200ರೂ. ಒಳಗೆ ಲಭ್ಯವಾಗುವ ಬಿಎಸ್‌ಎನ್‌ಎಲ್‌ ಟೆಲಿಕಾಂನ ಪ್ರಿಪೇಯ್ಡ್‌ ಪ್ಲಾನ್‌ಗಳು!

|

ಟೆಲಿಕಾಂ ವಲಯದಲ್ಲಿ ಖಾಸಗಿ ಟೆಲಿಕಾಂಗಳು ಮುಂಚೂಣಿಯಲ್ಲಿ ಗುರುತಿಸಿಕೊಂಡಿದೆ. ಇದರ ನಡುವೆ ಸರ್ಕಾರಿ ಸ್ವಾಮ್ಯದ BSNL ಟೆಲಿಕಾಂ ಕೂಡ ತನ್ನ ಆಕರ್ಷಕ ಪ್ರಿಪೇಯ್ಡ್‌ ಪ್ಲಾನ್‌ ಮೂಲಕ ಗ್ರಾಹಕರ ಗಮನ ಸೆಳೆದಿದೆ. ಖಾಸಗಿ ಟೆಲಿಕಾಂಗಳಿಗೆ ಸೆಡ್ಡು ಹೊಡೆಯವ ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸಿ ಸೈ ಎನಿಸಿಕೊಂಡಿದೆ. ಅದರಲ್ಲೂ ಅಗ್ಗದ ಬೆಲೆಯಲ್ಲಿ ಅಧಿಕ ಪ್ರಯೋಜನ ನೀಡುವ ಪ್ಲಾನ್‌ಗಳನ್ನು ಪರಿಚಯಿಸುವಲ್ಲಿ ಬಿಎಸ್‌ಎನ್‌ಎಲ್‌ ಟೆಲಿಕಾಂ ಸೈ ಎನಿಸಿಕೊಂಡಿದೆ.

ಬಿಎಸ್‌ಎನ್‌ಎಲ್‌

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ತನ್ನ ವಿಶೇಷ ಪ್ರಿಪೇಯ್ಡ್‌ ಪ್ಲಾನ್‌ಗಳಿಂದ ಗುರುತಿಸಿಕೊಂಡಿದೆ. ಖಾಸಗಿ ಟೆಲಿಕಾಂಗಳಿಗಿಂತ ಕಡಿಮೆ ಬೆಲೆಯ ಪ್ಲಾನ್‌ಗಳನ್ನು ಬಿಎಸ್‌ಎನ್‌ಎಲ್‌ ನೀಡುತ್ತಾ ಬಂದಿದೆ. ಇನ್ನು ಬಿಎಸ್‌ಎನ್‌ಎಲ್‌ ಟೆಲಿಕಾಂ ಪರಿಚಯಿಸಿರುವ ಪ್ರಿಪೇಯ್ಡ್‌ ಪ್ಲಾನ್‌ಗಳಲ್ಲಿ 200ರೂ.ಗಿಂತ ಕಡಿಮೆ ಬೆಲೆಯ ಪ್ಲಾನ್‌ಗಳು ಕೂಡ ಸೇರಿವೆ. ಹಾಗಾದ್ರೆ 200ರೂ. ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಬಿಎಸ್‌ಎನ್‌ಎಲ್‌ ಟೆಲಿಕಾಂನ ಅತ್ಯುತ್ತಮ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಬಿಎಸ್‌ಎನ್‌ಎಲ್‌ 49ರೂ ಪ್ರಿಪೇಯ್ಡ್‌ ಪ್ಲಾನ್‌

ಬಿಎಸ್‌ಎನ್‌ಎಲ್‌ 49ರೂ ಪ್ರಿಪೇಯ್ಡ್‌ ಪ್ಲಾನ್‌

ಬಿಸ್‌ಎನ್‌ಎಲ್‌ನ 49ರೂ ಪ್ರಿಪೇಯ್ಡ್‌ ಪ್ಲಾನ್‌ ಅಗ್ಗದ ಬೆಲೆಯ ಪ್ಲಾನ್‌ಗಳಲ್ಲಿ ಒಂದಾಗಿದೆ. ಈ ಪ್ಲಾನ್‌ ನಿಮಗೆ 24 ದಿನಗಳ ಮಾನ್ಯತೆಯನ್ನು ನೀಡಲಿದೆ. ಈ ಪ್ಲಾನ್‌ ಒಟ್ಟು ಅವಧಿಗೆ ಒಟ್ಟು 2GB ಡೇಟಾವನ್ನು ನೀಡಲಿದೆ. ಜೊತೆಗೆ ಉಚಿತ 100 ನಿಮಿಷಗಳ ಧ್ವನಿ ಕರೆ ಪ್ರಯೋಜನ ಕೂಡ ಲಭ್ಯವಾಗಲಿದೆ.

ಬಿಎಸ್‌ಎನ್‌ಎಲ್‌ 99ರೂ.ಪ್ರಿಪೇಯ್ಡ್‌ ಪ್ಲಾನ್‌
ಬಿಎಸ್‌ಎನ್‌ಎಲ್‌ 99ರೂ.ಪ್ರಿಪೇಯ್ಡ್‌ ಪ್ಲಾನ್‌ ಒಟ್ಟು 22 ದಿನಗಳ ವ್ಯಾಲಿಡಿಟಿಯನ್ನು ನೀಡಲಿದೆ. ಈ ಸಮಯದಲ್ಲಿ ಅನಿಯಮಿತ ಧ್ವನಿ ಕರೆ ಪ್ರಯೋಜ ಸಿಗಲಿದೆ.

ಬಿಎಸ್‌ಎನ್‌ಎಲ್‌ 118ರೂ. ಪ್ರಿಪೇಯ್ಡ್‌ ಪ್ಲಾನ್‌

ಬಿಎಸ್‌ಎನ್‌ಎಲ್‌ 118ರೂ. ಪ್ರಿಪೇಯ್ಡ್‌ ಪ್ಲಾನ್‌

ಬಿಎಸ್‌ಎನ್‌ಎಲ್‌ ಟೆಲಿಕಾಂ 118ರೂ. ಪ್ರಿಪೇಯ್ಡ್‌ ಪ್ಲಾನ್‌ 26 ದಿನಗಳ ಮಾನ್ಯತೆಯನ್ನು ಹೊಂದಿದೆ. ಇನ್ನು ಈ ಪ್ಲಾನ್‌ನಲ್ಲಿ ಅನಿಯಮಿತ ಧ್ವನಿ ಕರೆ ಪ್ರಯೋಜನ ದೊರೆಯಲಿದೆ. ಜೊತೆಗೆ ದಿನಕ್ಕೆ 0.5GB ಡೇಟಾ ಸೌಲಭ್ಯ ದೊರೆಯಲಿದೆ.

ಬಿಎಸ್‌ಎನ್‌ಎಲ್‌ 147ರೂ. ಪ್ರಿಪೇಯ್ಡ್‌ ಪ್ಲಾನ್‌

ಬಿಎಸ್‌ಎನ್‌ಎಲ್‌ 147ರೂ. ಪ್ರಿಪೇಯ್ಡ್‌ ಪ್ಲಾನ್‌

ಬಿಎಸ್‌ಎನ್‌ಎಲ್‌ 147ರೂ. ಪ್ರಿಪೇಯ್ಡ್‌ ಪ್ಲಾನ್‌ 30 ದಿನಗಳ ಮಾನ್ಯತೆಯನ್ನು ಹೊಂದಿದೆ. ಇನ್ನು ಈ ಪ್ಲಾನ್‌ನಲ್ಲಿ ಅನಿಯಮಿತ ಧ್ವನಿ ಕರೆ ಪ್ರಯೋಜನ ದೊಂದಿಗೆ, ಒಟ್ಟು 10GB ಡೇಟಾವನ್ನು ಪಡೆದುಕೊಳ್ಳಬಹುದಾಗಿದೆ. ಇದಲ್ಲದೆ 30 ದಿನಗಳ ಮಾನ್ಯತೆಯ ಅವಧಿಗೆ BSNL ಟ್ಯೂನ್‌ಗಳಿಗೆ ಪ್ರವೇಶವನ್ನು ನೀಡುತ್ತದೆ.

ಬಿಎಸ್‌ಎನ್‌ಎಲ್‌ 185ರೂ ಪ್ರಿಪೇಯ್ಡ್‌ ಪ್ಲಾನ್‌
ಬಿಎಸ್‌ಎನ್‌ಎಲ್‌ 185ರೂ ಪ್ರಿಪೇಯ್ಡ್‌ ಪ್ಲಾನ್‌ 28ದಿನಗಳ ಮಾನ್ಯತೆಯನ್ನು ನೀಡಲಿದೆ. ಈ ಅವಧಿಯಲ್ಲಿ ದೈನಂದಿನ 100 SMS ಜೊತೆಗೆ ಅನಿಯಮಿತ ಧ್ವನಿ ಕರೆ ಪ್ರಯೋಜನ ದೊರೆಯಲಿದೆ. ಹಾಗೆಯೇ ದೈನಂದಿನ 1GB ಡೇಟಾ ಸೌಲಭ್ಯ ಕೂಡ ಲಭ್ಯ.

ಬಿಎಸ್‌ಎನ್‌ಎಲ್‌ 499ರೂ. ಪ್ಲ್ಯಾನ್ ಪ್ರಯೋಜನ

ಬಿಎಸ್‌ಎನ್‌ಎಲ್‌ 499ರೂ. ಪ್ಲ್ಯಾನ್ ಪ್ರಯೋಜನ

ಬಿಎಸ್‌ಎನ್‌ಎಲ್‌ನ ಈ STV 499ರೂ. ಪ್ಲ್ಯಾನ್ ದೀರ್ಘಾವಧಿಯ ಯೋಜನೆ ಆಗಿದ್ದು, ಒಟ್ಟು 90 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಪ್ರಯೋಜನ ಲಭ್ಯವಿದ್ದು, ಒಟ್ಟು ಪೂರ್ಣ ಅವಧಿಗೆ 180GB ಡೇಟಾ ಸಿಗಲಿದೆ. ಇದರೊಂದಿಗೆ ಅನಿಯಮಿತ ವಾಯಿಸ್ ಕರೆಗಳ ಸೌಲಭ್ಯ ಸಹ ದೊರೆಯಲಿದೆ. ಹಾಗೆಯೇ ಡೈಲಿ 100 ಎಸ್‌ಎಮ್‌ಎಸ್‌ ಸಹ ಸಿಗುತ್ತದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್‌ ಟ್ಯೂನ್ ಮತ್ತು Zing ಪ್ರಯೋಜನ ಲಭ್ಯ.

ಬಿಎಸ್‌ಎನ್‌ಎಲ್‌ 693ರೂ. ಪ್ಲ್ಯಾನ್ ಪ್ರಯೋಜನ

ಬಿಎಸ್‌ಎನ್‌ಎಲ್‌ 693ರೂ. ಪ್ಲ್ಯಾನ್ ಪ್ರಯೋಜನ

ಬಿಎಸ್‌ಎನ್‌ಎಲ್‌ 693ರೂ. ಡೇಟಾ ಎಸ್‌ಟಿವಿ ಪ್ಲಾನ್‌ ಒಟ್ಟು 365 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಪ್ಲ್ಯಾನಿನಲ್ಲಿ ಪೂರ್ಣ ವ್ಯಾಲಿಡಿಟಿ ಅವಧಿಗೆ ಒಟ್ಟು 300GB ಡೇಟಾ ಸೌಲಭ್ಯ ಲಭ್ಯ ವಾಗಲಿದೆ. ಇದು ಡೇಟಾ ಪ್ರೀಪೇಯ್ಡ್ ಯೋಜನೆ ಆಗಿರುವುದರಿಂದ ಯಾವುದೇ ವಾಯಿಸ್‌ ಕರೆ ಹಾಗೂ ಎಸ್‌ಎಮ್‌ಎಸ್‌ ಸೌಲಭ್ಯಗಳು ದೊರೆಯುವುದಿಲ್ಲ.

Best Mobiles in India

English summary
The state-owned telecom operator BSNL (Bharat Sanchar Nigam Ltd) offers some of the cheapest prepaid plans.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X