ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ ಟ್ಯಾಬ್ಲೆಟ್‌ಗಳು!

|

ಟೆಕ್‌ ವಲಯದಲ್ಲಿ ಸ್ಮಾರ್ಟ್‌ಟ್ಯಾಬ್ಲೆಟ್‌ಗಳು ಕೂಡ ಜನಪ್ರಿಯತೆಯನ್ನು ಪಡೆದುಕೊಂಡಿವೆ. ಆನ್‌ಲೈನ್‌ ಕ್ಲಾಸ್‌ಗಳು ಶುರುವಾದ ನಂತರ ಹೆಚ್ಚಿನ ಪ್ರಮಾಣದಲ್ಲಿ ಸ್ಮಾರ್ಟ್‌ಟ್ಯಾಬ್ಲೆಟ್‌ಗಳು ಪ್ರಸಿದ್ಧಿಯನ್ನು ಪಡೆದುಕೊಂಡಿವೆ. ಸ್ಮಾರ್ಟ್‌ಫೋನ್‌ಗಳ ಗಾತ್ರ ಹೆಚ್ಚಾದಂತೆ ಟ್ಯಾಬ್ಲೆಟ್‌ಗಳು ಮೂಲೆಗುಂಪಾದರೂ ಕೆಲವು ಕೆಲಸಗಳಿಗೆ ಟ್ಯಾಬ್ಲೆಟ್‌ಗಳು ಅನಿವಾರ್ಯವಾಗಿವೆ. ಸ್ಮಾರ್ಟ್‌ ಟ್ಯಾಬ್ಲೆಟ್‌ಗಳು ಶೈಕ್ಷಣಿಕ ವಿಚಾರಕ್ಕೆ ಹೆಚ್ಚು ಜನಪ್ರಿಯತೆ ಪಡೆದಿವೆ. ಅಷ್ಟೇ ಅಲ್ಲ ಗೇಮರ್‌ಗಳು ಕೂಡ ಟ್ಯಾಬ್ಲೆಟ್‌ಗಳನ್ನು ಖರೀದಿಸುವುದಕ್ಕೆ ಬಯಸುತ್ತಾರೆ.

ಟ್ಯಾಬ್ಲೆಟ್‌

ಹೌದು, ಸ್ಮಾರ್ಟ್‌ಟ್ಯಾಬ್ಲೆಟ್‌ಗಳು ಹೆಚ್ಚಿನ ಡಿಸ್‌ಪ್ಲೇ ಗಾತ್ರ ಹೊಂದಿರುವುದರಿಂದ ಅನೇಕ ವಲಯಗಳಲ್ಲಿ ಅವಶ್ಯಕವಾಗಿದೆ. ಇದೇ ಕಾರಣಕ್ಕೆ ಸ್ಮಾರ್ಟ್‌ ಟ್ಯಾಬ್ಲೆಟ್‌ಗಳು ಇಂದಿಗೂ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿವೆ. ಇನ್ನು ಮಾರುಟ್ಟೆಯಲ್ಲಿ ಹಲವು ಕಂಪೆನಿಗಳು ತಮ್ಮದೇ ಆದ ವೈವಿಧ್ಯಮಯ ಟ್ಯಾಬ್ಲೆಟ್‌ಗಳನ್ನು ಪರಿಚಯಿಸಿವೆ. ಇದರಲ್ಲಿ ದುಬಾರಿ ಬೆಲೆಯಿಂದ ಹಿಡಿದು ಅಗ್ಗದ ಬೆಲೆಯ ಟ್ಯಾಬ್ಲೆಟ್‌ಗಳು ಕೂಡ ಸೇರಿವೆ. ಹಾಗಾದ್ರೆ ಮಾರುಕಟ್ಟೆಯಲ್ಲಿ ನೀವು 20,000ರೂ. ಒಳಗೆ ಖರೀದಿಸಬಹುದಾದ ಟ್ಯಾಬ್ಲೆಟ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ನೋಕಿಯಾ T20 ಟ್ಯಾಬ್ಲೆಟ್‌

ನೋಕಿಯಾ T20 ಟ್ಯಾಬ್ಲೆಟ್‌

ನೋಕಿಯಾ T20 ಟ್ಯಾಬ್ಲೆಟ್‌ 2,000x1,200 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 10.4-ಇಂಚಿನ 2K ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಟ್ಯಾಬ್ಲೆಟ್ ಆಕ್ಟಾ-ಕೋರ್ Unisoc T610 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಬೆಂಬಲದೊಂದಿಗೆ 512GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಟ್ಯಾಬ್ಲೆಟ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ರಿಯರ್‌ ಕ್ಯಾಮೆರಾ ಹೊಂದಿದೆ. ಹಾಗೆಯೇ 5ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಈ ಟ್ಯಾಬ್ಲೆಟ್ OZO ಪ್ಲೇಬ್ಯಾಕ್ ಮತ್ತು ಸ್ಟಿರಿಯೊ ಸ್ಪೀಕರ್‌ಗಳನ್ನು ಹೊಂದಿದೆ. ಜೊತೆಗೆ 8,200mAh ಬ್ಯಾಟರಿ ಹೊಂದಿದ್ದು, 15W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇದರ ವೈಫೈ ಒನ್ಲಿ ರೂಪಾಂತರಕ್ಕೆ 15,499ರೂ.ಬೆಲೆಗೆ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ A7

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್‌ A7

ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಟ್ಯಾಬ್ A7 10.4-ಇಂಚಿನ WUXGA + TFT ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇಯು IPS LCD ಕ್ಯಾಪಸಿಟಿವ್‌ ಟಚ್‌ಸ್ಕ್ರೀನ್‌ ಅನ್ನು ಹೊಂದಿದ್ದು, 16M ಕಲರ್ಸ್‌ ಅನ್ನು ಬೆಂಬಲಿಸಲಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 662 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 10 ಆಧಾರಿತ ಒನ್ ಯುಐ 2.5 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಇದು 3GB RAM ಮತ್ತು 32GB ಆನ್‌ಬೋರ್ಡ್ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಜೊತೆಗೆ ಮೈಕ್ರೊ ಎಸ್‌ಡಿ ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ. ಈ ಟ್ಯಾಬ್‌ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಟ್ಯಾಬ್‌ 7,040mAh ಬ್ಯಾಟರಿ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಗ್ಯಾಲಕ್ಸಿ ಟ್ಯಾಬ್‌ A7 ವೈ-ಫೈ ಮಾದರಿಯ ಬೆಲೆ 17,999 ರೂ.ಆಗಿದೆ.

ರಿಯಲ್‌ಮಿ ಪ್ಯಾಡ್‌

ರಿಯಲ್‌ಮಿ ಪ್ಯಾಡ್‌

ರಿಯಲ್‌ಮಿ ಪ್ಯಾಡ್‌ ಡಿವೈಸ್‌ 10.4-ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಡಿಸ್‌ಪ್ಲೇಯು 2,000x1,200 ಪಿಕ್ಸೆಲ್‌ ರೆಸಲ್ಯೂಶನ್ ಸಾಮರ್ಥ್ಯ ಪಡೆದಿದೆ. ಇದು ನೈಟ್ ಮೋಡ್, ಡಾರ್ಕ್ ಮೋಡ್ ಮತ್ತು ಸನ್‌ಲೈಟ್ ಮೋಡ್ ಅನ್ನು ಬೆಂಬಲಿಸುತ್ತದೆ. ಈ ಟ್ಯಾಬ್ಲೆಟ್ 6.9 ಮಿಲಿಮೀಟರ್ ತೆಳುವಾಗಿದ್ದು ಅಲ್ಯೂಮಿನಿಯಂ ರಚನೆಯನ್ನು ಹೊಂದಿದ್ದು, 82.5 ಶೇಕಡಾ ಸ್ಕ್ರೀನ್-ಟು-ಬಾಡಿ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಹೆಲಿಯೊ ಜಿ 80 SoC ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಟ್ಯಾಬ್ಲೆಟ್‌ 8 ಮೆಗಾ ಪಿಕ್ಸಲ್ ಸೆನ್ಸಾರ್‌ ಸಾಮರ್ಥ್ಯದ ಸಿಂಗಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದೆ. ಜೊತೆಗೆ 7,100mAh ಬ್ಯಾಟರಿ ಬ್ಯಾಕ್‌ಅಪ್‌ ಪಡೆದಿದೆ. ಒಂದೇ ಚಾರ್ಜ್‌ನಲ್ಲಿ 12 ಗಂಟೆಗಳ ವೀಡಿಯೊ ಪ್ಲೇಬ್ಯಾಕ್ ಅಥವಾ 65 ದಿನಗಳ ಸ್ಟ್ಯಾಂಡ್‌ಬೈ ಸಮಯವನ್ನು ತಲುಪಿಸಲು ರೇಟ್ ಮಾಡಲಾಗಿದೆ. ಇದು 18W ವೇಗದ ಚಾರ್ಜಿಂಗ್ ಮತ್ತು ರಿವರ್ಸ್ ಚಾರ್ಜಿಂಗ್ ಬೆಂಬಲವನ್ನು ಸಹ ಹೊಂದಿದೆ. ಇದರೊಂದಿಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ 4G (ಐಚ್ಛಿಕ), Wi-Fi 802.11ac, ಬ್ಲೂಟೂತ್ v5.0, GPS/ A-GPS, ಮತ್ತು USB ಟೈಪ್-ಸಿ ಪೋರ್ಟ್ ಸೇರಿವೆ. ಭಾರತದಲ್ಲಿ 19,900ರೂ ಬೆಲೆ ಹೊಂದಿದೆ.

ಲೆನೊವೊ ಟ್ಯಾಬ್‌ K10

ಲೆನೊವೊ ಟ್ಯಾಬ್‌ K10

ಲೆನೊವೊ ಕಂಪೆನಿ ಹೊಸ ಟ್ಯಾಬ್‌ K10 ಟ್ಯಾಬ್ಲೆಟ್‌ 1,920x1,200 ಪಿಕ್ಸೆಲ್‌ ರೆಸಲ್ಯೂಶನ್ ಹೊಂದಿರುವ 10.3 ಇಂಚಿನ ಫುಲ್‌ ಹೆಚ್‌ಡಿ TDDI ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇಯು 400 ನಿಟ್ಸ್‌ ಬ್ರೈಟ್ನೆಸ್‌ ಅನ್ನು ಪಡೆದಿದೆ. ಹಾಗೆಯೇ 70.3 ಪರ್ಸೆಂಟ್ NTSC ಕವರೇಜ್ ಪಡೆದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೊ P22T SOC ಪ್ರೊಸೆಸರ್‌ ಅನ್ನು ಒಳಗೊಂಡಿದ್ದು, ಆಂಡ್ರಾಯ್ಡ್‌ 11 ಓಎಸ್‌ ಸಪೋರ್ಟ್‌ ಅನ್ನು ಪಡೆದಿದೆ. ಇನ್ನು ಈ ಟ್ಯಾಬ್‌ 8 ಮೆಗಾಪಿಕ್ಸೆಲ್ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದರೊಂದಿಗೆ 5 ಮೆಗಾ ಪಿಕ್ಸೆಲ್ ಪ್ರಾಥಮಿಕ ಸೆನ್ಸಾರ್‌ನ ಸೆಲ್ಫಿ ಕ್ಯಾಮೆರಾ ಅನ್ನು ಹೊಂದಿದೆ. ಜೊತೆಗೆ 7,500mAh ಬ್ಯಾಟರಿ ಬ್ಯಾಕ್‌ಅಪ್‌ ಅನ್ನು ಪಡೆದಿದ್ದು, ಇದಕ್ಕೆ ಪೂರಕವಾಗಿ 10W ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಇನ್ನು ಈ ಟ್ಯಾಬ್‌ Wi-Fi + 4G LTE ಆವೃತ್ತಿ ಬೆಲೆಯು 16,999ರೂ. ಆಗಿದೆ.

TCL ಟ್ಯಾಬ್ 10s

TCL ಟ್ಯಾಬ್ 10s

TCL Tab 10s ಟ್ಯಾಬ್ಲೆಟ್‌ 10.1 ಇಂಚಿನ ಫುಲ್‌ HD+ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ MT8768 ಆಕ್ಟಾ-ಕೋರ್ SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಟ್ಯಾಬ್ಲೆಟ್‌ 8MP ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಜೊತೆಗೆ 8,000 mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ Wi-Fi, ಬ್ಲೂಟೂತ್ v5 ಮತ್ತು USB ಟೈಪ್-C ಪೋರ್ಟ್ ಬೆಂಬಲಿಸಲಿದೆ. ಇದು ವೈಫೈ ಒನ್ಲಿ ರೂಪಾಂತರಕ್ಕೆ 15,998ರೂ. ಬೆಲೆ ಹೊಂದಿದೆ.

Best Mobiles in India

Read more about:
English summary
best budget tablets you can buy in the market right now.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X