ಭಾರತದಲ್ಲಿ ಬಜೆಟ್ ಬೆಲೆಯಲ್ಲಿ ಖರೀದಿಸಬಹುದಾದ 5G ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವರ್ಷದಿಂದ ವರ್ಷಕ್ಕೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಇನ್ನು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ 5G ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಸದ್ಯ ಭಾರತದಲ್ಲಿ 5G ನೆಟ್‌ವರ್ಕ್ ಲಭ್ಯವಿಲ್ಲ. ಆದರೂ ಭವಿಷ್ಯದಲ್ಲಿ 5G ನೆಟ್‌ವರ್ಕ್ ಲಭ್ಯವಾಗುವ ಕಾರಣ ಸ್ಮಾರ್ಟ್‌ಫೋನ್ ಕಂಪೆನಿಗಳು 5G ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಲೇ ಬಂದಿವೆ. ಅದರಲ್ಲೂ ಬಜೆಟ್ ಬೆಲೆಯನ್ನು ಹೊಂದಿರುವ 5G ಸ್ಮಾರ್ಟ್‌ಫೋನ್‌ಗಳು ಕೂಡ ಲಭ್ಯವಿದೆ.

ಹೌದು, ಭಾರತದ ಸ್ಮಾರ್ಟ್‌ಫೋನ್ ವಲಯದಲ್ಲಿ 5G ಸ್ಮಾರ್ಟ್‌ಫೋನ್‌ಗಳ ಅಬ್ಬರ ಹೆಚ್ಚಾಗಿದೆ. ಬಜೆಟ್ ಬೆಲೆಯಿಂದ ಹಿಡಿದು ದುಬಾರಿ ಬೆಲೆಯ 5G ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಬ್ಯವಿದೆ. ಒಪ್ಪೋ, ಸ್ಯಾಮ್‌ಸಂಗ್, ರಿಯಲ್‌ಮಿ, ರೆಡ್ಮಿ, ಬ್ರಾಂಡ್‌ನ ಅನೇಕ 5G ಸ್ಮಾರ್ಟ್‌ಫೋನ್‌ಗಳನ್ನು ನೀವು ಖರೀದಿಸಬಹುದಾಗಿದೆ. ಸದ್ಯ ನೀವು ಬಜೆಟ್‌ಬೆಲೆಯಲ್ಲಿ ಖರೀದಿಸಬಹುದಾದ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಪೊಕೊ M3 ಪ್ರೊ 5G
ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB + 64GB ಮತ್ತು 6GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳನ್ನು ಹೊಂದಿದೆ. ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 2 ಮೆಗಾ ಪಿಕ್ಸೆಲ್ ಸೆನ್ಸಾರ್ ಮ್ಯಾಕ್ರೋ ಲೆನ್ಸ್ ಹೊಂದಿದೆ.ಇದಲ್ಲದೆ 8 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ನ ಬೆಲೆ 4GB+64GB ಗೆ 14,499ರೂ ಮತ್ತು 6GB+128GB ಗೆ 16,499 ರೂ.ಆಗಿದೆ.

ಒಪ್ಪೋ A53s
ಒಪ್ಪೋ A53s 5G ಸ್ಮಾರ್ಟ್‌ಫೋನ್ 6.52-ಇಂಚಿನ ಎಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13-ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ಯಾಮೆರಾ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಕ್ಯಾಮೆರಾವನ್ನು ಒಳಗೊಂಡಿದೆ. ಇದು 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಕೂಡ ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇನ್ನು ಈ ಫೋನ್ 6GB + 128GB ಆಯ್ಕೆಗೆ 14,990 ರೂ. ಮತ್ತು 8GB + 128GB ರೂಪಾಂತರದ ಆಯ್ಕೆಗೆ 17,990ರೂ.ಬೆಲೆಯನ್ನು ಹೊಂದಿದೆ.

ರಿಯಲ್‌ಮಿ 8 5G
ರಿಯಲ್‌ಮಿ 8 5G ಸ್ಮಾರ್ಟ್‌ಫೋನ್ 6.5-ಇಂಚಿನ ಫುಲ್-ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128 GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್ ಬಳಸಿ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದು. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 18W ಕ್ವಿಕ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ಆಯ್ಕೆಗೆ 14,699 ರೂ ಮತ್ತು 4GB + 128GB ಆಯ್ಕೆಗೆ 15,699 ರೂ. ಬೆಲೆಯನ್ನು ಹೊಂದಿದೆ.

ರೆಡ್ಮಿ ನೋಟ್ 10T 5G
ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್ 6.5-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ ಈ ಫೋನ್ 4GB + 64GB ಮತ್ತು 6GB RAM + 128GB ಆಂತರಿಕ ಸ್ಟೋರೇಜ್ ಆಯ್ಕೆಯಗಳನ್ನು ಹೊಂದಿದೆ. ಇನ್ನು ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ 6GB+128GBಆಯ್ಕೆಗೆ 16,999ರೂ. ಮತ್ತು 4GB+64GBಆಯ್ಕೆಗೆ 14,999ರೂ.ಬೆಲೆಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒನ್ ಯುಐ 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಒದಗಿಸಿದ್ದು, 15W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6GB+128GBಆಯ್ಕೆಗೆ 16,999 ರೂ. ಬೆಲೆಯನ್ನು ಹೊಂದಿದೆ.


Click it and Unblock the Notifications








