Home
ಸುದ್ದಿಜಾಲ

ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಐದು ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು!

ಭಾರತದಲ್ಲಿ 5G ನೆಟ್‌ವರ್ಕ್‌ ಇನ್ನೂ ಕೂಡ ಲಭ್ಯವಿಲ್ಲ. ಆದರೆ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ 5G ಸ್ಮಾರ್ಟ್‌ಫೋನ್‌ಗಳಿಗೆನೂ ಭರವಿಲ್ಲ. ಭಾರತದಲ್ಲಿ ಶೀಘ್ರದಲ್ಲೇ 5G ನೆಟ್‌ವರ್ಕ್‌ ಪ್ರಾರಂಭವಾಗಲಿದೆ ಅನ್ನೊ ನಂಬಿಕೆಯಿಂದ ಹಲವು ಕಂಪೆನಿಗಳು 5G ಸ್ಮಾರ್ಟ್‌ಫೋನ್‌ಗಳನ್ನು ಲಾಂಚ್‌ ಮಾಡಿವೆ. ಈ ಸ್ಮಾರ್ಟ್‌ಫೋನ್‌ಗಳನ್ನು ಕೊಂಡುಕೊಳ್ಳುವುದರಿಂದ ಭವಿಷ್ಯದಲ್ಲಿ 5G ನೆಟ್‌ವರ್ಕ್‌ ಶುರುವಾದಾಗ ಸ್ಮಾರ್ಟ್‌ಫೋನ್‌ಗಳನ್ನು ಬದಲಿಸಬೇಕಾದ ಅನಿವಾರ್ಯತೆ ಎದುರಾಗುವುದಿಲ್ಲ. ಇದೇ ಕಾರಣಕ್ಕೆ ಹೆಚ್ಚಿನ ಜನರು 5G ಸ್ಮಾರ್ಟ್‌ಫೋನ್‌ಗಳ ಕಡೆಗೆ ಒಲವು ತೋರುತ್ತಿದ್ದಾರೆ.

5G

ಹೌದು, ಭಾರತದಲ್ಲಿ 5G ನೆಟ್‌ವರ್ಕ್‌ ಈ ವರ್ಷದ ಅಂತ್ಯಕ್ಕೆ ಪ್ರಾರಂಭವಾಗುವ ನಿರೀಕ್ಷೆ ಇದೆ. ಆದರಿಂದ ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರುಕಟ್ಟೆಗೆ ಎಂಟ್ರಿ ನೀಡುತ್ತಿವೆ. ಗ್ರಾಹಕರು ಕೂಡ ಪ್ರಸ್ತುತ 5G ಸ್ಮಾರ್ಟ್‌ಫೋನ್‌ಗಳ ಕಡೆಗೆ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆ. ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ಕೈ ಗೆಟಕುವ ದರದಲ್ಲಿ ಸಹ 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿವೆ. ಹಾಗಾದ್ರೆ ಭಾರತದಲ್ಲಿ ಸದ್ಯ ಕೈ ಗೆಟಕುವ ದರದಲ್ಲಿ ಲಭ್ಯವಿರುವ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ 8 5G

ರಿಯಲ್‌ಮಿ 8 5G

ರಿಯಲ್‌ಮಿ 8 5G ಇದೀಗ ಭಾರತದಲ್ಲಿ ಲಭ್ಯವಿರುವ ಅಗ್ಗದ 5G ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್ ರೇಟ್‌ ಹೊಂದಿರುವ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ನಲ್ಲಿ ರಿಯಲ್‌ಮಿ ಯುಐ 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ, ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ "ನೈಟ್‌ಸ್ಕೇಪ್" ಸೆನ್ಸಾರ್‌ ಅನ್ನು ಹೊಂದಿದೆ. ಭಾರತದಲ್ಲಿ ರಿಯಲ್‌ಮಿ 8 5G ಬೆಲೆ 4GB RAM+ 128GB ಶೇಖರಣಾ ರೂಪಾಂತರಕ್ಕೆ 14,999 ರೂ. ಹಾಗೂ 8 GB RAM + 128GB ಸ್ಟೋರೇಜ್ ಆಯ್ಕೆ ಬೆಲೆ 16,999 ರೂ. ಆಗಿದೆ.

ವಿವೋ V20 ಪ್ರೊ 5G

ವಿವೋ V20 ಪ್ರೊ 5G

ವಿವೋ V20 ಪ್ರೊ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿರಲಿದೆ. ಜೊತೆಗೆ 4,000mAh ಬ್ಯಾಟರಿ ಹೊಂದಿದ್ದು, 33W ವೇಗದ ಚಾರ್ಜರ್ ಅನ್ನು ಬೆಂಬಲಿಸಲಿದೆ.ಇದರ ಬೆಲೆ ಭಾರತದಲ್ಲಿ 29,999 ರೂ ಆಗಿದೆ.

ಶಿಯೋಮಿ ಮಿ 10i 5G

ಶಿಯೋಮಿ ಮಿ 10i 5G

ಶಿಯೋಮಿ ಮಿ 10i ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 750G ಪ್ರೊಸೆಸರ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಎಂಪಿ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಇದು 4,820mAh ಬ್ಯಾಟರಿಯನ್ನು ಹೊಂದಿದ್ದು 33W ಫಾಸ್ಟ್ ಚಾರ್ಜಿಂಗ್‌ಗೆ ಬೆಂಬಲ ನೀಡುತ್ತದೆ. ಇದರ ಬೆಲೆ 21,999 ರೂ.ಆಗಿದೆ.

ಒನ್‌ಪ್ಲಸ್ ನಾರ್ಡ್ 5G

ಒನ್‌ಪ್ಲಸ್ ನಾರ್ಡ್ 5G

ಒನ್‌ಪ್ಲಸ್ ನಾರ್ಡ್ 5G ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 765G ಪ್ರೊಸೆಸರ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಮುಖ್ಯ ಕ್ಯಾಮೆರಾ 48 ಮೆಗಾಫಿಕ್ಸೆಲ್‌ ಸೆನ್ಸಾರ್‌ ಅನ್ನು ಪಡೆದುಕೊಂಡಿದೆ. ಇದು 32 ಎಂಪಿ + 8 ಎಂಪಿ ಸಾಮರ್ಥ್ಯದ ಡ್ಯುಯೆಲ್‌ ರಿಯರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,115mAh ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜರ್ ಅನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 8GB RAMಮತ್ತು 128GB ಆಯ್ಕೆಗೆ 24,999 ರೂ. ಬೆಲೆಯನ್ನು ಹೊಂದಿದೆ.

ರಿಯಲ್‌ಮಿ X7 ಪ್ರೊ 5G

ರಿಯಲ್‌ಮಿ X7 ಪ್ರೊ 5G

ರಿಯಲ್‌ಮಿ X7 ಪ್ರೊ ಸ್ಮಾರ್ಟ್‌ಫೋನ್‌ ಭಾರತದಲ್ಲಿ ಖರೀದಿಸಬಹುದಾದ ಅತ್ಯುತ್ತಮ ಮಧ್ಯಮ ಶ್ರೇಣಿಯ 5G ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.55-ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1000+ ಪ್ರೊಸೆಸರ್ ಅನ್ನು ಹೊಂದಿದೆ. ಅಲ್ಲದೆ ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದರ ಬೆಲೆ ಭಾರತದಲ್ಲಿ 29,999 ರೂ.ಆಗಿದೆ.

Best Mobiles in India

English summary
Looking to buy an affordable 5G smartphone in India in June 2021? Here are top 5 cheapest 5G smartphones in India that you can buy right now.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+