20,000ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ ಗೇಮಿಂಗ್ ಸ್ಮಾರ್ಟ್‌ಫೋನ್‌ಗಳು!
ಪ್ರಸ್ತುತ ದಿನಗಳಲ್ಲಿ ಆನ್‌ಲೈನ್ ಗೇಮ್‌ಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಇಂದಿನ ಯುವಜನತೆ ಕೂಡ ಆನ್‌ಲೈನ್ ಗೇಮ್‌ಗಳ ಕಡೆಗೆ ಹೆಚ್ಚಿನ ಆಸಕ್ತಿ ಹೊಂದಿದ್ದಾರೆ. ಇದೇ ಕಾರಣಕ್ಕೆ ತಾವು ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುವಾಗ ಗೇಮಿಂಗ್ ಅನ್ನು ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುತ್ತಾರೆ. ಇನ್ನು ಸ್ಮಾರ್ಟ್‌ಫೋನ್ ತಯಾರಕರು ಕೂಡ ಯುವಜನತೆಯ ಆಶಯಗಳಿಗೆ ತಕ್ಕಂತೆ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸುತ್ತಿದ್ದಾರೆ. ಆದರಿಂದ ಟೆಕ್ ಮಾರುಕಟ್ಟೆಯಲ್ಲಿ ಗೇಮಿಂಗ್ ಬೆಂಬಲಿಸುವ ಅನೇಕ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ.

ಹೌದು, ಗೇಮಿಂಗ್ ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳಿಗೆ ಮಾರುಕಟ್ಟೆಯಲ್ಲಿ ಹೆಚ್ಚು ಬೇಡಿಕೆಯಿದೆ. ಹೊಸ ಮಾದರಿಯ ಆನ್‌ಲೈನ್ ಗೇಮಿಂಗ್‌ಗಳಿಗೆ ತಕ್ಕಂತೆ ಹೊಸ ಸ್ಮಾರ್ಟ್‌ಫೋನ್‌ಗಳನ್ನು ವಿನ್ಯಾಸಗೊಳಿಸಲಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ಗಳು ಮಿಡ್ ರೇಂಜ್ ಬೆಲೆಯ ಜೊತೆಗೆ ಹೈ ಎಂಡ್ ಬೆಲೆಯಲ್ಲಿ ಲಭ್ಯವಾಗುತ್ತಿವೆ. ಹಾಗಾದ್ರೆ ಭಾರತದಲ್ಲಿ 20,000ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಗೇಮಿಂಗ್ ಬೆಂಬಲಿತ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ರೆಡ್ಮಿ ನೋಟ್ 11T 5G
ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ 6.6-ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಅನ್ನು ಹೊಂದಿದ್ದು, ಇದು ಗೇಮಿಂಗ್ ಮಾಡುವಾಗ ಸುಗಮ ಅನಿಮೇಷನ್‌ಗಳನ್ನು ನೀಡುತ್ತದೆ. ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ ಪ್ರೊಟೆಕ್ಷನ್ ಅನ್ನು ಕೂಡ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ f/1.8 ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಇದು f/2.45 ಲೆನ್ಸ್ ಪಡೆದುಕೊಂಡಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ 16,999ರೂ. ಬೆಲೆಯಲ್ಲಿ ಲಭ್ಯವಿದೆ.

ಮೋಟೋ G60
ಮೋಟೋ G60 ಸ್ಮಾರ್ಟ್‌ಫೋನ್ 6.8ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20.5:9 ರಚನೆಯ ಅನುಪಾತವನ್ನು ಹೊಂದಿದ್ದು, 85.54% ಸ್ಕ್ರೀನ್ ಟು ಬಾಡಿ ಅನುಪಾತವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732 G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಟರ್ಬೊ ಪವರ್ 20 ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 17,999 ರೂ.ಆಗಿದೆ.

ರಿಯಲ್‌ಮಿ 9 ಪ್ರೊ
ರಿಯಲ್‌ಮಿ 9 ಪ್ರೊ 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 695 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಡಾರ್ಟ್ ಚಾರ್ಜ್ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 17,999ರೂ. ಹೊಂದಿದೆ.

ಪೊಕೊ M4 ಪ್ರೊ 5G
ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಅನ್ನು ಆಧರಿಸಿದ MIUI 12.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇನ್ನು ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, Wi-Fi, ಬ್ಲೂಟೂತ್ v5.1, GPS/ A-GPS, ಇನ್ಫ್ರಾರೆಡ್ (IR) ಬ್ಲಾಸ್ಟರ್, USB ಟೈಪ್-C, ಮತ್ತು 3.5mm ಹೆಡ್‌ಫೋನ್ ಜ್ಯಾಕ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ 14,999ರೂ. ಬೆಲೆ ಹೊಂದಿದೆ.


Click it and Unblock the Notifications








