20,000ರೂ. ಒಳಗೆ ಲಭ್ಯವಾಗುವ ಜಬರ್ದಸ್ತ್ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳು!
ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳ ಬಳಕೆ ಹೆಚ್ಚಿದೆ. ಸ್ಮಾರ್ಟ್‌ಫೋನ್ ಇಲ್ಲದೆ ಹೊರಗಡೆ ಹೋಗುವುದುನಕೂಡ ಅಸಾಧ್ಯ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಸ್ಮಾರ್ಟ್‌ಫೋನ್ ಇದು ನಮ್ಮ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿ ಹೋಗಿದೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲೂ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಜೋರಾಗಿದೆ. ಹೊಸ ವಿನ್ಯಾಸ, ಅಪ್ಡೇಟ್ ಕ್ಯಾಮರಾ ಫೀಚರ್ಸ್ ಹೀಗೆ ಹಲವು ಮಾದರಿಯ ಸ್ಮಾರ್ಟ್‌ಫೋನ್‌ಗಳು ಸದ್ದು ಮಾಡುತ್ತಲೇ ಇವೆ.

ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗುತ್ತಲೇ ಇವೆ. ಅದರಲ್ಲೂ ಸ್ಯಾಮ್‌ಸಂಗ್, ರಿಯಲ್‌ಮಿ, ವಿವೋ, ಮಿ ಯಂತಹ ಜನಪ್ರಿಯ ಸ್ಮಾರ್ಟ್‌ಫೋನ್ ತಯಾರಕರು ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಲೇ ಇವೆ. ಇನ್ನು ಸ್ಮಾರ್ಟ್‌ಫೋನ್ ಪ್ರಿಯರು ಹೆಚ್ಚಿನ ಪ್ರಮಾಣದಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಖರೀದಿಸಲು ಬಯಸುತ್ತಾರೆ. ಬಜೆಟ್ ಬೆಲೆಯ ವಿಭಾಗದಲ್ಲಿ ಅತ್ಯುತ್ತಮ ಪ್ರೊಸೆಸರ್ ಮತ್ತು ಗುಣಮಟ್ಟದ ಕ್ಯಾಮರಾ ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಇದೆ. ಹಾಗಾದ್ರೆ ಸದ್ಯ ಮಾರುಕಟ್ಟೆಯಲ್ಲಿ 20,000ರೂ. ಗಿಂತ ಕಡಿಮೆ ಬೆಲೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಐಕ್ಯೂ Z3
20,000ರೂ. ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಐಕ್ಯೂ Z3 ಸ್ಮಾರ್ಟ್‌ಫೋನ್ ಕೂಡ ಸೇರಿದೆ. ಈ ಸ್ಮಾರ್ಟ್‌ಫೋನ್ 6GB RAM + 128GB ಸ್ಟೋರೇಜ್ ರೂಪಾಂತರಕ್ಕೆ 17,990.ರೂ ಬೆಲೆ ಹೊಂದಿದೆ. ಜೊತೆಗೆ 8GB RAM + 128GB ಸ್ಟೋರೇಜ್ ಮಾದರಿ 18,990ರೂ.ಬೆಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.58-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768ಜಿ ಎಸ್ಒಸಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಫನ್ ಟಚ್ ಓಎಸ್ ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ.

ರಿಯಲ್‌ಮಿ X7 5G
ರಿಯಲ್‌ಮಿ X7 5G ಸ್ಮಾರ್ಟ್‌ಫೋನ್ ಪ್ರಸ್ತುತ 19,999 ರೂ.ಬೆಲೆಗೆ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.4-ಇಂಚಿನ AMOLED ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 800 ಯು ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 10 ಆಧಾರಿತ ರಿಯಲ್‌ಮಿ UI ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 64ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್-ಆಂಗಲ್ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ F42 5G ಸ್ಮಾರ್ಟ್‌ಫೋನ್ ಕೂಡ ಬಜೆಟ್ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ 6GB+128GB ರೂಪಾಂತರಕ್ಕೆ 17,999ರೂ.ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 700ಎಸ್‌ಒಸಿ ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಒನ್ ಯುಐ 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಜೊತೆಗೆ ಇದು 5,000mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ.

ವಿವೋ V20 SE
ವಿವೋ V20 SE ಸ್ಮಾರ್ಟ್‌ಫೋನ್ ಭಾರತದಲ್ಲಿ 19,990ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್ 6.44 ಇಂಚಿನ AMOLED ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 665 SoC ಪ್ರೊಸೆಸರ್ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 10ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಲೆನ್ಸ್ ಹೊಂದಿದೆ. ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಇದು 4100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನನ್ 6GB + 128GB ಸ್ಟೋರೇಜ್ ಆಯ್ಕೆಗೆ 18,999ರೂ.ಬೆಲೆ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್-ಹೆಚ್‌ಡಿ+ ಸೂಪರ್ ಅಮೊಲೆಡ್ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್ ಡ್ರಾಗನ್ 732G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಎಂಐಯುಐ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಎರಡನೇ ಕ್ಯಾಮೆರಾ 5ಮೆಗಾಪಿಕ್ಸೆಲ್ ಸೆನ್ಸಾರ್, ಮೂರನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ ವೈಡ್ ಆಂಗಲ್ ಶೂಟರ್ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ.

ಪೊಕೊ X3ಪ್ರೊ
ಪೊಕೊ X3ಪ್ರೊ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 16,999ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 860SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಜೊತೆಗೆ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ.


Click it and Unblock the Notifications








