12,000ರೂ.ಒಳಗೆ ಲಭ್ಯವಾಗುವ ಗೇಮಿಂಗ್‌ ಬೆಂಬಲಿತ ಸ್ಮಾರ್ಟ್‌ಫೋನ್‌ಗಳು!

|

ಇಂದಿನ ಜಮಾನದಲ್ಲಿ ಆನ್‌ಲೈನ್‌ ಗೇಮ್‌ಗಳು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಅದರಲ್ಲೂ ಯುವಜನತೆ ಹೆಚ್ಚಿನ ಪ್ರಮಾಣದಲ್ಲಿ ಆನ್‌ಲೈನ್‌ ಗೇಮ್‌ಗಳಿಗೆ ಹೆಚ್ಚು ಆಕರ್ಷಿತರಾಗಿದ್ದಾರೆ. ಆನ್‌ಲೈನ್‌ ಗೇಮ್‌ಗಳನ್ನು ಆಡಬೇಕಾದರೆ ಹೈ ಎಂಡ್‌ ಪ್ರೊಸೆಸರ್‌ ಸಾಮರ್ಥ್ಯದ, ಬಿಗ್‌ ಡಿಸ್‌ಪ್ಲೇ ಹೊಂದಿರುವ ಡಿವೈಸ್‌ಗಳು ಅಗತ್ಯ ಎನಿಸಲಿವೆ. ಇದೇ ಕಾರಣಕ್ಕೆ ಗೇಮಿಂಗ್‌ ಪ್ರಿಯರು ಹೆಚ್ಚು ಕಾರ್ಯದಕ್ಷತೆಯನ್ನು ಒಳಗೊಂಡ ಗೇಮಿಂಗ್‌ ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುತ್ತಾರೆ.

ಸ್ಮಾರ್ಟ್‌ಫೋನ್‌

ಹೌದು, ಗೇಮಿಂಗ್‌ ಪ್ರಿಯರಿಗಾಗಿಯೇ ಮಾರುಕಟ್ಟೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಲಭ್ಯವಿವೆ. ಈ ಸ್ಮಾರ್ಟ್‌ಫೋನ್‌ಗಳು ಗೇಮರ್‌ಗಳಿಗೆ ಪೂರಕವಾದ ಫೀಚರ್ಸ್‌ಗಳನ್ನು ಒಳಗೊಂಡಿವೆ. ಗೇಮಿಂಗ್‌ ಪ್ರಿಯರನ್ನು ಸೆಳೆಯುವುದಕ್ಕಾಗಿ ಗೇಮ್‌ ಡೆವಲಪರ್‌ಗಳು ಹೊಸ ಹೊಸ ಗೇಮ್‌ಗಳನ್ನು ಡೆವಲಪ್‌ ಮಾಡುತ್ತಲೇ ಬಂದಿದ್ದಾರೆ. ಇವುಗಳಿಗೆ ಪೂರಕವಾಗಿ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ಕೂಡ ಗೇಮಿಂಗ್‌ ಬೆಂಬಲಿಸುವ ಸ್ಮಾರ್ಟ್‌ಫೋನ್‌ ಪರಿಚಯಿಸುತ್ತಿದ್ದಾರೆ. ಈ ಸಾಲಿನಲ್ಲಿ ಪ್ರಮುಖ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ ಕಂಪೆನಿಗಳು ಕೂಡ ಸೇರಿವೆ.

ಸ್ಮಾರ್ಟ್‌ಫೋನ್‌

ಪ್ರಸ್ತುತ ಗೇಮಿಂಗ್‌ಗೆ ಪೂರಕವಾದ ಸ್ಮಾರ್ಟ್‌ಫೋನ್‌ಗಳನ್ನು ಬಹುತೇಕ ಎಲ್ಲಾ ಮೊಬೈಲ್‌ ಕಂಪೆನಿಗಳು ಪರಿಚಯಿಸುತ್ತಿವೆ. ಇದರಲ್ಲಿ ಶಿಯೋಮಿ, ಮೊಟೊರೊಲಾ, ಇನ್ಫಿನಿಕ್ಸ್‌, ರಿಯಲ್‌ಮಿ ಬ್ರ್ಯಾಂಡ್‌ಗಳು ಸೇರಿವೆ. ಇನ್ನು ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳು ದುಬಾರಿ ಬೆಲೆ ಎಂದು ದೂರ ಸರಿಯುವ ಅವಶ್ಯಕತೆಯಿಲ್ಲ. ಏಕೆಂದರೆ ಭಾರತದಲ್ಲಿ 12,000ರೂ. ಒಳಗೆ ಕೂಡ ನಿಮಗೆ ಗೇಮಿಂಗ್‌ ಬೆಂಬಲಿಸುವ ಸ್ಮಾರ್ಟ್‌ಫೋನ್‌ಗಳು ದೊರೆಯಲಿವೆ. ಹಾಗಾದ್ರೆ ಭಾರತದಲ್ಲಿ 12,000ರೂ. ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಗೇಮಿಂಗ್‌ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಶಿಯೋಮಿ ರೆಡ್ಮಿ 10 ಪ್ರೈಮ್‌

ಶಿಯೋಮಿ ರೆಡ್ಮಿ 10 ಪ್ರೈಮ್‌

ರೆಡ್‌ಮಿ 10 ಪ್ರೈಮ್‌ ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್-ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇದು 45Hz, 60Hz ಮತ್ತು 90Hz ರಿಫ್ರೆಶ್ ರೇಟ್‌ಗಳ ನಡುವೆ ಬದಲಾಯಿಸಲು ಕಂಟೆಂಟ್ ಫ್ರೇಮ್‌ಗೆ ಹೊಂದಿಕೆಯಾಗುತ್ತದೆ. ಈ ಫೋನ್‌ ಆಕ್ಟಾ-ಕೋರ್ ಮೀಡಿಯಾ ಟೆಕ್ ಹೆಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಕ್ವಾಡ್‌ ರಿಯರ್ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 10,999 ರೂ. ಬೆಲೆಯಲ್ಲಿ ದೊರೆಯಲಿದೆ.

ಇನ್ಫಿನಿಕ್ಸ್ ನೋಟ್‌ 11

ಇನ್ಫಿನಿಕ್ಸ್ ನೋಟ್‌ 11

ಇನ್ಫಿನಿಕ್ಸ್‌ ನೋಟ್‌ 11 ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ HD + ಅಮೋಲೆಡ್‌ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಆಕ್ಟಾ ಕೋರ್‌ ಮೀಡಿಯಾ ಟೆಕ್‌ ಹಿಲಿಯೋ G88 SoC ಪ್ರೊಸೆಸರ್‌ ಬಲವನ್ನು ಪಡೆದಿದ್ದು, ಕಂಪನಿಯ XOS 10 ಕಸ್ಟಮ್ ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್‌ f/1.6 ಲೆನ್ಸ್ ಅನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 11,499ರೂ, ಬೆಲೆಯಲ್ಲಿ ಲಭ್ಯವಾಗಲಿದೆ.

ರಿಯಲ್‌ಮಿ ನಾರ್ಜೋ 50A

ರಿಯಲ್‌ಮಿ ನಾರ್ಜೋ 50A

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5-ಇಂಚಿನ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11. ಆಧಾರಿತ ರಿಯಲ್‌ಮಿ ಯುಐ 2.0 ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದ್ದು, ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಬ್ಯಾಟರಿಯನ್ನು ಹೊಂದಿದ್ದು, 18W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಇದು 53 ದಿನಗಳ ಸ್ಟ್ಯಾಂಡ್‌ಬೈ ಟೈಂ ನೀಡಲಿದೆ. ಈ ಫೋನ್‌ ಅಮೆಜಾನ್‌ನಲ್ಲಿ ಪ್ರಸ್ತುತ 11,499ರೂ.ಬೆಲೆಗೆ ಲಭ್ಯವಿದೆ.

ರಿಯಲ್‌ಮಿ C35

ರಿಯಲ್‌ಮಿ C35

ರಿಯಲ್‌ಮಿ C35 ಸ್ಮಾರ್ಟ್‌ಫೋನ್‌ 6.6 ಇಂಚಿನ ಫುಲ್‌ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಯೂನಿಸೋಕ್‌ T616 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ನಲ್ಲಿ ರಿಯಲ್‌ಮಿ UI R ಆವೃತ್ತಿಯೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಜೊತೆಗೆ f/2.4 ಅಪರ್ಚರ್ ಮತ್ತು ಮೂರನೇ ಕ್ಯಾಮೆರಾ 2 ಸೆನ್ಸಾರ್‌ ಅನ್ನು ಹೊಂದಿದೆ.ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ ನಿಮಗೆ 12,999ರೂ.ಬೆಲೆಗೆ ಲಭ್ಯವಾಗಲಿದೆ.

ಇನ್ಫಿನಿಕ್ಸ್ ಹಾಟ್ 11S

ಇನ್ಫಿನಿಕ್ಸ್ ಹಾಟ್ 11S

ಇನ್ಫಿನಿಕ್ಸ್‌ ನೋಟ್‌ 11S ಸ್ಮಾರ್ಟ್‌ಫೋನ್‌ 6.95 ಇಂಚಿನ ಫುಲ್‌ HD+ IPS ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್‌ ಹಿಲಿಯೋ G96 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ f/1.6 ಲೆನ್ಸ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್‌ ಪ್ರಸ್ತುತ 10,990ರೂ.ಬೆಲೆಗೆ ದೊರೆಯಲಿದೆ.

ಶಿಯೋಮಿ ರೆಡ್ಮಿ ನೋಟ್ 10T

ಶಿಯೋಮಿ ರೆಡ್ಮಿ ನೋಟ್ 10T

ರೆಡ್ಮಿ ನೋಟ್ 10T 5G ಸ್ಮಾರ್ಟ್‌ಫೋನ್‌ 6.5-ಇಂಚಿನ ಫುಲ್‌ ಹೆಚ್‌ಡಿ + ಡಿಸ್‌ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700 SoC ಪ್ರೊಸೆಸರ್‌ ಸಾಮರ್ಥ್ಯ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್ ಹೊಂದಿರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್ ಸೆನ್ಸಾರ್‌ ಎಫ್ / 1.79 ಲೆನ್ಸ್ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, 18W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 11,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

Best Mobiles in India

English summary
Here's best gaming phones under Rs.12,000 in India.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X