10,000ರೂ. ಬಜೆಟ್‌ನಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಪ್ರತಿಯೊಬ್ಬರು ಬಳಸುವ ಅವಶ್ಯ ಡಿವೈಸ್‌ಗಳಲ್ಲಿ ಒಂದಾಗಿದೆ. ಹಿರಿಯರಿಂದ ಹಿಡಿದು ಯುವಜನತೆಯ ವರೆಗೂ ಎಲ್ಲಾ ವಯೋಮಾನದವರನ್ನು ಸ್ಮಾರ್ಟ್‌ಫೋನ್‌ಗಳು ಸೆಳೆದಿವೆ. ವೀಡಿಯೋ ಕಾಲ್‌, ವೀಡಿಯೋ ಸ್ಟ್ರೀಮಿಂಗ್‌, ಆನ್‌ಲೈನ್‌ ಗೇಮ್‌ ಎಲ್ಲದಕ್ಕೂ ಸ್ಮಾರ್ಟ್‌ಫೋನ್‌ಗಳಲ್ಲಿ ಅವಕಾಶ ಲಭ್ಯವಿರುವುದರಿಂದ ಹೆಚ್ಚಿನ ಜನರು ಸ್ಮಾರ್ಟ್‌ಫೋನ್‌ಗಳನ್ನು ಹೊಂದುವುದಕ್ಕೆ ಬಯಸುತ್ತಾರೆ. ಇದಕ್ಕೆ ತಕ್ಕಂತೆ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ಕೂಡ ಹೊಸ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಎಲ್ಲ ವಯಸ್ಸಿನ ಜನರನ್ನು ಕೂಡ ಆಕರ್ಷಿಸಿವೆ. ಆನ್‌ಲೈನ್‌ ಕ್ಲಾಸ್‌, ಆನ್‌ಲೈನ್‌ ಮೀಟಿಂಗ್‌ ಎಲ್ಲದಕ್ಕೂ ಕೂಡ ಇಂದು ಸ್ಮಾರ್ಟ್‌ಫೋನ್‌ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಅದರಂತೆ ಮಾರುಕಟ್ಟೆಯಲ್ಲಿ ವಿವಿಧ ಬೆಲೆ ಮಾದರಿಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಆದರೆ ಎಲ್ಲರೂ ಕೂಡ ಹೈ ಎಂಡ್‌ ಪ್ರೈಸ್‌ಟ್ಯಾಗ್‌ನ ಸ್ಮಾರ್ಟ್‌ಫೋನ್‌ ಖರೀದಿಸಲು ಸಾಧ್ಯವಿಲ್ಲ. ಇದರಲ್ಲಿ ಹೆಚ್ಚಿನ ಜನರು ಬಜೆಟ್‌ ಪ್ರೈಸ್‌ಟ್ಯಾಗ್‌ನ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ.

ಸ್ಮಾರ್ಟ್‌ಫೋನ್‌

ಇನ್ನು ಸ್ಮಾರ್ಟ್‌ಫೋನ್‌ ಬಳಕೆದಾರರ ಅಗತ್ಯವನ್ನು ಮನಗಂಡಿರುವ ಸ್ಮಾರ್ಟ್‌ಫೋನ್‌ ಕಂಪೆನಿಗಳು ಗ್ರಾಹಕರ ಅಗತ್ಯಕ್ಕೆ ತಕ್ಕ ಫೋನ್‌ಗಳನ್ನು ಪರಿಚಯಿಸಿವೆ. ನೀವು ನಿಮ್ಮ ಬಳಿ ಇರುವ ಹಣಕ್ಕೆ ಸೂಕ್ತವಾದ ಸ್ಮಾರ್ಟ್‌ಫೋನ್‌ಗಳನ್ನು ಆಯ್ಕೆ ಮಾಡಬಹುದಾಗಿದೆ. ಇದಲ್ಲದೆ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಲ್ಲಿಯೂ ಕೂಡ ಅಗತ್ಯ ಫೀಚರ್ಸ್‌ಗಳನ್ನು ನೀಡಲಾಗಿದೆ. ಹಾಗಾದ್ರೆ ಜೂನ್‌ ತಿಂಗಳಿನಲ್ಲಿ 10,000ರೂ.ಗಿಂತ ಕಡಿಮೆ ಬೆಲೆಯಲ್ಲಿ ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರಿಯಲ್‌ಮಿ C30

ರಿಯಲ್‌ಮಿ C30

ರಿಯಲ್‌ಮಿ C30 ಸ್ಮಾರ್ಟ್‌ಫೋನ್‌ 10,000ರೂ.ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನಿನ ಆರಂಭಿಕ ಬೆಲೆ 7,499ರೂ.ಆಗಿದೆ. ಇನ್ನು ಈ ಫೋನ್‌ 6.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 88.7% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು ಯುನಿಸೋಕ್‌ T612 ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ 8 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇನ್ನು 5 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

ಪೊಕೊ C3

ಪೊಕೊ C3

ಪೊಕೊ C3 ಸ್ಮಾರ್ಟ್‌ಫೋನ್‌ ಪ್ರಸ್ತುತ 8,499ರೂ.ಬೆಲೆಯಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ 6.53 ಇಂಚಿನ HD+ LCD ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಹಿಲಿಯೋ G35 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್‌ 10-ಆಧಾರಿತ MIUI 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೇಯೇ 3GB + 32GB ಹಾಗೂ 4GB + 64GB ಸ್ಟೋರೇಜ್‌ ಸಾಮರ್ಥ್ಯವನ್ನು ವೇರಿಯಂಟ್‌ ಆಯ್ಕೆಗಳನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆ ಇದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13-ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿದೆ.

ರಿಯಲ್‌ಮಿ ನಾರ್ಜೊ 30A

ರಿಯಲ್‌ಮಿ ನಾರ್ಜೊ 30A

ರಿಯಲ್‌ಮಿ ನಾರ್ಜೊ 30A ಸ್ಮಾರ್ಟ್‌ಫೋನ್‌ ಬಜೆಟ್‌ ಪ್ರೈಸ್‌ಟ್ಯಾಗ್‌ನಲ್ಲಿ ಉತ್ತಮ ಆಯ್ಕೆಯಾಗಿದೆ. ಈ ಸ್ಮಾರ್ಟ್‌ಫೋನ್‌ 6.5 ಇಂಚಿನ ಹೆಚ್‌ಡಿ + ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹಿಲಿಯೊ G85 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್ 10 ಬೆಂಬದೊಂದಿಗೆ ಕಾರ್ಯನಿರ್ವಹಿಸಲಿದೆ. ಇದರೊಂದಿಗೆ 3GB RAM + 32GB ಮತ್ತು 4GB RAM + 64GB ಸಂಗ್ರಹ ಸಾಮರ್ಥ್ಯದ ವೇರಿಯೆಂಟ್‌ ಆಯ್ಕೆಯನ್ನು ಹೊಂದಿದೆ. ಜೊತೆಗೆ ಮೆಮೊರಿ ಕಾರ್ಡ್‌ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ. ಈ ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 13 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮೊನೊಕ್ರೋಮ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಸಾಮರ್ಥ್ಯದ ಫಾಸ್ಟ್‌ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಶಿಯೋಮಿ ರೆಡ್ಮಿ 10A

ಶಿಯೋಮಿ ರೆಡ್ಮಿ 10A

ಶಿಯೋಮಿ ರೆಡ್ಮಿ 10A ಸ್ಮಾರ್ಟ್‌ಫೋನ್‌ ಕೂಡ ನಿಮಗೆ ಬಜೆಟ್‌ ಬೆಲೆಯಲ್ಲಿ ಉತ್ತಮ ಆಯ್ಕೆ ಎನಿಸಲಿದೆ. ಈ ಸ್ಮಾರ್ಟ್‌ಫೋನ್‌ 1600x720 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಸಾಮರ್ಥ್ಯದ 6.53 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ ಜಿ 25 ಪ್ರೊಸೆಸರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 13ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 5ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 10W ವೇಗದ ಚಾರ್ಜಿಂಗ್‌ ಅನ್ನು ಬೆಂಬಲಿಸಲಿದೆ.

ಇನ್ಫಿನಿಕ್ಸ್ ಹಾಟ್ 12 ಪ್ರೊ

ಇನ್ಫಿನಿಕ್ಸ್ ಹಾಟ್ 12 ಪ್ರೊ

ಇನ್ಫಿನಿಕ್ಸ್ ಹಾಟ್ 12 ಪ್ರೊ ಸ್ಮಾರ್ಟ್‌ಫೋನ್‌ 6.91 ಇಂಚಿನ IPS LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಫುಲ್‌ ಹೆಚ್‌ಡಿ ಪ್ಲಸ್‌ ರೆಸಲ್ಯೂಶನ್ ಡಿಸ್‌ಪ್ಲೇ ಆಗಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಹಿಲಿಯೊ P95 ಪ್ರೊಸೆಸರ್ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64ಮೆಗಾಪಿಕ್ಸೆಲ್‌ ಸೆನ್ಸಾರ್‌, ಎರಡನೇ ಕ್ಯಾಮೆರಾ 8ಮೆಗಾಪಿಕ್ಸೆಲ್‌ ಸೆನ್ಸಾರ್‌, ಮೂರನೇ ಕ್ಯಾಮೆರಾ 5ಮೆಗಾಪಿಕ್ಸೆಲ್‌ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2ಮೆಗಾಪಿಕ್ಸೆಲ್‌ ಡೆಪ್ತ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಇನ್ನು ಈ ಫೋನ್‌ 22.5W ವೇಗದ ಚಾರ್ಜಿಂಗ್ ಬೆಂಬಲವನ್ನು ಹೊಂದಿರುವ 5,200mAh ಬ್ಯಾಟರಿಯನ್ನು ಒಳಗೊಂಡಿದೆ.

Best Mobiles in India

English summary
Here's Best 5 smartphones to buy under Rs 10,000 in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X