20,000 ರೂ. ಒಳಗೆ ಲಭ್ಯವಾಗುವ 64MP ಕ್ಯಾಮೆರಾ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು!
ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ವಿನ್ಯಾಸವೇ ಬದಲಾಗಿ ಹೋಗಿದೆ. ಸ್ಮಾರ್ಟ್‌ಫೋನ್ ಕೇವಲ ಸಂಪರ್ಕ ಸಾಧನವಾಗಿ ಉಳಿದಿಲ್ಲ. ಬಹು ಕಾರ್ಯನಿರ್ವಹಿಸುವ ಸಾಮರ್ಥ್ಯವನ್ನು ಇಂದಿನ ಸ್ಮಾರ್ಟ್‌ಫೋನ್‌ಗಳು ಪಡೆದುಕೊಂಡಿವೆ. ಅಷ್ಟೇ ಅಲ್ಲ ಸ್ಮಾರ್ಟ್‌ಫೋನ್ ಕ್ಯಾಮೆರಾ ವಿನ್ಯಾಸದಲ್ಲಿ ಕೂಡ ಸಾಕಷ್ಟು ಬದಲಾವಣೆ ಕಾಣಬಹುದಾಗಿದೆ. 48mp, 64mp, 108mp ಸೆನ್ಸಾರ್ ಕ್ಯಾಮೆರಾಗಳನ್ನು ಸ್ಮಾರ್ಟ್‌ಫೋನ್‌ಗಳು ಪಡೆದುಕೊಂಡಿವೆ.

ಹೌದು, ಸ್ಮಾರ್ಟ್‌ಫೋನ್ ಖರೀದಿಸುವಾಗ ಮೊದಲು ಗಮನ ಸೆಳೆಯುವುದು ಕ್ಯಾಮೆರಾ ಸಾಮರ್ಥ್ಯ. ಸ್ಮಾರ್ಟ್‌ಫೋನ್ ಕ್ಯಾಮೆರಾ ಒಳಗೊಂಡಿರುವ ಫೀಚರ್ಸ್‌ಗಳ ಕಾರಣದಿಂದಾಗಿ ಸ್ಮಾರ್ಟ್‌ಫೋನ್ ಪ್ರಿಯರ ಆಕರ್ಷಿಸುತ್ತಿವೆ. ಸದ್ಯ ಮಾರುಕಟ್ಟೆಯಲ್ಲಿ 64MP ಸೆನ್ಸಾರ್ ಕ್ಯಾಮೆರಾ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ 20,000 ಕ್ಕಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ 64MP ಕ್ಯಾಮೆರಾ ಹೊಂದಿರುವ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M32
ಸ್ಯಾಮ್‌ಸಂಗ್ ಗ್ಯಾಲಕ್ಸಿ M32 ಸ್ಮಾರ್ಟ್‌ಫೋನ್ 6.4-ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G80 ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಪಡದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ತಂತ್ರಜ್ಞಾನವನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 14,999 ರೂ. ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M31
ಸ್ಯಾಮ್‌ಸಂಗ್ ಗ್ಯಾಲಕ್ಸಿ M31 ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಇನ್‌ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಸ್ಯಾಮ್‌ಸಂಗ್ exynos 9611 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ ಈ ಫೋನ್ 6,000mAh ಸಾಮರ್ಥ್ಯದ ಬ್ಯಾಟರಿ ಪ್ಯಾಕ್‌ಆಪ್ ಅನ್ನು ಹೊಂದಿದ್ದು, ಸಿಂಗಲ್ ಚಾರ್ಜ್‌ನಲ್ಲಿ 26 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಹಾಗೂ 119 ಗಂಟೆಗಳ ಮ್ಯೂಸಿಕ್ ಪ್ಲೇಬ್ಯಾಕ್ ಅನ್ನು ನೀಡಲಿದೆ. ಅಲ್ಲದೆ ಇದು 15W ವೇಗದ ಚಾರ್ಜಿಂಗ್‌ಅನ್ನು ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ 16,999ರೂ.ಬೆಲೆ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M51
ಸ್ಯಾಮ್‌ಸಂಗ್ ಗ್ಯಾಲಕ್ಸಿ M51 ಸ್ಮಾರ್ಟ್‌ಫೋನ್ 6.5 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 730G ಪ್ರೊಸೆಸರ್ ಹೊಂದಿದ್ದು, ಒನ್UI ಜೊತೆ ಆಂಡ್ರಾಯ್ಡ್ 10 ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಆಪ್ ಹೊಂದಿದ್ದು, ಮುಖ್ಯ ಕ್ಯಾಮೆರಾ 64ಎಂಪಿ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಜೊತೆಗೆ 7000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ ಅಪ್ ಸಾಮರ್ಥ್ಯವನ್ನು ಪಡೆದಿದೆ. ಇದರೊಂದಿಗೆ 25W ಸಾಮರ್ಥ್ಯದ ಕ್ವಿಕ್ ಚಾರ್ಜಿಂಗ್ ಸೌಲಭ್ಯವನ್ನು ನೀಡಿದೆ. ಇದರ ಬೆಲೆ ಪ್ರಸ್ತುತ 19,999 ರೂ. ಆಗಿದೆ.

ರೆಡ್ಮಿ ನೋಟ್ 10 ಎಸ್
ರೆಡ್ಮಿ ನೋಟ್ 10s ಸ್ಮಾರ್ಟ್‌ಫೋನ್ 6.43 ಇಚಿನ AMOLED ಫುಲ್ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ G95 SoC ಪ್ರೊಸೆಸರ್ ಸಾಮರ್ಥ್ಯ ಹೊಂದಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 11 ಆಧಾರಿತ MIUI 12.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಅಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಇದು 33W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಫೋನ್ ಪ್ರಸ್ತುತ 13,999ರೂ.ಬೆಲೆಗೆ ಲಭ್ಯವಿದೆ.

ರಿಯಲ್‌ಮಿ 8s
ರಿಯಲ್‌ಮಿ 8s ಸ್ಮಾರ್ಟ್‌ಫೋನ್ 6.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. 600 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ ಅನ್ನು ಒಳಗೊಂಡಿದೆ. ಈ ಡಿಸ್‌ಪ್ಲೇ 90% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಜೊತೆಗೆ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದು 5GB ವರ್ಚುವಲ್ RAM ಆಯ್ಕೆಯನ್ನು ಸಹ ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್ ಹೊಂದಿದೆ. ಇದು 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಡಾರ್ಟ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ 17,999ರೂ.ಬೆಲೆ ಹೊಂದಿದೆ.


Click it and Unblock the Notifications








