ಬಜೆಟ್‌ ಬೆಲೆಯಲ್ಲಿ 5G ಫೋನ್‌ ಖರೀದಿಸುವುದಕ್ಕೆ ಇಲ್ಲಿವೆ ಬೆಸ್ಟ್‌ ಸ್ಮಾರ್ಟ್‌ಫೋನ್‌ಗಳು!

|

ಭಾರತದಲ್ಲಿ 5G ನೆಟ್‌ವರ್ಕ್‌ ಶುರುವಾಗ್ತಿದ್ದ ಹಾಗೇ 5G ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆಯಿದೆ. ಇದೇ ಕಾರಣಕ್ಕೆ ಹೆಚ್ಚಿನ ಸ್ಮಾರ್ಟ್‌ಫೋನ್‌ ತಯಾರಕರು ಭಾರತದಲ್ಲಿ 5G ಫೋನ್‌ಗಳನ್ನು ಪರಿಚಯಿಸುತ್ತಾ ಬಂದಿದ್ದಾರೆ. ಇದರಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಾದ ಒನ್‌ಪ್ಲಸ್‌, ಒಪ್ಪೋ, ಪೊಕೊ, ಮೊಟೊರೊಲಾ, ಸ್ಯಾಮ್‌ಸಂಗ್‌ ಕಂಪೆನಿಗಳು ಮುಂಚೂಣಿಯಲ್ಲಿವೆ. ಇನ್ನು 5G ಸ್ಮಾರ್ಟ್‌ಫೋನ್‌ಗಳು ಹೈ ಎಂಡ್‌ ಪ್ರೈಸ್‌ಟ್ಯಾಗ್‌ ಮಾತ್ರವಲ್ಲದೆ ಬಜೆಟ್‌ ಬೆಲೆಯಲ್ಲಿಯೂ ಕೂಡ ದೊರೆಯುತ್ತಿವೆ.

ಸ್ಮಾರ್ಟ್‌ಫೋನ್‌

ಹೌದು, 5G ಸ್ಮಾರ್ಟ್‌ಫೋನ್‌ಗಳು ಭಾರತದಲ್ಲಿ ಸಾಕಷ್ಟು ಸೌಂಡ್‌ ಮಾಡ್ತಿವೆ. ಮುಂದಿನ ದಿನಗಳಲ್ಲಿ ಎಲ್ಲರಿಗೂ 5G ನೆಟ್‌ವರ್ಕ್‌ ಲಭ್ಯವಾಗುವುದರಿಂದ ಹೆಚ್ಚಿನ ಜನರು 5G ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. ಅದರಂತೆ ಮೊಬೈಲ್‌ ಮಾರುಕಟ್ಟೆಯಲ್ಲಿ ವಿವಿಧ ಕಂಪೆನಿಗಳ ಹಲವು ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಿದೆ. ಒಂದು ವೇಳೆ ನೀವು 15,000ರೂ. ಗಿಂತ ಕಡಿಮೆ ಬೆಲೆಯ 5G ಫೋನ್‌ಗಳನ್ನು ಖರೀದಿಸಲು ಬಯಸಿದರೆ? ನಿಮಗೆ ಲಭ್ಯವಾಗುವ 5G ಸ್ಮಾರ್ಟ್‌ಫೋನ್‌ಗಳ ವಿವರವನ್ನು ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೊಟೊ G51 5G

ಮೊಟೊ G51 5G

ಮೊಟೊ G51 5G ಸ್ಮಾರ್ಟ್‌ಫೋನ್‌ ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 4GB RAM + 64GB ಸ್ಟೋರೇಜ್ ಆಯ್ಕೆಗೆ 12,249ರೂ.ಬೆಲೆಯನ್ನು ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್‌
6.8 ಇಂಚಿನ IPS ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಅನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಇದು 20W ವೇಗದ ಚಾರ್ಜಿಂಗ್‌ ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ F23 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ ಹೆಚ್‌ಡಿ + ಇನ್ಫಿನಿಟಿ ಯು ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ನೊಂದಿಗೆ ಬರುತ್ತದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ISOCELL JN1 ಸೆನ್ಸಾರ್‌ ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 12,999ರೂ. ಆರಂಭಿಕ ಬೆಲೆಯಲ್ಲಿ ಲಭ್ಯವಿದೆ.

ಒಪ್ಪೋ A74

ಒಪ್ಪೋ A74

ಒಪ್ಪೋ A74 ಸ್ಮಾರ್ಟ್‌ಫೋನ್‌ 6.5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್‌ 480 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್-ರಿಯರ್ ಕ್ಯಾಮೆರಾ ಸೆಟ್‌ಅಪ್‌ ಅನ್ನು ಪಡೆದುಕೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ ಅಮೆಜಾನ್‌ನಲ್ಲಿ ಕೇವಲ 6GB RAM + 128GB ಸ್ಟೋರೇಜ್ ಆಯ್ಕೆಗೆ 14,990 ರೂ.ಗಳಿಗೆ ಲಭ್ಯವಾಗಲಿದೆ.

ಪೊಕೊ M4 5G

ಪೊಕೊ M4 5G

ಪೊಕೊ M4 5G ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 13,139ರೂ. ಬೆಲೆಗೆ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.58-ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಬೆಂಬಲಿಸಲಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 700 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಫೋನ್‌ ಏಳು 5G ಬ್ಯಾಂಡ್‌ಗಳಿಗೆ ಬೆಂಬಲವನ್ನು ಒಳಗೊಂಡಿದೆ.

ರೆಡ್ಮಿ 11 ಪ್ರೈಮ್‌ 5G

ರೆಡ್ಮಿ 11 ಪ್ರೈಮ್‌ 5G

ರೆಡ್ಮಿ 11 ಪ್ರೈಮ್‌ 5G ಸ್ಮಾರ್ಟ್‌ಫೋನ್‌ 6.58 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಪ್ರೆಶ್‌ ರೇಟ್‌ ಅನ್ನು ಬೆಂಬಲಿಸಲಿದೆ. ಇದು ಡೈಮೆನ್ಸಿಟಿ 700 ಚಿಪ್‌ಸೆಟ್‌ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 18W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುವ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 12,999ರೂ. ಬೆಲೆಯಲ್ಲಿ ಬರಲಿದೆ.

Best Mobiles in India

English summary
Here's Best 5G phones for under Rs 15,000 in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X