ಮಧ್ಯಮ ಶ್ರೇಣಿ ಬೆಲೆಯಲ್ಲಿ ಖರೀದಿಸಬಹುದಾದ 5G ಸ್ಮಾರ್ಟ್‌ಫೋನ್‌ಗಳು!

|

ಪ್ರಸ್ತುತ ದಿನಗಳಲ್ಲಿ ಭಾರತದ ಮೊಬೈಲ್‌ ಮಾರುಕಟ್ಟೆಯಲ್ಲಿ 5G ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ 5G ನೆಟ್‌ವರ್ಕ್‌ ಶುರುವಾಗುವುದರಿಂದ ಹೆಚ್ಚಿನ ಜನರು ಭವಿಷ್ಯದ ದೃಷ್ಟಿಯಿಂದ 5G ಮೊಬೈಲ್‌ ಖರೀದಿಸಲು ಇಷ್ಟ ಪಡುತ್ತಿದ್ದಾರೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ಕಂಪೆನಿಗಳು ಕೂಡ ಭಾರತದಲ್ಲಿ ನವೀನ ಮಾದರಿಯ 5G ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿವೆ. ಇವುಗಳಲ್ಲಿ ಮಧ್ಯಮ ಶ್ರೇಣಿಯ ಬೆಲೆಯ ಜೊತೆಗೆ ಹೈ ಎಂಡ್‌ ಪ್ರೈಸ್‌ಟ್ಯಾಗ್‌ ಸ್ಮಾರ್ಟ್‌ಫೋನ್‌ಗಳು ಸೇರಿವೆ.

ಸ್ಮಾರ್ಟ್‌ಫೋನ್‌

ಹೌದು, ಮಾರುಕಟ್ಟೆಯಲ್ಲಿ 5G ಸ್ಮಾರ್ಟ್‌ಫೋನ್‌ಗಳು ಹೆಚ್ಚು ಪ್ರಸಿದ್ಧಿಯನ್ನು ಪಡೆದುಕೊಳ್ಳುತ್ತಿವೆ. ಪ್ರತಿಷ್ಠಿತ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ಪರಿಚಯಿಸಿರುವ 5G ಫೋನ್‌ಗಳು ಎಲ್ಲರ ಗಮನ ಸೆಳೆಯುತ್ತಿವೆ. ಅದರಲ್ಲೂ ಪೊಕೊ, ರಿಯಲ್‌ಮಿ, ಸ್ಯಾಮ್‌ಸಂಗ್‌, ವಿವೋ, ಐಕ್ಯೂ ಸಂಸ್ಥೆಯ 5G ಫೋನ್‌ಗಳು ಸಖತ್‌ ಸೌಂಡ್‌ ಮಾಡುತ್ತಿವೆ. ಅದರಂತೆ ಆಗಸ್ಟ್‌ ತಿಂಗಳಿನಲ್ಲಿಯೂ ಸಾಕಷ್ಟು 5G ಸ್ಮಾರ್ಟ್‌ಫೋನ್‌ಗಳು ಸಂಚಲನ ಸೃಷ್ಟಿಸಿವೆ. ಹಾಗಾದ್ರೆ ಭಾರತದಲ್ಲಿ ಪ್ರಸ್ತುತ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಖರೀದಿಸಬಹುದಾದ 5G ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ F4 5G

ಪೊಕೊ F4 5G

ಈ ತಿಂಗಳಿನಲ್ಲಿ ನೀವು ಖರೀದಿಸಬಹುದಾದ 5G ಸ್ಮಾರ್ಟ್‌ಫೋನ್‌ಗಳಲ್ಲಿ ಪೊಕೊ F4 5G ಕೂಡ ಒಂದಾಗಿದೆ. ಈ ಫೋನ್‌ ನಿಮಗೆ ಕೇವಲ 29,999ರೂ. ಬೆಲೆಯಲ್ಲಿ ಲಭ್ಯವಾಗಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.67 ಇಂಚಿನ ಫುಲ್‌ HD+ E4 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 870 SoC ಪ್ರೊಸೆಸರ್‌ ಅನ್ನು ಹೊಂದಿದೆ. ಇದು ಆಂಡ್ರಾಯ್ಡ್ 12 ಬೆಂಬಲದೊಂದಿಗೆ MIUI 13 ನಲ್ಲಿ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 67W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಮೊಟೊರೊಲಾ ಎಡ್ಜ್‌ 30

ಮೊಟೊರೊಲಾ ಎಡ್ಜ್‌ 30

ನೀವು ಆಯ್ಕೆ ಮಾಡಬಹುದಾದ 5G ಸ್ಮಾರ್ಟ್‌ಫೋನ್‌ಗಳಲ್ಲಿ ಮೊಟೊರೊಲಾ ಎಡ್ಜ್‌ 30 ಸ್ಮಾರ್ಟ್‌ಫೋನ್‌ ಕೂಡ ಒಂದು. ಈ ಸ್ಮಾರ್ಟ್‌ಫೋನ್‌ 6.7-ಇಂಚಿನ FHD+ ಪೋಲ್ಡ್ 10-ಬಿಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 144Hz ರಿಫ್ರೆಶ್ ರೇಟ್‌ಅನ್ನು ಬೆಂಬಲಿಸಲಿದೆ. ಇದು ಸ್ನಾಪ್‌ಡ್ರಾಗನ್ 778G+ SoC ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ 12 OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4,020mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಬೆಲೆ 29,999 ರೂ.ಆಗಿದೆ.

ವಿವೋ V23

ವಿವೋ V23

ವಿವೋ V23 ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ಟ್ಯಾಗ್‌ನಲ್ಲಿ ಬರುವ ಮತ್ತೊಂದು 5G ಸ್ಮಾರ್ಟ್‌ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 29,990ರೂ. ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ 6.44 ಇಂಚಿನ ಫುಲ್‌ HD+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 920SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌ f/1.89 ಲೆನ್ಸ್‌ ಹೊಂದಿದೆ. ಜೊತೆಗೆ 4,200mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ.

ಐಕ್ಯೂ ನಿಯೋ 6 5G

ಐಕ್ಯೂ ನಿಯೋ 6 5G

ನೀವು ಗೇಮಿಂಗ್ ಕೇಂದ್ರಿತ 5G ಸ್ಮಾರ್ಟ್‌ಫೋನ್‌ ಬಯಸಿದರೆ ಐಕ್ಯೂ ನಿಯೋ 6 5G ಉತ್ತಮ ಆಯ್ಕೆಯಾಗಲಿದೆ. ಈ ಸ್ಮಾರ್ಟ್‌ಫೋನ್‌ 6.62-ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ E4 ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್ 870 SoC ಪ್ರೊಸೆಸರ್‌ ಸಾಮರ್ಥ್ಯವನ್ನ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೋಸೆಲ್‌ GW1P ಸೆನ್ಸಾರ್‌ ಅನ್ನು ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ಫ್ಲ್ಯಾಶ್‌ ಚಾರ್ಜ್‌ ಅನ್ನು ಬೆಂಬಲಿಸಲಿದೆ. ಭಾರತದಲ್ಲಿ ಇದರ ಬೆಲೆ 29,999ರೂ. ಆಗಿದೆ.

ಒನ್‌ಪ್ಲಸ್‌ ನಾರ್ಡ್‌ 2T 5G

ಒನ್‌ಪ್ಲಸ್‌ ನಾರ್ಡ್‌ 2T 5G

ಒನ್‌ಪ್ಲಸ್‌ ನಾರ್ಡ್‌ 2T 5G ಸ್ಮಾರ್ಟ್‌ಫೋನ್‌ ಭಾರತದಲ್ಲಿ 28,999ರೂ. ಬೆಲೆಗೆ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ 90Hz ರಿಫ್ರೆಶ್‌ ರೇಟ್‌ ಬೆಂಬಲಿಸುವ 6.43 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಇದು ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 5 ಪ್ರೊಟೆಕ್ಷನ್‌ ಅನ್ನು ಒಳಗೊಂಡಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 1300 SoC ಪ್ರೊಸೆಸರ್‌ ಅನ್ನು ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ಯಾಮೆರಾ ಬಳಸಿ 30fps ನಲ್ಲಿ 4K ವೀಡಿಯೊ ರೆಕಾರ್ಡಿಂಗ್ ಮಾಡಬಹುದಾಗಿದೆ. ಹಾಗೆಯೇ 960fps ವರೆಗಿನ ಸೂಪರ್ ಸ್ಲೋ ಮೋಷನ್ ವೀಡಿಯೊ ಫೀಚರ್ಸ್‌ ಅನ್ನು ಕೂಡ ನೀಡಲಾಗಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 80W ವೇಗದ ಚಾರ್ಜಿಂಗ್‌ ಬೆಂಬಲಿಸಲಿದೆ.

Best Mobiles in India

English summary
5G rollout in India is gaining momentum, and finally, we have an idea about the supported bands on smartphones.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X