20,000 ರೂ.ಒಳಗೆ ನೀವು ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳು ಲಭ್ಯವಿದೆ. ಬಜೆಟ್ ಬೆಲೆಯಿಂದ ಹಿಡಿದ ಹೈ ಎಂಡ್ ಬೆಲೆಯ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ. ಆದರೆ ಮಾರುಕಟ್ಟೆಯಲ್ಲಿ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇದೇ ಕಾರಣಕ್ಕೆ ಅನೇಕ ಸ್ಮಾರ್ಟ್‌ಫೋನ್ ಕಂಪೆನಿಗಳು ಬಜೆಟ್ ಮತ್ತು ಮಧ್ಯಮ ಶ್ರೇಣಿ ಬೆಲೆಯಲ್ಲಿ ಹಲವು ಆಕರ್ಷಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.

ಹೌದು, ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆ ಸಾಕಷ್ಟು ವಿಶಾಲವಾಗಿದೆ. ಇನ್ನು ಬಜೆಟ್ ಬೆಲೆಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸುವವರಿಗೆ ಅನೇಕ ಆಯ್ಕೆಗಳು ಲಬ್ಯವಿದೆ. ರಿಯಲ್‌ಮಿ, ಶಿಯೋಮಿ, ಸ್ಯಾಮ್‌ಸಂಗ್, ಪೊಕೊ ಬ್ರಾಂಡ್‌ಗಳು 20,000ಕ್ಕಿಂತ ಕಡಿಮೆ ಬೆಲೆಯಲ್ಲಿ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಅನಾವರಣಗೊಳಿಸಿವೆ. ಹಾಗಾದ್ರೆ 20,000ರೂ.ಬೆಲೆಯಲ್ಲಿ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತಿವಿ ಓದಿರಿ.

ಮೋಟೋ G52
ಮೋಟೋ G52 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಪೋಲ್ಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 20:9 ರಚನೆಯ ಅನುಪಾತ ಮತ್ತು 90Hz ರಿಫ್ರೆಶ್ ರೇಟ್ ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 12 ಬೆಂಬಲದೊಂದಿಗೆ ಕಾರ್ಯನಿರ್ವಹಿಲಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಒಳಗೊಂಡಿದೆ.ಮೋಟೋ G52 ಸ್ಮಾರ್ಟ್‌ಫೋನ್ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲವನ್ನು ನೀಡುತ್ತದೆ. ಈ ಸ್ಮಾರ್ಟ್‌ಫೋನ್ 4GB + 64GB ಸ್ಟೋರೇಜ್ ಮಾದರಿಗೆ 14,499ರೂ. ಬೆಲೆ ಹೊಂದಿದೆ.

ಒಪ್ಪೋ K10
ಒಪ್ಪೋ K10 ಸ್ಮಾರ್ಟ್‌ಫೋನ್ 6.59 ಇಂಚಿನ ಫುಲ್ HD+ ಡಿಸ್‌ಪ್ಲೇ ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಹೊಂದಿದ್ದು, ಕಲರ್ ಒಎಸ್ 11.1 ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಹೊಂದಿದೆ. ಇದಲ್ಲದೆ ಸ್ಮಾರ್ಟ್‌ಫೋನ್‌ನಲ್ಲಿ ಬಳಕೆಯಾಗದ ಸ್ಟೋರೇಜ್ ಸ್ಪೇಸ್ ಬಳಸಿಕೊಂಡು ಹೆಚ್ಚುವರಿ 5G ಮೂಲಕ ಡೈನಾಮಿಕ್ 'RAM ವಿಸ್ತರಣೆಯನ್ನು' ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಪಡೆದಿದೆ. ಇದು 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಆರಂಭಿಕ ಬೆಲೆ 6GB RAM + 128GB ಸ್ಟೋರೇಜ್ ಮಾದರಿಗೆ 14,990ರೂ.ಆಗಿದೆ.

ಪೊಕೊ M4 ಪ್ರೊ
ಪೊಕೊ M4 ಪ್ರೊ ಸ್ಮಾರ್ಟ್‌ಫೋನ್ 6.43 ಇಂಚಿನ ಅಮೋಲೆಡ್ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G96 ಪ್ರೊಸೆಸರ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಕೂಡ ಹೊಂದಿದೆ. ಈ ಫೋನ್ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಭಾರತದಲ್ಲಿ 14,999ರೂ.ಬೆಲೆಗೆ ಲಭ್ಯವಿದೆ.

ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G
ಸ್ಯಾಮ್‌ಸಂಗ್ ಗ್ಯಾಲಕ್ಸಿ M33 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಇನ್ಫಿನಿಟಿ V ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ 5nm ಎಕ್ಸಿನೋಸ್ ಪ್ರೊಸೆಸರ್ ಅನ್ನು ಹೊಂದಿದ್ದು, ಆಂಡ್ರಾಯ್ಡ್ 12 UI 4.1 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 6,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನಿನ ಬೇಸ್ ಮಾಡೆಲ್ 6GB + 128GB ಸ್ಟೋರೇಜ್ ಮಾದರಿಗೆ 18,999ರೂ.ಆಗಿದೆ.


Click it and Unblock the Notifications








