ಬಿಗ್‌ಬ್ಯಾಟರಿ ಬ್ಯಾಕ್‌ಅಪ್ ಬಯಸೋರಿಗೆ ಇಲ್ಲಿವೆ ಬೆಸ್ಟ್ ಸ್ಮಾರ್ಟ್‌ಫೋನ್‌ಗಳು!
ಸ್ಮಾರ್ಟ್‌ಫೋನ್ ಖರೀದಿಸುವಾಗ ಕೆಲವು ವಿಚಾರಗಳು ಮುಖ್ಯವಾಗುತ್ತವೆ. ಸ್ಮಾರ್ಟ್‌ಫೋನ್ ಕ್ಯಾಮೆರಾ, ಅದರ ಡಿಸ್‌ಪ್ಲೇ ವಿನ್ಯಾಸ, ಲುಕ್ ಎಲ್ಲವೂ ಕೂಡ ಗಣನೆಗೆ ತೆಗೆದುಕೊಳ್ಳುತ್ತಾರೆ. ಇದಲ್ಲದೆ ಸ್ಮಾರ್ಟ್‌ಫೋನ್‌ನ ಬ್ಯಾಟರಿ ಬ್ಯಾಕ್‌ಅಪ್ ಕೂಡ ಬಹುಮುಖ್ಯವಾಗುತ್ತದೆ. ಅದರಲ್ಲೂ ಹೆಚ್ಚಿನ ಜನರು ಬಿಗ್ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್ ಖರೀದಿಗೆ ಆಸಕ್ತಿ ತೋರುತ್ತಾರೆ.
ಹೌದು, ಬಿಗ್ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಿದೆ. ಇದಕ್ಕೆ ಅನುಗುಣವಾಗಿ ಜನಪ್ರಿಯ ಸ್ಮಾರ್ಟ್‌ಫೋನ್ ಬ್ರ್ಯಾಂಡ್‌ಗಳು ಕೂಡ ಬಿಗ್ ಬ್ಯಾಟರಿ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದೆ. ಸದ್ಯ ಮಿಡ್ ರೇಂಜ್ ಪ್ರೈಸ್‌ಟ್ಯಾಗ್‌ನಲ್ಲಿ ಲಭ್ಯವಾಗುವ ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಹೊಂದಿರುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F54
ಬಿಗ್ ಬ್ಯಾಟರಿ ಬ್ಯಾಕ್‌ಅಪ್ ಫೋನ್‌ಗಳನ್ನು ಖರೀದಿಸುವಾಗ ನೀವು ಪರಿಗಣಿಸಬಹುದಾ ಬೆಸ್ಟ್ ಫೋನ್ ಸ್ಯಾಮ್‌ಸಂಗ್ ಗ್ಯಾಲಕ್ಸಿ F54. ಇದು 6,000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್ ಅನ್ನು ಹೊಂದಿದೆ. ಸಿಂಗಲ್ ಚಾರ್ಜ್‌ನಲ್ಲಿ ಎರಡು ದಿನಗಳ ಕಾಲ ಬ್ಯಾಟರಿ ಬ್ಯಾಕ್‌ಅಪ್ ನೀಡಲಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಯನ್ನು ಪಡೆದಿರಲಿದೆ. ಇದು Exynos 1380 ಪ್ರೊಸೆಸರ್ ಪ್ರೊಸೆಸರ್ ಬಲದಲ್ಲಿ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾ 108MP ಸೆನ್ಸಾರ್ ಹೊಂದಿದೆ.
ಐಕ್ಯೂ ನಿಯೋ 7
ಐಕ್ಯೂ ನಿಯೋ 7 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 120W ಚಾರ್ಜಿಂಗ್ ಬೆಂಬಲಿಸಲಿದೆ. ಆದರಿಂದ ನೀವು ಕೇವಲ 10 ನಿಮಿಷಗಳಲ್ಲಿ 50% ಬ್ಯಾಟರಿಯನ್ನು ಚಾರ್ಜ್ ಮಾಡಬಹುದು. ಇದೇ ಕಾರಣಕ್ಕೆ ಅತ್ಯುತ್ತಮ ಬ್ಯಾಟರಿ ಬ್ಯಾಕ್‌ಅಪ್ ಫೋನ್‌ಗಳಲ್ಲಿ ಇದನ್ನು ಕೂಡ ಪರಿಗಣಿಸಬಹುದಾಗಿದೆ. ಇನ್ನು ಸ್ಮಾರ್ಟ್‌ಫೋನ್ ಡೈಮೆನ್ಸಿಟಿ 8200 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ.
ಪೊಕೊ F5
ಪೊಕೊ F5 ಸ್ಮಾರ್ಟ್‌ಫೋನ್ ಸಹ 5,000mAh ಬ್ಯಾಟರಿಯೊಂದಿಗೆ ಬರಲಿದೆ. ಈ ಸ್ಮಾರ್ಟ್‌ಫೋನ್ ಕೂಡ ಬೆಸ್ಟ್ ಬ್ಯಾಟರಿ ಬ್ಯಾಕ್‌ಅಪ್‌ಗೆ ಹೆಸರುವಾಸಿಯಾಗಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದು ಸ್ನಾಪ್‌ಡ್ರಾಗನ್ 7+ Gen 2SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದೇ ಕಾರಣಕ್ಕೆ ಈ ಸ್ಮಾರ್ಟ್‌ಫೋನ್ ಸಿಂಗಲ್ ಚಾರ್ಜ್‌ನಲ್ಲಿ ಇಡೀ ದಿನ ಬ್ಯಾಟರಿ ಅವಧಿಯನ್ನು ನೀಡಲಿದೆ ಎಂದು ಹೇಳಲಾಗಿದೆ.

ಒನ್‌ಪ್ಲಸ್ ನಾರ್ಡ್ 2T
ಒನ್‌ಪ್ಲಸ್ ನಾರ್ಡ್ 2T ಸ್ಮಾರ್ಟ್‌ಫೋನ್ ಅನ್ನು ಸಹ ಬ್ಯಾಟರಿ ಬ್ಯಾಕ್‌ಅಪ್ ಫೋನ್‌ಗಳ ಸಾಲಿನಲ್ಲಿ ಪರಿಗಣಿಸಲಾಗುತ್ತದೆ. ಸ್ಮಾರ್ಟ್‌ಫೋನ್ ಕೇವಲ 4,500mAh ಬ್ಯಾಟರಿ ಹೊಂದಿದೆ ಆದರು ಸಿಂಗಲ್ ಚಾರ್ಜ್‌ನಲ್ಲಿ ಒಂದು ದಿನಪೂರ್ತಿ ಬ್ಯಾಕ್‌ಅಪ್ ನೀಡಲಿದೆ. ಇದು 80W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಸ್ಮಾರ್ಟ್‌ಫೋನ್ 6.43 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದರ ಪ್ಯಾನಲ್ ಡಿಸೈನ್ ಕೂಡ ಗ್ರಾಹಕರನ್ನು ಆಕರ್ಷಿಸುತ್ತಾ ಬಂದಿದೆ.
ರಿಯಲ್‌ಮಿ 11 ಪ್ರೊ ಪ್ಲಸ್
ರಿಯಲ್‌ಮಿ 11 ಪ್ರೊ ಪ್ಲಸ್ ಸ್ಮಾರ್ಟ್‌ಫೋನ್ ಉತ್ತಮ ಬ್ಯಾಟರಿ ಬಾಳಿಕೆಗೆ ಹೆಸರುವಾಸಿಯಾಗಿದೆ. ಈ ಸ್ಮಾರ್ಟ್‌ಫೋನ್ ಕರ್ವ್ಡ್ ಡಿಸ್‌ಪ್ಲೇಯಿಂದ ಗಮನಸೆಳೆದಿದ್ದು, 5,000mAh ಬ್ಯಾಟರಿಯನ್ನು ಒಳಗೊಂಡಿದೆ. ಇದು 100W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇದು ದಿನವಿಡೀ ಬ್ಯಾಟರಿ ಬ್ಯಾಕ್‌ಅಪ್ ಅನ್ನು ನೀಡಲಿದೆ. ಇನ್ನು ಸ್ಮಾರ್ಟ್‌ಫೋನ್‌ನ ಮುಖ್ಯ ಕ್ಯಾಮೆರಾ 200 MP ಸೆನ್ಸಾರ್ ಹೊಂದಿರುವುದು ಮೇನ್ ಹೈಲೈಟ್ ಆಗಿದೆ. ಹಾಗೆಯೇ ಸ್ಮಾರ್ಟ್‌ಫೋನ್ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯಲ್ಲಿ ಲಭ್ಯವಿದೆ.


Click it and Unblock the Notifications








