50,000ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು ಇಲ್ಲಿವೆ!

|

ಸ್ಮಾರ್ಟ್‌ಫೋನ್‌ ಅಂದ್ರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಪ್ರತಿಯೊಬ್ಬರೂ ಕೂಡ ತಮ್ಮ ಬಳಿ ಸ್ಮಾರ್ಟ್‌ಫೋನ್‌ ಇರಬೇಕೆಂದು ಬಯಸುತ್ತಾರೆ. ಸ್ಮಾರ್ಟ್‌ಫೋನ್‌ ಇಲ್ಲದೆ ಮನೆಯಿಂದ ಹೊರಗಡೆ ಹೋಗುವುದು ಕಷ್ಟ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ತಮ್ಮ ವೈವಿದ್ಯಮಯ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗ ಪರಿಚಯಿಸಿವೆ. ಇವುಗಳಲ್ಲಿ ಹೆಚ್ಚಿನ ಜನರು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಆಯ್ಕೆ ಮಾಡಿದರೆ, ಇನ್ನು ಕೆಲವರು ಪ್ರೀಮಿಯಂ ಪ್ರೈಸ್‌ಟ್ಯಾಗ್‌ ಸ್ಮಾರ್ಟ್‌ಫೋನ್‌ಗಳ ಕಡೆಗೂ ಗಮನಹರಿಸುತ್ತಾರೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಸ್ಮಾರ್ಟ್‌ಫೋನ್‌ ಪ್ರಿಯರು ತಮ್ಮ ಆಯ್ಕೆಯ ಬೆಲೆಗೆ ತಕ್ಕಂತೆ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುತ್ತಾರೆ. ಇನ್ನು ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೂ ಕೂಡ ಹೆಚ್ಚಿನ ಬೇಡಿಕೆ ಇದೆ. ಅದೇ ರೀತಿ 50,000ರೂ.ಗಳ ಅಸುಪಾಸಿನಲ್ಲೂ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಹಾಗಾದ್ರೆ ನೀವು ಕೂಡ 50,000ರೂ.ಗಿಂತ ಕಡಿಮೆ ಬೆಲೆಯ ಫೋನ್ ಸರ್ಚ್‌ ಮಾಡುತ್ತಿದ್ದರೆ ನಿಮಗೆ ಲಭ್ಯವಿರುವ ಆಯ್ಕೆಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ X70 ಪ್ರೊ 5G

ವಿವೋ X70 ಪ್ರೊ 5G

50,000ರೂ ಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋ X70 ಪ್ರೊ 5G ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ HD+ E5 AMOLED ಕರ್ವ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್‌ ಹೊಂದಿದ್ದು, ಸೂಪರ್ -ಸ್ಮೂತ್ ನ್ಯಾವಿಗೇಷನ್ ಮತ್ತು ಸ್ಕ್ರೋಲಿಂಗ್‌ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್‌ ಹೊಂದಿದೆ. ಹಾಗೆಯೇ 8GB RAM ಮತ್ತು 128 GB ಹಾಗೂ 12GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇನ್ನು ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4450mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜರ್ ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 46,990ರೂ ಬೆಲೆ ಹೊಂದಿದೆ.

ಒನ್‌ಪ್ಲಸ್ 9 5G

ಒನ್‌ಪ್ಲಸ್ 9 5G

ಒನ್‌ಪ್ಲಸ್ 9 5G ಸ್ಮಾರ್ಟ್‌ಫೋನ್‌ 6.55-ಇಂಚಿನ ಫ್ಲೂಯಿಡ್ AMOLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಈ ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ, 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹಾಗೂ 2 ಮೆಗಾ ಪಿಕ್ಸಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಸಹ 65T Warp ಚಾರ್ಜ್‌ ಫಾಸ್ಟ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇನ್ನು ಈ ಫೋನ್‌ 46,999ರೂ ಬೆಲೆಯನ್ನು ಹೊಂದಿದೆ.

iQoo ಲೆಜೆಂಡ್ 7 5G

iQoo ಲೆಜೆಂಡ್ 7 5G

ಐಕ್ಯೂ 7 ಲೆಜೆಂಡ್ 5G ಸ್ಮಾರ್ಟ್‌ಫೋನ್‌ ರೇಸ್ ಟ್ರ್ಯಾಕ್ ವಿನ್ಯಾಸವನ್ನು ಹೊಂದಿದೆ. ಈ ಫೋನ್‌ 6.62 ಇಂಚಿನ AMOLED ಡಿಸ್‌ಪ್ಲೇ ಹೊಂದಿದ್ದು, 120Hz ರಿಫ್ರೆಶ್ ರೇಟ್‌ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ.ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಚಾರ್ಜಿಂಗ್‌ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸದ್ಯ 44,999ರೂ.ಬೆಲೆಯನ್ನು ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S20 FE 5G

ಗ್ಯಾಲಕ್ಸಿ S20FE 5G ಸ್ಮಾರ್ಟ್‌ಫೋನ್‌ 6.5 ಇಂಚಿನ ಫುಲ್‌ ಹೆಚ್‌ಡಿ + ಸೂಪರ್ ಅಮೋಲೆಡ್ ಇನ್ಫಿನಿಟಿ-ಒ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 865 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಆಪರೇಟಿಂಗ್‌ ಸಿಸ್ಟಮ್‌ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಈ ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್ ಮತ್ತು ವೈರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 36,999ರೂ.ಬೆಲೆಯನ್ನು ಹೊಂದಿದೆ.

ಆಪಲ್ ಐಫೋನ್ 12

ಆಪಲ್ ಐಫೋನ್ 12

ಆಪಲ್ ಐಫೋನ್ 12 ಬಿಡುಗಡೆಯಾದಾಗ 79,999ರೂ.ಬೆಲೆ ಹೊಂದಿತ್ತು. ಆದರೆ ಐಫೋನ್ 12 ಇದೀಗ 45,999ರೂ.ಬೆಲೆಗೆ ಲಭ್ಯವಿದೆ. ಇನ್ನು ಈ ಐಫೋನ್‌ 6.1 ಇಂಚಿನ OLED ಡಿಸ್‌ಪ್ಲೇ ಹೊಂದಿದೆ. ಇದು A14 ಬಯೋನಿಕ್ ಪ್ರೊಸೆಸರ್‌ ಅನ್ನು ಹೊಂದಿದೆ. ಐಫೋನ್‌12 ಡ್ಯುಯಲ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ.

Best Mobiles in India

English summary
If your budget for a smartphone is Rs 50,000, here are the five phones that you should definitely be checking out.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X