ಭಾರತದಲ್ಲಿ 25,000ರೂ,ಒಳಗೆ ಲಭ್ಯವಾಗುವ ಟಾಪ್ 5G ಸ್ಮಾರ್ಟ್‌ಫೋನ್‌ಗಳು!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ 5G ಸ್ಮಾರ್ಟ್‌ಫೋನ್‌ಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಮುಂದಿನ ದಿನಗಳಲ್ಲಿ 5G ನೆಟ್‌ವರ್ಕ್ ಲಭ್ಯವಾಗಲಿದೆ ಎಂಬ ಕಾರಣಕ್ಕೆ ಹೆಚ್ಚಿನ ಜನರು 5G ಸ್ಮಾರ್ಟ್‌ಫೋನ್‌ಗಳ ಖರೀದಿಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಇದರಿಂದ ಜನಪ್ರಿಯ ಕಂಪೆನಿಗಳು ಕೂಡ ಅನೇಕ 5G ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಗೆ ಪರಿಚಯಿಸಿವೆ. ಇನ್ನು ಮಾರುಕಟ್ಟೆಯಲ್ಲಿ ಲಭ್ಯವಿರುವ 5G ಸ್ಮಾರ್ಟ್‌ಫೋನ್‌ಗಳು ದುಬಾರಿ ಬೆಲೆಗೆ ಮಾತ್ರವಲ್ಲ ಬಜೆಟ್ ಬೆಲೆಯಲ್ಲೂ ಸಹ ಲಭ್ಯವಾಗಲಿವೆ.

ಹೌದು, ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳಿಗೆ ಬೇಡಿಕೆ ಹೆಚ್ಚಾಗಿದೆ. 5G ಸ್ಮಾರ್ಟ್‌ಫೋನ್ ಉತ್ತಮ ಡಿಸ್‌ಪ್ಲೇ ವಿನ್ಯಾಸದ ಜೊತೆಗೆ ಆಕರ್ಷಕ ಕ್ಯಾಮೆರಾ ಫೀಚರ್ಸ್‌ಗಳ ಕಾರಣಕ್ಕೂ ಹೆಚ್ಚು ಗಮನ ಸೆಳೆದಿದೆ. ಸದ್ಯ ಭಾರತದಲ್ಲಿ ಹಲವು ಬೆಲೆಗಳ ಆಯ್ಕೆಯಲ್ಲಿ 5G ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಇನ್ನು ನೀವು 25,000ರೂ.ಗಳಿಗಿಂತ ಕಡಿಮೆ ಬೆಲೆಯಲ್ಲಿ 5G ಸ್ಮಾರ್ಟ್‌ಫೋನ್ ಖರೀದಿಸುವುದಕ್ಕೂ ಅವಕಾಶವಿದೆ. ಹಾಗಾದ್ರೆ ಭಾರತದ ಮಾರುಕಟ್ಟೆಯಲ್ಲಿ 25,000ರೂ. ಗಿಂತ ಕಡಿಮೆ ಬೆಲೆಗೆ ಲಭ್ಯವಾಗುವ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಐಕ್ಯೂ Z5
ಐಕ್ಯೂ Z5 ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.67-ಇಂಚಿನ ಫುಲ್ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಆಧಾರಿತ ಒರಿಜಿನ್ ಓಎಸ್ 1.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 12GB RAM ಮತ್ತು 256GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಐಕ್ಯೂ Z5 ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 44W ಫ್ಲ್ಯಾಶ್ ಚಾರ್ಜ್ ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಭಾರತದಲ್ಲಿ ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ಆಯ್ಕೆಗಾಗಿ 23,990ರೂ.ಬೆಲೆಯನ್ನು ಹೊಂದಿದೆ.

ಮೊಟೊರೊಲಾ ಎಡ್ಜ್ 20 ಫ್ಯೂಷನ್
ಮೊಟೊರೊಲಾ ಎಡ್ಜ್ 20 ಫ್ಯೂಷನ್ ಸ್ಮಾರ್ಟ್‌ಫೋನ್ 6.7-ಇಂಚಿನ ಫುಲ್ ಹೆಚ್‌ಡಿ+ ಮ್ಯಾಕ್ಸ್ ವಿಷನ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 800U 5G SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಇದೆ, ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊಪವರ್ 30 ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಮೊಟೊರೊಲಾ ಎಡ್ಜ್ 20 ಫ್ಯೂಷನ್ ಬೆಲೆ 6GB + 128GB ಸ್ಟೋರೇಜ್ ರೂಪಾಂತರಕ್ಕೆ 21,499ರೂ, ಮತ್ತು 8GB + 128GB ಸ್ಟೋರೇಜ್ ಆಯ್ಕೆಗೆ 22,999.ರೂ ಆಗಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್-ಎಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಒಂದು UI 3.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಈ ಸ್ಮಾರ್ಟ್‌ಫೋನ್ 5,000mAh ಬ್ಯಾಟರಿಯನ್ನು ಒಳಗೊಂಡಿದ್ದು 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ ಬೆಲೆ 25,999ರೂ.ಗಳಿಂದ ಪ್ರಾರಂಭವಾಗಲಿದೆ.

ಶಿಯೋಮಿ Mi 10i
ಶಿಯೋಮಿ ಮಿ 10i ಸ್ಮಾರ್ಟ್‌ಫೋನ್ 6.67 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 750G ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಹೊಂದಿದ್ದು, ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಒಳಗೊಂಡಿದೆ. ಜೊತೆಗೆ 5820mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಶಿಯೋಮಿ ಮಿ10i ಸ್ಮಾರ್ಟ್‌ಫೋನ್ 6GB RAM+64GB 20,999ರೂ.ಗಳು ಆಗಿದೆ. 6GB RAM+128GB ಬೆಲೆಯು 21,999ರೂ. ಮತ್ತು 8GB RAM+128GB ವೇರಿಯಂಟ್ ದರದವು 23,999ರೂ.ಗಳು ಆಗಿದೆ.

ರಿಯಲ್‌ಮಿ GT ಮಾಸ್ಟರ್ ಎಡಿಷನ್
ರಿಯಲ್‌ಮಿ GT ಮಾಸ್ಟರ್ ಎಡಿಷನ್ 6.43-ಇಂಚಿನ ಪೂರ್ಣ ಹೆಚ್‌ಡಿ + ಸೂಪರ್ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಈ ಫೋನ್ ಕ್ವಾಲ್ಕಾಮ್ ಸ್ನಾಪ್ಡ್ರಾಗನ್ 778 SoC ನಿಂದ ನಿಯಂತ್ರಿಸಲ್ಪಡುತ್ತದೆ. ಆಂಡ್ರಾಯ್ಡ್ 11 ಅನ್ನು ರಿಯಲ್‌ಮಿ ಯುಐ 2.0 ನೊಂದಿಗೆ ಚಾಲನೆ ಮಾಡುತ್ತದೆ. ಹಾಗೆಯೇ 8GB ವರೆಗೆ RAM ಮತ್ತು 256GB ವರೆಗೆ ಸಂಗ್ರಹವನ್ನು ಹೊಂದಿದೆ. ಈ ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾವು 64 ಮೆಗಾ ಪಿಕ್ಸೆಲ್ ಪ್ರೈಮರಿ ಸೆನ್ಸಾರ್ ಹೊಂದಿದೆ. ಇದು 4,300mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 25,999ರೂ.ಆಗಿದೆ.


Click it and Unblock the Notifications








