ಫೆಬ್ರವರಿಯಲ್ಲಿ 15,000 ರೂ. ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!
ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ನಮ್ಮ ದೈನಂದಿನ ಜೀವನದ ಅಗತ್ಯದ ಡಿವೈಸ್ ಎನಿಸಿಕೊಂಡಿದೆ. ಇದೇ ಕಾರಣಕ್ಕೆ ಹಲವು ಕಂಪೆನಿಗಳು ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಇವೆ. ಇನ್ನು ಕಳೆದ ಜನವರಿ ತಿಂಗಳಿನಲ್ಲಿಯೂ ಅನೇಕ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಬಿಡುಗಡೆ ಆಗಿವೆ. ಒನ್‌ಪ್ಲಸ್, ಆಪಲ್, ವಿವೋ, ಶಿಯೋಮಿಯಂತಂಹ ಪ್ರಮುಖ ಕಂಪೆನಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.

ಹೌದು, ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಅನೇಕ ಸ್ಮಾರ್ಟ್‌ಫೋನ್‌ಗಳು ಬಿಡುಗಡೆ ಆಗಿವೆ. ನೀವು ಕೂಡ ಹೊಸ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ನಿಮಗೆ ಹಲವು ಆಯ್ಕೆಗಳು ಲಭ್ಯವಿದೆ. ಆದರೂ ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಹೆಚ್ಚಿನ ಜನಪ್ರಿಯತೆ ಪಡೆದಿರೋದ್ರಿಂದ ಹೆಚ್ಚಿನ ಕಂಪೆನಿಗಳು ಬಜೆಟ್ ಬೆಲೆಯ ಸ್ಮಾರ್ಟ್‌ಫೋನ್ ಬಿಡುಗಡೆ ಮಾಡಿವೆ. ಹಾಗಾದ್ರೆ ಫೆಬ್ರವರಿ ತಿಂಗಳಿನಲ್ಲಿ 15,000 ರೂ.ಗಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಮೈಕ್ರೋಮ್ಯಾಕ್ಸ್ ಇನ್ ನೋಟ್ 2
ಬಜೆಟ್ ಬೆಲೆಯಲ್ಲಿ ನೀವು ಆಯ್ಕೆ ಮಾಡಬಹುದಾದ ಮತ್ತೊಂದು ಸ್ಮಾರ್ಟ್‌ಫೋನ್ ಮೈಕ್ರೋಮ್ಯಾಕ್ಸ್ ಇನ್ ನೋಟ್ 2. ಈ ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, ಪ್ರೀಮಿಯಂ ವಿನ್ಯಾಸವನ್ನು ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಹಿಲಿಯೊ G95 ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸೆನ್ಸಾರ್ ಹೊಂದಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 13,499ರೂ.ಬೆಲೆ ಹೊಂದಿದೆ.

ರಿಯಲ್‌ಮಿ 9i
ರಿಯಲ್‌ಮಿ 9i ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ ಹೆಚ್‌ಡಿ+ LCD ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್ 11 ರಿಯಲ್‌ಮಿ UI 2.0 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಹಾಗೆಯೇ 4GB RAM + 64GB ಮತ್ತು 6GB + 128GB ಇಂಟರ್ ಸ್ಟೋರೇಜ್ ವೇರಿಯೆಂಟ್ ಆಯ್ಕೆಯನ್ನು ಹೊಂದಿದೆ. ಇದಲ್ಲದೆ ಮೈಕ್ರೋ ಎಸ್‌ಡಿ ಕಾರ್ಡ್ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಒಳಗೊಂಡಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 33W ವೇಗದ ಚಾರ್ಜಿಂಗ್‌ನೊಂದಿಗೆ 5000mAh ಬ್ಯಾಟರಿಯನ್ನು ಹೊಂದಿದೆ.

ಇನ್ಫಿನಿಕ್ಸ್ ನೋಟ್ 11
ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್‌ಹೆಚ್‌ಡಿ+ ಡಿಸ್‌ಪ್ಲೇ ಹೊಂದಿದೆ. ಇನ್ನು ಈ ಡಿಸ್‌ಪ್ಲೇಯು ಗೊರಿಲ್ಲಾ ಗ್ಲಾಸ್ 3 ಪ್ರೊಟೆಕ್ಷನ್ ಅನ್ನು ಹೊಂದಿದೆ. ಇದು ಮೀಡಿಯಾಟೆಕ್ ಹಿಲಿಯೋ G88 ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 4GB RAM ಮತ್ತು 64 GB ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್, ಎರಡನೇ ಕ್ಯಾಮೆರಾ 2MP ಡೆಪ್ತ್ ಸೆನ್ಸಾರ್ ಮತ್ತು AI ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಇದು 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ.

ಮೋಟೋ G51
ಈ ತಿಂಗಳು ನೀವು ಬಜೆಟ್ ಬೆಲೆಯಲ್ಲಿ ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳಲ್ಲಿ ಮೋಟೋ G51 ಕೂಡ ಸೇರಿದೆ. ಈ ಸ್ಮಾರ್ಟ್‌ಫೋನ್ 6.8 ಇಂಚಿನ ಪಂಚ್-ಹೋಲ್ LCD ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್ ಮತ್ತು 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಅನ್ನು ಹೊಂದಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480+ SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಆಂಡ್ರಾಯ್ಡ್11 ನಲ್ಲಿ My UX ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ S5JKN1 ಸೆನ್ಸಾರ್, ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಈ ಫೋನ್ 5000mAh ಬ್ಯಾಟರಿಯನ್ನು ಹೊಂದಿದೆ.


Click it and Unblock the Notifications








