ದುಬಾರಿ ಬೆಲೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!

|

ಟೆಕ್‌ ಮಾರುಕಟ್ಟೆಯಲ್ಲಿ ಭಿನ್ನ ಪ್ರೈಸ್‌ಟ್ಯಾಗ್‌ನಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಕಾಣಬಹುದಾಗಿದೆ. ಬಜೆಟ್‌ ಬೆಲೆಯಲ್ಲಿ ಮಾತ್ರವಲ್ಲದೆ ದುಬಾರಿ ಬೆಲೆಯ ಸ್ಮಾರ್ಟ್‌ಫೋನ್‌ಗಳು ಕೂಡ ಮಾರುಕಟ್ಟೆಯಲ್ಲಿ ತಮ್ಮದೇ ಆದ ಪ್ರಾಬಲ್ಯವನ್ನು ಹೊಂದಿವೆ. ಇವುಗಳಲ್ಲಿ ಜನಪ್ರಿಯ ಬ್ರ್ಯಾಂಡ್‌ಗಳ ಸ್ಮಾರ್ಟ್‌ಫೋನ್‌ಗಳಿಗೆ ದುಬಾರಿ ಬೆಲೆ ಆದರೂ ಹೆಚ್ಚಿನ ಬೇಡಿಕೆಯಿದೆ. ಈ ಸಾಲಿನಲ್ಲಿ ಶಿಯೋಮಿ, ಒನ್‌ಪ್ಲಸ್‌, ಐಕ್ಯೂ, ಗೂಗಲ್‌ ಕಂಪೆನಿಯ ಫೋನ್‌ಗಳು ಸೇರಿವೆ.

ಸ್ಮಾರ್ಟ್‌ಫೋನ್‌

ಹೌದು, ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ದುಬಾರಿಯ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೂ ಹೆಚ್ಚಿನ ಕ್ರೇಜ್‌ ಇದೆ. ಇದಕ್ಕೆ ತಕ್ಕಂತೆ ಹೆಚ್ಚಿನ ಬೆಲೆಯ ಸ್ಮಾರ್ಟ್‌ಫೋನ್‌ಗಳು ಹಲವು ಪ್ರೀಮಿಯಂ ಫೀಚರ್ಸ್‌ಗಳ ಮೂಲಕ ಗಮನಸೆಳೆದಿವೆ. ಪ್ರಸ್ತುತ ಹೊಸ ವರ್ಷದ ಪ್ರಯುಕ್ತ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡಲು ತುದಿಗಾಲಲ್ಲಿ ನಿಂತಿವೆ. ಸದ್ಯ ನವು ಭಾರತದ ಮಾರುಕಟ್ಟೆಯಲ್ಲಿ ದುಬಾರಿ ಬೆಲೆಯಲ್ಲಿ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ.

ಶಿಯೋಮಿ 12 ಪ್ರೊ 5G

ಶಿಯೋಮಿ 12 ಪ್ರೊ 5G

ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ 12GB + 256GB ಸ್ಟೋರೆಜ್‌ ಆಯ್ಕೆಯು 59,999ರೂ. ಬೆಲೆಯಲ್ಲಿ ದೊರೆಯಲಿದೆ. ಶಿಯೋಮಿ 12 ಪ್ರೊ 5G ಸ್ಮಾರ್ಟ್‌ಫೋನ್‌ 6.73 ಇಂಚಿನ WQHD+ ಸ್ಯಾಮ್‌ಸಂಗ್‌ E5 ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿರಲಿದೆ. ಇದು ಆಕ್ಟಾ-ಕೋರ್‌ ಸ್ನಾಪ್‌ಡ್ರಾಗನ್‌ 8 Gen 1 SoC ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್‌ನೊಂದಿಗೆ ಬರಲಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX707 ಸೆನ್ಸಾರ್‌ ಅನ್ನು ಹೊಂದಿದೆ. ಇದಲ್ಲದೆ 32 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿರಲಿದೆ.

ಗೂಗಲ್ ಪಿಕ್ಸೆಲ್ 7

ಗೂಗಲ್ ಪಿಕ್ಸೆಲ್ 7

ಗೂಗಲ್ ಪಿಕ್ಸೆಲ್ 7 ಸ್ಮಾರ್ಟ್‌ಫೋನ್‌ ಆರಂಭಿಕ ಬೆಲೆ 59,999ರೂ.ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.32 ಇಂಚಿನ ಫುಲ್‌ ಹೆಚ್‌ಡಿ ಪ್ಲಸ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಟೆನ್ಸರ್ G2 SoC ಪ್ರೊಸೆಸರ್‌ ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಡ್ಯುಯಲ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸಲ್‌ ಸೆನ್ಸಾರ್‌ ಪಡೆದಿದೆ. ಜೊತೆಗೆ 4,335mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. ಇದು 30W ವೇಗದ ಚಾರ್ಜಿಂಗ್ ಮತ್ತು ವಾಯರ್‌ಲೆಸ್ ಚಾರ್ಜಿಂಗ್‌ಗೆ ಬೆಂಬಲಿಸಲಿದೆ.

ಐಕ್ಯೂ 11 5G

ಐಕ್ಯೂ 11 5G

ಐಕ್ಯೂ 11 5G 2023 ಸ್ಮಾರ್ಟ್‌ಫೋನ್‌ 8GB + 128GB ಸ್ಟೋರೇಜ್‌ ಆಯ್ಕೆಗೆ 59,999ರೂ.ಬೆಲೆಯಲ್ಲಿ ಲಭ್ಯವಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6.78 ಇಂಚಿನ ಪಂಚ್-ಹೋಲ್ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 8 Gen 2 SoC ಪ್ರೊಸೆಸರ್‌ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್‌ ಸ್ಯಾಮ್‌ಸಂಗ್ GN5 ಸೆನ್ಸಾರ್‌ ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಒಳಗೊಂಡಿದೆ. 120W ವೇಗದ ವೈರ್ಡ್ ಚಾರ್ಜಿಂಗ್‌ಗೆ ಬೆಂಬಲವನ್ನು ಹೊಂದಿದೆ.

ಒನ್‌ಪ್ಲಸ್‌ 10T 5G

ಒನ್‌ಪ್ಲಸ್‌ 10T 5G

ಒನ್‌ಪ್ಲಸ್‌ 10T 5G ಸ್ಮಾರ್ಟ್‌ಫೋನ್‌ನ ಆರಂಭಿಕ ಬೆಲೆ 49,999 ರೂ. ಆಗಿದೆ. ಈ ಸ್ಮಾರ್ಟ್‌ಫೋನ್‌ 6.7 ಇಂಚಿನ ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್‌ಕಾಮ್‌ ಸ್ನಾಪ್‌ಡ್ರಾಗನ್ 8+ Gen 1 SoC ಪ್ರೊಸೆಸರ್‌ ನಲ್ಲಿ ಕಾರ್ಯ ನಿರ್ವಹಿಸಲಿದೆ. ಜೊತೆಗೆ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ರನ್‌ ಆಗಲಿದೆ. ಈ ಸ್ಮಾರ್ಟ್‌ಫೋನ್‌ ಟ್ರಿಪಲ್ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೋನಿ IMX766 ಸೆನ್ಸಾರ್‌ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿರುತ್ತದೆ.

Best Mobiles in India

English summary
Here's Best smartphone to buy under Rs 60,000 in india

ಉತ್ತಮ ಫೋನ್‌ಗಳು

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X