Home
ಸುದ್ದಿಜಾಲ

ಸ್ಟೈಲಿಶ್‌ ಲುಕ್‌ ಜೊತೆ ವೇಗದ ಪ್ರೊಸೆಸರ್‌ ಇರುವ ಈ ಫೋನ್‌ ಬೆಲೆ ಇಳಿಕೆ!

ವಿವೋ ಮೊಬೈಲ್‌ ಸಂಸ್ಥೆಯ ಸಬ್ ಬ್ರಾಂಡ್‌ ಆಗಿರುವ ಐಕ್ಯೂ ಸಂಸ್ಥೆಯು ಮೊಬೈಲ್‌ ಮಾರುಕಟ್ಟೆಯಲ್ಲಿ ಈಗಾಗಲೇ ತನ್ನದೇ ಸ್ಥಾನ ಖಚಿತಪಡಿಸಿಕೊಂಡಿದೆ. ಸಂಸ್ಥೆಯ ಕೆಲವು ಫೋನ್‌ಗಳು ಡಿಸೈನ್‌ ಹಾಗೂ ಕಾರ್ಯ ವೈಖರಿಯಿಂದ ಗ್ರಾಹಕರ ಗಮನ ಸೆಳೆದಿವೆ. ಇತ್ತೀಚಿಗೆ ಬಿಡುಗಡೆ ಆಗಿರುವ ಐಕ್ಯೂ ನಿಯೋ 9 ಪ್ರೊ 5G ಮೊಬೈಲ್‌ ಈಗ ಭಾರೀ ಡಿಸ್ಕೌಂಟ್‌ ಬೆಲೆಯಲ್ಲಿ ಖರೀದಿಗೆ ಲಭ್ಯ ಇದ್ದು, ಗ್ರಾಹಕರ ಗಮನ ಸೆಳೆದಿದೆ.

ಹೌದು, ಅಮೆಜಾನ್‌ ಪ್ಲಾಟ್‌ಫಾರ್ಮ್ ನಲ್ಲಿ ಐಕ್ಯೂ ನಿಯೋ 9 ಪ್ರೊ 5G (iQOO Neo9 Pro 5G) ಫೋನ್‌ ಶೇ. 13% ರಷ್ಟು ನೇರ ರಿಯಾಯಿತಿ ಪಡೆದಿದೆ. ಈ ಮೊಬೈಲ್‌ನ 8GB RAM + 128 GB ಸ್ಟೋರೇಜ್‌ ವೇರಿಯಂಟ್‌ ಈಗ 34,999 ರೂ. ಗಳ ಡಿಸ್ಕೌಂಟ್‌ ದರದಲ್ಲಿ ಖರೀದಿಗೆ ಲಭ್ಯ ಇದೆ. ಹಾಗೆಯೇ ಇತರೆ ಬ್ಯಾಂಕ್‌ ಕೊಡುಗೆ, ಇಎಮ್‌ಐ ಸೌಲಭ್ಯಗಳು ಕೂಡಾ ಖರೀದಿದಾರರಿಗೆ ದೊರೆಯಲಿವೆ.

ಸ್ಟೈಲಿಶ್‌ ಲುಕ್‌ ಜೊತೆ ವೇಗದ ಪ್ರೊಸೆಸರ್‌ ಇರುವ ಈ ಫೋನ್‌ ಬೆಲೆ ಇಳಿಕೆ!

ಐಕ್ಯೂ ಸಂಸ್ಥೆಯ ಈ ಸ್ಟೈಲಿಶ್‌ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಪವರ್‌ ಪಡೆದುಕೊಂಡಿದೆ. ಹಾಗೆಯೇ ಇದರ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ರಚನೆ ಅನ್ನು ಒಳಗೊಂಡಿದೆ. ಹಾಗಾದರೇ ಐಕ್ಯೂ ನಿಯೋ 9 ಪ್ರೊ 5G ಫೋನಿನ ಇತರೆ ಫೀಚರ್ಸ್‌ಗಳೆನು ಎಂಬುದನ್ನು ಮುಂದೆ ನೋಡೋಣ ಬನ್ನಿರಿ.

ಐಕ್ಯೂ ನಿಯೋ 9 ಪ್ರೊ 5G ಫೀಚರ್ಸ್‌

ಐಕ್ಯೂ ನಿಯೋ 9 ಪ್ರೊ 5G ಮೊಬೈಲ್‌ 6.78 ಇಂಚಿನ LTPO AMOLED ಡಿಸ್‌ಪ್ಲೇ ಅನ್ನು ಹೊಂದಿದೆ. ಇನ್ನು ಡಿಸ್‌ಪ್ಲೇ 1260 x 2800 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯ ಪಡೆದಿದೆ. ಈ ಡಿಸ್‌ಪ್ಲೇಯು 1400 ನಿಟ್ಸ್‌ ಬ್ರೈಟ್‌ನೆಸ್‌ ಲೆವೆಲ್‌ ಪಡೆದುಕೊಂಡಿದೆ. ಇದಲ್ಲದೆ ಡಿಸ್‌ಪ್ಲೇ 144 Hz ರಿಫ್ರೆಶ್ ರೇಟ್‌ ಸಪೋರ್ಟ್‌ ಮಾಡಲಿದೆ.

ಸ್ಟೈಲಿಶ್‌ ಲುಕ್‌ ಜೊತೆ ವೇಗದ ಪ್ರೊಸೆಸರ್‌ ಇರುವ ಈ ಫೋನ್‌ ಬೆಲೆ ಇಳಿಕೆ!

ಐಕ್ಯೂ ನಿಯೋ 9 ಪ್ರೊ 5G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 ಜೆನ್‌ 2 SoC ಪ್ರೊಸೆಸರ್‌ ಪವರ್‌ ಅನ್ನು ಪಡೆದಿದೆ. ಇದು ಆಂಡ್ರಾಯ್ಡ್ 14 ಓಎಸ್‌ ಸಪೋರ್ಟ್‌ನೊಂದಿಗೆ ಕೆಲಸ ನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 256 GB ಹಾಗೂ 12 GB RAM ಮತ್ತು 256 GB ಸ್ಟೋರೇಜ್ ವೇರಿಯೆಂಟ್‌ ಆಯ್ಕೆಗಳಲ್ಲಿ ಲಭ್ಯ. ಇದಲ್ಲದೆ ಮೆಮೊರಿ ಕಾರ್ಡ್‌ ಸಪೋರ್ಟ್‌ ಜೊತೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ಸಹ ವಿಸ್ತರಿಸುವ ಆಯ್ಕೆ ಕೂಡ ಸಿಗಲಿದೆ.

ಐಕ್ಯೂ ನಿಯೋ 9 ಪ್ರೊ 5G ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ರಚನೆ ಅನ್ನು ಒಳಗೊಂಡಿದೆ. ಇದರಲ್ಲಿ ಪ್ರಾಥಮಿಕ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX920 ಸೆನ್ಸಾರ್‌ ಸಪೋರ್ಟ್‌ ಪಡೆದಿದೆ. ಇದರ ಸೆಕೆಂಡರಿ ಕ್ಯಾಮೆರಾವು 8 ಮೆಗಾ ಪಿಕ್ಸಲ್‌ ಅಲ್ಟ್ರಾ ವೈಲ್ಡ್‌ ಆಂಗಲ್‌ ಲೆನ್ಸ್‌ ಅನ್ನು ಪಡೆದಿದೆ. ಹಾಗೆಯೇ ಇನ್ನು ಸ್ಮಾರ್ಟ್‌ಫೋನ್‌ 16 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ.

ಐಕ್ಯೂ ನಿಯೋ 9 ಪ್ರೊ 5G ಸ್ಮಾರ್ಟ್‌ಫೋನ್‌ 5160  mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯ ಪಡೆದಿದ್ದು, ಇದಕ್ಕೆ ಪೂರಕವಾಗಿ 120W ಫ್ಲ್ಯಾಶ್‌ ಚಾರ್ಜ್‌ನ ಫಾಸ್ಟ್‌ ಚಾರ್ಜಿಂಗ್‌ ಸಪೋರ್ಟ್ ಪಡೆದುಕೊಂಡಿದೆ. ಅಲ್ಲದೇ ಕನೆಕ್ಟಿವಿಟಿ ಸೌಲಭ್ಯಗಳಲ್ಲಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, ಯುಎಸ್‌ಬಿ ಸಿ ಪೋರ್ಟ್‌, ಹೆಡ್‌ಫೋನ್‌ ಜ್ಯಾಕ್‌ ಆಯ್ಕೆಗಳನ್ನು ಪಡೆದುಕೊಂಡಿದೆ.

Best Mobiles in India

English summary
Heavy price drop on iQOO Neo9 Pro 5G mobile on amazon website. check price and more details.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+