Home
ಸುದ್ದಿಜಾಲ

15,000ರೂ.ಬೆಲೆಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡುತ್ತಲೇ ಇವೆ. ಆದರೂ ಸ್ಮಾರ್ಟ್‌ಫೋನ್‌ ಪ್ರಿಯರು ಜನಪ್ರಿಯ ಬ್ರಾಂಡ್‌ಗಳ ಫೋನ್‌ಗಳನ್ನೇ ಆಯ್ಕೆ ಮಾಡುತ್ತಾರೆ. ಇನ್ನು ಮಾರುಕಟ್ಟೆಯಲ್ಲಿ ಬಜೆಟ್‌ ಬೆಲೆಯ ಜೊತೆಗೆ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಲಭ್ಯವಿದೆ. ಇನ್ನು ಈ ವರ್ಷವೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಮಾರುಕಟ್ಟೆಯಲ್ಲಿ ಸದ್ದು ಮಾಡುತ್ತಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಸದ್ಯ ನೀವು ಮಾರುಕಟ್ಟೆಯಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ. ಇನ್ನು ಅಗ್ಗದ ಬೆಲೆಯಲ್ಲಿ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಲು ಬಯಸುವವರಿಗೆ ಅನೇಕ ಆಯ್ಕೆಗಳು ಲಭ್ಯವಿದೆ. ಹಾಗಾದ್ರೆ ನೀವು ಭಾರತದಲ್ಲಿ 15,000ರೂ.ಗಿಂತ ಕಡಿಮೆ ಬೆಲೆಗೆ ಲಭ್ಯವಾಗುವ ಟಾಪ್‌ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G

ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 1080 x 2400 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.5 ಇಂಚಿನ ಹೆಚ್‌ಡಿ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್ ಡೈಮೆನ್ಸಿಟಿ 700SoC ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಹೊಂದಿದೆ. ಇದಲ್ಲದೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, ಫೋನ್ 18W ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಪೊಕೊ M3 ಪ್ರೊ 5G ಸ್ಮಾರ್ಟ್‌ಫೋನ್‌ 4GB + 64GB ವೇರಿಯಂಟ್ 13,999ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ರೆಡ್‌ಮಿ ನೋಟ್‌ 10S

ರೆಡ್‌ಮಿ ನೋಟ್‌ 10S

ಶಿಯೋಮಿ ಕಂಪೆನಿಯ ರೆಡ್‌ಮಿ ನೋಟ್‌ 10S ಸ್ಮಾರ್ಟ್‌ಫೋನ್‌ 6.43-ಇಂಚಿನ ಫುಲ್‌ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ ಕಾರ್ನಿಂಗ್ ಗೊರಿಲ್ಲಾ ಗ್ಲಾಸ್ 3 ರಕ್ಷಣೆಯನ್ನು ಹೊಂದಿದೆ. ಇದು ಮೀಡಿಯಾ ಟೆಕ್‌ ಹಿಲಿಯೋ G85 ಪ್ರೊಸೆಸರ್ ಸಾಮರ್ಥ್ಯವನ್ನು ಪಡೆದಿದೆ. ಹಾಗೆಯೇ 6GB RAM ಮತ್ತು 64 GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಲೆನ್ಸ್, ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಸೆನ್ಸಾರ್‌ ಮತ್ತು ನಾಲ್ಕನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ 14,999ರೂ. ಪಡೆದುಕೊಂಡಿದೆ.

ರಿಯಲ್‌ಮಿ 8i

ರಿಯಲ್‌ಮಿ 8i

ರಿಯಲ್‌ಮಿ 8i ಸ್ಮಾರ್ಟ್‌ಫೋನ್‌ 6.6-ಇಂಚಿನ ಡಿಸ್ಪ್ಲೇ ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G96 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್‌ ಸ್ಟೊರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇನ್ನು ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 13,999ರೂ ಬೆಲೆಗೆ ಲಭ್ಯವಾಗಲಿದೆ.

ಮೈಕ್ರೋಮ್ಯಾಕ್ಸ್ ಇನ್ 1

ಮೈಕ್ರೋಮ್ಯಾಕ್ಸ್ ಇನ್ 1

ಮೈಕ್ರೋಮ್ಯಾಕ್ಸ್ ಇನ್ 1 ಸ್ಮಾರ್ಟ್‌ಫೋನ್‌ 2400x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 6.67 ಇಂಚಿನ ಡಿಸ್‌ಪ್ಲೆಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಮೀಡಿಯಾಟೆಕ್‌ ಹಿಲಿಯೋ G80 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಸ್ಟೋರೇಜ್ ಬೇಸ್ ವೇರಿಯಂಟ್‌ನಲ್ಲಿದೆ. ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್‌ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಲೆನ್ಸ್ ಅನ್ನು ಒಳಗೊಂಡಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 10,499ರೂ ಬೆಲೆಯನ್ನು ಪಡೆದುಕೊಂಡಿದೆ.

ರಿಯಲ್‌ಮಿ ನಾರ್ಜೊ 50A

ರಿಯಲ್‌ಮಿ ನಾರ್ಜೊ 50A

ರಿಯಲ್‌ಮಿ ನಾರ್ಜೊ 50A ಸ್ಮಾರ್ಟ್‌ಫೋನ್‌ 6.5-ಇಂಚಿನ HD+ ಡಿಸ್‌ಪ್ಲೆಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಹಿಲಿಯೋ G85 ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್‌11 ಆಧಾರಿತ Realme UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 64GB ಮತ್ತು 4GB RAM ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌, ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಲೆನ್ಸ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಸಹ ಒಳಗೊಂಡಿದೆ. ಈ ಫೋನ್‌ 6000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 11,499 ರೂ.ಬೆಲೆಗೆ ಲಭ್ಯವಾಗಲಿದೆ.

Best Mobiles in India

English summary
Here's Best mobile phones under 15000 in India.to know more visit to kannada.gizbot.com
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+