20,000ರೂ. ಒಳಗೆ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಈ ಸ್ಮಾರ್ಟ್‌ಫೋನ್‌ಗಳು ಬೆಸ್ಟ್!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳ ಭರಾಟೆ ಜೋರಾಗಿದೆ. ಪ್ರತಿನಿತ್ಯವು ಒಂದಲ್ಲ ಒಂದು ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇದೆ. ಸ್ಮಾರ್ಟ್‌ಫೋನ್ ಪ್ರಿಯರು ಕೂಡ ತಮ್ಮ ಆಯ್ಕೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸುತ್ತಿದ್ದಾರೆ. ಇದೇ ಕಾರಣಕ್ಕೆ ಮಾರುಕಟ್ಟೆಯಲ್ಲೂ ಹೊಸ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಸಂಖ್ಯೆಯಲ್ಲಿ ಲಗ್ಗೆ ಹಾಕುತ್ತಿವೆ. ಇದರಲ್ಲಿ ದುಬಾರಿ ಬೆಲೆಯಿಂದ ಹಿಡಿದು ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಸೇರಿವೆ.

ಹೌದು, ಮಾರುಕಟ್ಟೆಯಲ್ಲಿ ನಾನಾ ಮಾದರಿಯ ವಿವಿದ ಬೆಲೆಗಳಲ್ಲಿ ಖರೀದಿಗೆ ಲಭ್ಯವಿದೆ. ಆದರೂ ಹೆಚ್ಚಿನ ಗ್ರಾಹಕರು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಖರೀದಿಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಆದರಿಂದ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಪ್ರಮಾಣದಲ್ಲಿ ಗಮನ ಸೆಳೆದಿವೆ. ಇನ್ನು ಈ ತಿಂಗಳು ಕೂಡ ಮಾರುಕಟ್ಟೆಯಲ್ಲಿ ಹಲವು ಮಾದರಿಯ ಬಜೆಟ್ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಹಾಗಾದ್ರೆ ಈ ತಿಂಗಳು 20,000 ರೂ. ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು ಯಾವುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಲಾವಾ ಅಗ್ನಿ 5G
ಲಾವಾ ಅಗ್ನಿ 5G ಭಾರತೀಯ ಬ್ರಾಂಡ್‌ನ ಮೊದಲ 5G ಸ್ಮಾರ್ಟ್‌ಫೋನ್ ಆಗಿದೆ. ಈ ಸ್ಮಾರ್ಟ್‌ಫೋನ್ 6.78 ಇಂಚಿನ ಹೆಚ್‌ಡಿ ಪ್ಲಸ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM + 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾ ಪಿಕ್ಸಲ್ ಸೆನ್ಸಾರ್ ಹೊಂದಿದೆ. ಇದು 16 ಮೆಗಾ ಪಿಕ್ಸಲ್ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದಕ್ಕೆ ಪೂರಕವಾಗಿ 30W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 8GB RAM + 128GB ಸ್ಟೋರೇಜ್ ವೇರಿಯಂಟ್ ದರವು 19,999ರೂ. ಆಗಿದೆ.

ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್
ರೆಡ್ಮಿ ನೋಟ್ 10 ಪ್ರೊ ಮ್ಯಾಕ್ಸ್ ಸ್ಮಾರ್ಟ್‌ಫೋನ್ 6.67 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಸೂಪರ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 732G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟ್‌ಅಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ ಐಸೊಸೆಲ್ GW3 ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾವನ್ನು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ 5,020mAh ಸಾಮರ್ಥ್ಯದ ಬ್ಯಾಟರಿ ಹೊಂದಿದ್ದು, ಇದು 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಇನ್ನು ಭಾರತದಲ್ಲಿ ರೆಡ್‌ಮಿ ನೋಟ್ 10 ಪ್ರೊ ಮ್ಯಾಕ್ಸ್ 6GB RAM + 64GB ಶೇಖರಣಾ ಮಾದರಿಗೆ 18,999ರೂ.ಹೊಂದಿದೆ.

ಐಕ್ಯೂ Z3
ಐಕ್ಯೂ Z3 ಸ್ಮಾರ್ಟ್‌ಫೋನ್ 6.58-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 768G ಪ್ರೊಸೆಸರ್ ಅನ್ನು ಪಡೆದುಕೊಂಡಿದ್ದು, ಆಂಡ್ರಾಯ್ಡ್ 11ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 6GB RAM ಮತ್ತು 128GB ಹಾಗೂ 8GB RAM ಮತ್ತು 256GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,400mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 55W ಫ್ಲ್ಯಾಶ್‌ಚಾರ್ಜ್ ಟೆಕ್ನಾಲಜಿಯನ್ನು ಬೆಂಬಲಿಸಲಿದೆ.

ರಿಯಲ್‌ಮಿ 8 ಪ್ರೊ
ರಿಯಲ್‌ಮಿ 8 ಪ್ರೊ ಸ್ಮಾರ್ಟ್‌ಫೋನ್ 1,080x2,400 ಪಿಕ್ಸಲ್ ರೆಸಲ್ಯೂಶನ್ ನೊಂದಿಗೆ 6.6 ಇಂಚಿನ AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್ 720G SoC ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 11 ಓಎಸ್ ಬೆಂಬಲವನ್ನು ಪಡೆದುಕೊಂಡಿದೆ. ಈ ಫೋನ್ ತ್ರಿವಳಿ ಕ್ಯಾಮೆರಾ ಸೆಟ್‌ಅಪ್ ಪಡೆದಿದ್ದು, ಮುಖ್ಯ ಕ್ಯಾಮೆರಾವು 108 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯವನ್ನು ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಪಡೆದುಕೊಂಡಿದೆ. ಜೊತೆಗೆ ಈ ಸ್ಮಾರ್ಟ್‌ಫೋನ್ 4,500mAh ಬ್ಯಾಟರಿ ಸಾಮರ್ಥ್ಯದ ಬ್ಯಾಕ್‌ಅಪ್ ಪಡೆದಿದೆ. ಹಾಗೆಯೇ ಈ ಫೋನ್ 50W SuperDart ಸಾಮರ್ಥ್ಯದ ಚಾರ್ಜಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಈ ಫೋನ್ ಸೈಬರ್ ಸಿಲ್ವರ್ ಹಾಗೂ ಸೈಬರ್ ಬ್ಲ್ಯಾಕ್ ಬಣ್ಣಗಳ ಆಯ್ಕೆ ಪಡೆದಿದೆ. ಇನ್ನು ಈ ಸ್ಮಾರ್ಟ್‌ಫೋನ್ 6GB + 128GB ವೇರಿಯಂಟ್ ದರವು 17,999ರೂ. ಆಗಿದೆ. ಹಾಗೂ 8GB + 128GB ವೇರಿಯಂಟ್ ಬೆಲೆಯು 19,999ರೂ. ಆಗಿದೆ.

ರೆಡ್ಮಿ ನೋಟ್ 11T 5G
ರೆಡ್ಮಿ ನೋಟ್ 11T 5G ಸ್ಮಾರ್ಟ್‌ಫೋನ್ 1,080x2,400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯದ 6.6-ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್ 11 ನಲ್ಲಿ MIUI 12.5 ಜೊತೆಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 1TB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಶೂಟರ್ f/1.8 ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಈ ಫೊನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಈ ಸ್ಮಾರ್ಟ್‌ಫೋನ್ ಬೇಸ್ ಮಾಡೆಲ್ 6GB RAM ಮತ್ತು 64GB ಸ್ಟೋರೇಜ್ ರೂಪಾಂತರ 16,999ರೂ.ಬೆಲೆ ಹೊಂದಿದೆ.


Click it and Unblock the Notifications








