ಭಾರತದಲ್ಲಿ 5G ಬೆಂಬಲಿಸುವ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳು!
ಇನ್ನೇನು ಕೆಲವೇ ದಿನಗಳಲ್ಲಿ ಭಾರತದಲ್ಲಿ 5G ನೆಟ್‌ವರ್ಕ್ ಲಭ್ಯವಾಗಲಿದೆ. ಆದರಿಂದ 5G ನೆಟ್‌ವರ್ಕ್ ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳಿಗೆ ಭಾರಿ ಬೇಡಿಕೆ ಸೃಷ್ಟಿಯಾಗುವ ಸಾಧ್ಯತೆಯಿದೆ. ಈಗಾಗಲೇ ಭಾರತದಲ್ಲಿ 5G ಸ್ಮಾರ್ಟ್‌ಫೋನ್‌ಗಳು ಸಾಕಷ್ಟು ಸದ್ದು ಮಾಡುತ್ತಿವೆ. ಭಾರತದಲ್ಲಿ 5G ನೆಟ್‌ವರ್ಕ್ ಶುರುವಾಗುವ ಮುನ್ನವೇ ಸ್ಮಾರ್ಟ್‌ಫೋನ್ ಕಂಪೆನಿಗಳು ತಮ್ಮ 5G ಸ್ಮಾರ್ಟ್‌ಫೋನ್‌ಗಳನ್ನು ಮಾರುಕಟ್ಟೆಯಲ್ಲಿ ಪರಿಚಯಿಸಿವೆ. ಇದರಿಂದ 5G ಸ್ಮಾರ್ಟ್‌ಫೋನ್‌ಗಳು ಇನ್ನಷ್ಟು ಜನಪ್ರಿಯತೆ ಪಡೆದುಕೊಳ್ಳುವುದು ಪಕ್ಕಾ ಆಗಿದೆ.

ಹೌದು, ಭಾರತದಲ್ಲಿ ಕಳೆದ ಎರಡು ವರ್ಷಗಳಿಂದಲೂ 5G ಸ್ಮಾರ್ಟ್‌ಫೋನ್‌ಗಳು ಬಿಡುಗಡೆಯಾಗುತ್ತಲೇ ಇವೆ. ಆದರೆ 5G ನೆಟ್‌ವರ್ಕ್ ಪ್ರಾರಂಭವಾಗಿರಲಿಲ್ಲ. ಆದರೆ ಇದೇ ತಿಂಗಳು ಏರ್‌ಟೆಲ್ ಟೆಲಿಕಾಂ ಭಾರತದಲ್ಲಿ 5G ಸೇವೆ ನೀಡುವುದಾಗಿ ಘೊಷಣೆ ಮಾಡಿದೆ. ಇನ್ನು ಟೆಲಿಕಾಂ ದೈತ್ಯ ಜಿಯೋ ಆಗಸ್ಟ್ 15 ರಂದು ಪ್ರಕಟಣೆಯನ್ನು ಮಾಡುವ ನಿರೀಕ್ಷೆಯಿದೆ. ಇದರಿಂದ ಎಲ್ಲರಿಗೂ 5G ನೆಟ್‌ವರ್ಕ್ ಲಭ್ಯವಾಗಲಿದೆ. ಆದರೆ 5G ನೆಟ್‌ವರ್ಕ್ ಬಳಸಬೇಕಾದರೆ 5G ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳ ಅವಶ್ಯಕತೆಯಿದೆ.

ಇನ್ನು ನೀವು 5G ನೆಟ್‌ವರ್ಕ್ ಸೇವೆ ಪಡೆದುಕೊಳ್ಳುವುದಕ್ಕೆ ನಿಮ್ಮ ಸ್ಮಾರ್ಟ್‌ಫೋನ್ ಅನ್ನು 5Gಗೆ ಅಪ್‌ಗ್ರೇಡ್ ಮಾಡಬೇಕಾಗುತ್ತದೆ. ಆದರಿಂದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ 5G ಫೋನ್‌ಗಳು ಹೆಚ್ಚಿನ ಪ್ರಾಬಲ್ಯ ಸಾಧಿಸುವ ಲಕ್ಷಣ ಕಾಣಿಸುತ್ತಿದೆ. ಹಾಗಂತ 5G ಸ್ಮಾರ್ಟ್‌ಫೋನ್‌ಗಳು ಹೈ ಎಂಡ್ ಬೆಲೆಯಲ್ಲಿಮಾತ್ರ ಲಭ್ಯವಾಗುತ್ತದೆ ಎಂದು ಹೆದರುವ ಅವರ್ಶಯಕತೆಯಿಲ್ಲ. ಏಕೆಂದರೆ 5G ಸ್ಮಾರ್ಟ್‌ಫೋನ್‌ಗಳು ಮಧ್ಯಮ ಶ್ರೇಣಿ ಹಾಗೂ ಬಜೆಟ್ ಬೆಲೆಯಲ್ಲಿಯೂ ಕೂಡ ಲಭ್ಯವಾಗುತ್ತಿವೆ. ಹಾಗಾದ್ರೆ ಭಾರತದಲ್ಲಿ ಕೇವಲ 25,000 ರೂ.ಗಳಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ 5G ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ವಿವೋ T1 5G
ವಿವೋ T1 5G ಸ್ಮಾರ್ಟ್‌ಫೋನ್ 6.58 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಸ್ನಾಪ್‌ಡ್ರಾಗನ್ 695 5G SoC ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ ಫನ್ ಟಚ್ OS 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಎರಡು 5G ಬ್ಯಾಂಡ್‌ಗಳೊಂದಿಗೆ ಬರುತ್ತದೆ.

ಐಕ್ಯೂ Z6 ಪ್ರೊ 5G
ಐಕ್ಯೂ Z6 ಪ್ರೊ 5G ಸ್ಮಾರ್ಟ್‌ಫೋನ್ ಅತ್ಯಂತ ಕೈಗೆಟುಕುವ 5G ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ 6.44 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಸ್ನಾಪ್‌ಡ್ರಾಗನ್ 778G SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಕೂಡ ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 4,700mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 66W ಫ್ಲ್ಯಾಶ್‌ಚಾರ್ಜ್ ಬೆಂಬಲಿಸಲಿದೆ. ಇದರ ಬೆಲೆ 24,999 ರೂ.ಆಗಿದೆ. ಈ ಸ್ಮಾರ್ಟ್‌ಫೋನ್ ಏಳು 5G ಬ್ಯಾಂಡ್‌ಗಳನ್ನು ಹೊಂದಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M53 5G ಸ್ಮಾರ್ಟ್‌ಫೋನ್ 120Hz ರಿಫ್ರೆಶ್ ರೇಟ್ ಹೊಂದಿರುವ 6.7 ಇಂಚಿನ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಹೊಂದಿದೆ. ಇದು ಆಂಡ್ರಾಯ್ಡ್ 12 ಆಧಾರಿತ One UI 4.1 ನಲ್ಲಿ ಕಾರ್ಯನಿರ್ವಹಿಸುತ್ತದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 25W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನಿನ 6GB RAM ಮತ್ತು 128GB ಸ್ಟೋರೇಜ್ ಸಾಮರ್ಥ್ಯದ ಆಯ್ಕೆಯ ಬೆಲೆ 24,999ರೂ. ಬೆಲೆಯಲ್ಲಿ ದೊರೆಯಲಿದೆ. ಇದು 12 5G ಬ್ಯಾಂಡ್‌ಗಳನ್ನು ಬೆಂಬಲಿಸುತ್ತದೆ.

ಒನ್‌ಪ್ಲಸ್ ನಾರ್ಡ್ CE 2 5G
ಒನ್‌ಪ್ಲಸ್ ನಾರ್ಡ್ CE 2 5G ಸ್ಮಾರ್ಟ್‌ಫೋನಿನ 8GB ಮತ್ತು 128GB ರೂಪಾಂತರವನ್ನು 24,999ರೂ.ಬೆಲೆಯಲ್ಲಿ ಖರೀದಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ 6.43 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆಕ್ಟಾ ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 900 SoC ಪ್ರೊಸೆಸರ್ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್ 11 ನಲ್ಲಿ ಕಂಪನಿಯ OxygenOS 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಜೊತೆಗೆ 4500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನ್ ಐದು 5G ಬ್ಯಾಂಡ್‌ಗಳನ್ನು ಸಹ ಬೆಂಬಲಿಸುತ್ತದೆ.

ರಿಯಲ್‌ಮಿ 9ಪ್ರೊ + 5G
ರಿಯಲ್‌ಮಿ 9 ಪ್ರೊ+ 5G ಸ್ಮಾರ್ಟ್‌ಫೋನ್ 6.4 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಡೈಮೆನ್ಸಿಟಿ 920 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಆಧಾರಿತ ರಿಯಲ್‌ಮಿ UI 3.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನಿನ 6GB ಮತ್ತು 128GB ರೂಪಾಂತರದ ಆಯ್ಕೆಯು realme.comನಲ್ಲಿ 24,999ರೂ.ಬೆಲೆಗೆ ದೊರೆಯಲಿದೆ. ಇದು ನಾಲ್ಕು 5G ಬ್ಯಾಂಡ್‌ಗಳನ್ನು ಬೆಂಬಲಿಸುತ್ತದೆ.

ಶಿಯೋಮಿ 11 ಲೈಟ್ NE 5G
ಶಿಯೋಮಿ 11 ಲೈಟ್ NE 5G ಸ್ಮಾರ್ಟ್‌ಫೋನ್ ನೀವು ಖರೀದಿಸಬಹುದಾದ ಅತ್ಯುತಮ 5G ಸ್ಮಾರ್ಟ್‌ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನಿನ 6GB ಮತ್ತು 128GB ರೂಪಾಂತರದ ಆಯ್ಕೆಯು 24,999ರೂ.ಬೆಲೆಯಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್ 6.55 ಇಂಚಿನ 10 ಬಿಟ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಸ್ನಾಪ್‌ಡ್ರಾಗನ್ 778G ಪ್ರೊಸೆಸರ್ ಅನ್ನು ಒಳಗೊಂಡಿದೆ. ಜೊತೆಗೆ 4250mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ 12 5G ಬ್ಯಾಂಡ್‌ಗಳೊಂದಿಗೆ ಬರುತ್ತದೆ.


Click it and Unblock the Notifications








