5G ಸ್ಮಾರ್ಟ್‌ಫೋನ್‌ ಖರೀದಿಸೋರಿಗೆ ಇಲ್ಲಿವೆ ಬೆಸ್ಟ್‌ ಆಯ್ಕೆಗಳು!

|

ಇಂದಿನ ದಿನಗಳಲ್ಲಿ 5G ಸ್ಮಾರ್ಟ್‌ಫೋನ್‌ ಖರೀದಿಸಬೇಕೆಂದು ಕೊಂಡರೆ ನಿಮಗೆ ಹಲವು ಆಯ್ಕೆಗಳು ದೊರೆಯುತ್ತವೆ. ಇದರಲ್ಲಿ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ಸೇರಿದಂತೆ ಅನೇಕ ಮೊಬೈಲ್‌ಗಳು 5G ಮಾದರಿಯಲ್ಲಿ ಬಿಡುಗಡೆಯಾಗಿವೆ. ಇನ್ನು 5G ಸ್ಮಾರ್ಟ್‌ಫೋನ್‌ಗಳನ್ನು ಹೈ ಎಂಡ್‌ ಪ್ರೈಸ್‌ಟ್ಯಾಗ್‌ನಲ್ಲಿ ಮಾತ್ರವಲ್ಲದೆ ಬಜೆಟ್‌ ಬೆಲೆಯಲ್ಲಿಯೂ ಕೂಡ ಖರೀದಿಸಬಹುದಾಗಿದೆ. ಆದರೆ 5G ಸ್ಮಾರ್ಟ್‌ಫೊನ್‌ಗಳನ್ನು ಖರೀದಿಸಬೇಕಾದರೆ ನೀವು ಕೆಲವು ಅಂಶಗಳನ್ನು ಪರಿಗಣಿಸುವುದು ಸೂಕ್ತವಾಗಲಿದೆ.

5G

ಹೌದು, ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ ಆಯ್ಕೆಗಳಿಗೆ ಕೊರತೆಯಿಲ್ಲ. ಆದರೆ ಸ್ಮಾರ್ಟ್‌ಫೋನ್‌ಗಳನ್ನು ಆಯ್ಕೆ ಮಾಡುವಾಗ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಮತ್ತು ಪ್ರೊಸೆಸರ್‌ ಸಾಮರ್ಥ್ಯ ಪ್ರಮುಖವಾಗಲಿದೆ. 5G ಫೋನ್‌ ಎಂದ ಮಾತ್ರಕ್ಕೆ ಎಲ್ಲಾ ಫೋನ್‌ಗಳು ಸೂಕ್ತವಾಗಿರುವುದಿಲ್ಲ. ಆದರಿಂದ 5G ಸ್ಮಾರ್ಟ್‌ಫೋನ್‌ಗಳನ್ನು ಆಯ್ಕೆ ಮಾಡುವಾಗ ನೀವು ನೀಡುವ ಹಣಕ್ಕೆ ಸೂಕ್ತವಾದ ಸ್ಮಾರ್ಟ್‌ಫೋನ್‌ಗಳನ್ನು ಆಯ್ಕೆ ಮಾಡಬೇಕಾಗುತ್ತದೆ. ಒಂದು ವೇಳೆ ನೀವು 25,000ರೂ. ಒಳಗಿನ ಬೆಲೆಯಲ್ಲಿ ಅತ್ಯುತ್ತಮ 5G ಫೋನ್ ಖರೀದಿಸಲು ಬಯಸಿದರೆ ನಿಮಗೆ ಲಭ್ಯವಾಗುವ ಆಯ್ಕೆಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M32 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ M32 5G ಸ್ಮಾರ್ಟ್‌ಫೋನ್‌ 6.5-ಇಂಚಿನ HD+ TFT ಇನ್ಫಿನಿಟಿ-ವಿ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 720 SoC ಪ್ರೊಸೆಸರ್‌ ಬಲವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದೆ. ಇದು 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ 20,999ರೂ.ಬೆಲೆಯಲ್ಲಿ ಲಭ್ಯವಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M33 5G

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ 5nm ಎಕ್ಸಿನೋಸ್‌ ಪ್ರೊಸೆಸರ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದಲ್ಲದೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ನಿಮಗೆ 18,499ರೂ. ಬೆಲೆಯಲ್ಲಿ ಲಭ್ಯವಾಗಲಿದೆ.

ಶಿಯೋಮಿ 11 ಲೈಟ್‌ NE 5G

ಶಿಯೋಮಿ 11 ಲೈಟ್‌ NE 5G

ಶಿಯೋಮಿ ಮಿ 11 ಲೈಟ್ 5G NE ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ + OLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 780G SoC ಪ್ರೊಸೆಸರ್‌ ಸಾಮರ್ಥ್ಯವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 20 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ ಈ ಫೋನ್ 33W ಫಾಸ್ಟ್‌ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್‌ 23,999ರೂ.ಬೆಲೆಯಲ್ಲಿ ಲಭ್ಯವಿದೆ.

ಒನ್‌ಪ್ಲಸ್‌ ನಾರ್ಡ್‌ CE 2 5G

ಒನ್‌ಪ್ಲಸ್‌ ನಾರ್ಡ್‌ CE 2 5G

ಒನ್‌ಪ್ಲಸ್‌ ನಾರ್ಡ್‌ CE 2 5G ಸ್ಮಾರ್ಟ್‌ಫೋನ್‌ ಪ್ರಸ್ತುತ ಅಮೆಜಾನ್‌ ಪ್ಲಾಟ್‌ಫಾರ್ಮ್‌ನಲ್ಲಿ ಕೇವಲ 24,999ರೂ. ಬೆಲೆಯಲ್ಲಿ ಲಭ್ಯವಿದೆ. ಮಿಡ್‌ ರೇಂಜ್‌ ಪ್ರೈಸ್‌ ಟ್ಯಾಗ್‌ನಲ್ಲಿ 5G ಫೋನ್‌ ಬಯಸೋರಿಗೆ ಇದು ಸೂಕ್ತವಾಗಿದೆ. ಈ ಫೋನ್‌ 6.43 ಇಂಚಿನ ಫುಲ್ ಹೆಚ್‌ಡಿ+ ಫ್ಲೂಯಿಡ್ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ.

Best Mobiles in India

English summary
Here's Best 5G phones under Rs 25000 in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X