2021 ರಲ್ಲಿ ನೀವು ಖರೀದಿಸಬಹುದಾದ ಟಾಪ್ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳು!

|

ಟೆಕ್‌ ವಲಯದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಹೊಸ ಸ್ಮಾರ್ಟ್‌ಫೋನ್‌ಗಳ ಎಂಟ್ರಿ ಜೋರಾಗಿಯೇ ಇದೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿ ಸಂಚಲನ ಮೂಡಿಸಿವೆ. ಅತ್ಯುತ್ತಮ ಗುಣಮಟ್ಟದ ಕ್ಯಾಮೆರಾ, ಡಿಸ್‌ಪ್ಲೇ ವಿನ್ಯಾಸದ ಕಾರಣಕ್ಕೆ ಸಾಕಷ್ಟು ಸೌಂಡ್‌ ಮಾಡಿವೆ. ಅಲ್ಲದೆ ಹೆಚ್ಚಿನ ದಕ್ಷತೆಯ ಬ್ಯಾಟರಿ ಸಾಮರ್ಥ್ಯದ ಕಾರಣಕ್ಕೂ ಸ್ಮಾರ್ಟ್‌ಫೋನ್‌ ಪ್ರಿಯರ ಗಮನ ಸೆಳೆದಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಈ ವರ್ಷವೂ ಕೂಡ ಹೆಚ್ಚಿನ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿವೆ. ಇದರಲ್ಲಿ ಕೆಲವು ಸ್ಮಾರ್ಟ್‌ಫೋನ್‌ಗಳು ಕ್ಯಾಮೆರಾ ಕಾರಣಕ್ಕಾಗಿ ಸದ್ದು ಮಾಡಿವೆ. ಇನ್ನು ನೀವು ಕೂಡ ಅತ್ಯುತ್ತಮ ಕ್ಯಾಮೆರಾ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸಿದರೆ ಹಲವು ಆಯ್ಕೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಸದ್ಯ ದಸರಾ ಹಬ್ಬದ ಸಮಯದಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಕ್ಯಾಮೆರಾ ಒಳಗೊಂಡ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಸಿರೀಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಸಿರೀಸ್‌

ಸ್ಯಾಮ್‌ಸಂಗ್ ಗ್ಯಾಲಕ್ಸಿ S21 ಸ್ಮಾರ್ಟ್‌ಫೋನ್ ಸರಣಿಯು ಮೂರು ಮಾಡೆಲ್‌ಗಳ ಆಯ್ಕೆಯನ್ನು ಹೊಂದಿದೆ. ಆರಂಭಿಕ ಗ್ಯಾಲಕ್ಸಿ S21 ಫೋನಿನ 8GB + 128GB ವೇರಿಯಂಟ್‌ ಬೆಲೆಯು 69,999ರೂ. ಆಗಿದೆ. ಗ್ಯಾಲಕ್ಸಿ S21 ಪ್ಲಸ್‌ ಫೋನ್ 8GB + 128GB ವೇರಿಯಂಟ್‌ ದರವು 81,999ರೂ. ಹೊಂದಿದೆ. ಇದರಲ್ಲಿ ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 21 ಮತ್ತು ಎಸ್ 21+ ಸ್ಮಾರ್ಟ್‌ಫೋನ್‌ಗಳು ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದ್ದು, ಪ್ರೈಮೆರಿ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ.

ಐಫೋನ್ 13 ಪ್ರೊ

ಐಫೋನ್ 13 ಪ್ರೊ

ಅತ್ಯುತ್ತಮ ಕ್ಯಾಮೆರಾ ಫೋನ್‌ ಎಂದಾ ಮೊದಲಿಗೆ ನೆನಾಪಾಗೋದೆ ಐಫೋನ್. ಈ ಬಾರಿ ನೀವು ಐಫೋನ್ 13 ಸರಣಿಯ ಪ್ರೊ ಮಾದರಿಗಳನ್ನು ಖರೀದಿಸಬಹುದಾಗಿದೆ. ಐಫೋನ್ 13 ಸರಣಿ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾ 12 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಐಫೋನ್ 13 ಸರಣಿಯು ಸೆನ್ಸಾರ್-ಶಿಫ್ಟ್, ಮ್ಯಾಕ್ರೋ ಮೋಡ್ ಮತ್ತು ಹೊಸ ಸಿನಿಮಾ ಮೋಡ್ ನಂತಹ ಫೀಚರ್ಸ್‌ಗಳನ್ನು ಒಳಗೊಂಡ ಉತ್ತಮ ಕ್ಯಾಮರಾ ಅನುಭವವನ್ನು ನೀಡುತ್ತದೆ.

ಶಿಯೋಮಿ ಮಿ 11 ಅಲ್ಟ್ರಾ

ಶಿಯೋಮಿ ಮಿ 11 ಅಲ್ಟ್ರಾ

ಶಿಯೋಮಿ ಮಿ 11 ಅಲ್ಟ್ರಾ ಅತ್ಯುತ್ತಮ ಕ್ಯಾಮರಾ ಕಾರ್ಯದಕ್ಷತೆ ಹೊಂದಿರುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP, ಎರಡನೇ ಕ್ಯಾಮೆರಾ 48MP, ಮೂರನೇ ಕ್ಯಾಮೆರಾ 48MP ಹೊಂದಿದೆ. ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67 Wವೈರ್ಡ್ ಮತ್ತು ವಾಯರ್‌ಲೆಸ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಮಿ 11 ಅಲ್ಟ್ರಾ ಸ್ಮಾರ್ಟ್‌ಫೋನ್‌ ಏಕೈಕ 12GB RAM + 256GB ರೂಪಾಂತರಕ್ಕೆ 69,990 ರೂ. ಬೆಲೆಯನ್ನು ಹೊಂದಿದೆ.

ಒನ್‌ಪ್ಲಸ್ 9 ಪ್ರೊ

ಒನ್‌ಪ್ಲಸ್ 9 ಪ್ರೊ

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಈ ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ 65T Warp ಚಾರ್ಜ್‌ ಸಪೋರ್ಟ್‌ ಪಡೆದಿದೆ ಹಾಗೂ Warp ಚಾರ್ಜ್ 50w ಸಾಮರ್ಥ್ಯದ ವಾಯರ್‌ ಲೆಸ್‌ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ.

ವಿವೋ ಎಕ್ಸ್ 70 ಪ್ರೊ+

ವಿವೋ ಎಕ್ಸ್ 70 ಪ್ರೊ+

ವಿವೋ X70 ಪ್ರೊ+ ಸ್ಮಾರ್ಟ್‌ಫೋನ್‌ 6.78-ಇಂಚಿನ ಅಲ್ಟ್ರಾ-HD AMOLED ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 888+ SoC ಪ್ರೊಸೆಸರ್‌ ಹೊಂದಿದೆ. ಹಾಗೆಯೇ 12GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೋನಿ IMX598 ಅಲ್ಟ್ರಾ ವೈಡ್ ಆಂಗಲ್ ಸೆನ್ಸರ್ , ಮೂರನೇ ಕ್ಯಾಮೆರಾ 12 ಮೆಗಾಪಿಕ್ಸೆಲ್ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಪೆರಿಸ್ಕೋಪ್ ಸೆನ್ಸರ್ ಅನ್ನು ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ವಿವೋ X70 ಪ್ರೊ ಪ್ಲಸ್‌ 12GB+256GB ಸ್ಟೋರೇಜ್ ರೂಪಾಂತರಕ್ಕೆ 79,990ರೂ. ಬಲೆ ಹೊಂದಿದೆ.

Best Mobiles in India

English summary
Here’s a list of the best smartphones to consider with the best camera performance.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X