ಭಾರತದಲ್ಲಿ ಈ ಸ್ಮಾರ್ಟ್‌ಫೋನ್‌ಗಳು ಪ್ರಸ್ತುತ ಟ್ರೆಂಡಿಂಗ್‌ನಲ್ಲಿ ಕಾಣಿಸಿಕೊಂಡಿವೆ!

|

ಪ್ರತಿವರ್ಷದಂತೆ ಈ ವರ್ಷವೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. 2022ರ ಪ್ರಾರಂಭದಲ್ಲಿಯೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಭಾರಿ ಸಂಚಲನ ಮೂಡಿಸಿವೆ. ಈ ಎರಡು ತಿಂಗಳ ಅವಧಿಯಲ್ಲಿ ಸಾಕಷ್ಟು ನಿರೀಕ್ಷೆ ಹುಟ್ಟುಹಾಕಿದ್ದ ಹಲವು ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಗಮನ ಸೆಳೆದಿವೆ. ಇದರಲ್ಲಿ ಒನ್‌ಪ್ಲಸ್‌, ಸ್ಯಾಮ್‌ಸಂಗ್‌, ವಿವೋ, ಶಿಯೋಮಿ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಸೇರಿವೆ. ಈ ಸ್ಮಾರ್ಟ್‌ಫೋನ್‌ ಸದ್ಯ ಭಾರತದಲ್ಲಿ ಟ್ರೆಂಡಿಂಗ್‌ನಲ್ಲಿರುವ ಸ್ಮಾರ್ಟ್‌ಫೋನ್‌ಗಳ ಸಾಲಿನಲ್ಲಿ ಸೇರಿವೆ.

ಸ್ಮಾರ್ಟ್‌ಫೋನ್‌ಗಳು

ಹೌದು, ಈ ವರ್ಷದ ಪ್ರಾರಂಭದಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಭಾರತದ ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಈ ಸ್ಮಾರ್ಟ್‌ಫೋನ್‌ಗಳು ಹೊಸ ಮಾದರಿಯ ಡಿಸ್‌ಪ್ಲೇ ವಿನ್ಯಾಸ ಹಾಗೂ ಕ್ಯಾಮೆರಾ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಜೊತೆಗೆ ಅಧಿಕ ಬ್ಯಾಟರಿ ಸಾಮರ್ಥ್ಯದ ಜೊತೆಗೆ ಹೊಸ ಪ್ರೊಸೆಸರ್‌ ಬಲವನ್ನು ಹೊಂದಿರುವುದರಿಂದ ಸಾಕಷ್ಟು ಗಮನ ಸೆಳೆದಿವೆ. ಹಾಗಾದ್ರೆ ಪ್ರಸ್ತುತ ಭಾರತದ ಮಾರುಕಟ್ಟೆಯಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಟ್ರೆಂಡಿಂಗ್‌ನಲ್ಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ 9RT

ಒನ್‌ಪ್ಲಸ್‌ 9RT

ಒನ್‌ಪ್ಲಸ್‌ ಕಂಪೆನಿ ಈ ವರ್ಷದ ಆರಂಭದಲ್ಲಿ ಭಾರತದ ಮಾರುಕಟ್ಟೆಯಲ್ಲಿ ಒನ್‌ಪ್ಲಸ್‌ 9RT ಪರಿಚಯಿಸಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ ಟ್ರೆಂಡಿಂಗ್‌ನಲ್ಲಿರುವ ಸ್ಮಾರ್ಟ್‌ಫೋನ್‌ಗಳ ಪೈಕಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 42,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.62 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120Hz ಹೆಚ್ಚಿನ ರಿಫ್ರೆಶ್ ರೇಟ್‌ ಹೊಂದಿದೆ. ಇದು ಆಕ್ಟಾ-ಕೋರ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 888SoC ಪ್ರೊಸೆಸರ್‌ ಹೊಂದಿದೆ. ಇದು ಆಕ್ಸಿಜನ್‌OS 11 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ f/1.8 ಲೆನ್ಸ್‌ ಹೊಂದಿದೆ. ಒನ್‌ಪ್ಲಸ್‌ 9RT ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು ಯುಎಸ್‌ಬಿ ಟೈಪ್-ಸಿ ಮೂಲಕ ಕಂಪನಿಯ ವಾರ್ಪ್ ಚಾರ್ಜ್ 65T ತಂತ್ರಜ್ಞಾನದ ಬಳಸಿ 65W ವೇಗದ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22

ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22

ಸ್ಯಾಮ್‌ಸಂಗ್ ಈ ವರ್ಷ ತನ್ನ ಬಹು ನಿರೀಕ್ಷಿತ ಗ್ಯಾಲಕ್ಸಿ S22 ಸರಣಿಯನ್ನು ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ ಗ್ಯಾಲಕ್ಸಿ S22, ಗ್ಯಾಲಕ್ಸಿ S22+ ಮತ್ತು ಗ್ಯಾಲಕ್ಸಿ S22 ಅಲ್ಟ್ರಾ ಎನ್ನುವ ಮೂರು ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿದೆ. ಈ ಎಲ್ಲಾ ಫೋನ್‌ಗಳು ಆಕ್ಟಾ ಕೋರ್ 4nm SoC ಪ್ರೊಸೆಸರ್‌ ಪಡೆದಿವೆ. ಇನ್ನು ಗ್ಯಾಲಕ್ಸಿ S22 ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ ಗ್ಯಾಲಕ್ಸಿ S22+ ಫೋನ್ ಟ್ರಿಪಲ್ ಕ್ಯಾಮೆರಾ ರಚನೆ ಯನ್ನು ಒಳಗೊಂಡಿದ್ದು, ಅವು ಕ್ರಮವಾಗಿ 10 ಎಂಪಿ + 50 ಎಂಪಿ + 10 ಎಂಪಿ ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಪಡೆದಿದೆ. ಆದರೆ ಗ್ಯಾಲಕ್ಸಿ S22 ಅಲ್ಟ್ರಾ ಫೋನ್ ಕ್ವಾಡ್‌ ಕ್ಯಾಮೆರಾ ರಚನೆಯನ್ನು ಒಳಗೊಂಡಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯದಲ್ಲಿದೆ. ಸ್ಯಾಮ್‌ಸಂಗ್‌ ಗ್ಯಾಲಕ್ಸಿ S22 ಸರಣಿಯ ಬೆಲೆ 72,999ರೂ.ಗಳಿಂದ ಪ್ರಾರಂಭವಾಗುತ್ತದೆ.

ಒನ್‌ಪ್ಲಸ್‌ ನಾರ್ಡ್‌ CE 2

ಒನ್‌ಪ್ಲಸ್‌ ನಾರ್ಡ್‌ CE 2

ಒನ್‌ಪ್ಲಸ್‌ ನಾರ್ಡ್ CE 2 ಸ್ಮಾರ್ಟ್‌ಫೋನ್‌ 6.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಡಿವೈಸ್‌ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಬೇಸ್‌ ಮಾಡೆಲ್‌ ಬೆಲೆ 23,999 ರೂ.ಆಗಿದೆ.

ರಿಯಲ್‌ಮಿ 9 ಪ್ರೊ

ರಿಯಲ್‌ಮಿ 9 ಪ್ರೊ

ರಿಯಲ್‌ಮಿ ಕಂಪೆನಿಯ ರಿಯಲ್‌ಮಿ 9 ಪ್ರೊ ಸ್ಮಾರ್ಟ್‌ಫೋನ್‌ ಇದೀಗ ಟ್ರೆಂಡಿಂಗ್‌ನಲ್ಲಿದೆ. ಈ ಸ್ಮಾರ್ಟ್‌ಫೋನ್‌ ಇಂಚಿನ 6.6-ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಡಾರ್ಟ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಫೋನ್‌ 17,999ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.

ರೆಡ್ಮಿ ನೋಟ್ 11

ರೆಡ್ಮಿ ನೋಟ್ 11

ರೆಡ್ಮಿ ಕಂಪೆನಿ ಈ ವರ್ಷ ಪರಿಚಯಿಸಿದ ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್‌ ಟ್ರೆಂಡಿಂಗ್‌ನಲ್ಲಿದೆ. ಭಾರತದಲ್ಲಿ ರೆಡ್ಮಿ ನೋಟ್‌ 11 ಸರಣಿಯಲ್ಲಿ ರೆಡ್ಮಿ ನೋಟ್‌ 11 ಮತ್ತು ರೆಡ್ಮಿ ನೋಟ್‌ 11S ಪರಿಚಯಿಸಲಾಗಿತ್ತು. ಈ ಎರಡೂ ಫೋನ್‌ಗಳು 6.43 ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿವೆ. ಈ ಡಿಸ್‌ಪ್ಲೇ 90Hz ರಿಪ್ರೆಶ್‌ ರೇಟ್‌ ಅನ್ನು ಪಡೆದುಕೊಂಡಿವೆ. ಅವರು 33W ವೇಗದ ಚಾರ್ಜಿಂಗ್‌ಗೆ ಬೆಂಬಲವನ್ನು ಸಹ ನೀಡುತ್ತಾರೆ. ಇದರಲ್ಲಿ ರೆಡ್ಮಿ ನೋಟ್‌ 11 ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, MIUI 13 ನೊಂದಿಗೆ ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಆದರೆ ರೆಡ್ಮಿ ನೋಟ್‌ 11S ಆಕ್ಟಾ-ಕೋರ್‌ ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಎರಡೂ ಫೋನ್‌ಗಳು ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿವೆ. ರೆಡ್ಮಿ ನೋಟ್‌ 11 ಫೋನ್‌ ಪ್ರೈಮೆರಿ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಆದರೆ ರೆಡ್ಮಿ ನೋಟ್‌ 11S ಸ್ಮಾರ್ಟ್‌ಫೋನ್‌ ಪ್ರೈಮೆರಿ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ.

Best Mobiles in India

English summary
Here are the recently launched trending phones in India

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X