ದೀಪಾವಳಿ ಸಂಭ್ರಮದಲ್ಲಿ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

|

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಅಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಯುವಕರಿಂದ ಹಿಡಿದು ಎಲ್ಲಾ ವಯೋಮಾನದವರು ಕೂಡ ಒಂದು ಸ್ಮಾರ್ಟ್‌ಫೋನ್‌ ಹೊಂದಲು ಬಯಸುತ್ತಾರೆ. ಹೊಸದಾಗಿ ಮಾರುಕಟ್ಟೆಗೆ ಎಂಟ್ರಿ ನೀಡುವ ಸ್ಮಾರ್ಟ್‌ಫೋನ್‌ಗಳಲ್ಲಿ ಯಾವುದು ಖರೀದಿಗೆ ಸೂಕ್ತ ಎಂದು ಗಮನಿಸುತ್ತಿರುತ್ತಾರೆ. ಇದೇ ಕಾರಣಕ್ಕೆ ಸ್ಮಾರ್ಟ್‌ಫೋನ್‌ ತಯಾರಕರು ಕೂಡ ಸಾಕಷ್ಟು ವೈವಿಧ್ಯಮಯ ಸ್ಮಾರ್ಟ್‌ಫೋನ್‌ಗಳನ್ನ ಪರಿಚಯಿಸುತ್ತಾ ಬಂದಿದ್ದಾರೆ. ಸದ್ಯ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ನೀವು ಹೊಸ ಸ್ಮಾರ್ಟ್‌ಫೋನ್‌ ಖರೀದಿಸುವುದಾದರೆ ಹಲವು ಸ್ಮಾರ್ಟ್‌ಫೋನ್‌ಗಳ ಆಯ್ಕೆ ಲಭ್ಯವಿದೆ.

ಸ್ಮಾರ್ಟ್‌ಫೋನ್‌

ಹೌದು, ಹಬ್ಬದ ಸಂಭ್ರಮದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿ ಮಾಡುವುದೆಂದರೆ ವಿಶೇಷವಾದ ಆನಂದವಿರುತ್ತದೆ. ಹಬ್ಬದ ಸಂಭ್ರಮವನ್ನು ಇದು ಇನ್ನಷ್ಟು ಹೆಚ್ಚುಗೊಳಿಸುತ್ತೆ. ದೀಪಾವಳಿಯ ಸಂಭ್ರಮದ ಸನ್ನಿವೇಶದಲ್ಲಿ ಸ್ಮಾರ್ಟ್‌ಫೋನ್‌ ಖರೀದಿಮಾಡುವವರಿಗೆ ಸಾಕಷ್ಟು ಆಯ್ಕೆಗಳಿವೆ. ಇನ್ನು ನೀವು ದೀಪಾವಳಿಯ ಸಮಯದಲ್ಲಿ ಒನ್‌ಪ್ಲಸ್‌, ಶಿಯೋಮಿ ಮತ್ತು ವಿವೋನಂತಹ ಕಂಪನಿಗಳ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ. ಭಾರತದಲ್ಲಿ ಖರೀದಿಸಲು ಲಭ್ಯವಿರುವ ಅತ್ಯುತ್ತಮ ಪ್ರೀಮಿಯಂ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಆಪಲ್‌ ಐಫೋನ್‌ 13

ಆಪಲ್‌ ಐಫೋನ್‌ 13

ಆಪಲ್‌ ಐಫೋನ್‌ 13 6.1 ಇಂಚಿನ ಡಿಸ್‌ಪ್ಲೇ ಹೊಂದಿದ್ದು, ಅತ್ಯುತ್ತುಮ ಪಿಕ್ಸಲ್ ರೆಸಲ್ಯೂಶನ್ ಪಡೆದಿದೆ. 1200nits ಬ್ರೈಟ್ನೆಸ್‌ ಹೊಂದಿದೆ. ಹಾಗೆಯೇ ಈ ಫೋನ್ A15 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 13 ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾ ಪಿಕ್ಸೆಲ್ ಅಲ್ಟ್ರಾ ಕ್ಯಾಮೆರಾ ಸೆನ್ಸಾರ್ ಹೊಂದಿದ್ದು, ಇನ್ನೊಂದು ಕ್ಯಾಮೆರಾವು 12 ಮೆಗಾ ಪಿಕ್ಸಲ್ ವೈಲ್ಡ್‌ ಆಂಗಲ್ ಲೆನ್ಸ್‌ ಪಡೆದಿದೆ. ಯಾವುದೇ ಸಂದರ್ಭದಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಸಿನಿಮ್ಯಾಟಿಕ್ ಮೋಡ್ ಆಯ್ಕೆ ಪಡೆದಿದೆ. ಇನ್ನು ಈ ಫೋನ್ ಪಿಂಕ್, ರೆಡ್, ಬ್ಲ್ಯಾಕ್, ವೈಟ್ ಸೇರಿದಂತೆ ಐದು ಬಣ್ಣಗಳಲ್ಲಿ ಲಭ್ಯವಾಗಲಿದೆ. ಸದ್ಯ ಐಫೋನ್‌ 13 128GB ಸ್ಟೋರೇಜ್ ರೂಪಾಂತರಕ್ಕಾಗಿ 79,900 ರೂಗಳ ಆರಂಭಿಕ ಬೆಲೆಗೆ ಮಾರಾಟವಾಗುತ್ತಿದೆ.

ಆಪಲ್‌ ಐಫೋನ್‌ 12

ಆಪಲ್‌ ಐಫೋನ್‌ 12

ಸದ್ಯ ಆಪಲ್‌ ಐಫೋನ್‌ 12 ಭಾರತದಲ್ಲಿ ಬೆಲೆ ಕಡಿತವನ್ನು ಪಡೆದುಕೊಂಡಿದೆ. ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಐಫೋನ್ 12 64GB ವೇರಿಯಂಟ್ ಆಯ್ಕೆಯು ಸದ್ಯ 65,900ರೂ.ಗಳಿಗೆ ಲಭ್ಯವಾಗಲಿದೆ.

ಒನ್‌ಪ್ಲಸ್ 9 ಪ್ರೊ

ಒನ್‌ಪ್ಲಸ್ 9 ಪ್ರೊ

ಒನ್‌ಪ್ಲಸ್‌ 9 ಪ್ರೊ ಸ್ಮಾರ್ಟ್‌ಫೋನ್‌ 6.7 ಇಂಚಿನ 2.0 AMOLED ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಕ್ವಾಲ್ಕಮ್ ಸ್ನ್ಯಾಪ್‌ಡ್ರಾಗನ್‌ 888 SoC ಪ್ರೊಸೆಸರ್ ಅನ್ನು ಹೊಂದಿದೆ. ಅದರೊಂದಿಗೆ ಒನ್‌ಪ್ಲಸ್‌ ಕೂಲ್‌ ಪ್ಲೇ ಮಲ್ಟಿ ಲೇಯರ್ ಕೂಲಿಂಗ್ ತಂತ್ರಜ್ಞಾನ ಒಳಗೊಂಡಿದೆ. ಹಾಗೆಯೇ ಈ ಪ್ರೊಸೆಸರ್‌ ಆಂಡ್ರಾಯ್ಡ್‌ ಆಕ್ಸಿಜೆನ್ 11 ಓಎಸ್‌ ಬೆಂಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಕ್ವಾಡ್‌ ಕ್ಯಾಮೆರಾ ಸೆಟ್‌ಅಪ್ ಪಡೆದಿದೆ. ಮುಖ್ಯ ಕ್ಯಾಮೆರಾ 48 ಮೆಗಾ ಪಿಕ್ಸಲ್ ಸೆನ್ಸಾರ್ ಸಾಮರ್ಥ್ಯ ಹೊಂದಿದೆ. ಇದರೊಂದಿಗೆ ಮುಂಭಾಗದಲ್ಲಿ ಸೆಲ್ಫಿಗಾಗಿ 16 ಮೆಗಾ ಪಿಕ್ಸಲ್ ಸೆನ್ಸಾರ್ ಕ್ಯಾಮೆರಾ ಒದಗಿಸಲಾಗಿದೆ. ಈ ಸ್ಮಾರ್ಟ್‌ಫೋನ್‌ 4,500mAh ಬ್ಯಾಟರಿ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ನ 8GB RAM ಮತ್ತು 128GB ಸಂಗ್ರಹದೊಂದಿಗೆ ಬರುವ ಬೇಸ್‌ ಮಾಡೆಲ್‌ ಬೆಲೆ 60,999ರೂ.ಆಗಿದೆ.

ವಿವೋ X70 ಪ್ರೊ

ವಿವೋ X70 ಪ್ರೊ

50,000ರೂ ಗಳಿಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳಲ್ಲಿ ವಿವೋ X70 ಪ್ರೊ 5G ಕೂಡ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.56 ಇಂಚಿನ ಫುಲ್‌ HD+ E5 AMOLED ಕರ್ವ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 120 Hz ರಿಫ್ರೆಶ್ ರೇಟ್‌ ಹೊಂದಿದ್ದು, ಸೂಪರ್ -ಸ್ಮೂತ್ ನ್ಯಾವಿಗೇಷನ್ ಮತ್ತು ಸ್ಕ್ರೋಲಿಂಗ್‌ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 1200 ಪ್ರೊಸೆಸರ್‌ ಹೊಂದಿದೆ. ಹಾಗೆಯೇ 8GB RAM ಮತ್ತು 128 GB ಹಾಗೂ 12GB RAM ಮತ್ತು 256 GB ಇಂಟರ್‌ ಸ್ಟೋರೇಜ್‌ ಹೊಂದಿದೆ. ಇನ್ನು ಈ ಫೋನ್‌ ಕ್ವಾಡ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಜೊತೆಗೆ 4450mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 44W ವೇಗದ ಚಾರ್ಜರ್ ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 46,990ರೂ ಬೆಲೆ ಹೊಂದಿದೆ.

Best Mobiles in India

English summary
Here is a look at the top performing phones in the premium category that you can buy in India right now.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X