ಡಿಬಿಟಿ ವ್ಯವಸ್ಥೆಯನ್ನು ಅಳವಡಿಸಿಕೊಂಡಿದೆ. ಆದರೆ ಅಂದುಕೊಂಡ ಸಮಯಕ್ಕೆ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಆಗಿಲ್ಲ ಎನ್ನಲಾಗಿದೆ. ಅರ್ಜಿ ಸಲ್ಲಿಸಿರುವ 1.08 ಕೋಟಿ ಅರ್ಜಿದಾರರಲ್ಲಿ 93 ಲಕ್ಷ ಫಲಾನುಭವಿಗಳಿಗೆ ಮಾತ್ರ ಹಣ ಜಮೆ ಆಗಿದೆ. ಇನ್ನು 5.5 ಲಕ್ಷ ಅರ್ಜಿದಾರರಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಚಾಲ್ತಿಯಲ್ಲಿದೆ. ಆದರೆ ಈವರೆಗೆ 9.44 ಲಕ್ಷ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಹಣ ಜಮೆಯಾಗಿಲ್ಲ ಎಂದು ಸಚಿವೆ ಲಕ್ಷ್ಮಿ ಹೆಬಾಳ್ಕರ್‌ ಮಾಹಿತಿ ನೀಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದೇನು?
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸಚಿವರು ನೀಡಿರುವ ಮಾಹಿತಿಯಂತೆ ಇದುವರೆಗೂ 9.44 ಲಕ್ಷ ಫಲಾನುಭವಿಗಳ ಖಾತೆಗೆ ಗೃಹಲಕ್ಷ್ಮಿ ಹಣ ಜಮೆ ಆಗಿಲ್ಲ ಎನ್ನಲಾಗಿದೆ. ಇದಕ್ಕೆ ಮೂಲ ಕಾರಣ ಅರ್ಜಿ ಸಲ್ಲಿಸುವಾಗ ಫಲಾನುಭವಿಗಳು ನೀಡಿರುವ ಬ್ಯಾಂಕ್‌ ಖಾತೆಗಳು ನಿಷ್ಕ್ರೀಯವಾಗಿರುವುದ. ಕೆವೈಸಿ ಪರಿಶೀಲನೆ ಆಗದಿರುವುದ, ಬ್ಯಾಂಕ್‌ ಖಾತೆಯೊಂದಿಗೆ ಆಧಾರ್‌ ಲಿಂಕ್‌ ಆಗಿಲ್ಲದಿರುವುದು ಕೂಡ ಕಂಡು ಬಂದಿದೆ.

ಹಣ ಜಮಾವಣೆ ಆಗದಿರಲು ತಾಂತ್ರಿಕ ಕಾರಣಗಳೇನು?
ಗೃಹಲಕ್ಷ್ಮಿಗೆ ಸಲ್ಲಿಸಿರುವ ಅರ್ಜಿ ಯಶಸ್ವಿಯಾಗಿ, ಫಲಾನುಭವಿಗಳಾಗಿ ಆಯ್ಕೆಯಾಗಿರುವ ಹಲವು ಮಂದಿಗೆ ಇನ್ನು ಕೂಡ ಹಣ ಜಮಾವಣೆ ಆಗಿಲ್ಲ. ಇವರುಗಳಲ್ಲಿ 3,082 ಅರ್ಜಿದಾರರು ಮರಣ ಹೊಂದಿದ್ದು, ಅವರನ್ನು ಫಲಾನುಭವಿಗಳ ಪಟ್ಟಿಯಿಂದ ಕೈ ಬಿಡಲಾಗಿದೆ. ಇದಲ್ಲದೆ 1 ಲಕ್ಷದ 59 ಸಾವಿರ ಅರ್ಜಿದಾರರ ಡೆಮೋ ದೃಢೀಕರಣ ವಿಫಲವಾಗಿದೆ ಎಂದು ಹೇಳಲಾಗಿದೆ. ಇದರೊಂದಿಗೆ ಇನ್ನು ಕೂಡ 5 ಲಕ್ಷ 96 ಸಾವಿರ ಅರ್ಜಿದಾರರ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯೆ ಆಗಿಲ್ಲ ಅನ್ನೊ ಶಾಕಿಂಗ್‌ ವಿಚಾರ ಕೂಡ ಹೊರಬಿದ್ದಿದೆ.

ಇದು ಮಾತ್ರವಲ್ಲ 1 ಲಕ್ಷದ 75 ಸಾವಿರ ಅರ್ಜಿದಾರರ ಹೆಸರು ಮತ್ತು ವಿಳಾಸದಲ್ಲಿ ಸಾಕಷ್ಟು ವ್ಯತ್ಯಾಸ ಕಂಡು ಬಂದಿದೆ. ಇದೇ ಕಾರಣಕ್ಕೆ ಈ ಅರ್ಜಿಗಳನ್ನು ಪುನರ್‌ ಪರಿಶೀಲನೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ರಾಜ್ಯ ಸರ್ಕಾರ ಗೃಹಲಕ್ಷ್ಮಿ ಯೋಜನೆಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಕೆಗೆ ಅವಕಾಶ ಮಾಡಿಕೊಟ್ಟಿತ್ತು. ಆಗ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆಯುವುದಕ್ಕಾಗಿ ಅನೇಕ ಮಂದಿ ತಪ್ಪು ವಿಳಾಸಗಳನ್ನು ನೀಡಿ ಅರ್ಜಿ ಸಲ್ಲಿಸಿರುವುದು ಇದಕ್ಕೆಲ್ಲಾ ಕಾರಣ ಎನ್ನಲಾಗಿದೆ.

ಏನಿದು ಡಿಬಿಟಿ ಸಿಸ್ಟಂ? ಇದು ಹೇಗೆ ಕಾರ್ಯನಿರ್ವಹಿಸಲಿದೆ?
ಇಂದಿನ ಟೆಕ್ನಾಲಜಿ ಜಮಾನದಲ್ಲಿ ಅರ್ಹ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ನೇರವಾಗಿ ಹಣ ತಲುಪಿಸುವಲ್ಲಿ ಡಿಬಿಟಿ ವ್ಯವಸ್ಥೆ ಅತ್ಯುತ್ತಮವಾಗಿದೆ. ಸರ್ಕಾರಗಳ ಯೋಜನೆಗಳ ಹಣವನ್ನು ಫಲಾನುಭವಿಗಳ ಖಾತೆಗಳಿಗೆ ನೇರವಾಗಿ ಜಮಾ ಮಾಡಲು ಸಹಾಯ ಮಾಡಲಿದೆ. DBT ಯೋಜನೆಯು ದಲ್ಲಾಳಿಗಳ ಕಾಟದಿಂದ ಮುಕ್ತಿ ನೀಡಲಿದೆ. ಅಷ್ಟೇ ಅಲ್ಲ ಡಿಬಿಟಿ ವ್ಯವಸ್ಥೆಯಡಿಯಲ್ಲಿ ನೀವು ಸರ್ಕಾರದ ಯೋಜನೆಗಳ ಲಾಭ ಪಡೆಯಬೇಕಾದರೆ ಅಗತ್ಯ ದಾಖಲೆಗಳ ವಿವರಗಳು ಸರಿಯಾಗಿರಬೇಕಾಗುತ್ತದೆ. ಅದರಂತೆ ಫಲಾನುಭವಿಗಳ ಆಧಾರ್ ಲಿಂಕ್ ಮಾಡಿದ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಪಾವತಿ ಮಾಡಲಿದೆ.

ಈ ವ್ಯವಸ್ಥೆಯಲ್ಲಿ ನೀವು ಯೋಜನೆಯ ಲಾಭ ಪಡೆಯಬೇಕಾದರೆ ನಿಮ್ಮ ಬ್ಯಾಂಕ್‌ ಖಾತೆಗೆ ಆಧಾರ್‌ ಲಿಂಕ್‌ ಆಗಿರುವುದು ಕಡ್ಡಾಯವಾಗಿದೆ. ಇದರಲ್ಲಿ ಬ್ಯಾಂಕ್‌ ಖಾತೆಯ ವಿವರಗಳು ಹಾಗೂ ಆಧಾರ್‌ನಲ್ಲಿನ ವಿವರಗಳಲ್ಲಿ ಸ್ವಲ್ಪ ಏರುಪೇರು ಕಂಡುಬಂದರೆ ಕೂಡ ಹಣ ಪಾವತಿ ಸ್ಥಗಿತವಾಗಲಿದೆ. ಇದೇ ಕಾರಣಕ್ಕೆ ಲಕ್ಷಾಂತರ ಫಲಾನುಭವಿಗಳ ಖಾತೆಗೆ ಇನ್ನು ಕೂಡ ಗೃಹಲಕ್ಷ್ಮಿಯ ಹಣ ಜಮೆ ಆಗಿಲ್ಲ ಎನ್ನಲಾಗಿದೆ.

Best Mobiles in India

English summary
Gruhalakshmi Scheme: Why many people who applied for gruhalakshmi scheme have not received money?
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+