smartphones: ಇವೇ ನೋಡಿ ಮಾರುಕಟ್ಟೆಯಲ್ಲಿ ಭಾರೀ ಸೌಂಡ್ ಮಾಡ್ತಿರುವ ಸ್ಮಾರ್ಟ್‌ಫೋನ್‌ಗಳು! 25 ಸಾವಿರದೊಳಗೆ ಲಭ್ಯ
ಸ್ಮಾರ್ಟ್‌ಫೋನ್ (smartphones) ಹೊಂದುವುದು ಅದರಲ್ಲೂ ಹೊಸ ಹೊಸ ಫೋನ್‌ಗೆ ಅಪ್‌ಗ್ರೇಡ್ ಆಗುವುದು ಹಲವಾರು ಜನರ ಆಸೆ. ಈ ಕಾರಣಕ್ಕೆ ಸ್ಮಾರ್ಟ್‌ಫೋನ್ ತಯಾರಿಕಾ ಕಂಪೆನಿಗಳು ಭಿನ್ನ ಫೀಚರ್ಸ್‌ನೊಂದಿಗೆ ಹೊಸ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್ ಮಾಡಿಕೊಂಡು ಬರುತ್ತಲೇ ಇವೆ.
ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹಲವಾರು ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಲಭ್ಯ ಇವೆ. ಇದರಿಂದ ಸಾಕಷ್ಟು ಜನರು ಯಾವ ಫೋನ್ ಖರೀದಿ ಮಾಡುವುದು ಎಂಬ ಗೊಂದಲದಲ್ಲೇ ಇರುತ್ತಾರೆ. ಆದರೆ, ಆ ಗೊಂದಲ ಈಗ ಬೇಡ. ಯಾಕೆಂದರೆ ಭಾರೀ ಸದ್ದು ಮಾಡುತ್ತಿರುವ ಅದರಲ್ಲೂ 25 ಸಾವಿರದ ಒಳಗೆ ಲಭ್ಯ ಇರುವ ಅತ್ಯುತ್ತಮ ಟಾಪ್ ಸ್ಮಾರ್ಟ್‌ಫೋನ್‌ಗಳನ್ನು ಅಮೆಜಾನ್‌ನ ವಿಶೇಷ ಸೇಲ್‌ನಲ್ಲಿ ಖರೀದಿ ಮಾಡಬಹುದಾಗಿದೆ. ಈ ವಿಭಾಗದಲ್ಲಿ ಒನ್‌ಪ್ಲಸ್, ಸ್ಯಾಮ್‌ಸಂಗ್ (OnePlus, Samsung) ಸೇರಿದಂತೆ ಅನೇಕ ಬ್ರ್ಯಾಂಡ್‌ನ ಫೋನ್‌ಗಳಿವೆ.

ಒನ್‌ಪ್ಲಸ್ ನಾರ್ಡ್ CE 3 ಲೈಟ್ 5G: ಈ ಸ್ಮಾರ್ಟ್‌ಫೋನ್‌ಗೆ (OnePlus Nord CE 3 Lite 5G) ಗೆ ಮಾರುಕಟ್ಟೆಯಲ್ಲಿ ಭರ್ಜರಿ ಬೇಡಿಕೆ ಇದೆ. ಈ ಫೋನ್ ಅನ್ನು ಅಮೆಜಾನ್‌ನ ವಿಶೇಷ ಸೇಲ್‌ನಲ್ಲಿ 25,000 ರೂ. ಒಳಗೆ ಖರೀದಿ ಮಾಡಬಹುದಾಗಿದೆ. ಈ ಫೋನ್ EIS ನೊಂದಿಗೆ ಪ್ರಭಾವಶಾಲಿ 108 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಆಯ್ಕೆ ಹಾಗೂ ಸ್ನಾಪ್‌ಡ್ರಾಗನ್ 695 5G ಪ್ರೊಸೆಸರ್ ಬಲದೊಂದಿಗೆ ಕಾಣಿಸಿಕೊಂಡಿದ್ದು, 120Hz ರಿಫ್ರೆಶ್ ರೇಟ್ ನೊಂದಿಗೆ 6.72 ಇಂಚಿನ ಡಿಸ್‌ಪ್ಲೇ ಹೊಂದಿದೆ.
ಲಾವಾ ಅಗ್ನಿ 2 5G : ಈ ಫೋನ್ (Lava Agni 2 5G) 120Hz ರಿಫ್ರೆಶ್ ರೇಟ್ ಇರುವ 6.78 ಇಂಚಿನ FHD+ ಕರ್ವ್ಡ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, ಮೀಡಿಯಾಟೆಕ್ ಡೈಮೆನ್ಸಿಟಿ 7050 6nm ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಮತ್ತು 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾದೊಂದಿಗೆ ಕಾಣಿಸಿಕೊಂಡಿದ್ದು , 4,700mAh ಸಾಮರ್ಥ್ಯದ ಬ್ಯಾಟರಿ ಜೊತೆಗೆ ಈ ಫೋನ್ ಪ್ಯಾಕ್ ಆಗಿದೆ. ಇದನ್ನು ನೀವು ಅಮೆಜಾನ್‌ನಲ್ಲಿ 19,999ರೂ.ಗಳಿಗೆ ಖರೀದಿ ಮಾಡಬಹುದಾಗಿದೆ.

ರಿಯಲ್‌ಮಿ ನಾರ್ಜೋ 60 ಪ್ರೊ: ಈ ಸ್ಮಾರ್ಟ್‌ಫೋನ್ (Realme Narzo 60 Pro) ಸಹ ಹೆಚ್ಚು ಬೇಡಿಕೆ ಇರುವ ಫೋನ್‌ಗಳ ವಿಭಾಗದಲ್ಲಿದೆ. ಮುಖ್ಯವಾಗಿ ಕ್ಯಾಮೆರಾ ಪ್ರಿಯರು ಈ ಫೋನ್ ಅನ್ನು ಆಯ್ಕೆ ಮಾಡಬಹುದಾಗಿದೆ. ಯಾಕೆಂದರೆ ಇದು 6.7 ಇಂಚಿನ OLED ಡಿಸ್‌ಪ್ಲೇಯೊಂದಿಗೆ 100 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾ ಮತ್ತು ಸೆಲ್ಫಿಗಾಗಿ 16 ಮೆಗಾಪಿಕ್ಸೆಲ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ. ಪ್ರಮುಖವಾಗಿ ಈ ಫೋನ್ ಮೀಡಿಯಾ ಟೆಕ್ ಡೈಮೆನ್ಸಿಟಿ 7050 ಚಿಪ್‌ಸೆಟ್‌ನಿಂದ ಕಾರ್ಯನಿರ್ವಹಿಸಲಿದ್ದು, 21,999 ರೂ.ಗಳಲ್ಲಿ ಖರೀದಿ ಮಾಡಬಹುದು.
ಐಕ್ಯೂ Z7 ಪ್ರೊ 5G : ಈ ಫೋನ್ (iQOO Z7 Pro 5G) ಸಹ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಹೆಚ್ಚು ಸೇಲ್ ಆಗುತ್ತಿದೆ. ಇದು 6.78 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಡೈಮೆನ್ಸಿಟಿ 7200 5G ಪ್ರೊಸೆಸರ್ ಮೂಲಕ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 64 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾದೊಂದಿಗೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಆಯ್ಕೆ ಪಡೆದಿದೆ. ಉಳಿದಂತೆ ಈ ಫೋನ್ 4,600mAh ಸಾಮರ್ಥ್ಯದ ಬ್ಯಾಟರಿ ಆಯ್ಕೆ ಪಡೆದಿದ್ದು, ಅತ್ಯುತ್ತಮ ಬ್ಯಾಕಪ್ ನೀಡಲಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M14 5G : ಈ ಫೋನ್ (Samsung Galaxy M14 5G) ಅತ್ಯುತ್ತಮವಾದ 5G ಫೋನ್‌ಗಳಲ್ಲಿ ಒಂದಾಗಿದೆ. ಇದು 120Hz ರಿಫ್ರೆಶ್ ರೇಟ್ ಆಯ್ಕೆಯೊಂದಿಗೆ ಸೂಪರ್ ಅಮೋಲೆಡ್ ಡಿಸ್‌ಪ್ಲೇ ಆಯ್ಕೆ ಪಡೆದಿದ್ದು, 5nm ಪ್ರೊಸೆಸರ್ ಮತ್ತು 6000mAh ಸಾಮರ್ಥ್ಯದ ಬ್ಯಾಟರಿಯಿಂದ ಪ್ಯಾಕ್ ಆಗಿದೆ. ಇದರೊಂದಿಗೆ 50 ಮೆಗಾಪಿಕ್ಸೆಲ್ ಮುಖ್ಯ ಕ್ಯಾಮೆರಾದೊಂದಿಗೆ ಟ್ರಿಪಲ್ ಕ್ಯಾಮೆರಾ ಆಯ್ಕೆ ಪಡೆದುಕೊಂಡಿದೆ.


Click it and Unblock the Notifications








