ಡಿಸ್ಕೌಂಟ್‌ನಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಲು ಇದುವೇ ಬೆಸ್ಟ್‌ ಟೈಂ!

|

ಆನ್‌ಲೈನ್‌ ಶಾಪಿಂಗ್‌ ಪ್ರಿಯರಿಗೆ ತಮ್ಮ ನೆಚ್ಚಿನ ಪ್ರಾಡಕ್ಟ್‌ಗಳನ್ನು ಇದು ಬೆಸ್ಟ್‌ ಟೈಂ ಅಂತಾನೇ ಹೇಳಬಹುದು. ಏಕೆಂದರೆ ಸಾಲು ಸಾಲು ಹಬ್ಬದ ಕಾರಣಕ್ಕಾಗಿ ಇ-ಕಾಮರ್ಸ್ ಪ್ಲಾಟ್‌ಫ್ಲಾರ್ಮ್‌ಗಳು ವಿಶೇಷ ಸೇಲ್‌ಗಳನ್ನು ನಡೆಸುತ್ತಿವೆ. ಆಯ್ದ ಡಿವೈಸ್‌ಗಳ ಮೇಲೆ ವಿಶೇಷ ಡಿಸ್ಕೌಂಟ್‌ಗಳನ್ನು ನೀಡುತ್ತಿವೆ. ಈ ಸಾಲಿಗೆ ಫ್ಲಿಪ್‌ಕಾರ್ಟ್‌ ಕೂಡ ಸೇರಿದ್ದು, ಕೇವಲ ಒಂದು ವಾರದ ಅಂತರದಲ್ಲಿ ಎರಡನೇ ಭಾರಿ ಬಿಗ್‌ ದೀಪಾವಳಿ ಸೇಲ್‌ ನಡೆಸುತ್ತಿದೆ. ಇನ್ನು ಈ ಸೇಲ್‌ ಇದೇ ನವೆಂಬರ್‌ 3 ರವರೆಗೆ ನಡೆಯಲಿದೆ.

ಫ್ಲಿಪ್‌ಕಾರ್ಟ್‌

ಹೌದು, ಫ್ಲಿಪ್‌ಕಾರ್ಟ್‌ ಬಿಗ್‌ ದೀಪಾವಳಿ ಸೇಲ್‌ ನಡೆಸುತ್ತಿದೆ. ಈ ಸೇಲ್‌ನಲ್ಲಿ ಲ್ಯಾಪ್‌ಟಾಪ್‌, ಸ್ಮಾರ್ಟ್‌ಫೋನ್‌, ಸ್ಮಾರ್ಟ್‌ಟಿವಿ, ಬ್ಲೂಟೂತ್‌ ಸ್ಪೀಕರ್‌ ಸೇರಿದಂತೆ ಹಲವು ಗ್ಯಾಜೆಟ್ಸ್‌ಗಳಿಗೆ ಬಿಗ್‌ ಡಿಸ್ಕೌಂಟ್‌ ನೀಡಿದೆ. ಸದ್ಯ ನೀವು ದೀಪಾವಳಿ ಸಮಯದಲ್ಲಿ ಹೊಸ ಸ್ಮಾರ್ಟ್‌ಫೋನ್‌ ಖರೀದಿಸಲು ಬಯಸಿದರೆ ಅನೇಕ ಸ್ಮಾರ್ಟ್‌ಫೋನ್‌ಗಳು ಡಿಸ್ಕೌಂಟ್‌ ಪಡೆದುಕೊಂಡಿವೆ. ಹಾಗಾದ್ರೆ ಫ್ಲಿಪ್‌ಕಾರ್ಟ್‌ ಬಿಗ್‌ ದೀಪಾವಳಿ ಸೇಲ್‌ನಲ್ಲಿ ಡಿಸ್ಕೌಂಟ್‌ನಲ್ಲಿ ನೀವು ಯಾವೆಲ್ಲಾ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಆಪಲ್

ಆಪಲ್

ಆಪಲ್‌ ಸಂಸ್ಥೆಯ ಐಫೋನ್‌ 12 ಫ್ಲಿಪ್‌ಕಾರ್ಟ್‌ ಬಿಗ್‌ ದೀಪಾವಳಿ ಸೇಲ್‌ನಲ್ಲಿ ಬಿಗ್‌ ಡಿಸ್ಕೌಂಟ್‌ ಪಡೆದಿದೆ. ಫ್ಲಿಪ್‌ಕಾರ್ಟ್‌ನಲ್ಲಿ ಐಫೋನ್‌ 12 ಅನ್ನು 53,999ರೂ.ಗಳಿಗೆ ಖರೀದಿಸಬಹುದಾಗಿದೆ. ಇನ್ನು ಐಫೋನ್ 12 OLED ಡಿಸ್‌ಪ್ಲೇ ಹೊಂದಿದ್ದು, A14 ಬಯೋನಿಕ್ ಸೋಕ್ ಕ್ವಾಡ್‌ ಕೋರ್ ಪ್ರೊಸೆಸರ್‌ ಅನ್ನು ಹೊಂದಿದೆ. 5G ಅನ್ನು ಬೆಂಬಲಿಸುತ್ತದೆ. ಐಫೋನ್ 12 ಫೋನ್ ಎರಡು ಕ್ಯಾಮೆರಾ ಹೊಂದಿದ್ದು, ಅವುಗಳು ಕ್ರಮವಾಗಿ 12 ಮೆಗಾಪಿಕ್ಸೆಲ್ ವೈಡ್-ಆಂಗಲ್ ಸಂವೇದಕಗಳನ್ನು ಹೊಂದಿವೆ. ನೈಟ್‌ ಮೋಡ್‌ ಆಯ್ಕೆ ಇದ್ದು ಕಡಿಮೆ ಬೆಳಕಿನಲ್ಲಿಯೂ ಅತ್ಯುತ್ತಮ ಫೋಟೊ ಸೆರೆಹಿಡಿಯಲು ನೆರವಾಗಲಿದೆ. ಇದಲ್ಲದೆ ಐಫೋನ್‌ 12 Pro ಅನ್ನು 1,09,900ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ ಐಫೋನ್‌ 12 ಪ್ರೊ ಮ್ಯಾಕ್ಸ್‌ 1,19,900ರೂ.ಗಳಿಗೆ ದೊರೆಯಲಿದೆ.

ಪೊಕೊ

ಪೊಕೊ

ಪೊಕೊ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಕೂಡ ಫ್ಲಿಪ್‌ಕಾರ್ಟ್ ಬಿಗ್‌ ದೀಪಾವಳಿ ಸೇಲ್‌ನಲ್ಲಿ ಹೆಚ್ಚಿನ ಆಫರ್‌ ಪಡೆದುಕೊಂಡಿವೆ. ಇದರಲ್ಲಿ ಪೊಕೊ C3 ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 7,499ರೂ.ಗಳಿಗೆ ದೊರೆಯಲಿದೆ. ಇನ್ನು ಪೊಕೊ M2 ರಿಲೋಡೆಡ್ ಸ್ಮಾರ್ಟ್‌ಫೋನ್‌ 9,999ರೂ.ಗಳಿಗೆ ಖರೀದಿಸಬಹುದಾಗಿದೆ. ಇದಲ್ಲದೆ ನೀವು ಪೊಕೊ M2 ಪ್ರೊ ಸ್ಮಾರ್ಟ್‌ಫೋನ್‌ 11,999ರೂ, ಹಾಗೂ ಪೊಕೊ X3 ಪ್ರೊ 16,999ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ನೀವು ಗೇಮಿಂಗ್‌ ಸ್ಮಾರ್ಟ್‌ಫೋನ್‌ ಬಯಸಿದರೆ ಪೊಕೊ F3 GT ಫೋನ್‌ ಪ್ರಸ್ತುತ 26,999ರೂ.ಗಳಿಗೆ ದೊರೆಯಲಿದೆ. ಈ ಎಲ್ಲಾ ಫೋನ್‌ಗಳು ಆಯ್ದ ಬ್ಯಾಂಕ್‌ ಕ್ರೆಡಿಟ್‌ ಹಾಗೂ ಡೆಬಿಟ್‌ ಕಾರ್ಡ್‌ಗಳ ಮೂಲಕ ಹೆಚ್ಚುವರಿ ಕ್ಯಾಶ್‌ಬ್ಯಾಕ್‌ ಆಫರ್‌ ಪಡೆದುಕೊಳ್ಳಬಹುದಾಗಿದೆ.

ವಿವೋ

ವಿವೋ

ವಿವೋ ಕಂಪೆನಿಯ ಸ್ಮಾರ್ಟ್‌ಫೋನ್‌ಗಳು ಕೂಡ ಫ್ಲಿಪ್‌ಕಾರ್ಟ್‌ ಸೇಲ್‌ನಲ್ಲಿ ಹೆಚ್ಚಿನ ರಿಯಾಯಿತಿ ಪಡೆದುಕೊಂಡಿವೆ. ಇದರಲ್ಲಿ ವಿವೋ X70 ಪ್ರೊ + ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ 79,990ರೂ.ಗಳಿಗೆ ದೊರೆಯಲಿದೆ. ವೆನಿಲ್ಲಾ ವಿವೋ X70 ಸ್ಮಾರ್ಟ್‌ಫೋನ್‌ 46,990ರೂ.ಗಳಿಂದ ಪ್ರಾರಂಭವಾಗುತ್ತದೆ. ಇನ್ನು ವಿವೋ V21 ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 29,990ರೂ.ಗಳಿಗೆ ಲಭ್ಯವಾಗಲಿದೆ. ಹಾಗೆಯೇ ವಿವೋ V21e ಸ್ಮಾರ್ಟ್‌ಫೋನ್‌ 24,990ರೂ.ಬೆಲೆಯಲ್ಲಿ ಮಾರಾಟವಾಗುತ್ತಿದೆ.

ರಿಯಲ್‌ಮಿ

ರಿಯಲ್‌ಮಿ

ಫ್ಲಿಪ್‌ಕಾರ್ಟ್‌ ಬಿಗ್‌ ದೀಪಾವಳಿ ಸೇಲ್‌ನಲ್ಲಿ ರಿಯಲ್‌ಮಿ ಸ್ಮಾರ್ಟ್‌ಫೋನ್‌ಗಳು ಕೂಡ ಬಿಗ್‌ ಡಿಸ್ಕೌಂಟ್‌ ಪಡೆದುಕೊಂಡಿವೆ. ಇವುಗಳಲ್ಲಿ ರಿಯಲ್‌ಮಿ 8s ಸ್ಮಾರ್ಟ್‌ಫೋನ್‌ ಕೇವಲ 17,999 ರೂಪಾಯಿಗಳಿಗೆ ಲಭ್ಯವಾಗಲಿದೆ. ಜೊತೆಗೆ ರಿಯಲ್‌ಮಿ ನಾರ್ಜೊ 30 ಕೇವಲ 13,499ರೂ.ಗಳಿಗೆ ದೊರೆಯಲಿದೆ. ಇದರೊಂದಿಗೆ ರಿಯಲ್‌ಮಿ ನಾರ್ಜೊ 50A ಕೂಡ 11,499ರೂ.ಗಳಿಗೆ ಲಭ್ಯವಾಗಲಿದೆ. ಇನ್ನು ರಿಯಲ್‌ಮಿ ನಾರ್ಜೊ 50i ಸ್ಮಾರ್ಟ್‌ಫೋನ್‌ 8,999ರೂ.ಗಳಿಗೆ ದೊರೆಯಲಿದೆ.ಅಲ್ಲದೆ ಇತ್ತೀಚಿಗಷ್ಟೇ ಬಿಡುಗಡೆಯಾದ ರಿಯಲ್‌ಮಿ GT ಮಾಸ್ಟರ್ ಆವೃತ್ತಿಯು ಹೆಚ್ಚುವರಿ ಬ್ಯಾಂಕ್ ಕೊಡುಗೆಗಳ ಮೂಲಕ ಕೇವಲ 25,999ರೂಗಳಿಗೆ ಲಭ್ಯವಿದೆ.

ಮೊಟೊರೊಲಾ

ಮೊಟೊರೊಲಾ

ಮೊಟೊರೊಲಾ ಕಂಪೆನಿಯ ಹೊಸ ಮೊಟೊರೊಲಾ ಎಡ್ಜ್‌20 ಫ್ಲಿಪ್‌ಕಾರ್ಟ್‌ನಲ್ಲಿ 27,999 ರೂಗಳಿಗೆ ಲಭ್ಯವಾಗಲಿದೆ. ಮೊಟೊರೊಲಾ ಎಡ್ಜ್‌ 20ಪ್ರೊ ಸ್ಮಾರ್ಟ್‌ಫೋನ್‌ 34,990ರೂ.ಬೆಲೆಯಲ್ಲಿ ದೊರೆಯಲಿದೆ. ಜೊತೆಗೆ ಮೋಟೋ ಜಿ 40 ಫ್ಯೂಷನ್ ಸ್ಮಾರ್ಟ್‌ಫೋನ್‌ ನಿಮಗೆ ಕೇವಲ 12,999ರೂ.ಬೆಲೆಯಲ್ಲಿ ದೊರೆಯಲಿದೆ.

Most Read Articles
Best Mobiles in India

English summary
Here's best smartphone deals on Flipkart big diwali sale.to know more visit to kannada.gizbot.com.

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X