ಸದ್ಯದಲ್ಲೇ ಭಾರತದಲ್ಲಿ ಬಿಡುಗಡೆ ಆಗಲಿರುವ ಪ್ರಮುಖ ಸ್ಮಾರ್ಟ್‌ಫೋನ್‌ಗಳು!
ಇತ್ತೀಚಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಇದೆ. ಪ್ರತಿಯೊಬ್ಬರೂ ಸಹ ಸ್ಮಾರ್ಟ್‌ಫೋನ್ ಹೊಂದುವುದಕ್ಕೆ ಬಯಸುತ್ತಾರೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಬಂದಿವೆ. ಇನ್ನು ಭಾರತದಲ್ಲಿಯೂ ಸ್ಮಾರ್ಟ್‌ಫೋನ್ ಮಾರುಕಟ್ಟೆ ವಿಶಾಲವಾಗಿದ್ದು, ಹೆಚ್ಚಿನ ಸಂಖ್ಯೆಯ ಸ್ಮಾರ್ಟ್‌ಫೋನ್ ಕಂಪೆನಿಗಳು ತಮ್ಮದೇ ಆದ ಮಾರುಕಟ್ಟೆ ಮೌಲ್ಯವನ್ನು ಹೊಂದಿವೆ. ಸದ್ಯ ಮಾರುಕಟ್ಟೆಯಲ್ಲಿ ಹಲವು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳು ಲಬ್ಯವಿದ್ದು, ಇನ್ನು ಕೆಲವು ಸ್ಮಾರ್ಟ್‌ಫೋನ್‌ಗಳು ಶೀಘ್ರದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿವೆ.

ಹೌದು, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳಿಗೆನೂ ಭರವಿಲ್ಲ. ಪ್ರತಿನಿತ್ಯ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇವೆ. ಬಜೆಟ್ ಬೆಲೆಯಿಂದ ಹಿಡಿದು ಹೈ ಎಂಡ್ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ಲಭ್ಯವಿವೆ. ಇದಲ್ಲದೆ ಇನ್ನು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಲು ಸಿದ್ಧತೆ ನಡೆಸಿವೆ. ಸದ್ಯ ಭಾರತದ ಮಾರುಕಟ್ಟೆಗೆ ಶೀಘ್ರದಲ್ಲೇ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಲಿವೆ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್ 9 ಸರಣಿ
ಜನಪ್ರಿಯ ಒನ್‌ಪ್ಲಸ್ 8 ಮತ್ತು 8T ಸರಣಿಯ ನಂತರ, ಒನ್‌ಪ್ಲಸ್ 9 ಮತ್ತು 9 ಪ್ರೊ ಸ್ಮಾರ್ಟ್‌ಫೋನ್ ಸದ್ಯದಲ್ಲೇ ಬಿಡುಗಡೆ ಆಗಲಿರುವ ಬಹುನಿರೀಕ್ಷಿತ ಸ್ಮಾರ್ಟ್‌ಫೋನ್‌ಗಳಾಗಿವೆ. ಈಗಾಗಲೇ ಈ ಸ್ಮಾರ್ಟ್‌ಫೋನ್‌ಗಳ ಫೀಚರ್ಸ್ ಕುರಿತು ಮಾಹಿತಿ ಆನ್‌ಲೈನ್‌ನಲ್ಲಿ ಲೀಕ್ ಆಗಿದೆ. ಇನ್ನು ಒನ್‌ಪ್ಲಸ್ 9 ಮತ್ತು 9 ಪ್ರೊ ಎರಡೂ ಸ್ಮಾರ್ಟ್‌ಫೋನ್‌ಗಳು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 888 ಪ್ರೊಸೆಸರ್ ಅನ್ನು ಹೊಂದಿರಲಿವೆ ಎನ್ನಲಾಗಿದೆ. ಅಲ್ಲದೆ ಒನ್‌ಪ್ಲಸ್ 9 ಸ್ಮಾರ್ಟ್‌ಫೋನ್ 65W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿವೆ. ಜೊತೆಗೆ ಮಲ್ಟಿ-ಕ್ಯಾಮೆರಾ ಸೆಟಪ್ ಅನ್ನು ಎರಡು ಫೋನ್‌ಗಳಲ್ಲಿ ನಿರೀಕ್ಷಿಸಲಾಗಿದೆ. ಇನ್ನು ಒನ್‌ಪ್ಲಸ್ 9 ಸರಣಿಯು ಮಾರ್ಚ್ 23, 2021 ರಂದು ಲಾಂಚ್ ಆಗಲಿದೆ ಎಂದು ಹೇಳಲಾಗಿದೆ.

ರಿಯಲ್‌ಮಿ 8 ಸರಣಿ
ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಇದೇ ಮಾರ್ಚ್ 24 ರಂದು ಭಾರತದಲ್ಲಿ ಬಿಡುಗಡೆ ಆಗಲಿದೆ. ಈಗಾಗಲೇ ಈ ಸ್ಮಾರ್ಟ್‌ಫೋನ್ ಫ್ರೀ ಆರ್ಡರ್ ಬುಕ್ಕಿಂಗ್ ಕೂಡ ಆರಂಭವಾಗಿದ್ದು, ಮಾರ್ಚ್ 22 ರವರೆಗೆ ಬುಕ್ಕಿಂಗ್ ಮುಂದುವರೆಯಲಿದೆ. ಇನ್ನು ರಿಯಲ್‌ಮಿ 8 ಸ್ಮಾರ್ಟ್‌ಫೋನ್ ಸರಣಿ ಮಧ್ಯಮ ಶ್ರೇಣಿಯ ಬೆಲೆಯಲ್ಲಿ ಬಿಡುಗಡೆ ಆಗುವ ನಿರೀಕ್ಷೆಯಿದೆ. ಜೊತೆಗೆ ಇದು 108 ಎಂಪಿ ಮುಖ್ಯ ಕ್ಯಾಮೆರಾವನ್ನು ಒಳಗೊಂಡಿರಲಿದೆ. ಇದಲ್ಲದೆ ಈ ಸ್ಮಾರ್ಟ್‌ಫೋನ್ ಅಮೋಲೆಡ್ ಡಿಸ್‌ಪ್ಲೇ ಪ್ಯಾನೆಲ್‌ಗಳು ಮತ್ತು ಇನ್-ಡಿಸ್‌ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್‌ಗಳನ್ನು ಸಹ ಒಳಗೊಂಡಿರುತ್ತವೆ.

ಪೊಕೊ X3 ಪ್ರೊ
ಪೊಕೊ ಕಂಪನಿಯು ಈಗಾಗಲೇ ಬಿಡುಗಡೆ ಮಾಡಿದ ಪೊಕೊ X ಸ್ಮಾರ್ಟ್‌ಫೋನ್ ಸರಣಿ ಮಾರುಕಟ್ಟೆಯಲ್ಲಿ ಗ್ರಾಹಕರ ಗಮನ ಸೆಳೆದಿದೆ. ಆ ಸರಣಿಯಲ್ಲಿ ಸಂಸ್ಥೆಯು ಇತ್ತೀಚಿಗೆ ಲಾಂಚ್ ಮಾಡಿದ್ದ ಪೊಕೊ X3 ಸ್ಮಾರ್ಟ್‌ಫೋನ್ ಸದ್ದು ಮಾಡಿತು. ಇದೀಗ ಕಂಪನಿಯು ಅದರ ಮುಂದುವರಿದ ಭಾಗವಾಗಿ ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಅನ್ನು ಭಾರತೀಯ ಮಾರುಕಟ್ಟೆಯಲ್ಲಿ ಅನಾವರಣ ಮಾಡಲು ತಯಾರಿ ನಡೆಸಿದೆ. ಪೊಕೊ X3 ಪ್ರೊ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿರುವ ನಿರೀಕ್ಷೆ ಇದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿರಲಿದೆ. ಇನ್ನು ಪೊಕೊ X3 ಪ್ರೊ ಜಾಗತಿಕವಾಗಿ ಮಾರ್ಚ್ 22 ರಂದು ಬಿಡುಗಡೆಯಾಗಲಿದೆ, ಆದರೆ ಭಾರತದಲ್ಲಿ ಮಾರ್ಚ್ 30ರಂದು ಬಿಡುಗಡೆ ಆಗಲಿದೆ ಎಂದು ಹೇಳಲಾಗಿದೆ.

ವಿವೋ X60 ಸರಣಿ
ವಿವೋ ಕಂಪನಿಯು ಇದೀಗ ವಿವೋ X60 ಸ್ಮಾರ್ಟ್‌ಫೋನ್ ಸರಣಿಯನ್ನು ಭಾರತದಲ್ಲಿ ಅನಾವರಣ ಮಾಡಲು ಸಿದ್ಧವಾಗಿದೆ. ಈ ಸ್ಮಾರ್ಟ್‌ಫೋನ್ ಸರಣಿಯು ಭಾರತದಲ್ಲಿ ಇದೇ ಮಾರ್ಚ್ 25 ರಂದು ಅಧಿಕೃತವಾಗಿ ಬಿಡುಗಡೆ ಆಗಲಿದೆ ಎನ್ನಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಸರಣಿಯು ವಿವೋ X60 ಹಾಗೂ ವಿವೋ X60 ಪ್ರೊ ಮತ್ತು ವಿವೋ X60 ಪ್ರೊ + ಸ್ಮಾರ್ಟ್‌ಫೋನ್ ಮಾಡೆಲ್‌ಗಳನ್ನು ಒಳಗೊಂಡಿರಲಿದೆ ಎಂದು ಹೇಳಲಾಗಿದೆ. ಇನ್ನು X60 ಸರಣಿಯ ನಿರೀಕ್ಷಿತ ಫೀಚರ್ಸ್‌ಗಳಲ್ಲಿ ಸ್ನಾಪ್‌ಡ್ರಾಗನ್ 870 ಪ್ರೊಸೆಸರ್ ಮತ್ತು ಪ್ರೊ + ಮಾದರಿಯಲ್ಲಿ ಸ್ನಾಪ್‌ಡ್ರಾಗನ್ 888 ಪ್ರೊಸೆಸರ್ ಹೊಂದಿರುವ ಸಾಧ್ಯತೆ ಇದೆ.


Click it and Unblock the Notifications
