ಮಾರ್ಚ್ ತಿಂಗಳಿನಲ್ಲಿ 15,000ರೂ.ಒಳಗೆ ನೀವು ಖರೀದಿಸಬಹುದಾದ ಸ್ಮಾರ್ಟ್‌ಫೋನ್‌ಗಳು!
ಭಾರತದ ಸ್ಮಾರ್ಟ್‌ಫೋನ್ ಮಾರುಕಟ್ಟೆಗೆ ಈ ವರ್ಷದ ಆರಂಭದಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳು ಎಂಟ್ರಿ ನೀಡಿವೆ. ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ಪ್ರಮುಖ ಬ್ರ್ಯಾಂಡ್‌ಗಳೆನಿಸಿರುವ ಶಿಯೋಮಿ, ಸ್ಯಾಮ್‌ಸಂಗ್, ಒನ್‌ಪ್ಲಸ್, ರಿಯಲ್‌ಮಿ, ಪೊಕೊ ಕಂಪೆನಿಗಳು ತಮ್ಮ ಹೊಸ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ. ಸದ್ಯ ಇದೀಗ ಮಾರ್ಚ್ ತಿಂಗಳಿಗೆ ಕಾಲಿಟ್ಟಿದ್ದು ಇನ್ನೂ ಅನೇಕ ಸ್ಮಾರ್ಟ್‌ಫೋನ್‌ಗಳು ಬಿಡುಗಡೆಗೆ ಸಿದ್ಧತೆ ನಡೆಸಿವೆ. ಇಂತಹ ಸನ್ನಿವೇಶದಲ್ಲಿ ಮಾರ್ಚ್ ತಿಂಗಳಲ್ಲಿ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದುಕೊಂಡವರಿಗೆ ಅನೇಕ ಆಯ್ಕೆಗಳು ಲಭ್ಯವಾಗಲಿವೆ.

ಹೌದು, ಮಾರ್ಚ್ ತಿಂಗಳಿನಲ್ಲಿ ಸ್ಮಾರ್ಟ್‌ಫೋನ್ ಖರೀದಿಸಬೇಕೆಂದುಕೊಂಡವರಿಗೆ ಈಗಾಗಲೇ ಮಾರುಕಟ್ಟೆಯಲ್ಲಿ ಲಾಂಚ್ ಆಗಿರುವ ಅನೇಕ ಸ್ಮಾರ್ಟ್‌ಫೋನ್‌ಗಳ ಆಯ್ಕೆ ಸಿಗಲಿದೆ. ಇದರಲ್ಲಿ ರೆಡ್ಮಿ, ಪೊಕೊ, ರಿಯಲ್‌ಮಿ, ಮೋಟೋ, ಮೈಕ್ರೋಮ್ಯಾಕ್ಸ್ ಸ್ಮಾರ್ಟ್‌ಫೋನ್‌ಗಳನ್ನು ಖರೀದಿಸಬಹುದಾಗಿದೆ. ಇನ್ನು ನೀವು 15,000 ರೂ. ಅಡಿಯಲ್ಲಿ ಸ್ಮಾರ್ಟ್‌ಫೋನ್ ಖರೀದಿಸಲು ಬಯಸಿದರೆ ಅನೇಕ ಆಯ್ಕೆಗಳಿವೆ. ಹಾಗಾದ್ರೆ ನೀವು 15,000ರೂ.ಒಳಗೆ ಈ ತಿಂಗಳು ಖರೀದಿಸಬಹುದಾದ ಸ್ಮಾರ್ಟ್‌ಫೋನ್ ಬಗ್ಗೆ ಈ ಲೇಖನದಲ್ಲಿ ತಿಳಿಸಿಕೊಡ್ತೀವಿ ಓದಿರಿ.

ರೆಡ್ಮಿ ನೋಟ್ 11
ರೆಡ್ಮಿ ನೋಟ್ 11 ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ+ ಅಮೋಲೆಡ್ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಆಕ್ಟಾ-ಕೋರ್ ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 680 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, MIUI 13 ನೊಂದಿಗೆ ಆಂಡ್ರಾಯ್ಡ್ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸುತ್ತದೆ. ಈ ಫೋನ್ ಕ್ವಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಹೊಂದಿದೆ. ಎರಡನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಮತ್ತು ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಡೆಪ್ತ್ ಸೆನ್ಸರ್ ಹೊಂದಿದೆ. ನಾಲ್ಕನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಸೆನ್ಸಾರ್ ಅನ್ನು ಒಳಗೊಂಡಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಪ್ರೊ ಫಾಸ್ಟ್ ಚಾರ್ಜಿಂಗ್ ಅನ್ನು ಬೆಂಬಲಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನಿನ ಬೇಸ್ ಮಾಡೆಲ್ 4GB RAM + 64GB ಸ್ಟೋರೇಜ್ ರೂಪಾಂತರದ ಆಯ್ಕೆಗೆ 13,499ರೂ.ಬೆಲೆ ಹೊಂದಿದೆ.

ಮೈಕ್ರೋಮ್ಯಾಕ್ಸ್ ಇನ್ ನೋಟ್ 2
ಮೈಕ್ರೋಮ್ಯಾಕ್ಸ್ ಇನ್ ನೋಟ್ 2 ಸ್ಮಾರ್ಟ್‌ಫೋನ್ 6.43 ಇಂಚಿನ ಫುಲ್ ಹೆಚ್‌ಡಿ ಪ್ಲಸ್ ಅಮೋಲೆಡ್ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದೆ. ಜೊತೆಗೆ ಈ ಡಿಸ್‌ಪ್ಲೇ 410 ಪಿಪಿಐ ಪಿಕ್ಸೆಲ್ ಸಾಂದ್ರತೆಯನ್ನು ಒಳಗೊಂಡಿದೆ. ಇದು ಆಕ್ಟಾ-ಕೋರ್ ಮೀಡಿಯಾಟೆಕ್ ಹಿಲಿಯೋ G95 ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇದಲ್ಲದೆ ಮೈಕ್ರೊ SD ಕಾರ್ಡ್ ಮೂಲಕ 256GB ವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಬಹುದಾಗಿದೆ. ಈ ಸ್ಮಾರ್ಟ್‌ಫೋನ್ ಕ್ವಾಡ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 48 ಮೆಗಾಪಿಕ್ಸೆಲ್ ಸ್ಯಾಮ್‌ಸಂಗ್ GM1 ಐಸೋಸೆಲ್ ಸೆನ್ಸಾರ್ ಹೊಂದಿದೆ. ಕ್ಯಾಮರಾ ಅಪ್ಲಿಕೇಶನ್‌ನಲ್ಲಿ ನೈಟ್ ಮೋಡ್ ಮತ್ತು AI ಮೋಡ್ ಫೀಚರ್ಸ್‌ಗಳನ್ನು ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ 13,499 ರೂ.ಗಳಿಗೆ ಲಭ್ಯವಿದೆ.

ಇನ್ಫಿನಿಕ್ಸ್ ನೋಟ್ 11
ಇನ್ಫಿನಿಕ್ಸ್ ನೋಟ್ 11 ಸ್ಮಾರ್ಟ್‌ಫೋನ್ 6.7 ಇಂಚಿನ ಫುಲ್ HD + ಅಮೋಲೆಡ್ ಡಿಸ್‌ಪ್ಲೇ ಯನ್ನು ಹೊಂದಿದೆ. ಇದು ಆಕ್ಟಾ ಕೋರ್ ಮೀಡಿಯಾ ಟೆಕ್ ಹಿಲಿಯೋ G88 SoC ಪ್ರೊಸೆಸರ್ ಬಲವನ್ನು ಪಡೆದಿದ್ದು, ಕಂಪನಿಯ XOS 10 ಕಸ್ಟಮ್ ಸ್ಕಿನ್‌ನೊಂದಿಗೆ ಆಂಡ್ರಾಯ್ಡ್ 11 ನಲ್ಲಿ ಕಾರ್ಯ ನಿರ್ವಹಿಸುತ್ತದೆ. ಹಾಗೆಯೇ 4GB RAM ಮತ್ತು 64GB ಇಂಟರ್ ಸ್ಟೋರೇಜ್ ಅನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ f/1.6 ಲೆನ್ಸ್ ಅನ್ನು ಹೊಂದಿದೆ. ಇದಲ್ಲದೆ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದರಲ್ಲಿ ಡ್ಯುಯಲ್ LED ಫ್ಲ್ಯಾಷ್‌ನೊಂದಿಗೆ ಅಳವಡಿಸಲಾಗಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ವೇಗದ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಬೆಲೆ 11,999 ರೂ.ಆಗಿದೆ.

ಮೋಟೋ G51 5G
ಮೋಟೋ G51 5G ಸ್ಮಾರ್ಟ್‌ಫೋನ್ 6.8-ಇಂಚಿನ ಫುಲ್ HD+ ಡಿಸ್‌ಪ್ಲೇಯನ್ನು ಹೊಂದಿದೆ. ಇನ್ನು ಈ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಹೊಂದಿದ್ದು, 120Hz ರಿಫ್ರೆಶ್ ರೆಟ್ ಅನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್ ಸ್ನಾಪ್‌ಡ್ರಾಗನ್ 480 ಪ್ಲಸ್ SoC ಪ್ರೊಸೆಸರ್ ಬಲವನ್ನು ಪಡೆದುಕೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಎರಡನೇ ಕ್ಯಾಮೆರಾ 8 ಮೆಗಾಪಿಕ್ಸೆಲ್ ಅಲ್ಟ್ರಾ-ವೈಡ್ ಮತ್ತು ಡೆಪ್ತ್ ಶೂಟರ್ ಹಾಗೂ ಮೂರನೇ ಕ್ಯಾಮೆರಾ 2 ಮೆಗಾಪಿಕ್ಸೆಲ್ ಮ್ಯಾಕ್ರೋ ಶೂಟರ್ ಅನ್ನು ಹೊಂದಿದೆ. ಇದಲ್ಲದೆ 13 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 20W ರಾಪಿಡ್ ಚಾರ್ಜಿಂಗ್ ಅನ್ನು ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಪ್ರಸ್ತುತ ಬೆಲೆ 14,999 ರೂ.ಆಗಿದೆ.

ಪೊಕೊ M4 ಪ್ರೊ 5G
ಪೊಕೊ M4 ಪ್ರೊ 5G ಸ್ಮಾರ್ಟ್‌ಫೋನ್ 6.6 ಇಂಚಿನ ಫುಲ್ HD+ ಡಾಟ್ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್, 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು DCI-P3 ವೈಡ್ ಕಲರ್ ಗ್ಯಾಮಟ್ ಅನ್ನು ಸಹ ಹೊಂದಿದೆ. ಇದು ಆಕ್ಟಾ-ಕೋರ್ ಮೀಡಿಯಾ ಟೆಕ್ ಡೈಮೆನ್ಸಿಟಿ 810 SoC ಪ್ರೊಸೆಸರ್ ಹೊಂದಿದ್ದು, ಆಂಡ್ರಾಯ್ಡ್ 11 ಅನ್ನು ಆಧರಿಸಿದ MIUI 12.5 ನಲ್ಲಿ ಕಾರ್ಯನಿರ್ವಹಿಸುತ್ತದೆ. ಇನ್ನು ಈ ಸ್ಮಾರ್ಟ್‌ಫೋನ್ ಡ್ಯುಯಲ್ ರಿಯರ್ ಕ್ಯಾಮೆರಾ ಸೆಟಪ್ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50 ಮೆಗಾಪಿಕ್ಸೆಲ್ ಸೆನ್ಸಾರ್ f/1.8 ಲೆನ್ಸ್ ಹೊಂದಿದೆ. ಇದಲ್ಲದೆ 16 ಮೆಗಾಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಇದು f/2.45 ಲೆನ್ಸ್ ಪಡೆದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದೆ. ಇದು 33W ಪ್ರೊ ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಈ ಫೋನಿನ ಆರಂಭಿಕ ಬೆಲೆ 14,999 ರೂ.ಆಗಿದೆ.


Click it and Unblock the Notifications








