Home
ಸುದ್ದಿಜಾಲ

ಭಾರತದಲ್ಲಿ 6,000ರೂ. ಒಳಗೆ ಲಭ್ಯವಾಗುವ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳು!

ಇಂದಿನ ದಿನಗಳಲ್ಲಿ ಸ್ಮಾರ್ಟ್‌ಫೋನ್‌ ಬಳಕೆ ಹೆಚ್ಚಿನ ಪ್ರಮಾಣದಲ್ಲಿದೆ. ಕೈ ನಲ್ಲಿ ಸ್ಮಾರ್ಟ್‌ಫೋನ್‌ ಇಲ್ಲದಿದ್ರೆ ಮನೆಯಿಂದ ಹೊಹೋಗುವುದು ಕಷ್ಟ ಎನ್ನುವ ಕಾಲಘಟ್ಟದಲ್ಲಿ ನಾವಿದ್ದೇವೆ. ಇದೇ ಕಾರಣಕ್ಕೆ ಅನೇಕ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳು ವಿವಿಧ ಮಾದರಿಯ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಇನ್ನು ಸ್ಮಾರ್ಟ್‌ಫೋನ್‌ಗಳು ವಿವಿಧ ಮಾದರಿಯ ಬೆಲೆಯಲ್ಲಿ ಕೂಡ ಲಭ್ಯವಾಗಲಿವೆ. ಕೈ ಗೆಟಕುವ ಬೆಲೆಯಿಂದ ಹಿಡಿದು ಹೈ ಎಂಡ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಇದರಲ್ಲಿ ಬಜೆಟ್‌ ಬೆಲೆಯ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ.

ಸ್ಮಾರ್ಟ್‌ಫೋನ್‌

ಹೌದು, ಭಾರತದ ಮಾರುಕಟ್ಟೆಯಲ್ಲಿ ಹಲವು ಆಯ್ಕೆ ಬೆಲೆಯಲ್ಲಿ ವಿವಿಧ ಸ್ಮಾರ್ಟ್‌ಫೋನ್‌ಗಳು ಖರೀದಿಗೆ ಲಭ್ಯವಾಗಲಿವೆ. ಹಲವಾರು ಸ್ಮಾರ್ಟ್‌ಫೋನ್‌ಗಳು ಎಂಟ್ರಿ ಲೆವೆಲ್‌ ಪ್ರೈಸ್‌ ಟ್ಯಾಗ್‌ನಲ್ಲಿ ದೊರೆಯಲಿವೆ. ಈ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೆಲೆಯ ಸ್ಮಾರ್ಟ್‌ಫೋನ್‌ಗಳ ರೀತಿಯ ಕಾರ್ಯದಕ್ಷತೆ ಹೊಂದಿಲ್ಲದಿದ್ದರೂ ಮೂಲಭೂತವಾಗಿ ಬೇಕಾದ ಫೀಚರ್ಸ್‌ಗಳನ್ನು ಒಳಗೊಂಡಿರುತ್ತವೆ. ಇನ್ನು ಈ ಮಾದರಿಯ ಫೋನ್‌ಗಳು 6,000ರೂ. ಬೆಲೆಯಲ್ಲಿ ಕೂಡ ಲಭ್ಯವಾಗುತ್ತವೆ. ಹಾಗಾದ್ರೆ ಭಾರತದಲ್ಲಿ 6,000ರೂ. ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು ಯಾವುವು ಅನ್ನೊದನ್ನ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ಜಿಯೋ ಫೋನ್ ನೆಕ್ಸ್ಟ್ 4G

ಜಿಯೋ ಫೋನ್ ನೆಕ್ಸ್ಟ್ 4G

ಜಿಯೋ ಫೋನ್ ನೆಕ್ಸ್ಟ್ 4G ಸ್ಮಾರ್ಟ್‌ಫೋನ್‌ ಎಂಟ್ರಿ ಲೆವೆಲ್‌ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಾಗಲಿದೆ. ಈ ಸ್ಮಾರ್ಟ್‌ಫೋನ್‌ ಜಿಯೋ ಮತ್ತು ಗೂಗಲ್ ಸಹಯೋಗದಲ್ಲಿ ಅಭಿವೃದ್ಧಿಪಡಿಸಲಾಗಿದೆ. ಇದು 5.45-ಇಂಚಿನ HD+ LCD ಡಿಸ್‌ಪ್ಲೇಯನ್ನು ಹೊಂದಿದೆ. ಜಿಯೋ ಫೋನ್ ನೆಕ್ಸ್ಟ್ 4G ಸ್ಮಾರ್ಟ್‌ಫೋನ್‌ ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ QM215 ಪ್ರೊಸೆಸರ್‌ ಬಲವನ್ನು ಪಡೆದಿದೆ. ಇದು ಪ್ರಗತಿ OS ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 8 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 3500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ ಅಮೆಜಾನ್‌ 5,730ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ರೆಡ್ಮಿ ಗೋ

ರೆಡ್ಮಿ ಗೋ

ರೆಡ್ಮಿ ಗೋ ಸ್ಮಾರ್ಟ್‌ಫೋನ್‌ ಕೂಡ ಕೈ ಗೆಟಕುವ ಬೆಲೆಯಲ್ಲಿ ದೊರೆಯಲಿದೆ. ಈ ಸ್ಮಾರ್ಟ್‌ಫೋನ್‌ 720x1080 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯದ 5 ಇಂಚಿನ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 425 ಪ್ರೊಸೆಸರ್‌ ಬಲವನ್ನು ಹೊಂದಿದ್ದು, ಆಂಡ್ರಾಯ್ಡ್‌ Go ಆವೃತ್ತಿಯಲ್ಲಿ ಕಾರ್ಯನಿರ್ವಹಿಸಲಿದೆ. ಹಾಗೆಯೇ 1GB RAM ಮತ್ತು 8GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ ಮೆಮೊರಿ ಕಾರ್ಡ್‌ ಮೂಲಕ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವ ಆಯ್ಕೆಯನ್ನು ಸಹ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದೆ. ಇದು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದುಕೊಂಡಿದೆ. ಜೊತೆಗೆ 3000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 5,199ರೂ.ಬೆಲೆಯನ್ನು ಹೊಂದಿದೆ.

ಲಾವಾ Z1S

ಲಾವಾ Z1S

ಲಾವಾ Z1S ಸ್ಮಾರ್ಟ್‌ಫೋನ್‌ ಬಜೆಟ್‌ ಬೆಲೆಯಲ್ಲಿ ಲಭ್ಯವಾಗುವ 4G ಸ್ಮಾರ್ಟ್‌ಫೋನ್‌ ಆಗಿದೆ. ಈ ಸ್ಮಾರ್ಟ್‌ಫೋನ್‌ 720x1600 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್ ಹೊಂದಿರುವ 5 ಇಂಚಿನ ಡಿಸ್‌ಪ್ಲೇ ಹೊಂದಿದೆ. ಇದು ಆಕ್ಟಾ-ಕೋರ್ ಯೂನಿಸೋಕ್‌ SC9863 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 16GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಈ ಸ್ಮಾರ್ಟ್‌ಫೋನ್ 5 ಮೆಗಾಪಿಕ್ಸೆಲ್ ರಿಯರ್‌ ಕ್ಯಾಮೆರಾ ಹೊಂದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 3100mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 5,399ರೂ.ಬೆಲೆಯಲ್ಲಿ ಲಭ್ಯವಾಗಲಿದೆ.

ಸ್ಯಾಮ್‌ಸಂಗ್‌ M01 ಕೋರ್

ಸ್ಯಾಮ್‌ಸಂಗ್‌ M01 ಕೋರ್

ಸ್ಯಾಮ್‌ಸಂಗ್‌ M01 ಕೋರ್ ಸ್ಮಾರ್ಟ್‌ಫೋನ್‌ ಕೂಡ ಎಂಟ್ರಿ ಲೆವೆಲ್‌ ಸ್ಮಾರ್ಟ್‌ಫೋನ್‌ ಆಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 5.3 ಇಂಚಿನ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಮೀಡಿಯಾಟೆಕ್‌ MT6739 SoC ಪ್ರೊಸೆಸರ್‌ ಬಲವನ್ನು ಪಡೆದಿದೆ. ಆಂಡ್ರಾಯ್ಡ್‌ Go ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಸ್ಟೋರೇಜ್‌ ಸಾಮರ್ಥ್ಯವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಸಿಂಗಲ್‌ ರಿಯರ್‌ ಕ್ಯಾಮೆರಾ ಹೊಂದಿದ್ದು, ಇದು 8 ಮೆಗಾಪಿಕ್ಸೆಲ್ ಸೆನ್ಸಾರ್‌ ಪಡೆದಿದೆ. ಇದಲ್ಲದೆ 5 ಮೆಗಾಪಿಕ್ಸೆಲ್ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 3000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಫ್ಲಿಪ್‌ಕಾರ್ಟ್‌ನಲ್ಲಿ ಕೇವಲ 4,999ರೂ.ಗಳಿಗೆ ಲಭ್ಯವಾಗಲಿದೆ.

ಜಿಯೋನಿ ಮ್ಯಾಕ್ಸ್

ಜಿಯೋನಿ ಮ್ಯಾಕ್ಸ್

ಜಿಯೋನಿ ಮ್ಯಾಕ್ಸ್‌ ಸ್ಮಾರ್ಟ್‌ಫೋನ್‌ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಾಗುವ ಫೋನ್‌ಗಳಲ್ಲಿ ಒಂದಾಗಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 6 ಇಂಚಿನ IPS LCD ಡಿಸ್‌ಪ್ಲೇ ಹೊಂದಿದೆ. ಇದು ಯುನಿಸೊಕ್ SC9863A ಪ್ರೊಸೆಸರ್‌ ಬಲವನ್ನು ಹೊಂದಿದ್ದ, ಆಂಡ್ರಾಯ್ಡ್‌ 10 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 2GB RAM ಮತ್ತು 32GB ಇಂಟರ್‌ ಸ್ಟೋರೇಜ್‌ ಅನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ 13 ಮೆಗಾಪಿಕ್ಸೆಲ್ ರಿಯರ್‌ ಕ್ಯಾಮೆರಾ ಮತ್ತು 5 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಕೂಡ ಒಳಗೊಂಡಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 6,299ರೂ ಬೆಲೆಯಲ್ಲಿ ಫ್ಲಿಪ್‌ಕಾರ್ಟ್‌ನಲ್ಲಿ ಲಭ್ಯವಾಗಲಿದೆ.

Best Mobiles in India

English summary
best options available under Rs 6000 to help you make the right buying decision.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+