Home
ಸುದ್ದಿಜಾಲ

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಗೊಂದಲವಿದೆಯಾ ಈ ನಂಬರ್‌ಗೆ ಕರೆ ಮಾಡಿ!

ಕಾಂಗ್ರೆಸ್‌ ನೇತೃತ್ವದ ರಾಜ್ಯ ಸರ್ಕಾರ ತನ್ನ ನಾಲ್ಕನೇ ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದೆ. ಇಂದು ಸಂಜೆ ವಿಧಾನಸೌಧದ ಬ್ಯಾಂಕ್ವೆಟ್‌ ಹಾಲ್‌ನಲ್ಲಿ 'ಗೃಹಲಕ್ಷ್ಮಿ ಯೋಜನೆ' ನೋಂದಣಿ ಪ್ರಕ್ರಿಯೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕೃತವಾಗಿ ಚಾಲನೆ ನೀಡಿದರು. ಈ ಸಮಯದಲ್ಲಿ ಮೂವರು ಮಹಿಳೆಯರಿಗೆ ಮಂಜೂರಾತಿ ಪ್ರಮಾಣಪತ್ರವನ್ನು ಕೂಡ ನೀಡಿದ್ದಾರೆ.

ಹೌದು, ರಾಜ್ಯದ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂ. ನೀಡುವ ಗೃಹಲಕ್ಷ್ಮಿ ಯೋಜನೆಗೆ ಇಂದು ಚಾಲನೆ ಸಿಕ್ಕಿದೆ. ಈ ಸಮಯದಲ್ಲಿ ಅರ್ಜಿ ಸಲ್ಲಿಸುವುದು ಹೇಗೆ? ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳೇನು? ಇದರ ಲಾಭ ಯಾರಿಗೆಲ್ಲಾ ಸಿಗಲಿದೆ ಅನ್ನೊ ಮಾಹಿತಿಯನ್ನು ಸರ್ಕಾರ ಹಂಚಿಕೊಂಡಿದೆ. ಅಷ್ಟೇ ಅಲ್ಲ ಯೋಜನೆಯ ಬಗ್ಗೆ ನಿಮಗೆ ಯಾವುದೇ ಗೊಂದಲವಿದ್ದರೂ ಕೂಡ ನೀವು ಕರೆ ಮಾಡಿ ನಿಮ್ಮ ಸಮಸ್ಯೆ ಹೇಳಿ ಪರಿಹಾರ ಕಂಡುಕೊಳ್ಳುವುದಕ್ಕೆ ಅವಕಾಶ ನೀಡಿದೆ. ಹಾಗಾದ್ರೆ ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಮಾಹಿತಿ ತಿಳಿಯಲು ನೀವು ಕರೆ ಮಾಡಬೇಕಾದ ನಂಬರ್‌ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಗೊಂದಲವಿದೆಯಾ ಗೊಂದಲವಿದೆಯಾ ಈ ನಂಬರ್‌ಗೆ ಕರೆ ಮಾಡಿ!

ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆಗೆ ಇದೀಗ ಅಧಿಕೃತ ಚಾಲನೆ ಸಿಕ್ಕಿದೆ. ಈ ಮೂಲಕ ರಾಜ್ಯದ ಮಹಿಳೆಯರು ಸಾಕಷ್ಟು ದಿನದಿಂದ ಅರ್ಜಿ ಸಲ್ಲಿಸುವುದು ಯಾವಾಗ? ನಮ್ಮ ಖಾತೆಗೆ ಎರಡು ಸಾವಿರ ರೂ ಬರುವುದು ಯಾವಾಗ ಅಂತಾ ಕಾಯುತ್ತಿದ್ದ ಶುಭದಿನಕ್ಕೆ ಚಾಲನೆ ದೊರೆತಿದೆ. ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುಮಾ, ಆನಂದಿ, ಸತ್ಯಾ ಎನ್ನುವ ಮಹಿಳೆಯರಿಗೆ 2000 ಸಾವಿರ ರೂ. ಪಡೆಯಲು ಮಂಜೂರಾತಿ ಪ್ರಮಾಣಪತ್ರ ನೀಡುವ ಮೂಲಕ ಯೋಜನೆಗೆ ಭರ್ಜರಿ ಚಾಲನೆ ನೀಡಿದ್ದಾರೆ.

ಈ ಮೂಲಕ ರಾಜ್ಯದಲ್ಲಿ ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದ ರಾಜ್ಯದ ಮೊದಲಿಗರು ಎಂಬ ಖ್ಯಾತಿಗೆ ಪಾತ್ರರಾಗಿದ್ದಾರೆ. ಇನ್ನು ನಾಳೆಯಿಂದಲೇ ಈ ಯೋಜನೆಗೆ ಅರ್ಜಿ ಸಲ್ಲಿಕೆಗೆ ನೋಂದಣಿ ಶುರುವಾಗಲಿದೆ. ನೀವು ಯಾವಾಗ, ಎಲ್ಲಿ ಅರ್ಜಿ ಸಲ್ಲಿಸಬೇಕು ಅನ್ನೊದರ ಬಗ್ಗೆ ನಿಮ್ಮ ಮೊಬೈಲ್‌ ನಂಬರ್‌ಗೆ ಸಂದೇಶ ಬರಲಿದೆ. ರೇಷನ್‌ ಕಾರ್ಡ್‌ನಲ್ಲಿ ಮನೆ ಯಜಮಾನಿ ಎಂದು ನಮೂದಾಗಿರುವವರಿಗೆ ಈ ಯೋಜನೆಗ ಲಾಭ ದೊರೆಯಲಿದೆ. ಇಲ್ಲಿ ಮನೆ ಯಜಮಾನಿಯ ಆಧಾರ್‌ಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ಗೆ ಸಂದೇಶ ಬರಲಿದೆ.

ಒಂದು ವೇಳೆ ನಿಮ್ಮ ರೇಷನ್‌ ಕಾರ್ಡ್‌ಗೆ ಲಿಂಕ್‌ ಆಗಿರುವ ಮೊಬೈಲ್‌ ನಂಬರ್‌ ನಿಮ್ಮ ಬಳಿ ಇಲ್ಲದಿದ್ದರೆ, ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವ ದಿನಾಂಕ ತಿಳಿದುಕೊಳ್ಳಲು 8147500500 ಸಂಖ್ಯೆಗೆ ನಿಮ್ಮ ರೇಷನ್‌ ಕಾರ್ಡ್‌ ನಂಬರ್‌ ಅನ್ನು ಎಸ್‌ಎಂಎಸ್‌ ಕಳುಹಿಸಲು ಅವಕಾಶ ಕಲ್ಪಿಸಿದೆ. ಈ ನಂಬರ್‌ಗೆ ನೀವು ಸಂದೇಶ ಕಳುಹಿಸಿದ ಎರಡು ಸೆಕೆಂಡುಗಳಲ್ಲಿಯೇ ನಿಮ್ಮ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕ ಹಾಗೂ ಸ್ಥಳದ ವಿವರವನ್ನು ಪಡೆದುಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಗೊಂದಲವಿದೆಯಾ ಗೊಂದಲವಿದೆಯಾ ಈ ನಂಬರ್‌ಗೆ ಕರೆ ಮಾಡಿ!

ಏನಾದರೂ ಗೊಂದಲವಿದೆಯಾ ಕೂಡಲೇ ಈ ಸಂಖ್ಯೆಗೆ ಕರೆ ಮಾಡಿ!
ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸುವುದರ ಬಗ್ಗೆ ಏನಾದರೂ ಗೊಂದಲವಿದ್ದರೆ 1902 ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಈ ಸಂಖ್ಯೆಗೆ ಕರೆ ಮಾಡುವ ಮೂಲಕ ನಿಮ್ಮ ನೋಂದಣಿ ವೇಳಾಪಟ್ಟಿಯನ್ನು ತಿಳಿದುಕೊಳ್ಳಬಹುದಾಗಿದೆ. ನೀವು 1902 ನಂಬರ್‌ಗೆ ಕರೆ ಮಾಡಿದಾಗ ಅವರು ನೀಡುವ ಸೂಚನೆಗಳನ್ನು ಅನುಸರಿಸುವ ಮೂಲಕ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.

ಇದಲ್ಲದೆ ಸೇವಾಸಿಂಧು ಪೋರ್ಟಲ್‌ನಲ್ಲಿ ನಿಮ್ಮ ಪಡಿತರ ಚೀಟಿ ಸಂಖ್ಯೆಯನ್ನು ನಮೂದಿಸುವ ಮೂಲಕ ನಿಮ್ಮ ಅರ್ಜಿ ಸಲ್ಲಿಕೆ ದಿನಾಂಕದ ಬಗ್ಗೆ ಮಾಹಿತಿ ತಿಳಿದುಕೊಳ್ಳಬಹುದಾಗಿದೆ. ಅಲ್ಲದೆ ನೀವು ಅರ್ಜಿ ಸಲ್ಲಿಸುವುದಕ್ಕೆ ನಿಮಗೆ ನಿಗದಿಪಡಿಸಿದ ಸ್ಥಳ ನಿಯೋಜನೆಯ ಬಗ್ಗೆ ಕೂಡ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

Best Mobiles in India

English summary
Gruhalakshmi Yojana: This number useful to applicant's: Details in kannada
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+