Home
ಸುದ್ದಿಜಾಲ

ಜುಲೈ ತಿಂಗಳಲ್ಲಿ 15,000 ರೂ, ಒಳಗೆ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

ಟೆಕ್‌ ವಲಯದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡವೆ. ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ಬಳಕೆದಾರರ ಆಶಯಕ್ಕೆ ತಕ್ಕಂತೆ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಆದರೂ ಹೆಚ್ಚಿನ ಗ್ರಾಹಕರು ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳ ಕಡೆಗೆ ಆಸಕ್ತಿ ವಹಿಸುತ್ತಾರೆ. ಇದೇ ಕಾರಣಕ್ಕೆ ಹಲವು ಸ್ಮಾರ್ಟ್‌ಫೋನ್‌ಗಳು ಬಜೆಟ್‌ ಬೆಲೆಯಲ್ಲಿ ಲಾಂಚ್‌ ಆಗಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ವಲಯದಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಇದ್ದೆ ಇದೆ. ಅದರಂತೆ ಜುಲೈ ತಿಂಗಳಲ್ಲಿಯೂ ಕೂಡ ನೀವು ಕಡಿಮೆ ಬೆಲೆಯ ಸ್ಮಾರ್ಟ್‌ಫೋನ್‌ ಖರೀದಿಸಬಹುದಾಗಿದೆ. ಹಾಗಾದ್ರೆ ಈ ತಿಂಗಳಲ್ಲಿ ನೀವು 15,000 ರೂ, ಒಳಗೆ ಖರೀದಿಸಬಹುದಾದ ಹೊಸ ಸ್ಮಾರ್ಟ್‌ಫೋನ್ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್ 13,999ರೂ.ಗಳಾಗಿದೆ. ಹಾಗೂ 6GB + 128GB ವೇರಿಯಂಟ್ 15,999ರೂ.ಗಳ ಪ್ರೈಸ್‌ಟ್ಯಾಗ್‌ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ನಿಂದ ನಿಯಂತ್ರಿಸಲ್ಪಡುತ್ತದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ 48 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಹೊಂದಿದೆ.

ರೆಡ್ಮಿ ನೋಟ್ 10s

ರೆಡ್ಮಿ ನೋಟ್ 10s

ರೆಡ್ಮಿ ನೋಟ್ 10s ಕೂಡ ಕೇವಲ 14,999 ರೂ. ಗಳಿಗೆ ದೊರೆಯಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.43 ಇಚಿನ AMOLED ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ ಜಿ 95 ಪ್ರೊಸೆಸರ್ ನಿಂದ ನಿಯಂತ್ರಿಸಲ್ಪಡುತ್ತದೆ. ಇದು ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದುಕೊಂಡಿದೆ.

ರಿಯಲ್‌ಮಿ 8 5G

ರಿಯಲ್‌ಮಿ 8 5G

ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ 14,999 ರೂ.ಗಳ ಆರಂಭಿಕ ಬೆಲೆಯಲ್ಲಿ ದೊರೆಯುವ ಸಮರ್ಥ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌-ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ರಿಯಲ್‌ಮಿ 8 5G ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 700 ಪ್ರೊಸೆಸರ್ ಹೊಂದಿದೆ. ಇದು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ.

ಪೊಕೊ X3

ಪೊಕೊ X3

ಪೊಕೊ X3 ಸ್ಮಾರ್ಟ್‌ಫೋನ್‌ ಪೊಕೊ ಬ್ರಾಂಡ್‌ನಲ್ಲಿ 15,000 ರೂ.ಗಿಂತ ಕಡಿಮೆ ಇರುವ ಏಕೈಕ ಫೋನ್ ಇದಾಗಿದೆ. ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 732 SoC ಪ್ರೊಸೆಸರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 6000mAh ಬ್ಯಾಟರಿಯನ್ನು ಕೂಡ ಹೊಂದಿದೆ.

Best Mobiles in India

English summary
However, if you are planning to buy a new smartphone now, here are the best options under Rs 15,000 in July 2021.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+