Home
ಸುದ್ದಿಜಾಲ

1000ರೂ. ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಬೆಸ್ಟ್‌ ಪ್ರಿಪೇಯ್ಡ್‌ ಪ್ಲಾನ್‌ಗಳು!

ಪ್ರಸ್ತುತ ದಿನಗಳಲ್ಲಿ ಟೆಲಿಕಾಂ ವಲಯದಲ್ಲಿ ಸಾಕಷ್ಟು ಬದಲಾವಣೆಗಳು ನಡೆದಿವೆ. ಖಾಸಗಿ ಟೆಲಿಕಾಂಗಳು ತಮ್ಮ ಆಕರ್ಷಕ ಪ್ರಿಪೇಯ್ಡ್‌ ಪ್ಲಾನ್‌ಗಳ ಮೂಲಕ ಗ್ರಾಹಕರ ಗಮನ ಸೆಳೆದಿವೆ. ಅಗ್ಗದ ಬೆಲೆಯಲ್ಲಿ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಜೊತೆಗೆ ಅಧಿಕ ಡೇಟಾ ಪ್ರಯೋಜನ ನೀಡುತ್ತಿವೆ. ಸದ್ಯ ಮುಂಚೂಣಿಯಲ್ಲಿ ಕಾಣಿಸಿಕೊಂಡಿರುವ ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳು ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ಪರಿಚಯಿಸುತ್ತಾ ಬಂದಿವೆ. ಇವುಗಳಲ್ಲಿ ಅಲ್ಪಾವಧಿ ಮಾನ್ಯತೆಯ ಜೊತೆಗೆ ವಾರ್ಷಿಕ ವ್ಯಾಲಿಡಿಟಿ ಹೊಂದಿರುವ ಪ್ಲಾನ್‌ಗಳು ಕೂಡ ಸೇರಿವೆ.

ಏರ್‌ಟೆಲ್‌

ಹೌದು, ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳು ಅನೇಕ ಪ್ರಿಪೇಯ್ಡ್‌ ಪ್ಲಾನ್‌ಗಳನ್ನು ನೀಡುತ್ತಿವೆ. ಈ ಪ್ರಿಪೇಯ್ಡ್‌ ಪ್ಲಾನ್‌ಗಳು ವಿವಿಧ ಆಯ್ಕೆಯ ಬೆಲೆಗಳಲ್ಲಿ ಬರಲಿವೆ. ಇವುಗಳಲ್ಲಿ ಅಗ್ಗದ ಬೆಲೆ ಜೊತೆಗೆ ದುಬಾರಿ ಬೆಲೆಯ ಪ್ಲಾನ್‌ಗಳು ಕೂಡ ಸೇರಿವೆ. ಇದರಲ್ಲಿ 1000ರೂ. ಒಳಗೆ ಬರುವ ಅನೇಕ ಪ್ಲಾನ್‌ಗಳು ಸಾಕಷ್ಟು ಬೇಡಿಕೆ ಪಡೆದುಕೊಂಡಿದೆ. ಹಾಗಾದ್ರೆ ಏರ್‌ಟೆಲ್‌, ಜಿಯೋ, ವಿ ಟೆಲಿಕಾಂಗಳ 1000ರೂ.ಒಳಗಿನ ಪ್ರಿಪೇಯ್ಡ್‌ ಪ್ಲಾನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ 719ರೂ. ಪ್ರೀಪೇಯ್ಡ್‌ ಪ್ಲಾನ್‌

ಜಿಯೋ 719ರೂ. ಪ್ರೀಪೇಯ್ಡ್‌ ಪ್ಲಾನ್‌

1000ರೂ.ಗಿಂತ ಕಡಿಮೆ ಬೆಲೆಯಲ್ಲಿ ಲಭ್ಯವಾಗುವ ಪ್ರಿಪೇಯ್ಡ್‌ ಪ್ಲಾನ್‌ಗಳಲ್ಲಿ ಜಿಯೋ ಟೆಲಿಕಾಂನ 719ರೂ. ಪ್ರೀಪೇಯ್ಡ್‌ ಯೋಜನೆ ಕೂಡ ಒಂದಾಗಿದೆ. ಈ ಪ್ಲಾನ್‌ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದುಕೊಂಡಿದೆ. ಈ ಅವಧಿಯಲ್ಲಿ ಈ ಪ್ಲ್ಯಾನ್ ಸಹ ಪ್ರತಿದಿನ 2GB ಡೇಟಾ ಪ್ರಯೋಜನವನ್ನು ಹೊಂದಿದೆ. ಹಾಗೆಯೇ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ಒಳಗೊಂಡಿದೆ. ಇದರೊಂದಿಗೆ ಜಿಯೋದಿಂದ ಜಿಯೋಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಪಡೆದಿದ್ದು, ಜಿಯೋದಿಂದ ಇತರೆ ನೆಟವರ್ಕ ಕರೆಗಳಿಗೆ 3000 ಉಚಿತ ನಿಮಿಷಗಳ ಮಿತಿ ಹೊಂದಿದೆ. ಇದಲ್ಲದೆ ನೀವು ಜಿಯೋಟಿವಿ, ಜಿಯೋಸಿನಿಮಾ ಮತ್ತು ಇತರೆ ಜಿಯೋ ಅಪ್ಲಿಕೇಶನ್‌ಗಳಿಗೆ ಪ್ರವೇಶವನ್ನು ಪಡೆಯಬಹುದಾಗಿದೆ.

ಜಿಯೋ 479ರೂ. ಪ್ರಿಪೆಯ್ಡ್‌ ಪ್ಲಾನ್‌

ಜಿಯೋ 479ರೂ. ಪ್ರಿಪೆಯ್ಡ್‌ ಪ್ಲಾನ್‌

ಜಿಯೋ ಟೆಲಿಕಾಂನ 479ರೂ. ಬೆಲೆಯ ಈ ಪ್ರೀಪೇಯ್ಡ್‌ ಪ್ಲಾನ್ ಒಟ್ಟು 56 ದಿನಗಳ ಮಾನ್ಯತೆಯನ್ನು ಪಡೆದಿದೆ. ಈ ಪ್ಲಾನ್‌ನಲ್ಲಿ ದೈನಂದಿನ 1.5GB ಡೇಟಾ, ಅನಿಯಮಿತ ಕರ, ಪ್ರಯೋಜನ ಸಿಗಲಿದೆ. ಜೊತೆಗೆ ಪ್ರತಿದಿನ 100 ಉಚಿತ ಎಸ್ಎಮ್ಎಸ್ ಸೌಲಭ್ಯ ನೀಡುತ್ತದೆ.

ಏರ್‌ಟೆಲ್ 839ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಏರ್‌ಟೆಲ್ 839ರೂ. ಪ್ರಿಪೇಯ್ಡ್‌ ಪ್ಲ್ಯಾನ್

ಏರ್‌ಟೆಲಿಕಾಂ 1000ರೂ.ಗಿಂತ ಕಡಿಮೆ ಬೆಲೆಯಲ್ಲಿ ಪರಿಚಯಿಸಿರುವ ಪ್ಲಾನ್‌ಗಳಲ್ಲಿ 839ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಒಂದಾಗಿದೆ. ಈ ಪ್ಲಾನ್‌ 84 ದಿನಗಳ ಮಾನ್ಯತೆಯನ್ನು ಪಡೆದಿದೆ. ಇದು ಬಳಕೆದಾರರಿಗೆ ಪ್ರತಿದಿನ 2GB ಡೇಟಾ, ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಹಾಗೂ ಅನ್‌ಲಿಮಿಟೆಡ್‌ ವಾಯ್ಸ್‌ ಕಾಲ್‌ ಪ್ರಯೋಜನವನ್ನು ನೀಡಲಿದೆ. ಜೊತೆಗೆ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಲಭ್ಯ.

ಏರ್‌ಟೆಲ್ 719ರೂ. ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್ 719ರೂ. ಪ್ರಿಪೇಯ್ಡ್‌ ಪ್ಲಾನ್‌

ಏರ್‌ಟೆಲ್‌ ಟೆಲಿಕಾಂ 719ರೂ. ಪ್ರಿಪೇಯ್ಡ್‌ ಪ್ಲ್ಯಾನ್ ಒಟ್ಟು 84 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಈ ಅವಧಿಯಲ್ಲಿ ಅನಿಯಮಿತ ಕರೆ, ದೈನಂದಿನ 1.5 GB ಡೇಟಾ ಪ್ರಯೋಜನ ಹಾಗೂ ಪ್ರತಿದಿನ 100 ಉಚಿತ ಎಸ್‌ಎಮ್‌ಎಸ್‌ ಸೌಲಭ್ಯಗಳು ಲಭ್ಯವಾಗಲಿವೆ. ಹೆಚ್ಚುವರಿಯಾಗಿ ಏರ್‌ಟೆಲ್ Xstream ಪ್ರೀಮಿಯಂ, ವಿಂಕ್ ಮ್ಯೂಸಿಕ್, ಫಾಸ್ಟ್ಯಾಗ್ ಕ್ಯಾಶ್‌ಬ್ಯಾಕ್ ಸೇವೆಗಳು ಕೂಡ ದೊರೆಯಲಿದೆ.

ವಿ ಟೆಲಿಕಾಂ 699ರೂ.ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 699ರೂ.ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂನ 699ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಒಟ್ಟು 56 ದಿನಗಳ ವ್ಯಾಲಿಡಿಟಿಯನ್ನು ಒಳಗೊಂಡಿದೆ. ಈ ಅವಧಿಯಲ್ಲಿ ಪ್ರತಿದಿನ 3 GB ಡೇಟಾ ಪ್ರಯೋಜನ ದೊರೆಯುತ್ತದೆ. ಹಾಗೆಯೇ ಅನಿಯಮಿತ ವಾಯಿಸ್‌ ಕರೆಗಳ ಸೌಲಭ್ಯ ದೊರೆಯಲಿದೆ. ಹಾಗೆಯೇ ಪ್ರತಿದಿನ 100 ಎಸ್‌ಎಮ್‌ಎಸ್‌ ಪ್ರಯೋಜನ ಸಿಗಲಿದೆ. ಹೆಚ್ಚುವರಿಯಾಗಿ ವೀಕೆಂಡ್ ಡೇಟಾ ರೋಲ್ ಓವರ್ ಪ್ರಯೋಜನ ಜೊತೆಗೆ ವಿ ಆಪ್ಸ್‌ ಸಹ ಲಭ್ಯವಾಗಲಿದೆ.

ವಿ ಟೆಲಿಕಾಂ 539ರೂ.ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 539ರೂ.ಪ್ರಿಪೇಯ್ಡ್‌ ಪ್ಲಾನ್‌

ವಿ ಟೆಲಿಕಾಂ 539ರೂ. ಪ್ರಿಪೇಯ್ಡ್‌ ಪ್ಲ್ಯಾನ್‌ ಒಟ್ಟು 56 ದಿನಗಳ ವ್ಯಾಲಿಡಿಟಿ ಅವಧಿಯನ್ನು ಪಡೆದಿದೆ. ಈ ಅವಧಿಯಲ್ಲಿ ಪ್ರತಿದಿನ 2GB ಡೇಟಾ ಮತ್ತು ಡಬಲ್ ಡೇಟಾ ಆಫರ್‌ನಿಂದಾಗಿ ಹೆಚ್ಚುವರಿ 2GB ಡೇಟಾ ಸೇರಿ ಒಟ್ಟು 4GB ಡೇಟಾ ಸಿಗುತ್ತದೆ. ಅದರೊಂದಿಗೆ ಯಾವುದೇ ನೆಟವರ್ಕಗೆ ಅನಿಯಮಿತ ಉಚಿತ ಕರೆಗಳ ಪ್ರಯೋಜನ ಒಳಗೊಂಡಿದೆ. ಹಾಗೂ ಪ್ರತಿದಿನ 100 ಉಚಿತ ಎಸ್ಎಮ್ಎಸ್‌ ಸಹ ಹೊಂದಿದೆ.

Best Mobiles in India

English summary
Here is a concise list of top recharge plans under Rs 1,000.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+