Home
ಸುದ್ದಿಜಾಲ

ಏಪ್ರಿಲ್‌ ತಿಂಗಳಿನಲ್ಲಿ 25,000 ರೂ.ಒಳಗೆ ಲಭ್ಯವಾಗುವ ಸ್ಮಾರ್ಟ್‌ಫೋನ್‌ಗಳು!

ಪ್ರಸ್ತುತ ದಿನಗಳಲ್ಲಿ ಸ್ಮಾರ್ಟ್‌ಫೋನ್‌ಗಳು ಹೆಚ್ಚಿನ ಬೇಡಿಕೆ ಪಡೆದುಕೊಂಡಿವೆ. ಪ್ರತಿನಿತ್ಯವೂ ಹೊಸ ಮಾದರಿಯ ಸ್ಮಾರ್ಟ್‌ಫೋನ್‌ಗಳು ಮಾರುಕಟ್ಟೆಗೆ ಎಂಟ್ರಿ ನೀಡುತ್ತಲೇ ಬಂದಿವೆ. ಅಗ್ಗದ ಬೆಲೆಯ ಸ್ಮಾರ್ಟ್‌ಫೋನ್‌ಗಳಿಂದ ಹಿಡಿದು ಹೈ ಎಂಡ್‌ ಮಾದರಿಯ ಸ್ಮಾರ್ಟ್‌ಫೋನ್‌ಗಳು ಕೂಡ ಖರೀದಿಗೆ ಲಭ್ಯವಿದೆ. ಅದರಲ್ಲೂ ಮಧ್ಯಮ-ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಹೆಚ್ಚಿನ ಬೇಡಿಕೆ ಇದೆ. ಇದೇ ಕಾರಣಕ್ಕೆ ಜನಪ್ರಿಯ ಸ್ಮಾರ್ಟ್‌ಫೋನ್‌ ಬ್ರ್ಯಾಂಡ್‌ಗಳಾದ ಒಪ್ಪೋ, ಒನ್‌ಪ್ಲಸ್‌, ಸ್ಯಾಮ್‌ಸಂಗ್‌, ಶಿಯೋಮಿ ಕಂಪೆನಿಗಳು ಮಿಡ್‌ರೇಂಜ್‌ ಪ್ರೈಸ್‌ ಟ್ಯಾಗ್‌ನಲ್ಲಿ ಅನೇಕ ಸ್ಮಾರ್ಟ್‌ಫೋನ್‌ಗಳನ್ನು ಪರಿಚಯಿಸಿವೆ.

ಸ್ಮಾರ್ಟ್‌ಫೋನ್‌

ಹೌದು, ಭಾರತದ ಸ್ಮಾರ್ಟ್‌ಫೋನ್‌ ಮಾರುಕಟ್ಟೆಯಲ್ಲಿ ವಿವಿಧ ಬೆಲೆಯ ಸ್ಮಾರ್ಟ್‌ಫೋನ್‌ಗಳು ದೊರೆಯುತ್ತಿವೆ. ಇದರಲ್ಲಿ 20,000 ರಿಂದ 25,000 ರೂ.ಬೆಲೆ ನಡುವಿನ ಸ್ಮಾರ್ಟ್‌ಫೋನ್‌ಗಳು ಹೆಚ್ಚು ಗ್ರಾಹಕರನ್ನು ಸೆಳೆಯುತ್ತಿವೆ. ಜೊತೆಗೆ ಮಧ್ಯಮ ಶ್ರೇಣಿಯ ಫ್ಲ್ಯಾಗ್‌ಶಿಪ್‌ ಫೋನ್‌ಗಳು ಕೂಡ ಆಕರ್ಷಕ ಫೀಚರ್ಸ್‌ಗಳಿಂದ ಗಮನ ಸೆಳೆದಿವೆ. ಹಾಗಾದ್ರೆ ಏಪ್ರಿಲ್ 2022 ರಲ್ಲಿ ನೀವು 25,000 ರೂ. ಬೆಲೆಯಲ್ಲಿ ಖರೀದಿಸಬಹುದಾದ ಅತ್ಯುತ್ತಮ ಸ್ಮಾರ್ಟ್‌ಫೋನ್‌ಗಳ ವಿವರ ಇಲ್ಲಿದೆ ಓದಿರಿ.

ಒನ್‌ಪ್ಲಸ್‌ ನಾರ್ಡ್‌ CE 2

ಒನ್‌ಪ್ಲಸ್‌ ನಾರ್ಡ್‌ CE 2

ಒನ್‌ಪ್ಲಸ್‌ ನಾರ್ಡ್‌ CE 2 ಸ್ಮಾರ್ಟ್‌ಫೋನ್‌ ಮಿಡ್‌ರೇಂಜ್‌ ಪ್ರೈಸ್‌ ಟ್ಯಾಗ್‌ನಲ್ಲಿ ಲಭ್ಯವಾಗುವ ಅತ್ಯುತ್ತಮ ಫೋನ್‌ಗಳಲ್ಲಿ ಒಂದಾಗಿದೆ. ಈ ಸ್ಮಾರ್ಟ್‌ಫೋನ್‌ 6.43 ಇಂಚಿನ ಫುಲ್‌ ಹೆಚ್‌ಡಿ+ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಪಡೆದುಕೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 900 ಪ್ರೊಸೆಸರ್‌ ಬಲವನ್ನು ಒಳಗೊಂಡಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP, ಎರಡನೇ ಕ್ಯಾಮೆರಾ 8MP, ಮೂರನೇ ಕ್ಯಾಮೆರಾ 2MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಒಳಗೊಂಡಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 65W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಸದ್ಯ ಈ ಸ್ಮಾರ್ಟ್‌ಫೋನ್‌ 24,999ರೂ. ಬೆಲೆ ಹೊಂದಿದೆ.

ಶಿಯೋಮಿ 11 ಲೈಟ್‌ NE 5G

ಶಿಯೋಮಿ 11 ಲೈಟ್‌ NE 5G

ಶಿಯೋಮಿ 11 ಲೈಟ್‌ NE 5G ಸ್ಮಾರ್ಟ್‌ಫೋನ್‌ 6.55 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಹೊಂದಿದ್ದು, ಡಾಲ್ಬಿ ವಿಷನ್ ಮತ್ತು HDR10+ ಬೆಂಬಲವನ್ನು ಒಳಗೊಂಡಿದೆ. ಇದು ಕ್ವಾಲ್ಕಾಮ್‌ ಸ್ನಾಪ್‌ಡ್ರಾಗನ್‌ 778G ಪ್ರೊಸೆಸರ್‌ ಸಾಮರ್ಥ್ಯವನ್ನು ಹೊಂದಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಒಳಗೊಂಡಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌, ಎರಡನೇ ಕ್ಯಾಮೆರಾ 8MP ಸೆನ್ಸಾರ್‌, ಮೂರನೇ ಕ್ಯಾಮೆರಾ 5MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 20MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 4,350mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 33W ಫಾಸ್ಟ್ ಚಾರ್ಜಿಂಗ್ ಬೆಂಬಲಿಸಲಿದೆ. ಈ ಸ್ಮಾರ್ಟ್‌ಫೋನ್ ಅನ್ನು ಪ್ರಸ್ತುತ ಫ್ಲಿಪ್‌ಕಾರ್ಟ್‌ನಲ್ಲಿ 25,000ರೂ. ಕ್ಕಿಂತ ಕಡಿಮೆ ಬೆಲೆಯಲ್ಲಿ ಖರೀದಿಸಬಹುದಾಗಿದೆ.

ರಿಯಲ್‌ಮಿ 9 ಪ್ರೊ ಪ್ಲಸ್‌

ರಿಯಲ್‌ಮಿ 9 ಪ್ರೊ ಪ್ಲಸ್‌

ರಿಯಲ್‌ಮಿ 9 ಪ್ರೊ ಪ್ಲಸ್‌ ಸ್ಮಾರ್ಟ್‌ಫೋನ್‌ 6.4 ಇಂಚಿನ ಫುಲ್‌ಹೆಚ್‌ಡಿ ಪ್ಲಸ್‌ ಅಮೋಲೆಡ್‌ ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್ ರೇಟ್‌ ಅನ್ನು ಒಳಗೊಂಡಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 920 ಪ್ರೊಸೆಸರ್‌ ಬಲವನ್ನು ಪಡೆದುಕೊಂಡಿದೆ. ಹಾಗೆಯೇ 8GB RAM ಮತ್ತು 256GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್‌ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 50MP ಸೆನ್ಸಾರ್‌, ಎರಡನೇ ಕ್ಯಾಮೆರಾ 8MP ಸೆನ್ಸಾರ್‌, ಮೂರನೇ ಕ್ಯಾಮೆರಾ 2MP ಸೆನ್ಸಾರ್‌ ಸಾಮರ್ಥ್ಯವನ್ನು ಒಳಗೊಂಡಿದೆ. ಇದಲ್ಲದೆ 16MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಪಡೆದಿದೆ. ಜೊತೆಗೆ 4,500mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 60W ಫಾಸ್ಟ್ ಚಾರ್ಜಿಂಗ್ ಮತ್ತು USB ಪವರ್ ಡೆಲಿವರಿ 3.0 ಅನ್ನು ಹೊಂದಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 24,999 ರೂ. ಬೆಲೆ ಹೊಂದಿದೆ.

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G

ಸ್ಯಾಮ್‌ಸಂಗ್‌ ಗ್ಯಾಲಕ್ಸಿ M52 5G ಸ್ಮಾರ್ಟ್‌ಫೋನ್‌ 6.7 ಇಂಚಿನ ಫುಲ್‌ ಹೆಚ್‌ಡಿ+ ಅಮೋಲೆಡ್‌ ಡಿಸ್‌ಪ್ಲೇಯನ್ನು ಹೊಂದಿದೆ. ಇದು ಕ್ವಾಲ್‌ಕಾಮ್ ಸ್ನಾಪ್‌ಡ್ರಾಗನ್ 778G ಪ್ರೊಸೆಸರ್‌ ಬಲವನ್ನು ಹೊಂದಿದೆ. ಇದು ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್ ಹೊಂದಿದೆ. ಇನ್ನು ಈ ಸ್ಮಾರ್ಟ್‌ಫೋನ್ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 64MP ಸೆನ್ಸಾರ್‌, ಎರಡನೇ ಕ್ಯಾಮೆರಾ 12MP ಸೆನ್ಸಾರ್‌, ಮೂರನೇ ಕ್ಯಾಮೆರಾ 5MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 32MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 25W ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್‌ 24,999ರೂ. ಬೆಲೆಗೆ ಲಭ್ಯವಿದೆ.

ಮೊಟೊರೊಲಾ ಎಡ್ಜ್ 20 ಫ್ಯೂಷನ್

ಮೊಟೊರೊಲಾ ಎಡ್ಜ್ 20 ಫ್ಯೂಷನ್

ಮೊಟೊರೊಲಾ ಎಡ್ಜ್ 20 ಫ್ಯೂಷನ್ 6.7 ಇಂಚಿನ OLED ಡಿಸ್‌ಪ್ಲೇ ಹೊಂದಿದೆ. ಈ ಡಿಸ್‌ಪ್ಲೇ 90Hz ರಿಫ್ರೆಶ್‌ ರೇಟ್‌ ಅನ್ನು ಹೊಂದಿದೆ. ಇದು ಮೀಡಿಯಾಟೆಕ್‌ ಡೈಮೆನ್ಸಿಟಿ 800U 5G ಪ್ರೊಸೆಸರ್‌ ಅನ್ನು ಹೊಂದಿದ್ದು, ಆಂಡ್ರಾಯ್ಡ್‌ 11 ಬೆಂಬಲದೊಂದಿಗೆ ಕಾರ್ಯನಿರ್ವಹಿಸಲಿದೆ. ಹಾಗೆಯೇ 8GB RAM ಮತ್ತು 128GB ಇಂಟರ್‌ ಸ್ಟೋರೇಜ್‌ ಸಾಮರ್ಥ್ಯವನ್ನು ಹೊಂದಿದೆ. ಈ ಸ್ಮಾರ್ಟ್‌ಫೋನ್‌ ಕೂಡ ಟ್ರಿಪಲ್‌ ರಿಯರ್‌ ಕ್ಯಾಮೆರಾ ಸೆಟಪ್‌ ಅನ್ನು ಹೊಂದಿದೆ. ಇದರಲ್ಲಿ ಮುಖ್ಯ ಕ್ಯಾಮೆರಾ 108MP ಸೆನ್ಸಾರ್‌, ಎರಡನೇ ಕ್ಯಾಮೆರಾ 12MP ಸೆನ್ಸಾರ್‌, ಮೂರನೇ ಕ್ಯಾಮೆರಾ 2MP ಸೆನ್ಸಾರ್‌ ಹೊಂದಿದೆ. ಇದಲ್ಲದೆ 32MP ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾವನ್ನು ಹೊಂದಿದೆ. ಜೊತೆಗೆ 5,000mAh ಸಾಮರ್ಥ್ಯದ ಬ್ಯಾಟರಿಯನ್ನು ಹೊಂದಿದ್ದು, 30W ವೇಗದ ಚಾರ್ಜಿಂಗ್ ಬೆಂಬಲಿಸಲಿದೆ. ಪ್ರಸ್ತುತ ಈ ಸ್ಮಾರ್ಟ್‌ಫೋನ್ 23,199ರೂ.ಗಳಲ್ಲಿ ಲಭ್ಯವಿದೆ.

Best Mobiles in India

English summary
Here's Best smartphones under Rs 25,000 in april 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+