20,000ರೂ.ಒಳಗೆ ನೀವು ಖರೀದಿಸಬಹುದಾದ ಐದು ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಮಾದರಿಯ ಬೆಲೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಸೌಂಡ್‌ ಮಾಡುತ್ತಿವೆ. ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಿವೆ. ಈ ವರ್ಷ ಮಾರುಕಟ್ಟೆಗೆ ಎಂಟ್ರಿ ನೀಡಿದ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಸಾಕಷ್ಟು ಸಂಚಲನ ಮೂಡಿಸಿವೆ. ಇದರಲ್ಲಿ 20,000ರೂ. ಒಳಗಿನ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ.

ಸ್ಮಾರ್ಟ್‌ಫೋನ್‌

ಹೌದು, ಭಾರತದಲ್ಲಿ ಸ್ಮಾರ್ಟ್‌ಫೋನ್‌ ಮಾರುಕಟ್ಟೆ ದಿನೇ ದಿನೇ ವಿಸ್ತಾರವಾಗುತ್ತಲೇ ಇದೆ. ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಾದಂತೆ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಲೇ ಇವೆ. ಹೊಸ ಟೆಕ್ನಾಲಜಿ, ನವೀನ ಮಾದರಿಯ ಡಿಸ್ಪ್ಲೇ , ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳ ಮೂಲಕ ಸ್ಮಾರ್ಟ್‌ಫೋನ್‌ ಪ್ರಿಯರ ಮನಗೆಲ್ಲುವ ಪ್ರಯತ್ನವನ್ನು ಸ್ಮಾರ್ಟ್‌ಫೋನ್‌ ತಯಾರಕರು ನಡೆಸುತ್ತಲೇ ಬಂದಿದ್ದಾರೆ. ಇದರಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ. ಹಾಗಾದ್ರೆ ಪ್ರಸ್ತುತ ಭಾರತದಲ್ಲಿ 20,000ರೂ.ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G

ಒನ್‌ಪ್ಲಸ್‌ ನಾರ್ಡ್‌ CE 2 ಲೈಟ್‌ 5G ಸ್ಮಾರ್ಟ್‌ಫೋನ್‌ 6.59 ಇಂಚಿನ ಫುಲ್ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ವಿಕ್ಟಸ್ ರಕ್ಷಣೆಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗ್ನ್ 695 SoC ಪ್ರೊಸೆಸರ್‌ ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್ 12 ಓಎಸ್‌ ಸಪೋರ್ಟ್‌ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್‌ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಸೂಪರ್VOOC ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 19,999ರೂ.ಬೆಲೆಗೆ ಲಭ್ಯವಾಗಲಿದೆ.

ರೆಡ್ಮಿ ನೋಟ್‌ 11 ಪ್ರೊ

ರೆಡ್ಮಿ ನೋಟ್‌ 11 ಪ್ರೊ

ರೆಡ್ಮಿ ನೋಟ್‌ 11 ಪ್ರೊ ಸ್ಮಾರ್ಟ್‌ಫೋನ್‌ 6.67-ಇಂಚಿನ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್‌ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಭಾರತದಲ್ಲಿ 17,999 ರೂ.ಬೆಲೆಯಲ್ಲಿ ಲಭ್ಯವಿದೆ.

ರೆಡ್ಮಿ ನೋಟ್‌ 11T 5G

ರೆಡ್ಮಿ ನೋಟ್‌ 11T 5G

ರೆಡ್ಮಿ ನೋಟ್‌ 11T 5G ಸ್ಮಾರ್ಟ್‌ಫೋನ್‌ 6.6-ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೇಸ್ ಮಾಡೆಲ್‌ 6GB + 64GB ಸ್ಟೋರೇಜ್ ಮಾದರಿಗೆ 15,999ರೂ.ಬೆಲೆಯನ್ನು ಹೊಂದಿದೆ.

ರಿಯಲ್‌ಮಿ 9 ಪ್ರೊ 5G

ರಿಯಲ್‌ಮಿ 9 ಪ್ರೊ 5G

ರಿಯಲ್‌ಮಿ 9 ಪ್ರೊ 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್‌ ಹೊಂದಿದ್ದು, ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್‌ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 18,999ರೂ. ಬೆಲೆಯಲ್ಲಿ ಲಭ್ಯವಿದೆ.

ಮೋಟೋ G71 5G

ಮೋಟೋ G71 5G

ಮೋಟೋ G71 5G ಸ್ಮಾರ್ಟ್‌ಫೋನ್‌ 6.4-ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 695 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.8 ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಬೆಲೆ 18,999ರೂ.ಗಳಿಂದ ಪ್ರಾರಂಭವಾಗುತ್ತದೆ.

Best Mobiles in India

Read more about:
English summary
Here's Best 5 smartphones under Rs 20,000 in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X