Home
ಸುದ್ದಿಜಾಲ

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿರುವ ಫೋಲ್ಡಬಲ್ ಫೋನ್‌ಗಳ ವಿವರ ಇಲ್ಲಿದೆ!

ಟೆಕ್‌ ವಲಯದ ವಿಸ್ಮಯ ಅಂತಾನೇ ಹೆಸರುವಾಸಿಯಾಗಿರುವ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಭಾರತದಲ್ಲಿ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ಗಳಿಗೆ ಈ ಹಿಂದೆ ಇದ್ದ ಆಸಕ್ತಿಗಿಂತ ಇತ್ತೀಚಿನ ದಿನಗಳಲ್ಲಿ ಫೋಲ್ಡಬಲ್‌ ಫೋನ್‌ಗಳ ಮೇಲಿನ ವ್ಯಾಮೋಹ ಹೆಚ್ಚಾಗಿದೆ. ಈ ವರ್ಷವೂ ಕೂಡ ಅದರ ಜನಪ್ರಿಯತೆ ಇನ್ನಷ್ಟು ಹೆಚ್ಚಾಗುವ ಸೂಚನೆ ಸಿಕ್ಕಿದೆ.

ಹೌದು, ಭಾರತದ ಮಾರುಕಟ್ಟೆಯಲ್ಲಿ ಈ ವರ್ಷ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿ ನಡೆಯಲಿದೆ. ಇದಕ್ಕೆ ತಕ್ಕಂತೆ ಈ ವರ್ಷ ಹಲವು ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಲಿವೆ, ಅಲ್ಲದೆ ಹೊಸ ಸಂಚಲನ ಸೃಷ್ಟಿಸುವ ನಿರೀಕ್ಷೆ ಹುಟ್ಟುಹಾಕಿವೆ. ಹಾಗಾದ್ರೆ ಭಾರತದ ಮಾರುಕಟ್ಟೆಯಲ್ಲಿ ಈ ವರ್ಷ ಸದ್ದು ಮಾಡಲು ಸಿದ್ಧವಾಗಿರುವ ಟಾಪ್‌ 5 ಫೋಲ್ಡಬಲ್ ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿರುವ ಫೋಲ್ಡಬಲ್ ಫೋನ್‌ಗಳ ವಿವರ ಇಲ್ಲಿದೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 5
ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫ್ಲಿಪ್ 5 ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಭಾರತಕ್ಕೆ ಎಂಟ್ರಿ ನೀಡಲಿದೆ. ಈಗಾಗಲೇ ಫೀಚರ್ಸ್‌ ಲೀಕ್‌ ಮೂಲಕವೇ ಸಾಕಷ್ಟು ಸಂಚಲನ ಸೃಷ್ಟಿಸಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಮೇನ್‌ ಡಿಸ್‌ಪ್ಲೇ ಹೊಂದಿರಲಿದ್ದು, ಕವರ್‌ ಡಿಸ್‌ಪ್ಲೇ 3.4 ಇಂಚು ಇರಲಿದೆ ಎಂದು ಅಂದಾಜಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು ಸುಮಾರು 90,000 ರೂ.ಬೆಲೆಯಲ್ಲಿ ಬರಲಿದೆ ಎಂದು ನಿರೀಕ್ಷಿಸಲಾಗಿದೆ.

ಮೊಟೊರೊಲಾ ರೇಜರ್‌ 40 ಅಲ್ಟ್ರಾ 5G
ಮೊಟೊರೊಲಾ ರೇಜರ್‌ 40 ಅಲ್ಟ್ರಾ 5G ಭಾರತಕ್ಕೆ ಎಂಟ್ರಿ ನೀಡಲು ತಯಾರಿ ನಡೆಸಿದೆ. ಈ ಸ್ಮಾರ್ಟ್‌ಫೋನ್‌ ಬಿಡುಗಡೆಗೆ ಸಿದ್ದವಾಗಿದ್ದು, ಮುಂದಿನ ತಿಂಗಳು ಎಂಟ್ರಿ ನೀಡೋದು ಪಕ್ಕಾ ಆಗಿದೆ. ಇನ್ನು ಮೊಟೊರೊಲಾ ರೇಜರ್‌ 40ಪ್ರೊ 5G ಸ್ಮಾರ್ಟ್‌ಫೋನ್‌ ಮೇನ್‌ ಡಿಸ್‌ಪ್ಲೇ 6.79 ಇಂಚು ಇರಲಿದ್ದು, 3.6 ಇಂಚಿನ ಸೆಕೆಂಡರಿ ಡಿಸ್‌ಪ್ಲೇಯನ್ನು ಹೊಂದಿರಲಿದೆ ಎಂದು ಹೇಳಲಾಗಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ಹೊಂದಿರಲಿದೆ ಎನ್ನಲಾಗಿದೆ. ಇದರ ಬೆಲೆ ಅಂದಾಜು 70,000 ರೂ.ಇರಬಹುದು ಎಂದು ನಿರೀಕ್ಷಿಸಲಾಗಿದೆ.

ಮೊಟೊರೊಲಾ ರೇಜರ್‌ 40 5G
ಮೊಟೊರೊಲಾ ರೇಜರ್‌ 40 ಅಲ್ಟ್ರಾ 5G ಜೊತೆಗೆ ಮೊಟೊರೊಲಾ ರೇಜರ್‌ 40 5G ಕೂಡ ಬಿಡುಗಡೆಯಾಗಲಿದೆ. ಈ ಸ್ಮಾರ್ಟ್‌ಫೋನ್‌ 6.9 ಇಂಚಿನ ಮೇನ್‌ ಡಿಸ್‌ಪ್ಲೇ ಹೊಂದಿರಲಿದ್ದು, 1.5 ಇಂಚಿನ ಸೆಕೆಂಡರಿ ಡಿಸ್‌ಪ್ಲೇ ಹೊಂದಿರಲಿದೆ ಎಂದು ವರದಿಯಾಗಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 7 Gen 1 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಹೇಳಲಾಗಿದೆ. ಇದನ್ನು 50,000ರೂ ವಿಭಾಗದಲ್ಲಿ ಖರೀದಿಸಬಹುದು ಎಂದು ವರದಿಯಾಗಿದೆ.

ಸದ್ಯದಲ್ಲೇ ಭಾರತಕ್ಕೆ ಎಂಟ್ರಿ ನೀಡಲಿರುವ ಫೋಲ್ಡಬಲ್ ಫೋನ್‌ಗಳ ವಿವರ ಇಲ್ಲಿದೆ!

ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 5
ಸ್ಯಾಮ್‌ಸಂಗ್‌ ಗ್ಯಾಲಕ್ಸಿ Z ಫೋಲ್ಡ್‌ 5 ಸ್ಮಾರ್ಟ್‌ಫೋನ್‌ ಮುಂದಿನ ತಿಂಗಳು ಭಾರತಕ್ಕೆ ಬರಲಿದೆ. ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 1,50,000ರೂ. ಬೆಲೆಯ ಶ್ರೇಣಿಯಲ್ಲಿ ಬರುವ ನಿರೀಕ್ಷೆಯಿದೆ.

ಒಪ್ಪೋ ಫೈಂಡ್‌ N2 ಫ್ಲಿಪ್
ಈಗಾಗಲೇ ಮಾರುಕಟ್ಟೆಯಲ್ಲಿ ಸೌಂಡ್‌ ಮಾಡುತ್ತಿರುವ ಒಪ್ಪೋ ಫೈಂಡ್‌ N2 ಫ್ಲಿಪ್ ಫೋನ್‌ ಬೆಲೆ 90,000ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ 6.8 ಇಂಚಿನ ಮೇನ್‌ ಡಿಸ್‌ಪ್ಲೇ ಮತ್ತು 3.26 ಇಂಚಿನ ಸೆಕೆಂಡರಿ ಸ್ಕ್ರೀನ್ ಹೊಂದಿದೆ. ಇದು ಡೈಮೆನ್ಸಿಟಿ 9000+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಜೊತೆಗೆ 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ 5G
ಇದಲ್ಲದೆ ಟೆಕ್ನೋ ಫ್ಯಾಂಟಮ್ ವಿ ಫೋಲ್ಡ್ 5G ಸ್ಮಾರ್ಟ್‌ಫೋನ್‌ ಕೂಡ ಟಾಪ್‌ 5 ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಫೋಲ್ಡಬಲ್‌ ಸ್ಮಾರ್ಟ್‌ಫೋನ್‌ 7.85 ಇಂಚಿನ 2K ಮೇನ್‌ ಡಿಸ್‌ಪ್ಲೇ ಹೊಂದಿದೆ. ಇದರ ಸೆಕೆಂಡರಿ ಡಿಸ್‌ಪ್ಲೇ 6.42 ಇಂಚಿನ ಆಯ್ಕೆಯನ್ನು ಹೊಂದಿದೆ. ಇದು ಡೈಮೆನ್ಸಿಟಿ 9000+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ 88,888 ರೂ.ಆಗಿದೆ.

Best Mobiles in India

English summary
Here are Top 5 foldable smartphones you can buy this year in india
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+