ಭಾರತದಲ್ಲಿ ನೀವು ಖರೀದಿಸಬಹುದಾದ ಟಾಪ್ 10 ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳು!

|

ಟೆಕ್‌ ವಲಯದಲ್ಲಿ ಸ್ಯಾಮ್‌ಸಂಗ್‌ ಕಂಪೆನಿ ತನ್ನ ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳಿಂದ ಗುರುತಿಸಿಕೊಂಡಿದೆ. ಈಗಾಗಲೇ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಇನ್ನು ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಗ್ರಾಹಕರ ಅತ್ಯುತ್ತಮ ಸ್ಮಾರ್ಟ್‌ಫೋನ್‌ ಬ್ರಾಂಡ್‌ ಆಯ್ಕೆಗಳಲ್ಲಿ ಸ್ಯಾಮ್‌ಸಂಗ್‌ ಕೂಡ ಒಂದಾಗಿದೆ. ಸದ್ಯ ಮಾರುಕಟ್ಟೆಯಲ್ಲಿ ಮುಂಚೂಣಿಯಲ್ಲಿರುವ ಸ್ಮಾರ್ಟ್‌ಫೋನ್‌ ಬ್ರಾಂಡ್‌ಗಳಲ್ಲಿ ಸ್ಯಾಮ್‌ಸಂಗ್‌ ಉತ್ತಮ ಆಯ್ಕೆಯಾಗಿದೆ.

ಸ್ಮಾರ್ಟ್‌ಫೋನ್‌

ಹೌದು, ನೀವು ಹೊಸ ಸ್ಮಾರ್ಟ್‌ಫೋನ್‌ ಖರೀದಿಸಲು ಯೋಚಿಸುತ್ತೀದ್ದೀರಾ? ಚೀನಾ ಸ್ಮಾರ್ಟ್‌ಫೋನ್‌ಗಳಿಗೆ ಹೊರತಾದ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ ಸ್ಯಾಮ್‌ಸಂಗ್‌ ಉತ್ತಮ ಆಯ್ಕೆಯಾಗಿದೆ. ಮುಂಚೂಣಿ ಸ್ಮಾರ್ಟ್‌ಫೋನ್‌ ದೈತ್ಯ ಸ್ಯಾಮ್‌ಸಂಗ್‌ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳಿಗೆ ಪ್ರಸಿದ್ಧಿಯಾಗಿದೆ. ಇನ್ನು ನೀವು ನಿಮ್ಮ ಆಯ್ಕೆಯ ಬೆಲೆಯಲ್ಲಿ ನೀವು ಖರೀದಿಸಬಹುದಾದ ಟಾಪ್ 10 ಸ್ಯಾಮ್‌ಸಂಗ್ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್ ಗ್ಯಾಲಕ್ಸಿ A32

ಸ್ಯಾಮ್‌ಸಂಗ್ ಗ್ಯಾಲಕ್ಸಿ A32

ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ 1080x2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.4-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಅಕ್ಟಾ-ಕೋರ್‌ ಮೀಡಿಯಾ ಟೆಕ್‌ ಹಿಲಿಯೊ G85 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದು 20ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 15W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ A32 ಸ್ಮಾರ್ಟ್‌ಫೋನ್‌ ಭಾರತದಲ್ಲಿ 6GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯದ ಆಯ್ಕೆಗೆ 21,999 ರೂ. ಬೆಲೆಯನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 20 ಸ್ಮಾರ್ಟ್‌ಫೋನ್ 1080x2400 ಪಿಕ್ಸಲ್‌ ಸಾಮರ್ಥ್ಯದೊಂದಿಗೆ 6.7 ಇಂಚಿನ ಸೂಪರ್‌ AMOLED ಡಿಸ್‌ಪ್ಲೇ ಹೊಂದಿದೆ. ಇದು ಕಂಪನಿಯ Exynos 990 SoC ಚಿಪ್‌ಸೆಟ್‌ ಸಾಮರ್ಥ್ಯದ ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI 2.0 ಬೆಂಬಲಿತ ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್ ಇದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್‌ ಹೊಂದಿದೆ. ಇದು 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಹಾಗೆಯೇ ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಗ್ರೀನ್‌, ಗ್ರೇ ಹಾಗೂ ಬ್ರೌಂಜ್‌ ಬಣ್ಣಗಳ ಆಯ್ಕೆ ಹೊಂದಿದೆ. ಇನ್ನು ಗ್ಯಾಲಕ್ಸಿ ನೋಟ್ 20 256GB 4G ವೇರಿಯಂಟ್ ಬೆಲೆಯು 77,999 ರೂ. ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 20

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 20

ಸ್ಯಾಮ್‌ಸಂಗ್ ಸಂಸ್ಥೆಯ ಸ್ಮಾರ್ಟ್‌ಫೋನ್‌ ಬಯಸುವವರಿಗೆ ಗ್ಯಾಲಕ್ಸಿ ಎಸ್ 20 ಕೂಡ ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.2 ಇಂಚಿನ ಇನ್ಫಿನಿಟಿ-O ಡೈನಾಮಿಕ್ ಅಮೋಲೆಡ್ ಡಿಸ್ಪ್ಲೇಯನ್ನು ಹೊಂದಿದೆ. ಡಿಸ್‌ಪ್ಲೇ ಪಿಕ್ಸಲ್ ರೆಸಲ್ಯೂಶನ್ 1,440x3,200 ಆಗಿದೆ. ಡಿಸ್‌ಪ್ಲೇಯು HDR10 + ಹೊಂದಿದ್ದು, 120Hz ನ ರಿಫ್ರೆಶ್ ರೇಟ್ ಪಡೆದಿದೆ. ಇನ್ನು ಈ ಫೋನ್ 8GB / 12GB RAM ಮತ್ತು 128GB ಆಯ್ಕೆಯ ವೇರಿಯಂಟ್ ಇದೆ. 5G ವೇರಿಯಂಟ್ ಸಹ ಇರಲಿದೆ. ವಾಯರ್‌ಲೆಸ್‌ ಫಾಸ್ಟ್‌ ಚಾರ್ಜಿಂಗ್ ಬೆಂಬಲಿತ 4,000mAh ಬ್ಯಾಟರಿ ಬ್ಯಾಕ್‌ಅಪ್ ಪಡೆದಿದೆ. ಇನ್ನು ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟಪ್‌ ಪಡೆದಿದ್ದು, ಮುಖ್ಯ ಕ್ಯಾಮೆರಾವು 64ಎಂಪಿ ಸೆನ್ಸಾರ್ ಪಡೆದಿವೆ. ಇದರ ಬೆಲೆ 66,999ರೂ, ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 10 ಲೈಟ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 10 ಲೈಟ್

ಗ್ಯಾಲಕ್ಸಿ ನೋಟ್ 10 ಲೈಟ್‌ ಕೈಗೆಟಕುವ ಬೆಲೆಯ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇದರ ಆರಂಭಿಕ ಬೆಲೆ 38,999 ರೂ. ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಪೂರ್ಣ ಹೆಚ್‌ಡಿ ಪ್ಲಸ್‌ ಹೊಂದಿದೆ. ಇದು ಕಂಪನಿಯ Exynos 9810 ಚಿಪ್‌ಸೆಟ್‌ ಸಾಮರ್ಥ್ಯದ ಪ್ರೊಸೆಸರ್ ಹೊಂದಿದ್ದು, ಅದಕ್ಕೆ ಪೂರಕವಾಗಿ ಒನ್ UI 2.0 ಬೆಂಬಲಿತ ಆಂಡ್ರಾಯ್ಡ್‌ 10 ಓಎಸ್‌ ಸಪೋರ್ಟ್ ಇದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 12ಎಂಪಿ ಸೆನ್ಸಾರ್‌ ಹೊಂದಿದೆ. ಇದಲ್ಲದೆ 32ಎಂಪಿ ಸೆನ್ಸಾರ್ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದಿದ್ದು, ಇದರೊಂದಿಗೆ ಫಾಸ್ಟ್‌ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ.ಇದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 10

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 10

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 10 ಸ್ಮಾರ್ಟ್‌ಫೋನ್‌ 69,999 ರೂ.ಬೆಲೆಯಲ್ಲಿ ಲಭ್ಯವಾಗಲಿದೆ. ಗ್ಯಾಲಕ್ಸಿ ನೋಟ್ 10 6.3-ಇಂಚಿನ ಫುಲ್‌ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕಂಪೆನಿಯ ಎಕ್ಸಿನೋಸ್ 9825 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ ಪೈ ಆಧಾರಿತ ಒನ್ ಯುಐ ಮೂಲಕ ರನ್ ಆಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್-ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇನ್ನು ಗ್ಯಾಲಕ್ಸಿ ನೋಟ್ 10 3400 mAh ಬ್ಯಾಟರಿಯೊಂದಿಗೆ 25W ವೇಗದ ಚಾರ್ಜಿಂಗ್ ಫೀಚರ್ ಅನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 10

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 10

ಗ್ಯಾಲಕ್ಸಿ ಎಸ್‌10 ಸ್ಮಾರ್ಟ್‌ಫೋನ್ 1440 x 3040 ಪಿಕ್ಸಲ್ ರೆಸಲ್ಯೂಶನ್ ಸಾಮರ್ಥ್ಯದೊಂದಿಗೆ 6.1 ಇಂಚಿನ ಡಿಸ್‌ಪ್ಲೇ ಪಡೆದಿದೆ. ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 855 ಪ್ರೊಸೆಸರ್ ಇದರಲ್ಲಿದೆ ಹಾಗೂ ಅದಕ್ಕೆ ಬೆಂಬಲವಾಗಿ ಆಂಡ್ರಾಯ್ಡ್‌ 9 ಪೈ ಓಎಸ್‌ ಸಫೋರ್ಟ್‌ ಇದೆ. ಹಿಂಬದಿಯಲ್ಲಿ ತ್ರಿವಳಿ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡಿದ್ದು, 10ಎಂಪಿ ಸೆಲ್ಫಿ ಕ್ಯಾಮೆರಾ ಹೊಂದಿದೆ. ಫಾಸ್ಟ್‌ ಚಾರ್ಜರ ಬೆಂಬಲದೊಂದಿಗೆ 3400 mAh ಬ್ಯಾಟರಿ ಬಾಳಿಕೆಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 8GB RAM ಮತ್ತು 128GB ಆಯ್ಕೆಗೆ ಅಮೆಜಾನ್‌ ಇಂಡಿಯಾ ಸೈಟ್‌ನಲ್ಲಿ 49,999 ರೂ ಬೆಲೆ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 9

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎ 9

ಸ್ಯಾಮ್ಸಂಗ್ ಗ್ಯಾಲಕ್ಸಿ ಎ9 ಕ್ವಾಡ್-ರಿಯರ್‌ ಕ್ಯಾಮೆರಾದೊಮದಿಗೆ ಬಿಡುಗಡೆ ಆಗಿದ್ದ, ವಿಶ್ವದ ಮೊದಲ ಸ್ಮಾರ್ಟ್‌ಫೋನ್‌ ಆಗಿ ದಾಖಲೆ ಬರೆದಿತ್ತು. ಇನ್ನು ಈ ಸ್ಮಾರ್ಟ್‌ಫೋನ್‌ 6.3-ಇಂಚಿನ ಫುಲ್‌ HD + AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 660 SOC ಓಕ್ಟಾ ಕೋರ್ ಪ್ರೊಸೆಸರ್‌ ಹೊಂದಿದೆ. ಇದು ಕ್ವಾಡ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 24MP ಸೆನ್ಸಾರ್‌ ಹೊಂದಿದೆ. ಜೊತೆಗೆ 3,800 mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇದು ಅಮೆಜಾನ್‌ ಸೈಟ್‌ನಲ್ಲಿ 8GB RAM ಮತ್ತು 128GB ಸಾಮರ್ಥ್ಯದ ಆಯ್ಕೆಗೆ 28,970ರೂ.ಬೆಲೆ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 9

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 9

ನೀವು ಆಯ್ಕೆ ಮಾಡಬಹುದಾದ ಮತ್ತೊಂದು ಉತ್ತಮ ಸ್ಮಾರ್ಟ್‌ಫೋನ್‌ ಗ್ಯಾಲಕ್ಸಿ ನೋಟ್‌ 9 ಆಗಿದೆ. ಇದು 6.4 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಆಕ್ಟಾ-ಕೋರ್ ಎಕ್ಸಿನೋಸ್ 9810 ಪ್ರೊಸೆಸರ್ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರ ಪ್ರಮುಖ ಮುಖ್ಯಾಂಶವೆಂದರೆ ಬ್ಲೂಟೂತ್-ಶಕ್ತಗೊಂಡ ಎಸ್ ಪೆನ್. ಚಿತ್ರಗಳನ್ನು ಕ್ಲಿಕ್ ಮಾಡಲು, ವೆಬ್‌ಪುಟದಲ್ಲಿ ನ್ಯಾವಿಗೇಟ್ ಮಾಡಲು, ಗ್ಯಾಲರಿಯ ಮೂಲಕ ಸ್ಕ್ರಾಲ್ ಮಾಡಲು ಮತ್ತು ಹೆಚ್ಚಿನದನ್ನು ಬಳಸಬಹುದು. ಇದು ಫ್ಯಾಬ್ಲೆಟ್ ಪ್ರೀಮಿಯಂ ಬಿಲ್ಡ್-ಕ್ವಾಲಿಟಿ ಮತ್ತು ಆಲ್-ಗ್ಲಾಸ್ ಬಾಡಿ ವಿನ್ಯಾಸವನ್ನು ನೀಡುತ್ತದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 9 ಪ್ಲಸ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 9 ಪ್ಲಸ್

ಸ್ಯಾಮ್‌ಸಂಗ್ ಗ್ಯಾಲಕ್ಸಿ ಎಸ್ 9 ಪ್ಲಸ್ ಸ್ಯಾಮ್‌ಸಂಗ್‌ನ 2018ರಲ್ಲಿ ಬಿಡುಗಡೆಯಾದ ಪ್ರಮುಖ ಎಸ್-ಸರಣಿ ಶ್ರೇಣಿಯ ಮತ್ತೊಂದು ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್‌ 6.3-ಇಂಚಿನ ಕ್ವಾಡ್ ಎಚ್ಡಿ + ಸೂಪರ್ ಅಮೋಲೆಡ್ ‘ಇನ್ಫಿನಿಟಿ' ಡಿಸ್ಪ್ಲೇ ಹೊಂದಿದೆ. ಇದು ಎಕ್ಸಿನೋಸ್ 9810SoC ಪ್ರೊಸೆಸರ್‌ ಅನ್ನು ಹೊಂದಿದೆ. ಜೊತೆಗೆ 6GB RAM ಮತ್ತು 64GB/ 128GB / 256GB ಇಂಟರ್‌ ಸ್ಟೋರೇಜ್‌ ಆಯ್ಕೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 64,900 ರೂ ಬೆಲೆ ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 8

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್‌ 8

ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 8 ಸ್ಮಾರ್ಟ್‌ಫೋನ್‌ 6.3-ಇಂಚಿನ ಕ್ವಾಡ್ ಹೆಚ್‌ಡಿ + ಸೂಪರ್ ಅಮೋಲೆಡ್ 'ಇನ್ಫಿನಿಟಿ' ಡಿಸ್ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 835 ಪ್ರೊಸೆಸರ್ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಸ್ಯಾಮ್‌ಸಂಗ್‌ನ ಬಿಕ್ಸ್‌ಬಿ ಡಿಜಿಟಲ್ ಅಸಿಸ್ಟೆಂಟ್ ಹೊಂದಿದೆ. ಸ್ಯಾಮ್‌ಸಂಗ್ ಗ್ಯಾಲಕ್ಸಿ ನೋಟ್ 8 ಸ್ಪೋರ್ಟ್ಸ್ 12 ಎಂಪಿ ಡ್ಯುಯಲ್ ರಿಯರ್ ಕ್ಯಾಮೆರಾವನ್ನು ಹೊಂದಿಸಲಾಗಿದೆ. ಇನ್ನು ಈ ಫೋನ್‌ 3300mAh ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Samsung is one brand you can go for. The global smartphone market leader offers devices across price segments.to know more visit to kannada.gizbot.com

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X