400ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ ಪ್ರಿಪೇಯ್ಡ್‌ ಪ್ಲಾನ್‌ಗಳು!

|

ದೇಶದ ಟೆಲಿಕಾಂ ವಲಯದಲ್ಲಿ ಜಿಯೋ, ಏರ್‌ಟೆಲ್‌ ಮತ್ತು ವಿ ಟೆಲಿಕಾಂ ಕಂಪೆನಿಗಳು ಮುಂಚೂಣಿಯಲ್ಲಿ ಗುರುತಿಸಿಕೊಂಡಿವೆ. ಅಗ್ಗದ ಬೆಲೆಯಲ್ಲಿ ಅಧಿಕ ಡೇಟಾ ಪ್ರಯೋಜನ ನೀಡುವ ಹಲವು ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ನೀಡುತ್ತಾ ಬಂದಿವೆ. ಇವುಗಳಲ್ಲಿ ದೈನಂದಿನ ಡೇಟಾ, ಅನಿಯಮಿತ ಕರೆ, ದೀರ್ಘಾವಧಿ ಮತ್ತು ಅಲ್ಪಾವಧಿಯ ಮಾನ್ಯತೆಯನ್ನು ಒಳಗೊಂಡಿವೆ. ಇದರಲ್ಲಿ ಅಗ್ಗದ ಬೆಲೆಯಲ್ಲಿ ಗರಿಷ್ಠ ಪ್ರಯೋಜನಗಳನ್ನು ನೀಡುವ ಪ್ಲಾನ್‌ಗಳು ಗ್ರಾಹಕರನ್ನು ಸೆಳೆದಿವೆ.

ಪ್ರಿಪೇಯ್ಡ್‌

ಹೌದು, ಕಡಿಮೆ ಬೆಲೆಯಲ್ಲಿ ಅಧಿಕ ಪ್ರಯೋಜನ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳು ಹೆಚ್ಚಿನ ಜನಪ್ರಿಯತೆ ಪಡೆದುಕೊಂಡಿವೆ. ಇದರಲ್ಲಿ ಜಿಯೋ, ವೊಡಾಫೋನ್ ಮತ್ತು ಏರ್‌ಟೆಲ್‌ ಕೂಡ ಅಗ್ಗದ ಬೆಲೆಯ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿವೆ. ಹಾಗಾದ್ರೆ 400ರೂ. ಬೆಲೆಯ ಅಡಿಯಲ್ಲಿ ಲಭ್ಯವಾಗುವ ಟಾಪ್ ಪ್ರಿಪೇಯ್ಡ್ ಪ್ಲಾನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಜಿಯೋ 299ರೂ. ಪ್ರಿಪೆಯ್ಡ್‌ ಪ್ಲಾನ್‌

ಜಿಯೋ 299ರೂ. ಪ್ರಿಪೆಯ್ಡ್‌ ಪ್ಲಾನ್‌

ಜಿಯೋ 299ರೂ. ಬೆಲೆಯ ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿನಿತ್ಯ 2GB ಡೇಟಾ ಹಾಗೂ ಅನಿಯಮಿತ ಧ್ವನಿ ಕರೆ ಮತ್ತು ಡೈಲಿ 100 SMS ಪ್ರಯೋಜನ ನೀಡಲಿದೆ.

ಜಿಯೋ 259ರೂ. ಪ್ರಿಪೇಯ್ಡ್ ಪ್ಲಾನ್‌
ಜಿಯೋ 259ರೂ. ಪ್ರಿಪೇಯ್ಡ್ ಪ್ಲಾನ್‌ ಕ್ಯಾಲೆಂಡರ್ ಅವಧಿಯ ಮಾನ್ಯತೆ ನೀಡಲಿದೆ. ಈ ಪ್ಲಾನ್‌ನಲ್ಲಿ ದೈನಂದಿನ 1.5GB ಡೇಟಾ ಪ್ರಯೋಜನವನ್ನು ಪಡೆಯಬಹುದಾಗಿದೆ. ನಿಮ್ಮ ದೈನಂದಿನ ಡೇಟಾ ಮುಗಿದ ನಂತರ, ನೀವು 64kbps ವೇಗದಲ್ಲಿ ಇಂಟರ್ನೆಟ್ ಬ್ರೌಸ್ ಮಾಡಬಹುದು. ಇದಲ್ಲದೆ ಅನಿಯಮಿತ ಧ್ವನಿ ಕರೆ ಹಾಗೂ ಡೈಲಿ 100SMS ಸೌಲಭ್ಯ ದೊರೆಯಲಿದೆ. ಹಾಗೆಯೇ ಹೆಚ್ಚುವರಿಯಾಗಿ ಜಿಯೋ ಅಪ್ಲಿಕೇಶನ್‌ಗಳಿಗೆ ಪೂರಕ ಚಂದಾದಾರಿಕೆಯನ್ನು ಸಹ ಪಡೆಯುತ್ತೀರಿ.

ಏರ್‌ಟೆಲ್‌ 399ರೂ.ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್‌ 399ರೂ.ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್‌ 399ರೂ.ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ನೀಡಲಿದೆ. ಈ ಅವಧಿಯಲ್ಲಿ ಪ್ರತಿನಿತ್ಯ 2.5GBಡೇಟಾ ಪ್ರಯೋಜನ ದೊರೆಯಲಿದೆ. ಈ ಪ್ಲಾನ್‌ನಲ್ಲಿ ಅನಿಯಮಿತ ಕರೆ ಮತ್ತು ಡಿಸ್ನಿ ಪ್ಲಸ್‌ ಹಾಟ್‌ಸ್ಟಾರ್‌ಗೆ ಉಚಿತ ಚಂದಾದಾರಿಕೆಯನ್ನು ಕೂಡ ನೀಡಲಿದೆ.

ಏರ್‌ಟೆಲ್‌ 359ರೂ.ಪ್ರಿಪೇಯ್ಡ್‌ ಪ್ಲಾನ್‌
ಏರ್‌ಟೆಲ್‌ ಟೆಲಿಕಾಂನ 359ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 28 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದ್ದು, ಈ ಅವಧಿಯಲ್ಲಿ ದೈನಂದಿನ 2GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವಿಂಕ್ ಮ್ಯೂಸಿಕ್, ಉಚಿತ ಹೆಲೋ ಟ್ಯೂನ್ ಪ್ರಯೋಜನ ಸಿಗಲಿದೆ. ಜೊತೆಗೆ ಫಾಸ್ಟ್‌ಟ್ಯಾಗ್ ನಲ್ಲಿ 100ರೂ. ಕ್ಯಾಶ್‌ಬ್ಯಾಕ್ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂ 299ರೂ.ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 299ರೂ.ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 299ರೂ.ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಸಮಯದಲ್ಲಿ ಪ್ರತಿದಿನ 1.5 ಡೇಟಾ ಹಾಗೂ ಅನಿಯಮಿತ ಕರೆ ಪ್ರಯೋಜನವನ್ನು ನೀಡಲಿದೆ. ಇನ್ನು ಈ ಪ್ಲಾನ್‌ನಲ್ಲಿ ದೈನಂದಿನ 100 SMS ಸೌಲಭ್ಯ ಸಿಗಲಿದೆ. "ರಾತ್ರಿಯೆಲ್ಲಾ ಬಿಂಜ್" ಸೇರಿದಂತೆ ಹೆಚ್ಚುವರಿ ಪ್ರಯೋಜನವನ್ನು ನೀಡಲಿದೆ.

ವಿ ಟೆಲಿಕಾಂ 359ರೂ. ಪ್ರಿಪೇಯ್ಡ್‌ ಪ್ಲಾನ್‌
ವಿ ಟೆಲಿಕಾಂ 359ರೂ ಪ್ರಿಪೇಯ್ಡ್‌ ಪ್ಲಾನ್‌ 28 ದಿನಗಳ ಮಾನ್ಯತೆಯನ್ನು ಹೊಂದಿದೆ. ಇನ್ನು ಈ ಪ್ಲಾನ್‌ನಲ್ಲಿ ನಿಮಗೆ ಪ್ರತಿನಿತ್ಯ 2GB ಡೇಟಾ ಪ್ರಯೋಜನ ಸಿಗಲಿದೆ. ಹಾಗೆಯೇ ಅನಿಯಮಿತ ಕರೆ ಪ್ರಯೋಜನ ಹಾಗೂ ಡೈಲಿ 100 ಎಸ್‌ಎಂಎಸ್‌ ಪ್ರಯೋಜನ ಕೂಡ ಲಭ್ಯವಿದೆ. ಇದಲ್ಲದೆ ವಿ ಮೂವಿಸ್‌, ಲೈವ್‌ಟಿವಿ ಯಂತಹ ಪ್ರಯೋಜನಗಳನ್ನು ನೀಡಲಿದೆ.

Best Mobiles in India

Read more about:
English summary
Here are the best prepaid plans by Jio, Vi and Airtel under Rs 400.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X