ಏರ್‌ಟೆಲ್‌ ಮತ್ತು ವಿ ಟೆಲಿಕಾಂನಲ್ಲಿ ವಾರ್ಷಿಕ ವ್ಯಾಲಿಡಿಟಿ ನೀಡುವ ಬೆಸ್ಟ್‌ ಪ್ಲಾನ್‌ಗಳು!

|

ಟೆಲಿಕಾಂ ಕಂಪೆನಿಗಳು ತಮ್ಮ ಗ್ರಾಹಕರಿಗೆ ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿವೆ. ಈ ಪ್ಲಾನ್‌ಗಳಲ್ಲಿ ಅಲ್ಪಾವಧಿಯ ಮಾನ್ಯತೆಯ ಜೊತೆಗೆ ದೀರ್ಘಾವಧಿಯ ಮಾನ್ಯತೆ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳು ಕೂಡ ಸೇರಿವೆ. ದೀರ್ಘಾವಧಿಯ ಮಾನ್ಯತೆ ಬಯಸುವ ಗ್ರಾಹಕರು ಎರಡು ತಿಂಗಳು, ಮೂರು ತಿಂಗಳ ಪ್ಯಾಕ್‌ಗಳು ಮಾತ್ರವಲ್ಲದೆ, ವಾರ್ಷಿಕ ಪ್ಲಾನ್‌ಗಳನ್ನು ಕೂಡ ಆಯ್ಕೆ ಮಾಡಬಹುದು. ವಾರ್ಷಿಕ ವ್ಯಾಲಿಡಿಟಿ ನೀಡುವ ಪ್ರಿಪೇಯ್ಡ್‌ ಪ್ಲಾನ್‌ಗಳು ಬಳಕೆದಾರರಿಗೆ ವರ್ಷಪೂರ್ತಿ ಅನಿಯಮಿತ ಕರೆ ಜೊತೆಗೆ ಅಧಿಕ ಡೇಟಾ ಪ್ರಯೋಜನಗಳನ್ನು ನೀಡುತ್ತವೆ.

ಪ್ರಿಪೇಯ್ಡ್‌

ಹೌದು, ದೀರ್ಘಾವಧಿಯ ಪ್ರಿಪೇಯ್ಡ್‌ ಪ್ಲಾನ್‌ಗಳಲ್ಲಿ ವಾರ್ಷಿಕ ವ್ಯಾಲಿಡಿಟಿಯ ಪ್ಲಾನ್‌ಗಳು ಹೆಚ್ಚು ಜನಪ್ರಿಯತೆ ಪಡೆದುಕೊಂಡಿವೆ. ಈ ಪ್ಲಾನ್‌ಗಳು ಸಾಮಾನ್ಯವಾಗಿ 365 ದಿನಗಳ ಮಾನ್ಯತೆಯ ಅವಧಿಯನ್ನು ಹೊಂದಿರುತ್ತವೆ. ಈ ಅವಧಿಯಲ್ಲಿ ಅನಿಯಮಿತ ಕರೆ, ದೈನಂದಿನ ಎಸ್‌ಎಂಎಸ್‌ ಹಾಗೂ ಡೇಟಾ ಪ್ರಯೋಜನವನ್ನು ನೀಡಲಿದೆ. ಇದಲ್ಲದೆ ಸ್ಟ್ರಿಮಿಂಗ್‌ ಸೇವೆಗಳಿಗೂ ಪ್ರವೇಶವನ್ನು ನೀಡಲಿವೆ. ಹಾಗಾದ್ರೆ ಏರ್‌ಟೆಲ್‌ ಟೆಲಿಕಾಂ ಮತ್ತು ವೊಡಾಫೋನ್ ಐಡಿಯಾ ಭಾರತದಲ್ಲಿ ನೀಡುತ್ತಿರುವ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳೋಣ ಬನ್ನಿರಿ.

ಏರ್‌ಟೆಲ್ 3,359ರೂ. ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್ 3,359ರೂ. ಪ್ರಿಪೇಯ್ಡ್ ಪ್ಲಾನ್‌

ಏರ್‌ಟೆಲ್ ಟೆಲಿಕಾಂನ 3,359ರೂ. ಬೆಲೆಯ ವಾರ್ಷಿಕ ಪ್ರಿಪೇಯ್ಡ್ ಪ್ಲಾನ್ 365 ದಿನಗಳ ಮಾನ್ಯತೆಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಅನಿಯಮಿತ ಕರೆಗಳು, ದಿನಕ್ಕೆ 100 SMS ಜೊತೆಗೆ ದೈನಂದಿನ 2GB ಡೇಟಾವನ್ನು ನೀಡುತ್ತದೆ. ಇದಲ್ಲದೆ ಈ ಯೋಜನೆಯಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಮೊಬೈಲ್ ಪ್ರಯೋಜನ, ಅಮೆಜಾನ್‌ ಪ್ರೈಮ್‌ ವೀಡಿಯೊ ಮೊಬೈಲ್‌ ಪ್ರಯೋಜನ, ಅಪೊಲೊ 24X7 ವಲಯ, ಉಚಿತ ಆನ್‌ಲೈನ್ ಕೋರ್ಸ್‌, ಫಾಸ್ಟ್ಯಾಗ್‌ನಲ್ಲಿ 100ರೂ. ಕ್ಯಾಶ್‌ಬ್ಯಾಕ್, ಉಚಿತ ಹೆಲೋಟ್ಯೂನ್‌ಗಳು ಮತ್ತು ಉಚಿತ ವಿಂಕ್‌ಮ್ಯೂಸಿಕ್ ಪ್ರಯೋಜನ ದೊರೆಯಲಿದೆ.

ಏರ್‌ಟೆಲ್ 2999ರೂ. ಪ್ರಿಪೇಯ್ಡ್‌ ಪ್ಲಾನ್‌
ಏರ್‌ಟೆಲ್ 2999ರೂ. ಪ್ರಿಪೇಯ್ಡ್‌ ಪ್ಲಾನ್‌ ವಾರ್ಷಿಕ ಪ್ಲಾನ್‌ ಆಗಿದ್ದು, 365 ದಿನಗಳ ಮಾನ್ಯತೆಯನ್ನು ಹೊಂದಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಅನಿಯಮಿತ ಕರೆಗಳು ಮತ್ತು ದೈನಂದಿನ 100 SMS ಜೊತೆಗೆ 2GB ದೈನಂದಿನ ಡೇಟಾವನ್ನು ನೀಡುತ್ತದೆ. ಹೆಚ್ಚುವರಿ ಪ್ರಯೋಜನಗಳಲ್ಲಿ ಡಿಸ್ನಿ+ ಹಾಟ್‌ಸ್ಟಾರ್‌ ಮೊಬೈಲ್ ಪ್ರಯೋಜನ, ಅಮೆಜಾನ್‌ ಪ್ರೈಮ್‌ ವೀಡಿಯೊ ಮೊಬೈಲ್‌ ಪ್ರಯೋಜನ, ಆಪೊಲೋ 24X7, ಉಚಿತ ಆನ್‌ಲೈನ್ ಕೋರ್ಸ್‌ಗಳನ್ನು ನೀಡಲಿದೆ.

ವಿ ಟೆಲಿಕಾಂ 1799ರೂ. ಪ್ರೀಪೇಯ್ಡ್‌ ಪ್ಲಾನ್

ವಿ ಟೆಲಿಕಾಂ 1799ರೂ. ಪ್ರೀಪೇಯ್ಡ್‌ ಪ್ಲಾನ್

ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಈ ಪ್ಲಾನ್‌ ಒಟ್ಟು 24 GB ಡೇಟಾ ಪ್ರಯೋಜನ ನೀಡಲಿದೆ. ವಿ ಸೇರಿದಂತೆ ಇತರೆ ನೆಟವರ್ಕ್‌ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ.

ವಿ ಟೆಲಿಕಾಂ 2899ರೂ ಪ್ರಿಪೇಯ್ಡ್‌ ಪ್ಲಾನ್‌
ವಿ ಟೆಲಿಕಾಂನ ಈ ಪ್ರೀಪೇಯ್ಡ್‌ ಪ್ಲ್ಯಾನ್ ವಾರ್ಷಿಕ ಅವಧಿಯ ಯೋಜನೆ ಆಗಿದ್ದು, 365 ದಿನಗಳ ವ್ಯಾಲಿಡಿಟಿ ಅವಧಿ ಯನ್ನು ಪಡೆದಿದೆ. ಪ್ರತಿದಿನ 1.5 GB ಡೇಟಾ ಪ್ರಯೋಜನಗಳು ಗ್ರಾಹಕರಿಗೆ ಲಭ್ಯವಾಗಲಿವೆ. ವಿ ಸೇರಿದಂತೆ ಇತರೆ ನೆಟವರ್ಕ್‌ ಗಳಿಗೂ ಅನಿಯಮಿತ ಉಚಿತ ವಾಯಿಸ್ ಕರೆಗಳ ಸೌಲಭ್ಯ. ಪ್ರತಿದಿನ 100 ಎಸ್ಎಮ್ಎಸ್ ಪ್ರಯೋಜನ ಸಹ ದೊರೆಯುತ್ತದೆ. ಇದರೊಂದಿಗೆ ವಿಕೆಂಡ್ ಡೇಟಾ ರೋಲ್ ಓವರ್ ಸೌಲಭ್ಯ ಲಭ್ಯ.

ವಿ ಟೆಲಿಕಾಂ 3,099ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್‌

ವಿ ಟೆಲಿಕಾಂ 3,099ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್‌

ವಿ ಟೆಲಿಕಾಂ 3,099ರೂ. ಬೆಲೆಯ ಪ್ರಿಪೇಯ್ಡ್ ಪ್ಲಾನ್‌ 365 ದಿನಗಳ ಮಾನ್ಯತೆ ಪಡೆದಿದೆ. ಈ ಸಮಯದಲ್ಲಿ ಪ್ರತಿನಿತ್ಯ ಯಾವುದೇ ನೆಟ್‌ವರ್ಕ್‌ಗೆ ಅನಿಯಮಿತ ಕರೆಗಳು ಮತ್ತು ದಿನಕ್ಕೆ 100SMS ಪ್ರಯೋಜನ ನೀಡಲಿದೆ. ಜೊತೆಗೆ ದೈನಂದಿನ 1.5GB ಡೇಟಾ ಪ್ರಯೋಜನ ಕೂಡ ಸಿಗಲಿದೆ. ಇದಲ್ಲದೆ ಈ ಪ್ಲಾನ್‌ ರಾತ್ರಿಯಿಡೀ ಬಿಂಜ್‌ಗೆ ಪ್ರವೇಶವನ್ನು ನೀಡುತ್ತದೆ. ಇದರಲ್ಲಿ ವಾರಾಂತ್ಯದ ಡೇಟಾ ರೋಲ್‌ಓವರ್ ಪ್ರಯೋಜನ, ವಿ ಚಲನಚಿತ್ರಗಳು ಮತ್ತು ಟಿವಿಗೆ ಪ್ರವೇಶ ಕೂಡ ಸಿಗಲಿದೆ. ಇದರೊಂದಿಗೆ ಡೇಟಾ ಡಿಲೈಟ್‌ಗಳೊಂದಿಗೆ ಪ್ರತಿ ತಿಂಗಳು 2GB ವರೆಗಿನ ಬ್ಯಾಕಪ್ ಡೇಟಾವನ್ನು ನೀಡುತ್ತದೆ.

Best Mobiles in India

English summary
annual prepaid plans offered by Vodafone Idea and Airtel along with the pack details.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X