Home
ಸುದ್ದಿಜಾಲ

50 ಮೆಗಾಪಿಕ್ಸೆಲ್‌ ಕ್ಯಾಮೆರಾ ಹೊಂದಿರುವ ಟಾಪ್‌ 5 ಸ್ಮಾರ್ಟ್‌ಫೋನ್‌ಗಳು!

ಹೊಸ ಸ್ಮಾರ್ಟ್‌ಫೋನ್‌ ಅನ್ನು ಖರೀದಿಸುವ ವೇಳೆಯಲ್ಲಿ ಗ್ರಾಹಕರು ಅನೇಕ ವಿಚಾರಗಳನ್ನು ಗಮನಿಸುತ್ತಾರೆ. ಸ್ಮಾರ್ಟ್‌ಫೋನ್‌ ಬ್ಯಾಟರಿ ಬ್ಯಾಕ್‌ಅಪ್‌, ಪ್ರೊಸೆಸರ್‌ ಸಾಮರ್ಥ್ಯ, ಡಿಸ್‌ಪ್ಲೇ ಗಾತ್ರ, ಬೆಲೆ ಎಷ್ಟು ಎಂಬೆಲ್ಲಾ ವಿಚಾರಗಳು ಪ್ರಮುಖವಾಗಿದೆ. ಇದರಲ್ಲಿ ಸ್ಮಾರ್ಟ್‌ಫೋನಿನ ಮುಖ್ಯ ಕ್ಯಾಮೆರಾ ಮೆಗಾಪಿಕ್ಸೆಲ್‌ ಎಷ್ಟಿದೆ ಅನ್ನೊದು ಕೂಡ ಮುಖ್ಯವಾಗುತ್ತದೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಕಂಪೆನಿಗಳು ಹಲವು ಮೆಗಾಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿವೆ.

ಸಾಮರ್ಥ್ಯದ

ಹೌದು, ಇಂದಿನ ದಿನಗಳಲ್ಲಿ ಹೆಚ್ಚಿನ ಜನರು ಸ್ಮಾರ್ಟ್‌ಫೋನಿನ ಕ್ಯಾಮೆರಾ ಸಾಮರ್ಥ್ಯದ ಆದಾರದ ಮೇಲೆ ಫೋನ್‌ಗಳನ್ನು ಖರೀದಿಸುತ್ತಾರೆ. ಅದರಂತೆ ಸ್ಮಾರ್ಟ್‌ಫೋನ್‌ಗಳ ಕ್ಯಾಮೆರಾ ಸಾಮರ್ಥ್ಯ ಕೂಡ ಸಾಕಷ್ಟು ಬದಲಾಗಿದೆ. ಮಾರುಕಟ್ಟೆಯಲ್ಲಿ 108mp, 64mp, 50mp, 48mp, ಸಾಮರ್ಥ್ಯದ ಹಲವು ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಇವುಗಳಲ್ಲಿ ಸ್ಮಾರ್ಟ್‌ಫೋನ್‌ ಪ್ರಿಯರು ತಮ್ಮ ಅಗತ್ಯಕ್ಕೆ ಅನುಗುಣವಾದ ಕ್ಯಾಮೆರಾ ಸೆಟ್‌ಅಪ್‌ ಒಳಗೊಂಡ ಫೋನ್‌ ಖರೀದಿಸುತ್ತಾರೆ. ಇದರಲ್ಲಿ 50mp ಸೆನ್ಸಾರ್‌ ಸಾಮರ್ಥ್ಯದ ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಗಮನ ಸೆಳೆದಿವೆ.

ಮೆಗಾಪಿಕ್ಸೆಲ್‌

50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಮುಖ್ಯ ಕ್ಯಾಮೆರಾ ಒಳಗೊಂಡ ಸ್ಮಾರ್ಟ್‌ಫೋನ್‌ಗಳಿಗೆ ಉತ್ತಮ ಬೇಡಿಕೆ ಇದೆ. ಕ್ಯಾಮೆರಾ ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೆಚ್ಚಾದಂತೆ ಫೋಟೋಗ್ರಫಿಗೆ ಉತ್ತಮ ಎನ್ನುವ ಕಲ್ಪನೆ ಜನರಲ್ಲಿದೆ. ಇದೇ ಕಾರಣಕ್ಕೆ ಹೆಚ್ಚಿನ ಜನರು 50 ಮೆಗಾಪಿಕ್ಸೆಲ್‌ ಕ್ಯಾಮೆರಾ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವುದಕ್ಕೆ ಬಯಸುತ್ತಾರೆ. ಒಂದು ವೇಳೆ ನೀವು ಕೂಡ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಕ್ಯಾಮೆರಾ ಒಳಗೊಂಡ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ ಯಾವ ಸ್ಮಾರ್ಟ್‌ಫೋನ್‌ಗಳು ಉತ್ತಮ ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಮುಂದೆ ಓದಿರಿ.

ವಿವೋ X80 ಪ್ರೊ

ವಿವೋ X80 ಪ್ರೊ

ವಿವೋ X80 ಪ್ರೊ ಸ್ಮಾರ್ಟ್‌ಫೋನ್‌ 6.78-ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ಐಸೋಸೆಲ್‌ GNV ಸೆನ್ಸಾರ್‌ ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್ ಚಾರ್ಜ್ ವೈರ್ಡ್ ಫಾಸ್ಟ್ ಚಾರ್ಜಿಂಗ್ ಮತ್ತು 50W ವೈರ್‌ಲೆಸ್ ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 79,999ರೂ.ಬೆಲೆಗೆ ದೊರೆಯಲಿದೆ.

ಐಕ್ಯೂ 9 ಪ್ರೊ

ಐಕ್ಯೂ 9 ಪ್ರೊ

ಐಕ್ಯೂ 9 ಪ್ರೊ ಸ್ಮಾರ್ಟ್‌ಫೋನ್‌ 6.78 ಇಂಚಿನ 2K E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 8 Gen 1 SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 ನಲ್ಲಿ ಫನ್‌ಟೌಚ್‌ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್‌ ISOCELL GN5 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,700mAhಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 120W ಫ್ಲ್ಯಾಶ್‌ಚಾರ್ಜ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ 64,990ರೂ.ಬೆಲೆಯಲ್ಲಿ ಲಭ್ಯವಿದೆ.

ರಿಯಲ್‌ಮಿ 9 ಪ್ರೊ ಪ್ಲಸ್‌ 5G

ರಿಯಲ್‌ಮಿ 9 ಪ್ರೊ ಪ್ಲಸ್‌ 5G

ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್‌ ಡೈಮೆನ್ಸಿಟಿ 920 SoC ಪ್ರೊಸೆಸರ್‌ ಹೊಂದಿದೆ.ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದ್ದು ಆಪ್ಟಿಕಲ್ ಇಮೇಜ್ ಸ್ಟೆಬಿಲೈಸೇಶನ್ ಬೆಂಬಲಿಸಲಿದೆ. ಇದಲ್ಲದೆ 16-ಮೆಗಾಪಿಕ್ಸೆಲ್ ಸೋನಿ IMX471 ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 24,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ಶಿಯೋಮಿ 12 ಪ್ರೊ

ಶಿಯೋಮಿ 12 ಪ್ರೊ

ಶಿಯೋಮಿ 12 ಪ್ರೊ ಸ್ಮಾರ್ಟ್‌ಫೋನ್‌ 6.72 ಇಂಚಿನ WQHD+ E5 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ ಕೋರ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೋನಿ IMX707 ಸೆನ್ಸಾರ್‌ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ ಮತ್ತು ಮೂರನೇ ಕ್ಯಾಮೆರಾ 50 ಮೆಗಾಪಿಕ್ಸೆಲ್ ಟೆಲಿಫೋಟೋ ಲೆನ್ಸ್‌ ಅನ್ನು ಸಹ ಒಳಗೊಂಡಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಜೊತೆಗೆ 4,600mAh ಲಿ-ಪಾಲಿಮರ್‌ ಬ್ಯಾಟರಿಯನ್ನು ಹೊಂದಿದೆ. ಇದು 120W ಶಿಯೋಮಿ ಹೈಪರ್‌ ಚಾರ್ಜ್ ವೇಗದ ವೈರ್ಡ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ನಲ್ಲಿ ಕೇವಲ 62,999ರೂ.ಬೆಲೆಯಲ್ಲಿ ದೊರೆಯಲಿದೆ.

ಒನ್‌ಪ್ಲಸ್‌ 10R 5G ಎಂಡ್ಯೂರೆನ್ಸ್‌ ಆವೃತ್ತಿ

ಒನ್‌ಪ್ಲಸ್‌ 10R 5G ಎಂಡ್ಯೂರೆನ್ಸ್‌ ಆವೃತ್ತಿ

ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ 6.7-ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 8100-ಮ್ಯಾಕ್ಸ್ SoC ಪ್ರೊಸೆಸರ್‌ ಹೊಂದಿದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL S5K3P9 ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಒನ್‌ಪ್ಲಸ್‌ 10R 5G ಸ್ಮಾರ್ಟ್‌ಫೋನ್‌ ಎಂಡ್ಯೂರೆನ್ಸ್ ಆವೃತ್ತಿಯ ಮಾದರಿ 4,500mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 150W SuperVOOC ವೇಗದ ಚಾರ್ಜಿಂಗ್ ಬೆಂಬಲದೊಂದಿಗೆ ಬರುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ ವೆಬ್‌ಸೈಟ್‌ನಲ್ಲಿ ಕೇವಲ 43,999ರೂ.ಬೆಲೆಯಲ್ಲಿ ಖರೀದಿಗೆ ಲಭ್ಯವಾಗಲಿದೆ.

Best Mobiles in India

English summary
Finding a phone with a great rear camera and just the right colour reproduction can be challenging.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+